ಗುರುವಾರ, ಏಪ್ರಿಲ್ 18ರಂದು ಚಂಡೀಗಢದ ಮುಲ್ಲನ್‌ಪುರ ಸ್ಟೇಡಿಯಂನಲ್ಲಿ ನಡೆಯುತ್ತಿರುವ 2024ರ ಇಂಡಿಯನ್ ಪ್ರೀಮಿಯರ್ ಲೀಗ್‌ನ (ಐಪಿಎಲ್) 33ನೇ ಪಂದ್ಯದಲ್ಲಿ ಆತಿಥೇಯ ಪಂಜಾಬ್ ಕಿಂಗ್ಸ್ ತಂಡದ ವಿರುದ್ಧ ಮುಂಬೈ ಇಂಡಿಯನ್ಸ್ ಸವಾಲಿನ ಮೊತ್ತ ಕಲೆಹಾಕಿದೆ.
ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ಮುಂಬೈ ಇಂಡಿಯನ್ಸ್ ತಂಡ ಸೂರ್ಯಕುಮಾರ್ ಯಾದವ್ ಅವರ ಭರ್ಜರಿ ಬ್ಯಾಟಿಂಗ್ ನೆರವಿನಿಂದ ನಿಗದಿತ 20 ಓವರ್‌ಗಳಲ್ಲಿ ವಿಕೆಟ್ ನಷ್ಟಕ್ಕೆ ರನ್ ಗಳಿಸಿದ್ದು, ಪಂಜಾಬ್ ಕಿಂಗ್ಸ್ ತಂಡಕ್ಕೆ ರನ್‌ಗಳ ಗುರಿ ನೀಡಿದೆ.

ಮುಂಬೈ ಇಂಡಿಯನ್ಸ್ ತಂಡದ ಬ್ಯಾಟಿಂಗ್ ಇನ್ನಿಂಗ್ಸ್ ಆರಂಭಿಸಿದ ಇಶಾನ್ ಕಿಶನ್ ಮತ್ತು ರೋಹಿತ್ ಶರ್ಮಾ ಉತ್ತಮ ಆರಂಭ ನೀಡಲು ವಿಫಲರಾದರು. ಈ ಜೋಡಿ ಮೊದಲ ವಿಕೆಟ್‌ಗೆ 2.1 ಓವರ್‌ಗಳಲ್ಲಿ 18 ರನ್ ಮಾತ್ರ ಗಳಿಸಿದರು. ಈ ವೇಳೆ 8 ರನ್ ಗಳಿಸಿ ಆಡುತ್ತಿದ್ದ ಇಶಾನ್ ಕಿಶನ್ ವಿಕೆಟ್ ಒಪ್ಪಿಸಿದರು.

ನಂತರ ಜೊತೆಗೂಡಿದ ರೋಹಿತ್ ಶರ್ಮಾ ಮತ್ತು ಸೂರ್ಯಕುಮಾರ್ ಯಾದವ್ 2ನೇ ವಿಕೆಟ್‌ಗೆ 81 ರನ್‌ಗಳ ಜೊತೆಯಾಟ ನಿರ್ಮಿಸಿದರು. ಈ ವೇಳೆ 25 ಎಸೆತಗಳಲ್ಲಿ 2 ಬೌಂಡರಿ ಹಾಗೂ 3 ಸಿಕ್ಸರ್‌ಗಳ ಸಮೇತ 36 ರನ್ ಬಾರಿಸಿ ಔಟಾದರು.
ಇನ್ನು ಸೂರ್ಯಕುಮಾರ್ ಯಾದವ್ ಮತ್ತೊಮ್ಮೆ ತಮ್ಮ ಬ್ಯಾಟಿಂಗ್ ಸ್ವರೂಪವನ್ನು ತೋರಿಸಿದರು. 53 ಎಸೆತಗಳಲ್ಲಿ 7 ಬೌಂಡರಿ ಹಾಗೂ 3 ಸಿಕ್ಸರ್‌ಗಳ ಮೂಲಕ 78 ರನ್ ಗಳಿಸಿದರು. ನಂತರ ಬಂದ ನಾಯಕ ಹಾರ್ದಿಕ್ ಪಾಂಡ್ಯ 10 ರನ್ ಗಳಿಸಿ ಪೆವಿಲಿಯನ್ ಸೇರಿದರು.
ಮಧ್ಯಮ ಕ್ರಮಾಂಕದಲ್ಲಿ ತಿಲಕ್ ವರ್ಮಾ 18 ಎಸೆತಗಳಲ್ಲಿ 2 ಬೌಂಡರಿ ಹಾಗೂ 2 ಸಿಕ್ಸರ್‌ಗಳ ಮೂಲಕ 34 ರನ್ ಗಳಿಸಿದರೆ, ಟಿಮ್ ಡೇವಿಡ್ 7 ಎಸೆತಗಳಲ್ಲಿ 2 ಬೌಂಡರಿ ಹಾಗೂ 1 ಸಿಕ್ಸರ್ ಸಮೇತ 14 ರನ್ ಗಳಿಸಿದರು.
ಇನ್ನು ಬೌಲಿಂಗ್‌ನಲ್ಲಿ ಪಂಜಾಬ್ ಕಿಂಗ್ಸ್ ತಂಡದ ಪರ ಹರ್ಷಲ್ ಪಟೇಲ್ 4 ಓವರ್‌ಗಳಲ್ಲಿ 31 ರನ್ ನೀಡಿ 3 ವಿಕೆಟ್ ಕಬಳಿಸಿದರು. ಸ್ಯಾಮ್ ಕರ್ರಾನ್ 4 ಓವರ್‌ಗಳಲ್ಲಿ 41 ರನ್ ನೀಡಿ 2 ವಿಕೆಟ್ ಪಡೆದರೆ, ಕಗಿಸೊ ರಬಾಡ ಒಂದು ವಿಕೆಟ್ ಪಡೆದರು.