ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X
For Quick Alerts
ALLOW NOTIFICATIONS  
For Daily Alerts
 

ಐಸಿಸಿ ಮುಖ್ಯಸ್ಥ ಸ್ಥಾನಕ್ಕೆ ಸ್ಪರ್ಧೆಯ ಬಗ್ಗೆ ಪಿಸಿಬಿ ಮುಖ್ಯಸ್ಥ ಇಹ್ಸಾನ್ ಮನಿ ಸ್ಪಷ್ಟನೆ

Pcb Chief Ehsan Mani Opts Out Of Icc Chairman Race

ಐಸಿಸಿ ಮುಖ್ಯಸ್ಥ ಸ್ಥಾನಕ್ಕೆ ನಡೆಯುವ ಚುನಾವಣೆಯಲ್ಲಿ ತಾನು ಸ್ಪರ್ಧಿಸಲು ಆಸಕ್ತಿಯನ್ನು ಹೊಂದಿಲ್ಲ ಎಂದು ಪಾಕಿಸ್ತಾನ ಕ್ರಿಕೆಟ್ ಮಂಡಳಿಯ ಅಧ್ಯಕ್ಷ ಇಹ್ಸಾನ್ ಮನಿ ಸ್ಪಷ್ಟಪಡಿಸಿದ್ದಾರೆ. ಹಾಲಿ ಮುಖ್ಯಸ್ಥರಾಗಿರುವ ಶಶಾಂಕ್ ಮನೋಹರ್ ಅಧಿಕಾರಾವಧಿ ಮುಂದಿನ ತಿಂಗಳು ಅಂತ್ಯವಾಗಲಿದ್ದು ಮುಂದಿನ ಅವಧಿಗೆ ಮುಂದುವರಿಯದಿರಲು ಶಶಾಂಕ್ ನಿರ್ಧರಿಸಿದ್ದಾರೆ.

ಸದ್ಯ ಬಿಸಿಸಿಐ ಅಧ್ಯಕ್ಷರಾಗಿರುವ ಸೌರವ್ ಗಂಗೂಲಿ ಹೆಸರು ಐಸಿಸಿ ಮುಖ್ಯಸ್ಥ ಸ್ಥಾನಕ್ಕೆ ಜೋರಾಗಿ ಕೇಳಿ ಬರುತ್ತಿದೆ. ಇದರ ಜೊತೆಯಲ್ಲಿ ಕೆಲ ವರದಿಗಳು ಪಾಕಿಸ್ತಾನ ಕ್ರಿಕೆಟ್ ಮಂಡಳಿಯ ಅಧ್ಯಕ್ಷ ಇಹ್ಸಾನ್ ಮನಿ ಕೂಡ ಐಸಿಸಿ ಮುಖ್ಯಸ್ಥ ಹುದ್ದೆಗೆ ಬಲಿಷ್ಠ ಸ್ಪರ್ಧಿ ಎಂದು ಉಲ್ಲೇಖಿಸಿದ್ದವು.

ಕೇರಳ ರಣಜಿ ತಂಡದಲ್ಲಿ ವಿವಾದಾತ್ಮಕ ವೇಗಿ ಶ್ರೀಶಾಂತ್‌ಗೆ ಸ್ಥಾನ!ಕೇರಳ ರಣಜಿ ತಂಡದಲ್ಲಿ ವಿವಾದಾತ್ಮಕ ವೇಗಿ ಶ್ರೀಶಾಂತ್‌ಗೆ ಸ್ಥಾನ!

'ಮುಂಬೈ ಮಿರರ್' ಜೊತೆಗೆ ಮಾತನಾಡಿದ ಪಿಸಿಬಿ ಮುಖ್ಯಸ್ಥ ಇಹ್ಸಾನ್ ಮನಿ ಈ ವರದಿಗಳ ಬಗ್ಗೆ ಸ್ಪಷ್ಟವಾಗಿ ತಮ್ಮ ನಿರ್ಧಾರವನ್ನು ತಿಳಿಸಿದರು. ನಾನು ಈ ಚುನಾವಣೆಗೆ ಸ್ಪರ್ಧಿಸುವುದಿಲ್ಲ. ಈ ಹಿಂದೆಯೇ ನಾನು ಮಾಧ್ಯಮಗಳಿಗೆ ಈ ಕುರಿತಾಗಿ ಸ್ಪಷ್ಟವಾಗಿ ತಿಳಿಸಿದ್ದೇನೆ. ಆ ಹುದ್ದೆಗೆ ಸ್ಪರ್ಧಿಸಲು ನನಗೆ ಆಸಕ್ತಿಯಿಲ್ಲ ಎಂದಿದ್ದಾರೆ.

ಭಾರತದ ಮಾಧ್ಯಮಗಳಿಂದ ಈ ಬಗ್ಗೆ ವರದಿಯಾಗಿದೆ. ಐಸಿಸಿ ಮುಖ್ಯಸ್ಥ ಸ್ಥಾನಕ್ಕೆ ಸ್ಪರ್ಧಿಸಲು ಕೆಲವರು ನನ್ನಲ್ಲಿ ಕೇಳಿಕೊಂಡಿದ್ದು ನಿಜ. ಆದರೆ ನನಗೆ ಆಸಕ್ತಿಯಿಲ್ಲ ಎಂಬುದನ್ನು ಅವರಿಗೆ ನಾನು ಸ್ಪಷ್ಟವಾಗಿ ತಿಳಿಸಿದ್ದೇನೆ ಎಂದಿದ್ದಾರೆ ಇಹ್ಸಾನ್ ಮನಿ. ಇದೇ ಸಂದರ್ಭದಲ್ಲಿ ಅವರು ಐಸಿಸಿ ಅಧ್ಯಕ್ಷ ಹುದ್ದೆಗೆ ಗಂಗೂಲಿ ಸ್ಪರ್ಧಿಸುವ ಬಗ್ಗೆ ಯಾವುದೇ ಸುಳಿವು ಇಲ್ಲ ಎಂದಿದ್ದಾರೆ.

ದಶಕದ ನಂತರ ಸಚಿನ್ ನಿವೃತ್ತಿಯ ಬಗೆಗಿನ ರಹಸ್ಯವನ್ನು ಬಿಚ್ಚಿಟ್ಟ ಮಾಜಿ ಕೋಚ್ದಶಕದ ನಂತರ ಸಚಿನ್ ನಿವೃತ್ತಿಯ ಬಗೆಗಿನ ರಹಸ್ಯವನ್ನು ಬಿಚ್ಚಿಟ್ಟ ಮಾಜಿ ಕೋಚ್

ಮುಂದಿನ ಅವಧಿಗೆ ಐಸಿಸಿ ಮುಖ್ಯಸ್ಥನಾಗಿ ಮುಂದುವರಿಯುವುದಿಲ್ಲ ಎಂದು ಆ ಸ್ಥಾನದಲ್ಲಿರುವ ಶಶಾಂಕ್ ಮನೋಹರ್ ಸ್ಪಷ್ಟಪಡಿಸಿರುವುದರಿಂದ ಜುಲೈ ತಿಂಗಳಲ್ಲಿ ಹೊಸ ಮುಖ್ಯಸ್ಥರ ಚುನಾವಣೆ ನಡೆಯಲಿದೆ. ಆದರೆ ಚುನಾವಣಾ ಪ್ರಕ್ರಿಯೆ ಬಗ್ಗೆ ಈವರೆಗೂ ಯಾವುದೇ ಬೆಳವಣಿಗೆಗಳು ನಡೆದಿಲ್ಲ. ಮುಂದಿನ ತಿಂಗಳು ಟಿ20 ವಿಶ್ವಕಪ್ ಆಯೋಜನೆ ಬಗ್ಗೆ ಸಭೆ ನಡೆಯಲಿದ್ದು ಅದಾದ ಬಳಿಕ ಚುನಾವಣಾ ಪ್ರಕ್ರಿಯೆ ನಡೆಯುವ ಸಾಧ್ಯೆತೆಯಿದೆ.

Story first published: Thursday, June 18, 2020, 15:55 [IST]
Other articles published on Jun 18, 2020
POLLS
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Yes No
Settings X