Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block

PBKS vs SRH: ಹ್ಯಾಟ್ರಿಕ್ ಸೋಲಿನ ಭೀತಿಯಲ್ಲಿ ಕಿಂಗ್ಸ್‌: ಗೆಲುವಿನ ಟ್ರ್ಯಾಕ್‌ಗೆ ಮರಳುವ ವಿಶ್ವಾಸದಲ್ಲಿ ಸನ್‌

ಹೈದರಾಬಾದ್‌: ಭರ್ಜರಿ ಲಯದಲ್ಲಿದ್ದ ಪಂಜಾಬ್‌ ಕಿಂಗ್ಸ್‌ ಸತತ ಎರಡೂ ಸೋಲುಗಳನ್ನು ಕಂಡಿದ್ದು, ಹ್ಯಾಟ್ರಿಕ್ ಸೋಲಿನ ಭೀತಿಯನ್ನು ಅನುಭವಿಸುತ್ತಿದೆ. ಬುಧವಾರ ನಡೆಯಲಿರುವ ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್‌) 19ನೇ ಆವೃತ್ತಿಯ 49ನೇ ಪಂದ್ಯದಲ್ಲಿ ಪಂಜಾಬ್‌ ಕಿಂಗ್ಸ್‌, ಸನ್‌ ರೈಸರ್ಸ್ ಹೈದರಾಬಾದ್ ತಂಡದ ಸವಾಲು ಎದುರಿಸಲಿದೆ. ಉಭಯ ತಂಡಗಳಲ್ಲಿ ಸ್ಟಾರ್ ಆಟಗಾರರು ಇದ್ದು ರೋಚಕತೆ ಹೆಚ್ಚಿಸಿದೆ.

19ನೇ ಆವೃತ್ತಿ ಐಪಿಎಲ್‌ನಲ್ಲಿ ಪಂಜಾಬ್‌ ಕಿಂಗ್ಸ್‌ ತಂಡ ಅಜೇಯ ಓಟವನ್ನು ನಡೆಸಿತ್ತು. ಆದರೆ ಕಳೆದ ಎರಡು ಪಂದ್ಯಗಳಲ್ಲಿ ಪಂಜಾಬ್ ಲಯ ಕಳೆದುಕೊಂಡಂತೆ ಕಾಣುತ್ತಿದೆ. ಸನ್‌ರೈಸರ್ಸ್ ಸಹ ಕಳೆದ ಪಂದ್ಯದಲ್ಲಿ ಕೆಕೆಆರ್ ವಿರುದ್ಧ ಸೋಲು ಕಂಡಿದೆ. ಹೀಗಾಗಿ ಉಭಯ ತಂಡಗಳು ಗೆಲುವಿನ ಟ್ರ್ಯಾಕ್‌ಗೆ ಮರಳಲು ಪ್ಲ್ಯಾನ್ ಮಾಡಿಕೊಂಡಿವೆ. ಪಂಜಾಬ್‌ 13 ಅಂಕಗಳೊಂದಿಗೆ ಅಗ್ರಸ್ಥಾನದಲ್ಲಿದ್ದರೆ, ಸನ್‌ ತಂಡ 12 ಅಂಕಗಳೊಂದಿಗೆ ಮೂರನೇ ಸ್ಥಾನದಲ್ಲಿದೆ.

PBKS vs SRH

ಸನ್‌ರೈಸರ್ಸ್ ತಂಡದಲ್ಲಿ ಸ್ಟಾರ್ ಆಟಗಾರರ ದಂಡೇ ಇದೆ. ಆರಂಭಿಕ ಆಟಗಾರ ಅಭಿಷೇಕ್ ಶರ್ಮಾ (440 ರನ್) ಭರ್ಜರಿ ಫಾರ್ಮ್‌ನಲ್ಲಿದ್ದಾರೆ. ಇವರನ್ನು ಕಟ್ಟಿಹಾಕುವುದು ಬೇರೆ ತಂಡಕ್ಕೆ ದೊಡ್ಡ ತಲೆನೋವಾಗಿದೆ. ಕಳೆದ ಕೆಲವು ಪಂದ್ಯಗಳಲ್ಲಿ ಟ್ರಾವಿಸ್‌ ಹೆಡ್‌ ಸಹ ರನ್‌ ಕಲೆ ಹಾಕುತ್ತಿದ್ದು ತಂಡದ ಬಲವನ್ನು ಹೆಚ್ಚಿಸಿದೆ. ಮಧ್ಯಮ ಕ್ರಮಾಂಕದ ಹೆನ್ರಿಕ್ ಕ್ಲಾಸೆನ್‌ (425 ರನ್) ಹಾಗೂ ಇಶಾನ್‌ ಕಿಶನ್‌ (354 ರನ್‌) ಭರವಸೆ ಮೂಡಿಸಿದ್ದಾರೆ. ಮಧ್ಯಮ ಕ್ರಮಾಂಕದಲ್ಲಿ ನಿತೀಶ್‌ ಕುಮಾರ್ ರೆಡ್ಡಿ ಸಹ ರನ್‌ ಕಲೆ ಹಾಕುವ ಅನಿವಾರ್ಯತೆ ಇದೆ.

ಪಂಜಾಬ್‌ ಕಿಂಗ್ಸ್ ತಂಡದಲ್ಲಿ ಸ್ಟಾರ್ ಬ್ಯಾಟರ್‌ಗಳ ದಂಡೇ ಇದೆ. ಈ ಬ್ಯಾಟರ್‌ಗಳನ್ನು ಕಟ್ಟಿ ಹಾಕುವುದು ನಿಜಕ್ಕೂ ಪ್ಯಾಟ್‌ ಕಮಿನ್ಸ್‌ ಮುಂದಾಳತ್ವದ ಸನ್‌ರೈಸರ್ಸ್ ತಂಡಕ್ಕೆ ದೊಡ್ಡ ಸವಾಲಾಗಿದೆ. ಈ ವೇಳೆ ಇಶಾನ್ ಮಲಿಂಗ್ ಸೇರಿದಂತೆ ಉಳಿದ ವೇಗಿಗಳು ಬಿಗುವಿನ ದಾಳಿಯನ್ನು ನಡೆಸಿದಲ್ಲಿ 2 ಅಂಕದ ಆಸೆ ಫಲಿಸುತ್ತದೆ.

ಸೂರ್ಯಾಂಶ್‌ ಆಕರ್ಷಣೆ

ಪಂಜಾಬ್‌ ಕಿಂಗ್ಸ್‌ ತಂಡದ ಆರಂಭಿಕ ಆಟಗಾರ ಪ್ರಭಸಿಮ್ರನ್‌ ಸಿಂಗ್‌ (361 ರನ್‌), ಪ್ರಿಯಾಂಶ್‌ ಆರ್ಯ (285 ರನ್‌) ಭರ್ಜರಿ ಆರಂಭವನ್ನು ನೀಡುವ ಕನಸು ಕಾಣುತ್ತಿದ್ದಾರೆ. ಮಧ್ಯಮ ಕ್ರಮಾಂಕದಲ್ಲಿ ಶ್ರೇಯಸ್‌ ಅಯ್ಯರ್ (328 ರನ್) ಲೀಗ್‌ನಲ್ಲಿ ಸ್ಥಿರ ಬ್ಯಾಟಿಂಗ್ ಪ್ರದರ್ಶನ ನೀಡುತ್ತಿರುವುದು ತಂಡದ ಚಿಂತೆಯನ್ನು ದೂರ ಮಾಡಿದೆ. ಮೂರನೇ ಕ್ರಮಾಂಕದಲ್ಲಿ ಬ್ಯಾಟ್ ಮಾಡುವ ಕೂಪರ್ ಕೊನೊಲಿ ಸಹ ಎದುರಾಳಿ ಬೌಲರ್‌ಗಳ ತಂತ್ರವನ್ನು ಮೆಟ್ಟಿನಿಂತ ಬ್ಯಾಟಿಂಗ್ ನಡೆಸಬಲ್ಲರು. ಕಳೆದ ಪಂದ್ಯದಲ್ಲಿ ಸಂಕಷ್ಟದಲ್ಲಿದ್ದ ತಂಡಕ್ಕೆ ಆಧಾರವಾಗಿದ್ದ ಸೂರ್ಯಾಂಶ್‌ ಶೆಡ್ಗೆ ಅವರ ಮೇಲೆ ಎಲ್ಲರ ಚಿತ್ತ ನೆಟ್ಟಿದೆ.

PBKS vs SRH

ಪಂಜಾಬ್‌ ತಂಡದ ಪರ ಜೇವಿಯರ್ ಬ್ರಾಟ್ಲೆಟ್‌, ಅರ್ಷದೀಪ್ ಸಿಂಗ್, ಮಾರ್ಕೊ ಜಾನ್ಸನ್‌ ವೇಗದ ಬೌಲಿಂಗ್‌ನಲ್ಲಿ ಬಿಗುವಿನ ದಾಳಿ ನಡೆಸಬೇಕಿದೆ. ಇನ್ನು ಸ್ಪಿನ್ ಬೌಲಿಂಗ್‌ನಲ್ಲಿ ಯಜುವೇಂದ್ರ ಚಹಾಲ್‌ ಬಿಗುವಿನ ದಾಳಿ ನಡೆಸುವ ಅನಿವಾರ್ಯತೆ ಇದೆ.

Story first published: Tuesday, May 5, 2026, 19:03 [IST]
Other articles published on May 5, 2026
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+