PBKS vs SRH IPL 2024: ಪಂಜಾಬ್‌ನಲ್ಲಿ ಆಗುತ್ತಾ ಸನ್ ರೈಸ್?; ರೋಚಕ ಪಂದ್ಯದ ಟಾಸ್ ವರದಿ, ಆಡುವ 11ರ ಬಳಗ
ಮಂಗಳವಾರ, ಏಪ್ರಿಲ್ 9ರಂದು ಚಂಡೀಗಢದ ಮುಲ್ಲನ್‌ಪುರದ ಹೊಸ ಯಾದವೀಂದ್ರ ಸಿಂಗ್ ಅಂತಾರಾಷ್ಟ್ರೀಯ ಕ್ರಿಕೆಟ್ ಸ್ಟೇಡಿಯಂನಲ್ಲಿ ನಡೆಯುತ್ತಿರುವ 2024ರ ಇಂಡಿಯನ್ ಪ್ರೀಮಿಯರ್ ಲೀಗ್‌ನ (ಐಪಿಎಲ್) 23ನೇ ರೋಚಕ ಪಂದ್ಯದಲ್ಲಿ ಆತಿಥೇಯ ಪಂಜಾಬ್ ಕಿಂಗ್ಸ್ ತಂಡವು ಪ್ರವಾಸಿ ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧ ಕಾದಾಡಲು ಸಜ್ಜಾಗಿದೆ.
ಟಾಸ್ ಗೆದ್ದ ಪಂಜಾಬ್ ಕಿಂಗ್ಸ್ ತಂಡದ ನಾಯಕ ಶಿಖರ್ ಧವನ್ ಮೊದಲು ಬೌಲಿಂಗ್ ಆಯ್ದುಕೊಂಡಿದ್ದಾರೆ. ಹೀಗಾಗಿ ಪ್ಯಾಟ್ ಕಮ್ಮಿನ್ಸ್ ನಾಯಕತ್ವ ಸನ್ ರೈಸರ್ಸ್ ಹೈದರಾಬಾದ್ ತಂಡವು ಮೊದಲು ಬೌಲಿಂಗ್ ಮಾಡಲಿದೆ.

ಹೊಸ ವರ್ಷ ಯುಗಾದಿ ಹಬ್ಬದ ದಿನದಂದು ಪ್ರೀತಿ ಜಿಂಟಾ ಸಹ-ಒಡೆತನದ ಪಂಜಾಬ್ ಕಿಂಗ್ಸ್ ಮತ್ತು ಕಾವ್ಯಾ ಮಾರನ್ ಸಹ-ಒಡೆತನದ ಸನ್‌ರೈಸರ್ಸ್ ಹೈದರಾಬಾದ್ ತಂಡಗಳ ನಡುವಿನ ಹೋರಾಟದಲ್ಲಿ ಯಾರು ಬೇವು, ಯಾರು ಬೆಲ್ಲ ಸವಿಯಲಿದ್ದಾರೆ ಎಂಬುದನ್ನು ಕಾದುನೋಡಬೇಕಿದೆ.
ಐಪಿಎಲ್ 2024ರಲ್ಲಿ ಪಂಜಾಬ್ ಕಿಂಗ್ಸ್ ಮತ್ತು ಸನ್ ರೈಸರ್ಸ್ ಹೈದರಾಬಾದ್ ಎರಡೂ ತಂಡಗಳು ಈ ಐಪಿಎಲ್ ಆವೃತ್ತಿಯಲ್ಲಿ ಇಲ್ಲಿಯವರೆಗೆ ಸಮಾನ ಪ್ರದರ್ಶನವನ್ನು ಹೊಂದಿದ್ದು, ತಲಾ 2 ಪಂದ್ಯಗಳನ್ನು ಗೆದ್ದು, 2 ಪಂದ್ಯಗಳಲ್ಲಿ ಸೋಲು ಅನುಭವಿಸಿವೆ.

ಪಿಬಿಕೆಎಸ್ vs ಎಸ್‌ಆರ್‌ಎಚ್ ಪಂದ್ಯದ ಟಿವಿ, ಲೈವ್ ಸ್ಟ್ರೀಮಿಂಗ್ ಮಾಹಿತಿ
ಐಪಿಎಲ್ 2024ರ ಪಂಜಾಬ್ ಕಿಂಗ್ಸ್ ಮತ್ತು ಸನ್ ರೈಸರ್ಸ್ ಹೈದರಾಬಾದ್ ಪಂದ್ಯವನ್ನು ಭಾರತದಲ್ಲಿ ಟಿವಿಯಲ್ಲಿ ಸ್ಟಾರ್ ಸ್ಪೋರ್ಟ್ಸ್‌ನಲ್ಲಿ ನೇರಪ್ರಸಾರವಾಗಲಿದ್ದರೆ, ಮೊಬೈಲ್‌ನಲ್ಲಿ ಜಿಯೋಸಿನಿಮಾ ಅಪ್ಲಿಕೇಶನ್‌ನಲ್ಲಿ ಲೈವ್ ಸ್ಟ್ರೀಮಿಂಗ್ ಇರಲಿದೆ.
ಪಿಬಿಕೆಎಸ್ vs ಎಸ್‌ಆರ್‌ಎಚ್ ಆಡುವ 11ರ ಬಳಗ
ಪಂಜಾಬ್ ಕಿಂಗ್ಸ್: ಶಿಖರ್ ಧವನ್(ನಾಯಕ), ಜಾನಿ ಬೈರ್‌ಸ್ಟೋವ್, ಪ್ರಭ್‌ಸಿಮ್ರಾನ್ ಸಿಂಗ್, ಜಿತೇಶ್ ಶರ್ಮಾ(ವಿಕೆಟ್ ಕೀಪರ್), ಸ್ಯಾಮ್ ಕುರ್ರಾನ್, ಸಿಕಂದರ್ ರಜಾ, ಶಶಾಂಕ್ ಸಿಂಗ್, ಹರ್‌ಪ್ರೀತ್ ಬ್ರಾರ್, ಹರ್ಷಲ್ ಪಟೇಲ್, ರಾಹುಲ್ ಚಾಹರ್, ಅರ್ಶ್‌ದೀಪ್ ಸಿಂಗ್.
ಸನ್ ರೈಸರ್ಸ್ ಹೈದರಾಬಾದ್: ಟ್ರಾವಿಸ್ ಹೆಡ್, ಅಭಿಷೇಕ್ ಶರ್ಮಾ, ಐಡೆನ್ ಮಾರ್ಕ್ರಾಮ್, ಹೆನ್ರಿಚ್ ಕ್ಲಾಸೆನ್(ವಿಕೆಟ್ ಕೀಪರ್), ಅಬ್ದುಲ್ ಸಮದ್, ನಿತೀಶ್ ರೆಡ್ಡಿ, ಶಹಬಾಜ್ ಅಹ್ಮದ್, ಪ್ಯಾಟ್ ಕಮ್ಮಿನ್ಸ್(ನಾಯಕ), ಭುವನೇಶ್ವರ್ ಕುಮಾರ್, ಜಯದೇವ್ ಉನದ್ಕತ್, ಟಿ ನಟರಾಜನ್.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications