Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block

ಕ್ರೀಡಾ ಉಡುಪು ಪರ್ಫಾರ್ಮ್ಯಾಕ್ಸ್‌ ಬ್ರ್ಯಾಂಡ್‌ಗೆ ರಾಯಭಾರಿ ಆಗಿ ಜಸ್ಪ್ರೀತ್‌ ಬುಮ್ರಾ ನೇಮಕ

Jasprit bumrah

ರಿಲಯನ್ಸ್‌ ರಿಟೇಲ್‌ನ ಅಧಿಕ ಕಾರ್ಯಕ್ಷಮತೆಯ ಮತ್ತು ತಾಂತ್ರಿಕವಾಗಿ ಸುಧಾರಿತ ಕ್ರೀಡಾ ಉಡುಪು ಬ್ರ್ಯಾಂಡ್‌ ಪರ್ಫಾರ್ಮ್ಯಾಕ್ಸ್‌(Performax) ಬ್ರಾಂಡ್ ಅಂಬಾಸಿಡರ್ ಆಗಿ ಟೀಂ ಇಂಡಿಯಾ ಸ್ಟಾರ್ ಬೌಲರ್ ಜಸ್ಪ್ರೀತ್ ಬುಮ್ರಾ ಆಯ್ಕೆಯಾಗಿದ್ದಾರೆ.

ಪರ್ಫಾರ್ಮ್ಯಾಕ್ಸ್‌ ಭಾರತೀಯ ಬ್ರ್ಯಾಂಡ್ ಆಗಿದ್ದು, ದೇಶದ ನಂ.1 ಕ್ರೀಡಾ ಉಡುಪು ಬ್ರ್ಯಾಂಡ್ ಆಗಿ ಹೊರಹೊಮ್ಮುವ ಗುರಿಯನ್ನು ಹೊಂದಿದೆ. ಬುಮ್ರಾ ಮತ್ತು ಪರ್ಫಾರ್ಮ್ಯಾಕ್ಸ್‌ ಬದ್ಥತೆ ಮತ್ತು ಪರಿಣಿತಿಗೆ ಹೆಸರಾಗಿದ್ದಾರೆ. ಹೀಗಾಗಿ, ಬ್ರ್ಯಾಂಡ್‌ಗೆ ಬುಮ್ರಾ ಅತ್ಯಂತ ಸೂಕ್ತವಾಗಿ ಹೊಂದುತ್ತಾರೆ ಎಂದು ಕಂಪನಿಯು ತಿಳಿಸಿದೆ.

ಈ ಸಂದರ್ಭದಲ್ಲಿ ಮಾತನಾಡಿದ ರಿಲಯನ್ಸ್‌ ರಿಟೇಲ್‌ನ ಫ್ಯಾಷನ್‌ ಮತ್ತು ಲೈಫ್‌ಸ್ಟೈಲ್‌ನ ಸಿಇಒ ಅಖಿಲೇಶ್‌ ಪ್ರಸಾದ್ "ಜಸ್‌ಪ್ರೀತ್ ಬುಮ್ರಾ ಜೊತೆಗೆ ನಮ್ಮ ಸಹಭಾಗಿತ್ವವನ್ನು ಘೋಷಿಸುವುದಕ್ಕೆ ನನಗೆ ಹೆಮ್ಮೆಯಾಗುತ್ತಿದೆ. ಜಸ್‌ಪ್ರೀತ್ ಹಲವು ವರ್ಷಗಳಿಂದಲೂ ಭಾರತ ತಂಡದ ಪ್ರಮುಖ ಪೇಸರ್ ಆಗಿ ಕಾಣಿಸಿಕೊಂಡಿದ್ದಾರೆ. ಅದೇ ರೀತಿ, ಅಂತಾರಾಷ್ಟ್ರೀಯ ಮಾನ್ಯತೆ ಹೊಂದಿರುವ ಭಾರತದ ನಂ.1 ಕ್ರೀಡಾ ಬ್ರ್ಯಾಂಡ್ ಆಗಿ ಪರ್ಫಾರ್ಮ್ಯಾಕ್ಸ್ ಅನ್ನು ರೂಪಿಸುವ ಧ್ಯೇಯವನ್ನು ನಾವು ಹೊಂದಿದ್ದೇವೆ. ಪರ್ಫಾರ್ಮ್ಯಾಕ್ಸ್‌ ಅನ್ನು ನಮ್ಮ ಗ್ರಾಹಕರಿಗೆ ಒಂದು ಉತ್ತಮ ಮತ್ತು ಆದ್ಯತೆಯ ಬ್ರ್ಯಾಂಡ್ ಆಗಿಸುವ ನಿಟ್ಟಿನಲ್ಲಿ ನಾವು ಇಡುತ್ತಿರುವ ಹೆಜ್ಜೆಗಳಲ್ಲಿ ಇದು ಮೊದಲನೆಯಾಗಿದೆ." ಎಂದು ಅಖಿಲೇಶ್ ಹೇಳಿದ್ದಾರೆ.

ಜಸ್ಪ್ರೀತ್‌ ಬುಮ್ರಾ ಮಾತನಾಡಿ "ಕ್ರೀಡಾಳುವಾಗಿ ನಾನು ಧರಿಸುವ ಉಡುಪಿನ ಬಗ್ಗೆ ವಿಶೇಷ ಕಾಳಜಿ ವಹಿಸುತ್ತೇನೆ. ಸರಿಯಾಗಿ ಫಿಟ್ ಆಗಿರುವ ಉಡುಪು ಉತ್ತಮ ಆಟ ಆಡಲು ನೆರವಾಗುತ್ತದೆ. ಪರ್ಫಾರ್ಮ್ಯಾಕ್ಸ್‌ನಲ್ಲಿ ತಾಂತ್ರಿಕವಾಗಿ ಸುಧಾರಿತ ಆಕ್ಟಿವ್ ವೇರ್‌ನ ಹಲವು ವಿಧಗಳಿವೆ. ಇವು ಭಾರತದ ಮುಂದಿನ ತಲೆಮಾರಿನ ಅಥ್ಲೀಟ್‌ಗಳಿಗೆ ಉತ್ತಮ ಸಂಗಾತಿಯಾಗಬಲ್ಲವು. ಉತ್ತಮ ಸಾಧನೆ ಮಾಡಬೇಕು ಎಂಬ ನನ್ನ ಧ್ಯೇಯಕ್ಕೂ ಈ ಬ್ರ್ಯಾಂಡ್‌ನ ಧ್ಯೇಯಕ್ಕೂ ಹೊಂದಿಕೆ ಆಗುವುದರಿಂದ ಇದರ ಜೊತೆಗೆ ನಾನು ಗುರುತಿಸಿಕೊಳ್ಳುತ್ತಿರುವುದು ಖುಷಿಯ ಸಂಗತಿ" ಎಂದು ಬುಮ್ರಾ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

Performax

ಜಸ್‌ಪ್ರೀತ್ ಬುಮ್ರಾ ಅವರ ಮೂಲಕ ಗ್ರಾಹಕರನ್ನು ತಲುಪುವುದರ ಜೊತೆಗೆ, ರಿಲಾಯನ್ಸ್‌ ರಿಟೇಲ್‌ನ ಫ್ಯಾಷನ್ ಮತ್ತು ಲೈಫ್‌ಸ್ಟೈಲ್‌ ಸ್ಟೋರ್‌ಗಳಲ್ಲಿ ಎಕ್ಸ್‌ಕ್ಲೂಸಿವ್ ಬ್ರ್ಯಾಂಡ್‌ ಔಟ್‌ಲೆಟ್‌ಗಳನ್ನು ಸ್ಥಾಪಿಸಲಾಗುತ್ತದೆ ಮತ್ತು ಮಲ್ಟಿ ಬ್ರ್ಯಾಂಡ್ ಔಟ್‌ಲೆಟ್‌ಗಳಲ್ಲೂ ಕಾಣಿಸಿಕೊಳ್ಳಲಿದೆ. ಅಷ್ಟೇ ಅಲ್ಲ, ಡಿಜಿಟಲ್‌ ಪ್ಲಾಟ್‌ಫಾರಂಗಳಲ್ಲೂ ಇದು ಲಭ್ಯವಿರುತ್ತದೆ.

ಪರ್ಫಾರ್ಮ್ಯಾಕ್ಸ್‌ ರಿಲಯನ್ಸ್‌ ರಿಟೇಲ್‌ನ ಸ್ವಂತ ಬ್ರ್ಯಾಂಡ್ ಆಗಿದ್ದು, ಆಕ್ಟಿವ್‌ ವೇರ್ ಸಾಮಗ್ರಿಗಳಲ್ಲಿ ವಿಶೇಷ ಪರಿಣಿತಿ ಹೊಂದಿದೆ ಮತ್ತು ಪಾದರಕ್ಷೆ, ಉಡುಪು ಮತ್ತು ಅಕ್ಸೆಸರಿಗಳು ಸೇರಿದಂತೆ ವಿವಿಧ ಉತ್ಪನ್ನಗಳನ್ನು ಒದಗಿಸುತ್ತದೆ. ಪ್ರಸ್ತುತ 330 ಕ್ಕೂ ಹೆಚ್ಚು ನಗರಗಳಲ್ಲಿ 1000 ಕ್ಕೂ ಹೆಚ್ಚು ಸ್ಟೋರ್‌ಗಳಲ್ಲಿ ಬ್ರ್ಯಾಂಡ್‌ ಅಸ್ತಿತ್ವ ಹೊಂದಿದೆ.

Story first published: Saturday, September 3, 2022, 11:26 [IST]
Other articles published on Sep 3, 2022
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+