Champions Trophy 2025: ನಿಗದಿತ ಸಮಯಕ್ಕೆ ಚಾಂಪಿಯನ್ಸ್ ಟ್ರೋಫಿ ನಡೆಯಲಿದೆ; ಪಿಸಿಬಿ ಅಧ್ಯಕ್ಷ ಸ್ಪಷ್ಟನೆ
ಪಾಕಿಸ್ತಾನವು ಮುಂಬರುವ ಐಸಿಸಿ ಚಾಂಪಿಯನ್ಸ್ ಟ್ರೋಫಿ 2025ರ ಟೂರ್ನಿಗೆ ಆತಿಥ್ಯ ವಹಿಸಲಿದೆ. ಪಾಕಿಸ್ತಾನ ಕ್ರಿಕೆಟ್ ಮಂಡಳಿ ಕೂಡ ಟೂರ್ನಿಗೆ ಬೇಕಾದ ಎಲ್ಲಾ ರೀತಿಯ ಸಿದ್ಧತೆ ಆರಂಭಿಸಿದೆ. ಆದರೆ, ಈ ಬಾರಿಯ ಐಸಿಸಿ ಟೂರ್ನಿಗಾಗಿ ಭಾರತ ತಂಡ ಪಾಕಿಸ್ತಾನಕ್ಕೆ ಪ್ರವಾಸ ಕೈಗೊಳ್ಳಲಿದೆಯೇ ಎಂಬುದು ಇನ್ನೂ ಸ್ಪಷ್ಟವಾಗಿಲ್ಲ. ಆದರೆ, ಭಾರತ ತಂಡ ಪಾಕಿಸ್ತಾನಕ್ಕೆ ಹೋಗುವುದು ಬಹುತೇಕ ಅನುಮಾನವಾಗಿದೆ.
ಇದೆಲ್ಲದರ ನಡುವೆ ಚಾಂಪಿಯನ್ಸ್ ಟ್ರೋಫಿ 2025ರ ಟೂರ್ನಿಗೆ ಸಂಬಂಧಿಸಿದ ಒಂದು ದೊಡ್ಡ ಅಪ್ಡೇಟ್ ಹೊರಬಿದ್ದಿದೆ. ಈ ಅಪ್ಡೇಟ್ ಪಾಕಿಸ್ತಾನ ಕ್ರಿಕೆಟ್ ಮಂಡಳಿಯ ಅಧ್ಯಕ್ಷ ಮೊಹ್ಸಿನ್ ನಖ್ವಿ ಅವರಿಂದ ಬಂದಿದೆ. ಚಾಂಪಿಯನ್ಸ್ ಟ್ರೋಫಿಗಾಗಿ ಭಾರತ ಪಾಕಿಸ್ತಾನಕ್ಕೆ ಪ್ರವಾಸ ಕೈಗೊಳ್ಳಲಿದೆ ಎಂಬ ಭರವಸೆ ಇದೆ ಎಂದು ಅವರು ಹೇಳಿದ್ದಾರೆ. ಅಲ್ಲದೆ, ಟೂರ್ನಿ ಬಗ್ಗೆ ಇನ್ನಷ್ಟ ವಿಷಯಗಳನ್ನೂ ಹಂಚಿಕೊಂಡಿದ್ದಾರೆ.

ಪಿಸಿಬಿ ಅಧ್ಯಕ್ಷ ಭರವಸೆ
ಚಾಂಪಿಯನ್ಸ್ ಟ್ರೋಫಿ 2025 ಫೆಬ್ರವರಿ 19 ರಂದು ಪ್ರಾರಂಭವಾಗಲಿದೆ. ಟೂರ್ನಿಯ ಫೈನಲ್ ಪಂದ್ಯ ಮಾರ್ಚ್ 9 ರಂದು ನಡೆಯಲಿದೆ. ಲಾಹೋರ್, ಕರಾಚಿ ಮತ್ತು ರಾವಲ್ಪಿಂಡಿ ಸ್ಟೇಡಿಯಂಗಳಲ್ಲಿ ಚಾಂಪಿಯನ್ಸ್ ಟ್ರೋಫಿ ಪಂದ್ಯಗಳನ್ನು ಆಡಿಸಲು ಸಿದ್ಧತೆ ಮಾಡಿಕೊಳ್ಳಲಾಗುತ್ತಿದೆ. ಇದೀಗ ಪಾಕಿಸ್ತಾನ ಕ್ರಿಕೆಟ್ ಮಂಡಳಿ (ಪಿಸಿಬಿ) ಅಧ್ಯಕ್ಷ ಮೊಹ್ಸಿನ್ ನಖ್ವಿ ಅವರು ಐಸಿಸಿ ಚಾಂಪಿಯನ್ಸ್ ಟ್ರೋಫಿಯನ್ನು ದೇಶದಲ್ಲಿ ಆಯೋಜಿಸಲಾಗುವುದು. ಸಾಂಪ್ರದಾಯಿಕ ಎದುರಾಳಿ ಭಾರತ ಸೇರಿದಂತೆ ಎಲ್ಲಾ ತಂಡಗಳು ಟೂರ್ನಿಯಲ್ಲಿ ಭಾಗವಹಿಸಲಿವೆ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ಭಾರತ ತಂಡ ಪಾಕಿಸ್ತಾನಕ್ಕೆ ಬರಬೇಕು. ಅವರು ಇಲ್ಲಿಗೆ ಬರುವುದಕ್ಕೆ ಹಿಂದೇಟು ಹಾಕುತ್ತಾರೆ ಎಂದು ನಾನು ಭಾವಿಸುವುದಿಲ್ಲ. ಪಾಕಿಸ್ತಾನದಲ್ಲಿ ನಡೆಯುವ ಚಾಂಪಿಯನ್ಸ್ ಟ್ರೋಫಿಯಲ್ಲಿ ಎಲ್ಲ ತಂಡಗಳಿಗೂ ಆತಿಥ್ಯ ವಹಿಸುತ್ತೇವೆ ಎಂಬ ವಿಶ್ವಾಸ ನಮಗಿದೆ. ಭಾರತ ಸೇರಿದಂತೆ ಎಲ್ಲಾ ತಂಡಗಳಿಗೆ ಆತಿಥ್ಯ ವಹಿಸಲು ಪಾಕಿಸ್ತಾನ ಸಿದ್ಧವಾಗಿದ್ದು, ನಿಗದಿತ ವೇಳಾಪಟ್ಟಿಯಂತೆ ಸಿದ್ಧತೆಗಳು ನಡೆಯುತ್ತಿವೆ. ಜೊತೆಗೆ ನಿಗದಿತ ಸಮಯಕ್ಕೆ ಪಂದ್ಯಗಳನ್ನು ನಡೆಸುತ್ತೇವೆ ಎಂದು ನಖ್ವಿ ತಿಳಿಸಿದ್ದಾರೆ.
ಉಭಯ ದೇಶಗಳ ನಡುವಿನ ರಾಜಕೀಯ ಸಂಬಂಧಗಳು ಹದಗೆಟ್ಟಿರುವ ಕಾರಣ ಭಾರತ ಕೇಂದ್ರ ಸರ್ಕಾರ 2008ರ ಜುಲೈ ತಿಂಗಳಿಂದ ಪಾಕಿಸ್ತಾನಕ್ಕೆ ತನ್ನ ತಂಡವನ್ನು ಕಳುಹಿಸಿಲ್ಲ. ಇದಾದ ಬಳಿಕ ಪಾಕಿಸ್ತಾನ ಮೂರು ಬಾರಿ ಭಾರತಕ್ಕೆ ಬಂದಿದೆ. 2012ರಲ್ಲಿ ಪಾಕಿಸ್ತಾನವು ಮೂರು ಪಂದ್ಯಗಳ ಟಿ20 ಸರಣಿ ಮತ್ತು ಮೂರು ಏಕದಿನ ಪಂದ್ಯಗಳನ್ನು ಆಡಲು ಭಾರತಕ್ಕೆ ಪ್ರವಾಸ ಮಾಡಿತು. 2016ರಲ್ಲಿ ಪಾಕಿಸ್ತಾನ ತಂಡ ಟಿ20 ವಿಶ್ವಕಪ್ ಆಡಲು ಭಾರತಕ್ಕೆ ಬಂದಿತ್ತು. 2023ರಲ್ಲಿ ನಡೆದ ಏಕದಿನ ವಿಶ್ವಕಪ್‌ನಲ್ಲಿ ಪಾಕಿಸ್ತಾನ ತಂಡವೂ ಭಾರತದಲ್ಲಿತ್ತು. ಆದರೆ, ಚಾಂಪಿಯನ್ಸ್ ಟ್ರೋಫಿಗಾಗಿ ಭಾರತ ತಂಡ ಪಾಕಿಸ್ತಾನಕ್ಕೆ ತೆರಳಲಿದೆಯೇ ಎಂಬುದು ಕುತೂಹಲ ಮೂಡಿಸಿದೆ.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications