PBKS vs LSG: ಮೊಹಾಲಿಯಲ್ಲಿ ಲಕ್ನೋ ರನ್ ಮಳೆ: RCB ದಾಖಲೆ ಸೇಫ್!!
ಪಂಜಾಬ್ ಕಿಂಗ್ಸ್ ಹಾಗೂ ಲಕ್ನೋ ಸೂಪರ್ ಜೈಂಟ್ಸ್ ತಂಡಗಳ ನಡುವಿನ ಸೆಣೆಸಾಟದಲ್ಲಿ ರನ್ ಮಳೆಯೇ ಹರಿದಿದೆ. ಪಂಜಾಬ್ ಕಿಂಗ್ಸ್ ತಂಡದ ಆತಿಥ್ಯದಲ್ಲಿ ನಡೆಯುತ್ತಿರುವ ಪಂದ್ಯದಲ್ಲಿ ಲಕ್ನೋ ಸೂಒಪರ್ ಜೈಂಟ್ಸ್ ಟಾಸ್ ಸೋತು ಮೊದಲಿಗೆ ಬ್ಯಾಟಿಂಗ್ ನಡೆಸುವ ಸವಾಲು ಸ್ವೀಕರಿಸಿದ್ದು ಬ್ಯಾಟಿಂಗ್‌ನಲ್ಲಿ ಅಕ್ಷರಶಃ ಅಬ್ಬಿರಿಸಿದೆ. ಮೈದಾನಕ್ಕಿಳಿದ ಎಲ್ಲಾ ದಾಂಡಿಗರು ಬೌಂಡರಿ ಸಿಕ್ಸರ್‌ಗಳ ಸುರಿಮಳೆಗೈದಿದ್ದು ಐತಿಹಾಸಿಕ ಸಾಧನೆ ಮಾಡಿದ ಲಕ್ನೋ ಸೂಪರ್ ಜೈಂಟ್ಸ್.
ಈ ಪಂದ್ಯದಲ್ಲಿ ಲಕ್ನೋ ಸೂಪರ್ ಜೈಂಟ್ಸ್ ತಂಡ ನಿಗದಿತ 20 ಓವರ್‌ಗಳಲ್ಲಿ ಬರೊಬ್ಬರಿ 257 ರನ್‌ಗಳನ್ನು ಕಲೆ ಹಾಕಿದೆ. ಈ ಮೂಲಕ ಐಪಿಎಲ್ ಇತಿಹಾಸದಲ್ಲಿಯೇ ಕೇವಲ ಎರಡನೇ ಬಾರಿಗೆ 250ಕ್ಕೂ ಅಧಿಕ ರನ್‌ಗಳಿಸಿದಂತಾಗಿದೆ. ಇದು ಐಪಿಎಲ್ ಇತಿಹಾಸದಲ್ಲಿ ದಾಖಲಾದ ಎರಡನೇ ಅತಿ ಹೆಚ್ಚಿನ ಸ್ಕೋರ್ ಎನಿಸಿಕೊಂಡಿದೆ. ಈ ಪಟ್ಟಿಯಲ್ಲಿ ಆರ್‌ಸಿಬಿ ಮೊದಲ ಸ್ಥಾನದಲ್ಲಿದ್ದು 2013ರ ಆವೃತ್ತಿಯಲ್ಲಿ ಆರ್‌ಸಿಬಿ ಗಳಿಸಿದ 263/5 ರನ್ ಸಾರ್ವಕಾಲಿಕ ಶ್ರೇಷ್ಠ ಸ್ಕೋರ್ ಎನಿಸಿಕೊಂಡಿದೆ.

ಇನ್ನು ಈ ಪಂದ್ಯದಲ್ಲಿ ನಾಯಕ ಕೆಎಲ್ ರಾಹುಲ್ ಹೊರತುಪಡಿಸಿದರೆ ಉಳಿದೆಲ್ಲಾ ಆಟಗಾರರು ಕೂಡ ರನ್ ಮಳೆ ಹರಿಸುವಲ್ಲಿ ಯಶಸ್ವಿಯಾದರು. ರಾಹುಲ್ 9 ಎಸೆತಗಳಲ್ಲಿ 12 ರನ್‌ಗಳಿಸಿ ವಿಕೆಟ್ ಕಳೆದುಕೊಂಡರೆ ನಂತರ ಕೇಲ್ ಮೇಯರ್ಸ್ ತಮ್ಮ ಸ್ಪೋಟಕ ಆಟವನ್ನು ಶುರು ಮಾಡಿದರು. ಅವರಿಗೆ ಆಯುಶ್ ಬದೋನಿಯಿಂದ ಅದ್ಭುತ ಜೊತೆಯಾಟ ದೊರೆಯಿತು. ಮೇಯರ್ಸ್ ಕೇವಲ 24 ಎಸೆಗಳಲ್ಲಿ 54 ರನ್‌ಗಳಿಸಿದರೆ ಆಯುಶ್ ಬದೋನಿ 24 ಎಸೆತಗಳಲ್ಲಿ 43 ರನ್‌ಗಳಿಸಿ ವಿಕೆಟ್ ಕಳೆದುಕೊಂಡರು.
ನಂತರ ಮಾರ್ಕಸ್ ಸ್ಟೋಯ್ನಿಸ್ ಅಬ್ಬರಿಸಲು ಆರಂಭಿಸಿದರು. ಮತ್ತೊಂದು ತುದಿಯಲ್ಲಿ ನೊಕೋಲಸ್ ಪೂರನ್ ಕೂಡ ಭರ್ಜರಿ ಬ್ಯಾಟಿಂಗ್ ಪ್ರದರ್ಶಿಸಿದ್ದಾರೆ. ಮಾರ್ಕಸ್ ಸ್ಟೋಯ್ನಿಸ್ ಈ ಪಂದ್ಯದಲ್ಲಿ 40 ಎಸೆತಗಳಲ್ಲಿ 72 ರನ್ ಬಾರಿಸಿದರೆ ಪೂರನ್ 19 ಎಸೆತಗಳಲ್ಲಿ 45 ರನ್ ಬಾರಿಸಿದರು. ಅಂತಿಮವಾಗಿ ಕ್ರೀಸ್ನಲ್ಲುಳಿದ ದೀಪಕ್ ಹೂಡಾ 11 ರನ್ ಹಾಗೂ ಕೃನಾಲ್ ಪಾಂಡ್ಯ 5 ರನ್‌ಗಳಿಸಿ ಅಜೇಯವಾಗುಳಿದರು. ಈ ಮೂಲಕ ಲಕ್ನೋ ಸೂಪರ್ ಜೈಂಟ್ಸ್ ತಮಡ ನಿಗದಿತ 20 ಓವರ್‌ಗಳಲ್ಲಿ 5 ವಿಕೆಟ್ ಕಳೆದುಕೊಂಡ 257 ರನ್‌ಗಳನ್ನು ಕಲೆಹಾಕಿದೆ.
ಪಂಜಾಬ್ ಕಿಂಗ್ಸ: ಅಥರ್ವ ಟೈಡೆ, ಶಿಖರ್ ಧವನ್ (ನಾಯಕ), ಸಿಕಂದರ್ ರಜಾ, ಲಿಯಾಮ್ ಲಿವಿಂಗ್‌ಸ್ಟೋನ್, ಸ್ಯಾಮ್ ಕರ್ರಾನ್, ಜಿತೇಶ್ ಶರ್ಮಾ (ವಿಕೆ), ಶಾರುಖ್ ಖಾನ್, ಕಗಿಸೊ ರಬಾಡ, ರಾಹುಲ್ ಚಾಹರ್, ಗುರ್ನೂರ್ ಬ್ರಾರ್, ಅರ್ಶ್‌ದೀಪ್ ಸಿಂಗ್
ಬೆಂಚ್: ಪ್ರಭಾಸಿಮ್ರಾನ್ ಸಿಂಗ್, ಮೋಹಿತ್ ರಥಿ, ರಿಷಿ ಧವನ್, ಮ್ಯಾಥ್ಯೂ ಶಾರ್ಟ್, ಹರ್‌ಪ್ರೀತ್ ಬ್ರಾರ್, ನಾಥನ್ ಎಲ್ಲಿಸ್, ಶಿವಂ ಸಿಂಗ್, ಭಾನುಕಾ ರಾಜಪಕ್ಸೆ, ವಿಧ್ವತ್ ಕಾವೇರಪ್ಪ, ಬಲ್ತೇಜ್ ಸಿಂಗ್, ಹರ್‌ಪ್ರೀತ್ ಸಿಂಗ್ ಭಾಟಿಯಾ
ಲಕ್ನೋ ಸೂಪರ್ ಜೈಂಟ್ಸ್: ಕೆಎಲ್ ರಾಹುಲ್ (ಸಿ), ಕೈಲ್ ಮೇಯರ್ಸ್, ದೀಪಕ್ ಹೂಡಾ, ಮಾರ್ಕಸ್ ಸ್ಟೊಯಿನಿಸ್, ಕೃನಾಲ್ ಪಾಂಡ್ಯ, ನಿಕೋಲಸ್ ಪೂರನ್ (ವಿಕೆ), ಆಯುಷ್ ಬಡೋನಿ, ನವೀನ್-ಉಲ್-ಹಕ್, ರವಿ ಬಿಷ್ಣೋಯ್, ಅವೇಶ್ ಖಾನ್, ಯಶ್ ಠಾಕೂರ್
ಬೆಂಚ್: ಕೃಷ್ಣಪ್ಪ ಗೌತಮ್, ಡೇನಿಯಲ್ ಸಾಮ್ಸ್, ಪ್ರೇರಕ್ ಮಂಕಡ್, ಅಮಿತ್ ಮಿಶ್ರಾ, ಮಾರ್ಕ್ ವುಡ್, ಜಯದೇವ್ ಉನದ್ಕತ್, ಮನನ್ ವೋಹ್ರಾ, ಕ್ವಿಂಟನ್ ಡಿ ಕಾಕ್, ಸ್ವಪ್ನಿಲ್ ಸಿಂಗ್, ರೊಮಾರಿಯೋ ಶೆಫರ್ಡ್, ಅರ್ಪಿತ್ ಗುಲೇರಿಯಾ, ಯುಧ್ವೀರ್ ಸಿಂಗ್ ಚರಕ್, ಕರಣ್ ಶರ್ಮಾ
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications