Champions Trophy 2025: VIP ಟಿಕೇಟ್‌ಗಳನ್ನು ಮಾರಿ, ಸಾಮಾನ್ಯ ಜನರಂತೆ ಪಂದ್ಯ ವೀಕ್ಷಿಸಲಿರುವ ಪಿಸಿಬಿ ಅಧ್ಯಕ್ಷ
ಬುಧವಾರ ಚಾಂಪಿಯನ್ಸ್ ಟ್ರೋಫಿ ಪಂದ್ಯಗಳು ಪಾಕ್‌ನಲ್ಲಿ ಆರಂಭವಾಗಲಿವೆ. ಎಂಟು ವರ್ಷಗಳ ಬಳಿಕ ನಡೆಯುತ್ತಿರುವ ಟೂರ್ನಿಯ ಮೇಲೆ ಎಲ್ಲರ ಚಿತ್ತ ನೆಟ್ಟಿದೆ. ಈ ಟೂರ್ನಿಯಲ್ಲಿ ಒಟ್ಟು 8 ತಂಡಗಳು ಭಾಗವಹಿಸುತ್ತಿದ್ದು, 2 ಗುಂಪುಗಳಲ್ಲಿ ವಿಂಗಡಿಸಲಾಗಿದೆ. ಉದ್ಘಾಟನಾ ಪಂದ್ಯದಲ್ಲಿ ಆತಿಥೇಯ ಪಾಕಿಸ್ತಾನ ಹಾಗೂ ನ್ಯೂಜಿಲೆಂಡ್ ತಂಡಗಳು ಕಾದಾಟ ನಡೆಸಲಿವೆ. ಈ ಟೂರ್ನಿಗೆ ಪಾಕ್ ಸಿಂಗಾರ ಗೊಂಡಿದೆ.
23 ವರ್ಷಗಳ ಬಳಿಕ ಪಾಕಿಸ್ತಾನಕ್ಕೆ ಐಸಿಸಿ ಟೂರ್ನಿಯನ್ನು ಆಯೋಜಿಸುವ ಅವಕಾಶವನ್ನು ಪಡೆದಿದೆ. 1996ರಲ್ಲಿ ಪಾಕ್‌ನಲ್ಲಿ ಕೊನೆಯ ಬಾರಿಗೆ ಐಸಿಸಿ ಏಕದಿನ ವಿಶ್ವಕಪ್ ನಡೆಸಲಾಗಿತ್ತು. ಆ ಬಳಿಕ ಈಗಲೇ ಈ ಟೂರ್ನಿಯನ್ನು ಆಯೋಜಿಸಲಾಗುತ್ತಿದೆ. ಭಾರತ ಈ ಟೂರ್ನಿಯನ್ನು ಆಡಲು ಪಾಕಿಸ್ತಾನ ಪ್ರವಾಸವನ್ನು ಬೆಳೆಸುತ್ತಿಲ್ಲ. ಹೀಗಾಗಿ ಈ ಟೂರ್ನಿಯಲ್ಲಿ ಹೈಬ್ರೀಡ್ ಮಾಡೇಲ್‌ನಲ್ಲಿ ನಡೆಸಲು ನಿರ್ಧರಿಸಲಾಗಿದೆ. ಟೀಮ್ ಇಂಡಿಯಾ ತನ್ನ ಎಲ್ಲ ಪಂದ್ಯಗಳನ್ನು ದುಬೈನಲ್ಲಿ ಆಡಲಿದೆ. ಭಾರತ ಹಾಗೂ ಪಾಕಿಸ್ತಾನ ನಡುವಣ ಹೈ ವೋಲ್ಟೇಜ್ ಫೈಟ್ ಫೆ.23 ರಂದು ನಡೆಯಲಿದೆ.

ಈ ಎಲ್ಲ ಬೆಳವಣಿಗೆಗಳ ಮಧ್ಯೆ ಮತ್ತೊಂದು ಸುದ್ದಿ ಹೊರ ಬಿದ್ದಿದೆ. ಈ ಸುದ್ದಿ ನಿಜಕ್ಕೂ ಪಾಕಿಸ್ತಾನ ಕ್ರಿಕೆಟ್ ಬೋರ್ಡ್‌ನ ಪರಿಸ್ಥಿತಿಗೆ ಹಿಡಿದ ಕೈಗನ್ನಡಿಯಾಗಿದೆ. ಹಣವನ್ನು ಗಳಿಸಲು ಪಿಸಿಬಿ ಅಧ್ಯಕ್ಷ ಮೊಹ್ಸಿನ್ ನಖ್ವಿ ತೆಗೆದುಕೊಂಡು ನಿರ್ಧಾರ ಚರ್ಚೆಗೆ ಗ್ರಾಸವಾಗಿದೆ.
ಆಗಿದ್ದೇನು?
ಸಾಮಾನ್ಯವಾಗಿ ಹೈ ವೋಲ್ಟೇಜ್ ಪಂದ್ಯಗಳು ನಡೆದಾಗ, ಆಯಾ ಮಂಡಳಿಯ ಅಧ್ಯಕ್ಷರು ಅಥವಾ ಉನ್ನತ ಅಧಿಕಾರಿಗಳು ಬರುವುದು ಸಾಮಾನ್ಯ. ಅವರಿಗೆ ಆಯೋಜಕರು ವಿಐಪಿ ವ್ಯವಸ್ಥೆಯನ್ನು ಕಲ್ಪಿಸುತ್ತಾರೆ. ದುಬೈನಲ್ಲೂ ಪಿಸಿಬಿ ಅಧ್ಯಕ್ಷರಿಗೆ ಇದೇ ರೀತಿ ವಿಐಪಿ ವ್ಯವಸ್ಥೆಯನ್ನು ಕಲ್ಪಿಸಲಾಗಿತ್ತು. ಆದರೆ ಮೊಹ್ಸಿನ್ ನಖ್ವಿ ಅವರು ಪಿಸಿಬಿ ನಿಧಿಗೆ ಸುಮಾರು 94 ಲಕ್ಷ ರೂಪಾಯಿ ಮೌಲ್ಯದ 30 ಆಸನಗಳ ವಿಐಪಿ ಬಾಕ್ಸ್‌ನ ಟಿಕೆಟ್ ಅನ್ನು ಮಾರಾಟ ಮಾಡಿದ್ದಾರೆ. ಆದರೆ ನಖ್ವಿ ಸಾಮಾನ್ಯ ಜನರಂತೆ ಗ್ಯಾಲರಿಯಿಂದ ಪಂದ್ಯವನ್ನು ವೀಕ್ಷಿಸಲು ನಿರ್ಧರಿಸಿದರು.

ಚಾಂಪಿಯನ್ಸ್ ಟ್ರೋಫಿಯ ಫೆಬ್ರವರಿ 19ರಂದು ಆರಂಭವಾಗಲಿದೆ. ಭಾರತ ತನ್ನ ಮೊದಲ ಪಂದ್ಯವನ್ನು ಫೆ.20 ರಂದು ಆಡಲಿದೆ. ಟೀಮ್ ಇಂಡಿಯಾ, ಬಾಂಗ್ಲಾದೇಶ ವಿರುದ್ಧದ ಪಂದ್ಯಕ್ಕೆ ದುಬೈ ಅಂಗಳ ಸಾಕ್ಷಿಯಾಗಲಿದೆ. ಇದೇ ಮೈದಾನದಲ್ಲಿ ಟೀಮ್ ಇಂಡಿಯಾ ತನ್ನೆಲ್ಲಾ ಪಂದ್ಯಗಳನ್ನು ಆಡಲಿದೆ. ಭಾರತ ಹಾಗೂ ಪಾಕಿಸ್ತಾನ ನಡುವಣ ಹೈವೋಲ್ಟೇಜ್ ಪಂದ್ಯ ಫೆ.23 ರಂದು ನಡೆಯಲಿದೆ. ಈ ಪಂದ್ಯದ ಮೇಲೆ ವಿಶ್ವದ ಚಿತ್ತ ನೆಟ್ಟಿದೆ.
ಚಾಂಪಿಯನ್ಸ್ ಟ್ರೋಫಿಯಲ್ಲಿ 8 ತಂಡಗಳು ಭಾಗವಹಿಸುತ್ತಿದ್ದು, 2 ಗುಂಪುಗಳಾಗಿ ವಿಂಗಡಿಸಲಾಗಿದೆ. ಭಾರತ, ಪಾಕಿಸ್ತಾನ, ಬಾಂಗ್ಲಾದೇಶ, ನ್ಯೂಜಿಲೆಂಡ್ ತಂಡಗಳು "ಎ" ಗುಂಪಿನಲ್ಲಿ ಸ್ಥಾನ ಪಡೆದಿವೆ. ಇನ್ನು ಆಸ್ಟ್ರೇಲಿಯಾ, ದಕ್ಷಿಣ ಆಫ್ರಿಕಾ, ಅಫ್ಘಾನಿಸ್ತಾನ, ಇಂಗ್ಲೆಂಡ್ ತಂಡಗಳು "ಬಿ" ಗುಂಪಿನಲ್ಲಿ ಸ್ಥಾನ ಪಡೆದಿವೆ. ಮಾರ್ಚ್ 4 ಹಾಗೂ 5 ರಂದು ಸೆಮೀಸ್ ಕಾದಾಟ ನಡೆಯಲಿದ್ದು, ಮಾರ್ಚ್ 9ರಂದು ಫೈನಲ್ ಫೈಟ್ ನಡೆಯಲಿದೆ.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications