ಮಹತ್ವದ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ತಂಡದ ಸ್ಟಾರ್ ಆಟಗಾರರು ಸಂಘಟಿತ ಬ್ಯಾಟಿಂಗ್ ನಡೆಸಿದ ಪರಿಣಾಮ ಅಹಮದಾಬಾದ್‌ನಲ್ಲಿ ನಡೆಯುತ್ತಿರುವ ಎರಡನೇ ಕ್ವಾಲಿಫೈಯರ್ ಪಂದ್ಯದಲ್ಲಿ ಪಂಜಾಬ್ ಕಿಂಗ್ಸ್ ತಂಡಕ್ಕೆ ಸ್ಪರ್ಧಾತ್ಮಕ ಮೊತ್ತದ ಗುರಿಯನ್ನು ನೀಡಿದೆ. ಈ ಪಂದ್ಯದಲ್ಲಿ ಜಯ ಸಾಧಿಸಿದ ತಂಡ ಆರ್‌ಸಿಬಿ ವಿರುದ್ಧ ಫೈನಲ್‌ನಲ್ಲಿ ಆಡಲಿದೆ.
ಟಾಸ್ ಸೋತರೂ ಮೊದಲು ಬ್ಯಾಟ್ ಮಾಡಿದ ಮುಂಬೈ ಇಂಡಿಯನ್ಸ್ ಪವರ್ ಪ್ಲೇನಲ್ಲಿ ಉತ್ತಮ ಆರಂಭವನ್ನು ಮಾಡಿತು. ಈ ಅವಧಿಯಲ್ಲಿ ಮುಂಬೈ ಇಂಡಿಯನ್ಸ್ ತಂಡ ಒಂದು ವಿಕೆಟ್ ಕಳೆದುಕೊಂಡಿತು. ಈ ಅವಧಿಯಲ್ಲಿ ರೋಹಿತ್ ಶರ್ಮಾ ಸ್ಥಿರ ಪ್ರದರ್ಶನ ನೀಡಿದರು. ಈ ಅವಧಿಯಲ್ಲಿ ರೋಹಿತ್ ಶರ್ಮಾ 8 ರನ್ ಬಾರಿಸಿದ್ದಾಗ ಇಲ್ಲದ ಹೊಡೆತಕ್ಕೆ ಮುಂದಾಗಿ ಮಾರ್ಕಸ್ ಸ್ಟೋಯ್ನಿಸ್ ಎಸೆತದಲ್ಲಿ ಔಟ್ ಆದರು.

ಎರಡನೇ ವಿಕೆಟ್‌ಗೆ ಜಾನಿ ಬೇರ್‌ಸ್ಟೋ ಹಾಗೂ ತಿಲಕ್ ವರ್ಮಾ ಜೋಡಿ ಉತ್ತಮ ಆರಂಭವನ್ನು ನೀಡಿತು. ಪವರ್ ಪ್ಲೇನಲ್ಲಿ ಜಾನಿ ಬೇರ್ ಸ್ಟೋ ಹಾಗೂ ತಿಲಕ್ ವರ್ಮಾ ಜೊತೆಗೂಡಿ ಸಂಕಷ್ಟದಲ್ಲಿದ್ದ ಮುಂಬೈ ಇಂಡಿಯನ್ಸ್ ತಂಡಕ್ಕೆ ಆಧಾರವಾಯಿತು. ಈ ಜೋಡಿ ಉತ್ತಮ ಜೊತೆಯಾಟದ ಕಾಣಿಕೆ ನೀಡಿತು. ಪರಿಣಾಮ ಮುಂಬೈ ಇಂಡಿಯನ್ಸ್ ಪವರ್ ಪ್ಲೇನಲ್ಲಿ ಉತ್ತಮ ಆರಂಭವನ್ನು ಮಾಡಿತು. ಮೊದಲ 6 ಓವರ್‌ಗಳಲ್ಲಿ ಮುಂಬೈ 65 ರನ್‌ಗಳಿಗೆ ಒಂದು ವಿಕೆಟ್ ಕಳೆದುಕೊಂಡಿತು. ಜಾನಿ ಬೇರ್ ಸ್ಟೋ ಹಾಗೂ ತಿಲಕ್ ವರ್ಮಾ ಜೋಡಿ ಎರಡನೇ ವಿಕೆಟ್‌ಗೆ 51 ರನ್ ಜೊತೆಯಾಟವನ್ನು ನೀಡಿತು. ಆರಂಭಿಕ ಜಾನಿ ಬೇರ್‌ಸ್ಟೋ 3 ಬೌಂಡರಿ, 2 ಸಿಕ್ಸರ್ ಸಹಾಯದಿಂದ 38 ರನ್ ಸಿಡಿಸಿದ್ದಾರೆ.
ಮೂರನೇ ವಿಕೆಟ್‌ಗೆ ತಿಲಕ್ ವರ್ಮಾ ಹಾಗೂ ಸೂರ್ಯಕುಮಾರ್ ಯಾದವ್ ಜೋಡಿ ಸಮಯೋಚಿತ ಬ್ಯಾಟಿಂಗ್ ನಡೆಸಿ ತಂಡಕ್ಕೆ ಆಧಾರವಾಯಿತು. ಈ ಜೋಡಿ ಪಂಜಾಬ್ ತಂಡದ ಬೌಲರ್‌ಗಳ ರಣ ತಂತ್ರವನ್ನು ಮೆಟ್ಟಿನಿಂತ ರನ್ ಮಹಲ್ ಕಟ್ಟಿತು. ಈ ಜೋಡಿ ಮೂರನೇ ವಿಕೆಟ್‌ಗೆ 42 ಎಸೆತಗಳಲ್ಲಿ 72 ರನ್ ಸೇರಿಸಿತು. ಈ ಸಮಯದಲ್ಲಿ 4 ಬೌಂಡರಿ, 3 ಸಿಕ್ಸರ್ ಸಹಾಯದಿಂದ 44 ರನ್ ಬಾರಿಸಿದ್ದ ಸೂರ್ಯಕುಮಾರ್ ಯಾದವ್ ಇಲ್ಲದ ಶಾಟ್ ಹೊಡೆಯಲು ಹೋಗಿ ಔಟ್ ಆದರು. ಇನ್ನು ಮಧ್ಯಮ ಕ್ರಮಾಂಕದ ಸ್ಟಾರ್ ಆಟಗಾರ ತಿಲಕ್ ವರ್ಮಾ ಆಟ ಸಹ 44 ರನ್‌ಗಳಿಗೆ ಕೊನೆ ಗೊಂಡಿತು. ಮಧ್ಯಮ ಕ್ರಮಾಂಕದಲ್ಲಿ ಸ್ಟಾರ್ ಆಟಗಾರರು ರನ್ ಕಲೆ ಹಾಕುವಲ್ಲಿ ಎಡವಿದ ಪರಿಣಾಮ ಮುಂಬೈ ಇಂಡಿಯನ್ಸ್ ಅಂದುಕೊಂಡ ಮೊತ್ತವನ್ನು ಕಲೆ ಹಾಕಲಿಲ್ಲ.

ನಾಯಕ ಹಾರ್ದಿಕ್ ಪಾಂಡ್ಯ 15 ರನ್‌ಗಳಿಗೆ ಆಟ ಮುಗಿಸಿದರು. ಉಳಿದ ಬ್ಯಾಟರ್‌ಗಳು ರನ್ ಕಲೆ ಹಾಕುವಲ್ಲಿ ವಿಫಲರಾದರು. ಪರಿಣಾಮ ಮುಂಬೈ ಇಂಡಿಯನ್ಸ್ 20 ಓವರ್‌ಗಳಲ್ಲಿ 6 ವಿಕೆಟ್‌ಗೆ 203 ರನ್ ಗಳಿಸಿತು. ಪಂಜಾಬ್ ಪರ ಅಜ್ಮುತುಲ್ಲಾ ಓಮರ್‌ಝಾಯಿ 2 ವಿಕೆಟ್ ಕಬಳಿಸಿದರು.