Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block

PBKS vs RR IPL 2024: ಪಂಜಾಬ್ vs ರಾಜಸ್ಥಾನ್ ಪಂದ್ಯದ ಟಾಸ್ ವರದಿ; ಆಡುವ 11ರ ಬಳಗ

ಶನಿವಾರ, ಏಪ್ರಿಲ್ 13ರಂದು ಚಂಡೀಗಢದ ಮುಲ್ಲನ್‌ಪುರದ ಮಹಾರಾಜ ಯಾದವೀಂದ್ರ ಸಿಂಗ್ ಅಂತಾರಾಷ್ಟ್ರೀಯ ಕ್ರಿಕೆಟ್ ಸ್ಟೇಡಿಯಂನಲ್ಲಿ ನಡೆಯುತ್ತಿರುವ 2024ರ ಇಂಡಿಯನ್ ಪ್ರೀಮಿಯರ್ ಲೀಗ್‌ನ (ಐಪಿಎಲ್) 27ನೇ ಹೈ-ವೋಲ್ಟೇಜ್ ಪಂದ್ಯದಲ್ಲಿ ಪಂಜಾಬ್ ಕಿಂಗ್ಸ್ ಮತ್ತು ರಾಜಸ್ಥಾನ್ ರಾಯಲ್ಸ್ ತಂಡಗಳು ಸೆಣಸಾಡುತ್ತಿವೆ.

ಟಾಸ್ ಗೆದ್ದ ರಾಜಸ್ಥಾನ್ ರಾಯಲ್ಸ್ ತಂಡದ ಸಂಜು ಸ್ಯಾಮ್ಸನ್ ಮೊದಲು ಬ್ಯಾಟಿಂಗ್ ಆಯ್ದುಕೊಂಡರು. ಹೀಗಾಗಿ ಹಂಗಾಮಿ ನಾಯಕ ಸ್ಯಾಮ್ ಕರ್ರಾನ್ ನಾಯಕತ್ವದ ಪಂಜಾಬ್ ಕಿಂಗ್ಸ್ ತಂಡ ಮೊದಲು ಬೌಲಿಂಗ್ ಮಾಡಲಿದೆ.

PBKS vs RR IPL 2024 Punjab Kings vs Rajasthan Royals Match Toss Report And Playing 11

ಸತತ ನಾಲ್ಕು ಆರಂಭಿಕ ಗೆಲುವು ಸಾಧಿಸಿದ ನಂತರ, ರಾಜಸ್ಥಾನ್ ರಾಯಲ್ಸ್ ತಂಡವು ತನ್ನ ಹಿಂದಿನ ಪಂದ್ಯದಲ್ಲಿ ಗುಜರಾತ್ ಟೈಟನ್ಸ್ ವಿರುದ್ಧದ ಪಂದ್ಯದಲ್ಲಿ ಮೂರು ವಿಕೆಟ್‌ಗಳಿಂದ ಮೊದಲ ಸೋಲನ್ನು ಅನುಭವಿಸಿತು.

ತಮ್ಮ ಹಿಂದಿನ ಪಂದ್ಯವನ್ನು ಸೋತ ನಂತರವೂ, ಸಂಜು ಸ್ಯಾಮ್ಸನ್ ನಾಯಕತ್ವದ ರಾಜಸ್ಥಾನ್ ರಾಯಲ್ಸ್ ಈಗಲೂ ಐಪಿಎಲ್ 2024ರ ಅಂಕಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿದೆ. ಇದೀಗ ತನ್ನ ಹಿಂದಿನ ಸೋಲನ್ನು ಮರೆತು ಪಂಜಾಬ್ ಕಿಂಗ್ಸ್ ವಿರುದ್ಧ ಆಡುವಾಗ ರಾಜಸ್ಥಾನ್ ರಾಯಲ್ಸ್ ತಂಡ ಮತ್ತೆ ಪುಟಿದೇಳಲು ಎದುರು ನೋಡುತ್ತಿದೆ.

ಮತ್ತೊಂದೆಡೆ, ಈ ಐಪಿಎಲ್ ಆವೃತ್ತಿಯಲ್ಲಿ ಶಿಖರ್ ಧವನ್ ಪಂಜಾಬ್ ಕಿಂಗ್ಸ್ ತಂಡ ಆಡಿದ ಐದು ಪಂದ್ಯಗಳಲ್ಲಿ ಮೂರು ಸೋಲು ಮತ್ತು ಎರಡು ಗೆಲುವು ಸಾಧಿಸಿದೆ ಮತ್ತು ಐಪಿಎಲ್ 2024ರ ಅಂಕಪಟ್ಟಿಯಲ್ಲಿ 8ನೇ ಸ್ಥಾನದಲ್ಲಿದೆ.

PBKS vs RR IPL 2024 Punjab Kings vs Rajasthan Royals Match Toss Report And Playing 11

ಪಿಬಿಕೆಎಸ್ vs ಆರ್‌ಆರ್‌ ಪಂದ್ಯದ ಟಿವಿ, ಲೈವ್ ಸ್ಟ್ರೀಮಿಂಗ್ ಮಾಹಿತಿ

ಐಪಿಎಲ್ 2024ರ ಪಂಜಾಬ್ ಕಿಂಗ್ಸ್ ಮತ್ತು ರಾಜಸ್ಥಾನ್ ರಾಯಲ್ಸ್ ಪಂದ್ಯವನ್ನು ಭಾರತದಲ್ಲಿ ಟಿವಿಯಲ್ಲಿ ಸ್ಟಾರ್ ಸ್ಪೋರ್ಟ್ಸ್‌ನಲ್ಲಿ ನೇರಪ್ರಸಾರವಾಗಲಿದ್ದರೆ, ಮೊಬೈಲ್‌ನಲ್ಲಿ ಜಿಯೋಸಿನಿಮಾ ಅಪ್ಲಿಕೇಶನ್‌ನಲ್ಲಿ ಲೈವ್ ಸ್ಟ್ರೀಮಿಂಗ್ ಇರಲಿದೆ.

ಪಿಬಿಕೆಎಸ್ vs ಆರ್‌ಆರ್‌ ಸಂಭಾವ್ಯ ಆಡುವ 11ರ ಬಳಗ

ಪಂಜಾಬ್ ಕಿಂಗ್ಸ್: ಜಾನಿ ಬೈರ್‌ಸ್ಟೋವ್, ಅಥರ್ವ ಟೈಡೆ, ಪ್ರಭ್‌ಸಿಮ್ರಾನ್ ಸಿಂಗ್, ಸ್ಯಾಮ್ ಕುರ್ರಾನ್(ನಾಯಕ), ಲಿಯಾಮ್ ಲಿವಿಂಗ್‌ಸ್ಟೋನ್, ಜಿತೇಶ್ ಶರ್ಮಾ(ವಿಕೆಟ್ ಕೀಪರ್), ಶಶಾಂಕ್ ಸಿಂಗ್, ಹರ್‌ಪ್ರೀತ್ ಬ್ರಾರ್, ಹರ್ಷಲ್ ಪಟೇಲ್, ಅರ್ಶ್‌ದೀಪ್ ಸಿಂಗ್, ಕಗಿಸೊ ರಬಾಡ.

ರಾಜಸ್ಥಾನ್ ರಾಯಲ್ಸ್: ಸಂಜು ಸ್ಯಾಮ್ಸನ್(ನಾಯಕ/ವಿಕೆಟ್ ಕೀಪರ್), ರಿಯಾನ್ ಪರಾಗ್, ಧ್ರುವ್ ಜುರೆಲ್, ಶಿಮ್ರಾನ್ ಹೆಟ್ಮೆಯರ್, ರೋವ್ಮನ್ ಪೊವೆಲ್, ತನುಷ್ ಕೋಟ್ಯಾನ್, ಕೇಶವ್ ಮಹಾರಾಜ್, ಟ್ರೆಂಟ್ ಬೌಲ್ಟ್, ಅವೇಶ್ ಖಾನ್, ಕುಲದೀಪ್ ಸೇನ್, ಯುಜ್ವೇಂದ್ರ ಚಾಹಲ್.

Story first published: Saturday, April 13, 2024, 19:17 [IST]
Other articles published on Apr 13, 2024
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+