PBKS vs MI Qualifier 2: ಮುಂಬೈ ವಿರುದ್ಧ ಪಂಜಾಬ್‌ಗೆ ಜಯದ "ಶ್ರೇಯ": 11 ವರ್ಷದ ಬಳಿಕ ಕಿಂಗ್ಸ್ ಫೈನಲ್‌ಗೆ
ನಾಯಕ ಶ್ರೇಯಸ್ ಅಯ್ಯರ್ ಅವರ ಕೆಚ್ಚೆದೆಯ ಆಟದ ನೆರವಿನಿಂದ ಪಂಜಾಬ್ ಕಿಂಗ್ಸ್ ತಂಡ 5 ವಿಕೆಟ್‌ಗಳಿಂದ ಮುಂಬೈ ಇಂಡಿಯನ್ಸ್ ತಂಡವನ್ನು 18ನೇ ಆವೃತ್ತಿಯ ಐಪಿಎಲ್‌ನ ಎರಡನೇ ಕ್ವಾಲಿಫೈಯರ್‌ನಲ್ಲಿ ಮಣಿಸಿತು. ಈ ಮೂಲಕ ಪಂಜಾಬ್ ಕಿಂಗ್ಸ್ ಪ್ರಶಸ್ತಿ ಸುತ್ತಿಗೆ ಅರ್ಹತೆ ಪಡೆದಿದೆ. ಇನ್ನು ಜೂನ್ 3 ರಂದು ನಡೆಯಲಿರುವ ಫೈನಲ್‌ನಲ್ಲಿ ಪಂಜಾಬ್ ಕಿಂಗ್ಸ್, ರಾಯಲ್ ಚಾಲೆಂಜರ್ಸ್ ತಂಡವನ್ನು ಎದುರಿಸಲಿದೆ. ಈ ಮೂಲಕ ಪಂಜಾಬ್ ಕಿಂಗ್ಸ್ ಐಪಿಎಲ್‌ನಲ್ಲಿ ಅತಿ ಹೆಚ್ಚು ಬಾರಿ 200 ರನ್‌ಗೂ ಹೆಚ್ಚು ರನ್ ಚೇಸ್ ಮಾಡಿದ ದಾಖಲೆಯನ್ನು ಬರೆದಿದೆ. ಇನ್ನು ಮುಂಬೈ ಇಂಡಿಯನ್ಸ್ ತಂಡ 18 ಆವೃತ್ತಿಗಳ ಐಪಿಎಲ್‌ನಲ್ಲಿ ಇದೇ ಮೊದಲ ಬಾರಿಗೆ 200 ಪ್ಲಸ್ ರನ್ ಡಿಫೆಂಡ್ ಮಾಡಿಕೊಳ್ಳುವಲ್ಲಿ ವಿಫಲವಾಗಿದೆ.
ಟಾಸ್ ಸೋತರೂ ಮೊದಲು ಬ್ಯಾಟ್ ಮಾಡಿದ ಮುಂಬೈ ಇಂಡಿಯನ್ಸ್ 20 ಓವರ್‌ಗಳಲ್ಲಿ 6 ವಿಕೆಟ್‌ಗೆ 203 ರನ್ ಸಿಡಿಸಿತು. ಇದಕ್ಕೆ ಉತ್ತರವಾಗಿ ಬ್ಯಾಟ್ ಮಾಡಿದ ಪಂಜಾಬ್ ಕಿಂಗ್ಸ್ 19 ಓವರ್‌ಗಳಲ್ಲಿ 5 ವಿಕೆಟ್‌ಗೆ 207 ರನ್ ಬಾರಿಸಿ ಜಯ ಸಾಧಿಸಿತು. ಈ ಮೂಲಕ ಪಂಜಾಬ್ ಕಿಂಗ್ಸ್ 11 ವರ್ಷದ ಬಳಿಕ ಐಪಿಎಲ್ ಫೈನಲ್‌ಗೆ ಅರ್ಹತೆ ಪಡೆದಿದೆ.

204 ರನ್‌ಗಳ ಗುರಿಯನ್ನು ಬೆನ್ನಟ್ಟಿದ ಪಂಜಾಬ್ ತಂಡದ ಆರಂಭ ಕಳಪೆಯಾಗಿತ್ತು. ಪ್ರಭಸಿಮ್ರನ್ ಸಿಂಗ್ (6), ಪ್ರಿಯಾಂಶ್ ಆರ್ಯ (20) ದೊಡ್ಡ ಇನಿಂಗ್ಸ್ ಕಟ್ಟುವಲ್ಲಿ ವಿಫಲರಾದರು. ಮಧ್ಯಮ ಕ್ರಮಾಂಕದಲ್ಲಿ ಭರವಸೆಯ ಆಟಗಾರ ಜೋಸ್ ಇಂಗ್ಲೀಸ್ 5 ಬೌಂಡರಿ, 2 ಸಿಕ್ಸರ್ ಸಹಾಯದಿಂದ 38 ರನ್ ಬಾರಿಸಿ ಔಟ್ ಆದರು. ನಾಲ್ಕನೇ ವಿಕೆಟ್‌ಗೆ ಶ್ರೇಯಸ್ ಅಯ್ಯರ್ ಅವರನ್ನು ಸೇರಿಕೊಂಡ ನೇಹಲ್ ವಧೇರಾ (48) ತಂಡಕ್ಕೆ ಭರ್ಜರಿ ಜೊತೆಯಾಟದ ಕಾಣಿಕೆ ನೀಡಿತು. ಈ ಜೋಡಿಯನ್ನು ಕಟ್ಟಿಹಾಕುವಲ್ಲಿ ವಿಫಲವಾಯಿತು. ಈ ಜೋಡಿ ನಾಲ್ಕನೇ ವಿಕೆಟ್‌ಗೆ ಅರ್ಧಶತಕದ ಜೊತೆಯಾಟವನ್ನು ನೀಡಿತು. ಈ ಅವಧಿಯಲ್ಲಿ ನೇಹಲ್ ವಧೇರಾ ಇಲ್ಲದ ಹೊಡೆತಕ್ಕೆ ಮುಂದಾಗಿ ಔಟ್ ಆದರು.
ಶ್ರೇಯಸ್ ಅಯ್ಯರ್ ಅರ್ಧಶತಕ
ಪಂಜಾಬ್ ಕಿಂಗ್ಸ್ ತಂಡದ ನಾಯಕ ಶ್ರೇಯಸ್ ಅಯ್ಯರ್ ತಮ್ಮ ಮೇಲೆ ತಂಡ ಇಟ್ಟ ನಂಬಿಕೆಗೆ ಪೂರಕವಾಗಿ ಬ್ಯಾಟ್ ಮಾಡಿದರು. ಅಲ್ಲದೆ ಒತ್ತಡವನ್ನು ಮೆಟ್ಟಿನಿಂತು ರನ್‌ಗಳನ್ನು ಕಲೆ ಹಾಕುತ್ತಾ ಸಾಗಿದರು. ಶ್ರೇಯಸ್ ಮಹತ್ವದ ಪಂದ್ಯದಲ್ಲಿ 5 ಬೌಂಡರಿ, 8 ಸಿಕ್ಸರ್ ಸಹಾಯದಿಂದ ಅಜೇಯ 87 ರನ್ ಸಿಡಿಸಿ ತಂಡಕ್ಕೆ ಗೆಲುವಿನ ಮಾಲೆ ತೊಡಿಸಿದರು.
ಉತ್ತಮ ಬ್ಯಾಟಿಂಗ್
ಟಾಸ್ ಸೋತರೂ ಮುಂಬೈ ಇಂಡಿಯನ್ಸ್ ತಂಡ ಮೊದಲು ಬ್ಯಾಟ್ ಮಾಡಿತು. ಮಹತ್ವದ ಪಂದ್ಯದಲ್ಲಿ ರೋಹಿತ್ ಶರ್ಮಾ ಬಿಗ್ ಇನಿಂಗ್ಸ್ ಕಟ್ಟುವಲ್ಲಿ ವಿಫಲರಾದರು. ಎರಡನೇ ವಿಕೆಟ್‌ಗೆ ಆರಂಭಿಕ ಜಾನಿ ಬೇರ್‌ಸ್ಟೋ ಹಾಗೂ ಮೂರನೇ ಕ್ರಮಾಂಕದಲ್ಲಿ ಬ್ಯಾಟ್ ಮಾಡಿದ ತಿಲಕ್ ವರ್ಮಾ ಜೋಡಿ ಪವರ್ ಪ್ಲೇನಲ್ಲಿ ಪವರ್ ಫುಲ್ ಆಟವನ್ನು ಆಡಿತು. ಈ ಜೋಡಿಯ ಪರಿಣಾಮ ಮುಂಬೈ ಪವರ್ ಪ್ಲೇನಲ್ಲಿ 65 ರನ್ ಸೇರಿಸಿತು. ಈ ವೇಳೆ ಒಂದು ವಿಕೆಟ್ ಕಳೆದುಕೊಂಡಿತು. ಭರ್ಜರಿ ಫಾರ್ಮ್‌ನಲ್ಲಿದ್ದ ಜಾನಿ ಬೇರ್ ಸ್ಟೋ 38 ರನ್‌ಗಳಿಗೆ ಔಟ್ ಆದರು.
ಮೂರನೇ ವಿಕೆಟ್‌ಗೆ ಸೂರ್ಯಕುಮಾರ್ ಯಾದವ್ ಹಾಗೂ ತಿಲಕ್ ವರ್ಮಾ ಜೋಡಿ ಸಹ ಉತ್ತಮ ಜೊತೆಯಾಟದ ಕಾಣಿಕೆ ನೀಡಿದರು. ಅಲ್ಲದೆ ಅರ್ಧಶತಕದ ಜೊತೆಯಾಟವನ್ನು ನೀಡಿ ತಂಡಕ್ಕೆ ಆಧಾರವಾಯಿತು. ಐಪಿಎಲ್‌ನಲ್ಲಿ ಸೂರ್ಯಕುಮಾರ್ ಯಾದವ್ ಸತತ 16 ಪಂದ್ಯಗಳಲ್ಲಿ 25 ರನ್ ಸಿಡಿಸಿದ ಹಿರಿಮೆಗೆ ಪಾತ್ರರಾದರು. ಈ ಪಂದ್ಯದಲ್ಲಿ ಸೊಗಸಾಗಿ ಆಡುತ್ತಿದ್ದ ಸೂರ್ಯಕುಮಾರ್ ಯಾದವ್ ಹಾಗೂ ತಿಲಕ್ ವರ್ಮಾ ತಲಾ 44 ರನ್ ಸಿಡಿಸಿ ಔಟ್ ಆದರು.
ಹಾರ್ದಿಕ್ ಪಾಂಡ್ಯ (15) ಒತ್ತಡವನ್ನು ಮೆಟ್ಟಿನಿಂತು ಬ್ಯಾಟ್ ಮಾಡುವಲ್ಲಿ ವಿಫಲರಾದರು. ನಮನ್ ಧೀರ್ 7 ಬೌಂಡರಿ ನೆರವಿನಿಂದ 37 ರನ್ ಬಾರಿಸಿದರು. ಉಳಿದ ಬ್ಯಾಟರ್‌ಗಳು ರನ್ ಕಲೆ ಹಾಕುವಲ್ಲಿ ವಿಫಲರಾದರು.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications