PBKS vs RR IPL 2024: ಸಾಧಾರಣ ಮೊತ್ತಕ್ಕೆ ಪಂಜಾಬ್ ಕಿಂಗ್ಸ್ ಕಟ್ಟಿಹಾಕಿದ ರಾಜಸ್ಥಾನ್ ರಾಯಲ್ಸ್
ಶನಿವಾರ, ಏಪ್ರಿಲ್ 13ರಂದು ಚಂಡೀಗಢದ ಮುಲ್ಲನ್‌ಪುರದ ಮಹಾರಾಜ ಯಾದವೀಂದ್ರ ಸಿಂಗ್ ಅಂತಾರಾಷ್ಟ್ರೀಯ ಕ್ರಿಕೆಟ್ ಸ್ಟೇಡಿಯಂನಲ್ಲಿ ನಡೆಯುತ್ತಿರುವ 2024ರ ಇಂಡಿಯನ್ ಪ್ರೀಮಿಯರ್ ಲೀಗ್‌ನ (ಐಪಿಎಲ್) 27ನೇ ಪಂದ್ಯದಲ್ಲಿ ಪಂಜಾಬ್ ಕಿಂಗ್ಸ್ ತಂಡವು ರಾಜಸ್ಥಾನ್ ರಾಯಲ್ಸ್ ತಂಡದ ವಿರುದ್ಧ ಸಾಧಾರಣ ಮೊತ್ತ ಕಲೆಹಾಕಿದೆ.
ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ಪಂಜಾಬ್ ಕಿಂಗ್ಸ್ ತಂಡ ಯಾವುದೇ ಅರ್ಧಶತಕವಿಲ್ಲದೇ ನಿಗದಿತ 20 ಓವರ್‌ಗಳಲ್ಲಿ 8 ವಿಕೆಟ್ ನಷ್ಟಕ್ಕೆ 147 ರನ್‌ಗಳನ್ನು ಗಳಿಸಿದ್ದು, ರಾಜಸ್ಥಾನ್ ರಾಯಲ್ಸ್ ತಂಡಕ್ಕೆ 148 ರನ್‌ಗಳ ಗುರಿ ನೀಡಿದೆ.

ಪಂಜಾಬ್ ಕಿಂಗ್ಸ್ ಬ್ಯಾಟಿಂಗ್ ಇನ್ನಿಂಗ್ಸ್ ಆರಂಭಿಸಿದ ಅಥರ್ವ ಟೈಡೆ ಮತ್ತು ಜಾನಿ ಬೈರ್‌ಸ್ಟೋವ್ ಉತ್ತಮ ಆರಂಭ ನೀಡಲು ಹೆಣಗಾಡಿದರು. ಈ ಜೋಡಿ ಮೊದಲ ವಿಕೆಟ್‌ಗೆ 3.4 ಓವರ್‌ಗಳಲ್ಲಿ 27 ರನ್‌ಗಳ ಜೊತೆಯಾಟ ನೀಡಿದರು. ಅಥರ್ವ ಟೈಡೆ 12 ಎಸೆತಗಳಲ್ಲಿ 2 ಬೌಂಡರಿ ಸಮೇತ 15 ರನ್ ಗಳಿಸಿ ಔಟಾದರು.
ನಂತರ ಬಂದ ಪ್ರಭ್‌ಸಿಮ್ರಾನ್ ಸಿಂಗ್ ಕೇವಲ 10 ರನ್ ಗಳಿಸಿ ವಿಕೆಟ್ ಒಪ್ಪಿಸಿದರೆ, ಆರಂಭಿಕ ಜಾನಿ ಬೈರ್‌ಸ್ಟೋವ್ ಕೂಡ 19 ಎಸೆತಗಳಲ್ಲಿ 1 ಬೌಂಡರಿ ಮೂಲಕ 15 ರನ್ ಗಳಿಸಿ ಔಟಾದರು. ಹಂಗಾಮಿ ನಾಯಕ ಸ್ಯಾಮ್ ಕರ್ರಾನ್ ಕೇವಲ 6 ರನ್‌ಗಳಿಗೆ ಆಟ ಮುಗಿಸಿದರು.
ಆ ಬಳಿಕ ಜಿತೇಶ್ ಶರ್ಮಾ 24 ಎಸೆತಗಳಲ್ಲಿ 1 ಬೌಂಡರಿ ಮೂಲಕ 29 ರನ್ ಗಳಿಸಿದರೆ, ಶಶಾಂಕ್ ಸಿಂಗ್ 9 ರನ್ ಗಳಿಸಿ ವಿಕೆಟ್ ಒಪ್ಪಿಸಿದರು. ಕೊನೆಯಲ್ಲಿ ಲಿಯಾಮ್ ಲಿವಿಂಗ್‌ಸ್ಟೋನ್ 14 ಎಸೆತಗಳಲ್ಲಿ 2 ಬೌಂಡರಿ ಹಾಗೂ 1 ಸಿಕ್ಸರ್ ಸಮೇತ 21 ರನ್ ಬಾರಿಸಿದರು. ಅಶುತೋಷ್ ಶರ್ಮಾ 16 ಎಸೆತಗಳನ್ನು ಎದುರಿಸಿ 1 ಬೌಂಡರಿ ಹಾಗೂ 3 ಸಿಕ್ಸರ್‌ಗಳ ಸಮೇತ 31 ರನ್ ಸಿಡಿಸಿ ತಂಡದ ಮೊತ್ತವನ್ನು 140ರ ಗಡಿ ದಾಟಿಸಿದರು.
ಬೌಲಿಂಗ್‌ನಲ್ಲಿ ರಾಜಸ್ಥಾನ್ ರಾಯಲ್ಸ್ ಪರ ಕೇಶವ್ ಮಹಾರಾಜ್ 4 ಓವರ್‌ಗಳಲ್ಲಿ 23 ರನ್ ನೀಡಿ 2 ವಿಕೆಟ್ ಪಡೆದರೆ, ಅವೇಶ್ ಖಾನ್ 4 ಓವರ್‌ಗಳಲ್ಲಿ 34 ರನ್ ನೀಡಿ 2 ವಿಕೆಟ್ ಕಬಳಿಸಿದರು. ಉಳಿದಂತೆ ಟ್ರೆಂಟ್ ಬೌಲ್ಟ್, ಕುಲದೀಪ್ ಸೇನ್ ಮತ್ತು ಯುಜ್ವೇಂದ್ರ ಚಹಾಲ್ ತಲಾ ಒಂದೊಂದು ವಿಕೆಟ್ ಪಡೆದರು.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications