For Quick Alerts
ALLOW NOTIFICATIONS  
For Daily Alerts
 

2023ರ ವಿಶ್ವಕಪ್ ವೇಳಾಪಟ್ಟಿ ಬದಲಾವಣೆಗೆ ಪಿಸಿಬಿ ಉತ್ತರ ಏನು?; ಭಾರತ vs ಪಾಕ್ ಪಂದ್ಯ ಯಾವಾಗ?

ಅಕ್ಟೋಬರ್ 5ರಿಂದ ನವೆಂಬರ್ 19ರವರೆಗೆ ಭಾರತದಲ್ಲಿಯೇ 2023ರ ಐಸಿಸಿ ಏಕದಿನ ವಿಶ್ವಕಪ್ ಪಂದ್ಯಾವಳಿ ನಡೆಯಲಿದ್ದು, ಈಗಾಗಲೇ ಐಸಿಸಿ ಸಂಪೂರ್ಣ ಹಾಗೂ ಅಂತಿಮ ವೇಳಾಪಟ್ಟಿಯನ್ನು ಬಿಡುಗಡೆ ಮಾಡಿದೆ.

ಆದರೆ, ಮುಂಬರುವ ಏಕದಿನ ವಿಶ್ವಕಪ್‌ನಲ್ಲಿ ಕೆಲವು ಪಂದ್ಯಗಳ ವೇಳಾಪಟ್ಟಿಯಲ್ಲಿ ಬದಲಾವಣೆ ಕಾಣಬಹುದು ಎಂದು ಭಾರತ ಕ್ರಿಕೆಟ್ ನಿಯಂತ್ರಣ ಮಂಡಳಿ (ಬಿಸಿಸಿಐ) ಕಾರ್ಯದರ್ಶಿ ಜಯ್ ಶಾ ಈ ಹಿಂದೆ ದೃಢಪಡಿಸಿದ್ದರು.

PCB Agrees To World Cup 2023 Schedule Changes; When Is India vs Pakistan Match?

ಆತಿಥೇಯ ಭಾರತ ತಂಡ ಅಕ್ಟೋಬರ್ 8ರಂದು ಚೆನ್ನೈನಲ್ಲಿ ಐದು ಬಾರಿ ವಿಶ್ವಕಪ್ ಚಾಂಪಿಯನ್ ಆಸ್ಟ್ರೇಲಿಯಾ ತಂಡದ ವಿರುದ್ಧ ತನ್ನ ಅಭಿಯಾನವನ್ನು ಪ್ರಾರಂಭಿಸಲಿದೆ.

ಇನ್ನು 2023ರ ಏಕದಿನ ವಿಶ್ವಕಪ್‌ನಲ್ಲಿ ಭಾರತ ಮತ್ತು ಪಾಕಿಸ್ತಾನ ನಡುವಿನ ಹೈ-ವೋಲ್ಟೇಜ್ ಪಂದ್ಯವನ್ನು ಅಕ್ಟೋಬರ್ 14ರಂದು ಮರು ನಿಗದಿಪಡಿಸುವ ಸಾಧ್ಯತೆ ದಟ್ಟವಾಗಿದೆ.

ಪಂದ್ಯದ ಸ್ಥಳವು ಅಹಮದಾಬಾದ್‌ನ ನರೇಂದ್ರ ಮೋದಿ ಸ್ಟೇಡಿಯಂ ಆಗಿರಲಿದೆ. ಆದರೆ, ಐಸಿಸಿ ಪಂದ್ಯಾವಳಿಗಾಗಿ ಪರಿಷ್ಕೃತ ವೇಳಾಪಟ್ಟಿಯನ್ನು ಐಸಿಸಿ ಇನ್ನೂ ಪ್ರಕಟಿಸಿಲ್ಲ.

ವರದಿಗಳ ಪ್ರಕಾರ, ವಿಶ್ವಕಪ್ ವೇಳಾಪಟ್ಟಿಯಲ್ಲಿ ಬದಲಾವಣೆ ಮಾಡಲು ಪಾಕಿಸ್ತಾನ ಕ್ರಿಕೆಟ್ ಮಂಡಳಿ (ಪಿಸಿಬಿ) ಒಪ್ಪಿಗೆ ಸೂಚಿಸಿದೆ. ಭಾರತದ ವಿರುದ್ಧದ ಪಂದ್ಯದ ಹೊರತಾಗಿ, ಶ್ರೀಲಂಕಾ ವಿರುದ್ಧದ ಪಾಕಿಸ್ತಾನದ ಪಂದ್ಯವನ್ನು ಅಕ್ಟೋಬರ್ 12ರ ಬದಲಿಗೆ ಅಕ್ಟೋಬರ್ 10ಕ್ಕೆ ಮರುನಿಗದಿಪಡಿಸಲಾಗಿದೆ. ಈ ಪಂದ್ಯವು ಮೂಲ ವೇಳಾಪಟ್ಟಿಯಂತೆ ಹೈದರಾಬಾದ್‌ನ ರಾಜೀವ್ ಗಾಂಧಿ ಅಂತಾರಾಷ್ಟ್ರೀಯ ಕ್ರೀಡಾಂಗಣದಲ್ಲಿ ನಡೆಯಲಿದೆ.

ಈ ಮೊದಲು ಅಕ್ಟೋಬರ್ 15ರಂದು ನಿಗದಿಯಾಗಿದ್ದ ಭಾರತ ಮತ್ತು ಪಾಕಿಸ್ತಾನ ನಡುವಿನ ಪಂದ್ಯವನ್ನು ನವರಾತ್ರಿಯ ಮೊದಲ ದಿನದಂದು ನಿಗದಿಪಡಿಸಿತ್ತು. ಆ ದಿನದಂದು ಸೂಕ್ತ ಭದ್ರತೆಯನ್ನು ಖಾತರಿಪಡಿಸುವುದಿಲ್ಲ ಎಂದು ಪೊಲೀಸರು ಕಳವಳ ವ್ಯಕ್ತಪಡಿಸಿದ್ದರು.

ಇಎಸ್‌ಪಿಎನ್‌ಕ್ರಿಕ್‌ಇನ್ಫೋ ವರದಿ ಪ್ರಕಾರ, ಐಸಿಸಿ ಇತ್ತೀಚೆಗೆ ವೇಳಾಪಟ್ಟಿ ಪರಿಷ್ಕರಣೆ ಬಗ್ಗೆ ಪಿಸಿಬಿಗೆ ತಿಳಿಸಿತ್ತು. ಪಾಕಿಸ್ತಾನ ಕ್ರಿಕೆಟ್ ಮಂಡಳಿ ಒಪ್ಪಿಕೊಂಡಿದೆ ಎಂದು ಹೇಳಿದೆ.

ವರದಿಗಳಿಗೆ ವಿರುದ್ಧವಾಗಿ, ವೇಳಾಪಟ್ಟಿ ಬದಲಾವಣೆಗೂ ನವರಾತ್ರಿ ಹಬ್ಬಕ್ಕೂ ಯಾವುದೇ ಸಂಬಂಧವಿಲ್ಲ ಎಂದು ಬಿಸಿಸಿಐ ಕಾರ್ಯದರ್ಶಿ ಜಯ್ ಶಾ ಹೇಳಿದ್ದಾರೆ. ಕಳೆದ ವಾರ ಹಲವಾರು ಐಸಿಸಿ ಪೂರ್ಣ ಸದಸ್ಯ ರಾಷ್ಟ್ರಗಳು ವಿಶ್ವಕಪ್ ವೇಳಾಪಟ್ಟಿಯಲ್ಲಿ ಬದಲಾವಣೆಗಳನ್ನು ಕೋರಿದ್ದವು ಮತ್ತು ಅದಕ್ಕೆ ಅನುಗುಣವಾಗಿ ಬದಲಾವಣೆಗಳನ್ನು ಮಾಡಲಾಗುವುದು ಎಂದು ಜಯ್ ಶಾ ತಿಳಿಸಿದರು.

ಭಾರತ ಮತ್ತು ಪಾಕಿಸ್ತಾನ ಪಂದ್ಯದ ದಿನಾಂಕ ಬದಲಾವಣೆಯು ಇತರ ಪಂದ್ಯಗಳು ಮತ್ತು ತಂಡಗಳ ಮೇಲೆ ಪರಿಣಾಮ ಬೀರುತ್ತದೆ. ಏಕೆಂದರೆ, ಅಕ್ಟೋಬರ್ 14ರಂದು ಈಗಾಗಲೇ ಡಬಲ್-ಹೆಡರ್ ಎಂದು ನಿಗದಿಯಾಗಿದೆ.

ಬಾಂಗ್ಲಾದೇಶ ಮತ್ತು ನ್ಯೂಜಿಲೆಂಡ್ ತಂಡಗಳ ನಡುವೆ ಚೆನ್ನೈನಲ್ಲಿ, ಅಫ್ಘಾನಿಸ್ತಾನ ಮತ್ತು ಇಂಗ್ಲೆಂಡ್ ನಡುವಿನ ಪಂದ್ಯವು ದೆಹಲಿಯಲ್ಲಿ ನಡೆಯಲಿವೆ. ಹೀಗಾಗಿ ಎರಡನೇ ಪಂದ್ಯವನ್ನು ಒಂದು ದಿನ ಮುಂಚಿತವಾಗಿ, ಅಕ್ಟೋಬರ್ 13ರಂದು ಆಡುವ ನಿರೀಕ್ಷೆಯಿದೆ.

ಮುಂಬರುವ 2023ರ ಏಕದಿನ ವಿಶ್ವಕಪ್ ಭಾರತದಲ್ಲಿ ಅಕ್ಟೋಬರ್ 5ರಿಂದ ನವೆಂಬರ್ 19ರವರೆಗೆ ನಡೆಯಲಿದೆ. 2019ರ ವಿಶ್ವಕಪ್ ಫೈನಲಿಸ್ಟ್‌ಗಳಾದ ಇಂಗ್ಲೆಂಡ್ ಮತ್ತು ನ್ಯೂಜಿಲೆಂಡ್ ತಂಡಗಳು ಅಹಮದಾಬಾದ್‌ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ಉದ್ಘಾಟನಾ ಪಂದ್ಯದಲ್ಲಿ ಮುಖಾಮುಖಿಯಾಗಲಿವೆ.

Story first published: Wednesday, August 2, 2023, 18:20 [IST]
Other articles published on Aug 2, 2023
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+