ಆರ್‌ಸಿಬಿ ವಿರುದ್ಧ ಟಾಸ್ ಗೆದ್ದ ಪಂಜಾಬ್ ಬೌಲಿಂಗ್ ಆಯ್ಕೆ: ರಜತ್ ಅನುಪಸ್ಥಿತಿಯಲ್ಲಿ ಜಿತೇಶ್‌ಗೆ ಪಟ್ಟ
ಧರ್ಮಶಾಲಾ: ಆತಿಥೇಯ ಪಂಜಾಬ್ ಕಿಂಗ್ಸ್ ವಿರುದ್ಧ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ 19ನೇ ಆವೃತ್ತಿ ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್)ನ 61ನೇ ಪಂದ್ಯದಲ್ಲಿ ಕಣಕ್ಕೆ ಇಳಿದಿವೆ. ಈ ಪಂದ್ಯ ಉಭಯ ತಂಡಗಳಿಗೂ ಮಹತ್ವದಾಗಿದೆ. ಈ ಪಂದ್ಯದಲ್ಲಿ ಜಯ ಸಾಧಿಸಿ ಪ್ಲೇ ಆಫ್ ಪ್ರವೇಶಿಸುವ ಕನಸು ಆರ್‌ಸಿಬಿ ತಂಡದ್ದಾಗಿದೆ. ಇನ್ನು ಪಂಜಾಬ್ ಸತತ ಐದು ಸೋಲಗಳ ಸರಪಳಿಯನ್ನು ಕಳಚಿ ಗೆಲುವಿನ ಟ್ರ್ಯಾಕ್‌ಗೆ ಮರಳಲು ಪ್ಲ್ಯಾನ್ ಮಾಡಿಕೊಂಡಿದೆ. ಮಹತ್ವದ ಪಂದ್ಯದಲ್ಲಿ ಟಾಸ್ ಪಂಜಾಬ್ ಪಾಲಾಗಿದ್ದು, ಮೊದಲು ಬೌಲಿಂಗ್ ಮಾಡಲು ನಿರ್ಧರಿಸಿದೆ.
ಆರ್‌ಸಿಬಿ ತಂಡದ ನಾಯಕ ರಜತ್ ಪಾಟಿದಾರ್ ಮಹತ್ವದ ಪಂದ್ಯದಲ್ಲಿ ಕಣಕ್ಕೆ ಇಳಿಯುತ್ತಿಲ್ಲ. ನಿಯಮಿತ ನಾಯಕ ರಜತ್ ಪಾಟಿದಾರ್ ಗಾಯದ ಕಾರಣದಿಂದಾಗಿ ಈ ಪಂದ್ಯದಲ್ಲಿ ಆಡುವುದಿಲ್ಲ. ಇವರ ಅನುಪಸ್ಥಿತಿಯಲ್ಲಿ, ವಿಕೆಟ್ ಕೀಪರ್-ಬ್ಯಾಟ್ಸ್‌ಮನ್ ಜಿತೇಶ್ ಶರ್ಮಾ ಆರ್‌ಸಿಬಿ ತಂಡವನ್ನು ಮುನ್ನಡೆಸುತ್ತಿದ್ದಾರೆ. ಕೆಕೆಆರ್ ವಿರುದ್ಧದ ಪಂದ್ಯದಲ್ಲಿ ಪಾಟಿದಾರ್ ಗಾಯಗೊಂಡಿದ್ದರು. ಹೀಗಾಗಿ ಇವರು ಈ ಪಂದ್ಯದಲ್ಲಿ ಕಣಕ್ಕೆ ಇಳಿದಿಲ್ಲ.

ಶ್ರೇಯಸ್ ಅಯ್ಯರ್‌ಗೆ 100ನೇ ಪಂದ್ಯ
ಪಂಜಾಬ್ ಕಿಂಗ್ಸ್ ನಾಯಕ ಶ್ರೇಯಸ್ ಅಯ್ಯರ್ ಅವರಿಗೆ ಈ ಪಂದ್ಯ ವಿಶೇಷವಾಗಿದೆ. ನಾಯಕರಾಗಿ ಶ್ರೇಯಸ್ ಅಯ್ಯರ್ 100ನೇ ಪಂದ್ಯವನ್ನು ಆಡಲಿದ್ದಾರೆ. ಈ ಮೂಲಕ ಶ್ರೇಯಸ್ ಎಲೈಟ್ ಕ್ಲಬ್‌ಗೆ ಎಂಟ್ರಿ ಪಡೆದಿದ್ದಾರೆ.
ನಾಯಕರಾಗಿ ಐಪಿಎಲ್‌ನಲ್ಲಿ ಅತಿ ಹೆಚ್ಚು ತಂಡಗಳನ್ನು ಆಡಿದ ನಾಯಕ
ಮಹೇಂದ್ರ ಸಿಂಗ್ ಧೋನಿ, (ಪುಣೆ, ಸಿಎಸ್‌ಕೆ), 253 ಪಂದ್ಯ
ರೋಹಿತ್ ಶರ್ಮಾ, ಮುಂಬೈ, 158 ಪಂದ್ಯ
ವಿರಾಟ್ ಕೊಹ್ಲಿ, ಆರ್‌ಸಿಬಿ, 143 ಪಂದ್ಯ
ಗೌತಮ್ ಗಂಭೀರ್, ಡಿಸಿ, ಕೆಕೆಆರ್, 129 ಪಂದ್ಯ
ಶ್ರೇಯಸ್ ಅಯ್ಯರ್, ಡಿಸಿ, ಕೆಕೆಆರ್, ಪಂಜಾಬ್, 100 ಪಂದ್ಯ
ಜಿತೇಶ್ ಹೇಳಿದ್ದೇನು?
ಟಾಸ್ ಸೋತ ಬಳಿಕ ಮಾತನಾಡಿರು ಆರ್‌ಸಿಬಿ ನಾಯಕ ಜಿತೇಶ್ ಶರ್ಮಾ ಆರ್‌ಸಿಬಿ ಸಹ ಬೌಲಿಂಗ್ ಮಾಡಲು ಬಯಸಿತ್ತು. ರಜತ್ ಪಾಟಿದಾರ್ ಚೇತರಿಸಿಕೊಳ್ಳುತ್ತಿದ್ದಾರೆ. ಹೈದರಾಬಾದ್‌ನಲ್ಲಿ ನಡೆಯುವ ಪಂದ್ಯದಲ್ಲಿ ಇವರು ಕಣಕ್ಕೆ ಇಳಿಯುವ ಸಾಧ್ಯತೆ ಇದೆ. ಈ ಹಂತದಲ್ಲಿ ಪ್ರತಿಯೊಂದು ಪಂದ್ಯ ಸಹ ಮಹತ್ವದಾಗಿದೆ. ನಮ್ಮ ತಂಡದಲ್ಲಿ ಎರಡು ಬದಲಾವಣೆಗಳನ್ನು ಮಾಡಲಾಗಿದೆ. ರಜತ್ ಪಾಟಿದಾರ್ ಮತ್ತು ಜಾಕೋಬ್ ಡಫಿ ಬದಲಿಗೆ ಸುಯಶ್ ಶರ್ಮಾ ಮತ್ತು ರೊಮಾರಿಯೊ ಶೆಫರ್ಡ್ ತಂಡಕ್ಕೆ ಸೇರ್ಪಡೆಗೊಂಡಿದ್ದಾರೆ ಎಂದು ತಿಳಿಸಿದರು.
ಪಂಜಾಬ್ ಕಿಂಗ್ಸ್ ತಂಡ: ಪ್ರಿಯಾಂಶ್ ಆರ್ಯ, ಪ್ರಭ್‌ಸಿಮ್ರಾನ್ ಸಿಂಗ್, ಕೂಪರ್ ಕಾನ್ನೋಲಿ, ಶ್ರೇಯಸ್ ಅಯ್ಯರ್, ಶಶಾಂಕ್ ಸಿಂಗ್, ಸೂರ್ಯಾಂಶ್ ಶಡ್ಗೆ, ಅಜ್ಮತುಲ್ಲಾ ಒಮರ್ಜಾಯ್, ಹರಪ್ರೀತ್ ಬ್ರಾರ್, ಲಾಕಿ ಫರ್ಗುಸನ್, ಅರ್ಶ್‌ದೀಪ್ ಸಿಂಗ್, ಯುಜ್ವೇಂದ್ರ ಚಹಾಲ್.
ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ: ಜೇಕಬ್ ಬೆಥೆಲ್, ವಿರಾಟ್ ಕೊಹ್ಲಿ, ದೇವದತ್ ಪಡಿಕ್ಕಲ್, ವೆಂಕಟೇಶ್ ಅಯ್ಯರ್, ಟಿಮ್ ಡೇವಿಡ್, ಜಿತೇಶ್ ಶರ್ಮಾ, ರೊಮಾರಿಯೋ ಶೆಫರ್ಡ್, ಕೃಣಾಲ್ ಪಾಂಡ್ಯ, ಭುವನೇಶ್ವರ್ ಕುಮಾರ್, ಸುಯಶ್ ಶರ್ಮಾ, ಜೋಶ್ ಹ್ಯಾಜಲ್‌ವುಡ್.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications