ಭಾರತದಲ್ಲಿ ನಡೆಯುವ ಏಕದಿನ ವಿಶ್ವಕಪ್‌ಗೆ ಪಾಕಿಸ್ತಾನ ಬಹಿಷ್ಕಾರ ಹಾಕುವ ಬಗ್ಗೆ ನಿರ್ಧರಿಸಿಲ್ಲ ಎಂದ ಪಿಸಿಬಿ

ಪಾಕಿಸ್ತಾನ ಕ್ರಿಕೆಟ್ ಮಂಡಳಿಯ ಅಧ್ಯಕ್ಷ ಸ್ಥಾನದಿಂದ ರಮೀಜ್ ರಾಜಾ ಅವರನ್ನು ಹೊರಹಾಕಲಾಗಿದೆ. ಅವರ ಸ್ಥಾನಕ್ಕೆ ನಮಾಜ್ ಸೇಥಿ ಅವರನ್ನು ಪಾಕಿಸ್ತಾನ ಸರ್ಕಾರ ನೇಮಿಸಿದೆ. ಪಿಸಿಬಿ ಅಧ್ಯಕ್ಷರಾಗಿದ್ದಾಗ ರಮೀಜ್ ರಾಜಾ ಸಾಕಷ್ಟು ವಿವಾದಿತ ಹೇಳಿಕೆ ನೀಡಿದ್ದರು.

ಏಷ್ಯಾಕಪ್‌ಗೆ ತನ್ನ ತಂಡವನ್ನು ಕಳುಹಿಸುವಂತೆ ನೆರೆಯ ರಾಷ್ಟ್ರದ ಮೇಲೆ ಒತ್ತಡ ಹೇರಲು ಭಾರತದಲ್ಲಿ ಮುಂದಿನ ವರ್ಷ ನಡೆಯಲಿರುವ 50 ಓವರ್‌ಗಳ ವಿಶ್ವಕಪ್ ಅನ್ನು ಬಹಿಷ್ಕರಿಸುವುದಾಗಿ ಬೆದರಿಕೆ ಹಾಕಿರುವುದಾಗಿ ಪಾಕಿಸ್ತಾನ ಕ್ರಿಕೆಟ್ ಮಂಡಳಿ (ಪಿಸಿಬಿ) ಐಸಿಸಿ ಅಧಿಕಾರಿಗಳಿಗೆ ತಿಳಿಸಿದೆ ವರದಿ ಮಾಡಲಾಗಿತ್ತು.

ಅಕ್ಟೋಬರ್‌ನಲ್ಲಿ, ಎಸಿಸಿ ಅಧ್ಯಕ್ಷ ಮತ್ತು ಬಿಸಿಸಿಐ ಕಾರ್ಯದರ್ಶಿ ಜಯ್ ಶಾ ಭಾರತವು ಮುಂದಿನ ವರ್ಷ 50-ಓವರ್‌ಗಳ ಏಷ್ಯಾ ಕಪ್‌ಗಾಗಿ ಪಾಕಿಸ್ತಾನಕ್ಕೆ ಪ್ರಯಾಣಿಸುವುದಿಲ್ಲ ಎಂದು ಹೇಳಿದ್ದರು. ಇದಕ್ಕೆ ಭಾರಿ ವಿರೋಧ ವ್ಯಕ್ತಪಡಿಸಿದ್ದ ಪಿಸಿಬಿ ಭಾರತ ಪಾಕಿಸ್ತಾನಕ್ಕೆ ಬರದಿದ್ದರೆ ಪಾಕಿಸ್ತಾನ ತಂಡ ಕೂಡ ವಿಶ್ವಕಪ್ ಆಡಲು ಭಾರತಕ್ಕೆ ಪ್ರಯಾಣ ಮಾಡುವುದಿಲ್ಲ ಎಂದು ಹೇಳಿದ್ದರು.

IPL 2023: ಐಪಿಎಲ್ ಹರಾಜನ್ನು ಟಿವಿಯಲ್ಲಿ ವೀಕ್ಷಿಸುತ್ತೇನೆ ಎಂದ ಇಂಗ್ಲೆಂಡ್ ಸ್ಟಾರ್ ಆಟಗಾರIPL 2023: ಐಪಿಎಲ್ ಹರಾಜನ್ನು ಟಿವಿಯಲ್ಲಿ ವೀಕ್ಷಿಸುತ್ತೇನೆ ಎಂದ ಇಂಗ್ಲೆಂಡ್ ಸ್ಟಾರ್ ಆಟಗಾರ

ಅಧ್ಯಕ್ಷ ಸ್ಥಾನದಿಂದ ಕೆಳಗಿಳಿಯುವ ಮುನ್ನ ಅವರು ಮಹತ್ವದ ಹೇಳಿಕೆ ನೀಡಿದ್ದಾರೆ. 50 ಓವರ್‌ಗಳ ವಿಶ್ವಕಪ್‌ಗೆ ಭಾರತಕ್ಕೆ ತನ್ನ ತಂಡವನ್ನು ಕಳುಹಿಸದಿರಲು ಮಂಡಳಿ ಯಾವುದೇ ನಿರ್ಧಾರ ಕೈಗೊಂಡಿಲ್ಲ ಎಂದು ಪಿಸಿಬಿ ಅಧ್ಯಕ್ಷ ರಮೀಜ್ ರಾಜಾ ಅಂತರಾಷ್ಟ್ರೀಯ ಕ್ರಿಕೆಟ್ ಕೌನ್ಸಿಲ್ ಅಧಿಕಾರಿಗಳಿಗೆ ತಿಳಿಸಿದ್ದಾರೆ ಎಂದು ತಿಳಿದುಬಂದಿದೆ.

ಐಸಿಸಿ ಅಧಿಕಾರಿಗಳ ಬಳಿ ಪಿಸಿಬಿ ಸ್ಪಷ್ಟನೆ

ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಜಿಯೋಫ್ ಅಲ್ಲಾರ್ಡಿಸ್ ಸೇರಿದಂತೆ ಐಸಿಸಿ ಅಧಿಕಾರಿಗಳು ಇಂಗ್ಲೆಂಡ್ ವಿರುದ್ಧದ ತವರು ಟೆಸ್ಟ್ ಸರಣಿಯನ್ನು ವೀಕ್ಷಿಸಲು ಅತಿಥಿಗಳಾಗಿ ಪಾಕಿಸ್ತಾನಕ್ಕೆ ತೆರಳಿದ್ದಾಗ ಈ ವಿಚಾರ ತಿಳಿಸಿರುವುದಾಗಿ ಹೇಳಿದೆ.

ಏಕದಿನ ವಿಶ್ವಕಪ್‌ ಪಂದ್ಯಾವಳಿಗೆ ಭಾರತಕ್ಕೆ ಪಾಕಿಸ್ತಾನ ತಂಡವನ್ನು ಕಳುಹಿಸದಿರುವ ಬಗ್ಗೆ ಪಿಸಿಬಿ ಯಾವುದೇ ನಿರ್ಧಾರ ಮಾಡಿಲ್ಲ. ಅಂತಹ ದೊಡ್ಡ ಪಂದ್ಯಾವಳಿಯನ್ನು ಬಹಿಷ್ಕರಿಸುವ ಉದ್ದೇಶ ಪಿಸಿಬಿಗೆ ಇಲ್ಲ ಎಂದು ರಮೀಜ್ ಐಸಿಸಿ ಅಧಿಕಾರಿಗಳಿಗೆ ಭರವಸೆ ನೀಡಿದ್ದಾರೆ. ಏಷ್ಯಾ ಕಪ್‌ಗೆ ತನ್ನ ತಂಡವನ್ನು ಕಳುಹಿಸಲು ಭಾರತೀಯ ಕ್ರಿಕೆಟ್ ಮಂಡಳಿಯನ್ನು ಒತ್ತಾಯಿಸುವಂತೆ ಅವರು ಐಸಿಸಿ ಅಧಿಕಾರಿಗಳ ಬಳಿ ಮನವಿ ಮಾಡಿದ್ದಾರೆ ಎಂದು ಪಿಟಿಐ ವರದಿ ಮಾಡಿದೆ.

ಭಾರತ ತಂಡ ಏಷ್ಯಾಕಪ್‌ನಲ್ಲಿ ಭಾಗವಹಿಸದಿದ್ದರೆ ಮುಂದಿನ ವರ್ಷ ಭಾರತದಲ್ಲಿ ನಡೆಯಲಿರುವ ವಿಶ್ವಕಪ್‌ನಲ್ಲಿ ಪಾಕಿಸ್ತಾನ ಆಡುವುದಿಲ್ಲ ಎಂಬ ಹೇಳಿಕೆಗೆ ಸಂಬಂಧಿಸಿದಂತೆ ಐಸಿಸಿ ಅಧಿಕಾರಿಗಳು ರಮಿಜ್‌ ಬಳಿ ಪ್ರಶ್ನೆ ಮಾಡಿದ್ದರು.

2025ರ ಚಾಂಪಿಯನ್ಸ್ ಟ್ರೋಫಿ ಪಂದ್ಯಾವಳಿಯನ್ನು ಪಾಕಿಸ್ತಾನದಿಂದ ಸ್ಥಳಾಂತರಿಸುವ ಬಗ್ಗೆ ಕೂಡ ಪಾಕಿಸ್ತಾನ ಆತಂಕ ವ್ಯಕ್ತಪಡಿಸಿದೆ. ಪಿಸಿಬಿ ಇದಕ್ಕೆ ಯಾವುದೇ ಕಾರಣಕ್ಕೂ ಒಪ್ಪಿಕೊಳ್ಳುವುದಿಲ್ಲ ಎಂದು ಹೇಳಿದ್ದಾರೆ.

2008 ರ ಏಷ್ಯಾ ಕಪ್ ನಂತರ ಭಾರತವು ಪಾಕಿಸ್ತಾನಕ್ಕೆ ಪ್ರಯಾಣಿಸಿಲ್ಲ. ಅದೇ ವರ್ಷ ನವೆಂಬರ್ 26 ರಂದು ಮುಂಬೈ ಮೇಲೆ ಭಯೋತ್ಪಾದಕ ದಾಳಿಯ ನಂತರ, 2009 ರ ಆರಂಭದಲ್ಲಿ ನಿಗದಿತ ದ್ವಿಪಕ್ಷೀಯ ಸರಣಿಯನ್ನು ರದ್ದುಗೊಳಿಸಲಾಯಿತು. 2012ರಲ್ಲಿ ಪಾಕಿಸ್ತಾನ 6 ಪಂದ್ಯಗಳ ಟಿ20 ಸರಣಿಗಾಗಿ ಭಾರತಕ್ಕೆ ಬಂದಿತ್ತು, ಕಳೆದ 10 ವರ್ಷಗಳಲ್ಲಿ ಯಾವುದೇ ದ್ವಿಪಕ್ಷೀಯ ಸರಣಿ ನಡೆದಿಲ್ಲ.

For Quick Alerts
ALLOW NOTIFICATIONS
For Daily Alerts
Story first published: Wednesday, December 21, 2022, 22:55 [IST]
Other articles published on Dec 21, 2022
POLLS
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Yes No
Settings X