ಪಾಕಿಸ್ತಾನ ಕ್ರಿಕೆಟಿಗ ಉಮರ್ ಅಕ್ಮಲ್ ತಕ್ಷಣದಿಂದಲೇ ಅಮಾನತು: ಪಿಸಿಬಿ

ಪಾಕಿಸ್ತಾನದ ಮಧ್ಯಮ ಕ್ರಮಾಂಕದ ಬ್ಯಾಟ್ಸ್‌ಮನ್ ಉಮರ್ ಅಕ್ಮಲ್ ಅವರನ್ನು ಪಾಕಿಸ್ತಾನ ಕ್ರಿಕೆಟ್ ಬೋರ್ಡ್ ತಕ್ಷಣದಿಂದಲೇ ಅಮಾನತುಗೊಳಿಸಿದೆ. ಗುರುವಾರ ನಡೆದ ಬೆಳವಣಿಗೆಯಲ್ಲಿ ಪಿಸಿಬಿ ಈ ನಿರ್ಧಾರವನ್ನು ತೆಗೆದುಕೊಂಡಿದ್ದು ಭ್ರಷ್ಟಾಚಾರ ವಿರೋಧಿ ಸಂಹಿತೆಯ ಪ್ರಕಾರ ನಿರ್ಬಂಧಕ್ಕೊಳಗಾಗಿದ್ದಾರೆ.
ಪಾಕಿಸ್ತಾನ ಕ್ರಿಕೆಟ್ ಮಂಡಳಿಯ ಆ್ಯಂಟಿ ಕರಪ್ಷನ್ ಕೋಡ್ 4.7.1 ಪ್ರಕಾರ ತಕ್ಷಣದಿಂದಲೇ ಜಾರಿಯಾಗುವಂತೆ ಅಮಾನತುಗೊಳಿಸಲಾಗಿದೆ ಎಂದು ಪಿಸಿಬಿ ಅಧಿಕಾರಿಗಳು ಮಾಧ್ಯಮಗಳಿಗೆ ಮಾಹಿತಿ ನೀಡಿದ್ದಾರೆ. ಇದರನ್ವಯ ಈ ವಿಚಾರವಾಗಿ ವಿಚಾರಣೆ ಸಂಪೂರ್ಣವಾಗಿ ಮುಕ್ತಾಯವಾಗುವವರೆಗೆ ಉಮರ್ ಅಕ್ಮಲ್ ಯಾವುದೇ ಕ್ರಿಕೆಟ್ ಚಟುವಟಿಕೆಯಲ್ಲಿ ಪಾಲ್ಗೊಳ್ಳುವಂತಿಲ್ಲ.
ಈ ಬೆಳವಣಿಗೆ ಹಿನ್ನೆಲೆಯಲ್ಲಿ ಪಾಕಿಸ್ತಾನ ಕ್ರಿಕೆಟ್ ಬೋರ್ಡ್‌ನ ನೇತೃತ್ವದಲ್ಲಿ ನಡೆಯುವ ಪಾಕಿಸ್ತಾನ ಸೂಪರ್ ಲೀಗ್ ಟೂರ್ನಿಯಿಂದಲೂ ಉಮರ್ ಅಕ್ಮಲ್ ಹೊರಬೀಳಲಿದ್ದಾರೆ. ಪಿಎಸ್‌ಎಲ್‌ನಲ್ಲಿ ಕ್ವೆಟ್ಟಾ ಗ್ಲಾಡಿಯೇಟರ್ಸ್ ತಂಡವನ್ನು ಉಮರ್ ಅಕ್ಮಲ್ ಪ್ರತಿನಿಧಿಸುತ್ತಿದ್ದಾರೆ.
ಉಮರ್ ಅಕ್ಮಲ್ ನಿಶೇಧಕ್ಕೆ ಒಳಗಾಗಿರುವ ಕಾರಣ ಪಾಕಿಸ್ತಾನ ಕ್ರಿಕೆಟ್ ಮಂಡಳಿ ಗ್ಲಾಡಿಯೇಟರ್ಸ್ ತಂಡಕ್ಕೆ ಬದಲಿ ಆಟಗಾರನನ್ನು ಸೇರ್ಪಡೆಗೊಳಿಸಲು ಅನುಮತಿಯನ್ನು ನೀಡಿದೆ. ಬದಲಿ ಆಟಗಾರರನ್ನು ಗ್ಲಾಡಿಯೇಟರ್ಸ್ ತಂಡ ಇನ್ನಷ್ಟೇ ಆಯ್ಕೆ ಮಾಡಿಕೊಳ್ಳ ಬೇಕಿದೆ.
ಪಾಕಿಸ್ತಾನದ ಕ್ರಿಕೆಟ್ ಮಂಡಳಿ ನಡೆಸುವ ಕ್ರಿಕೆಟ್ ಲೀಗ್ ಪಾಕಿಸ್ತಾನ್ ಸೂಪರ್ ಲೀಗ್ ಫೆಬ್ರವರಿ 20 ರಿಂದ ಆರಂಭಗೊಳ್ಳುತ್ತಿದೆ. ಈ ಪಂದ್ಯದ ಆರಂಭಿಕ ಪಂದ್ಯದಲ್ಲಿ ಹಾಲಿ ಚಾಂಪಿಯನ್ ಆಗಿರುವ ಉಮರ್ ಅಕ್ಮಲ್ ಪ್ರತಿನಿಧಿಸುತ್ತಿದ್ದ ಕ್ವೆಟ್ಟಾ ಗ್ಲಾಡಿಯೇಟರ್ಸ್ ತಂಡ ಎರಡು ಬಾರಿ ಚಾಂಪಿಯನ್ ತಂಡ ಇಸ್ಲಾಮಾಬಾದ್ ಯುನೈಟೆಡ್ ತಂಡವನ್ನು ಎದುರಿಸಲಿದೆ.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications