Perth Test: ಆಸೀಸ್ ಬೌಲರ್‌ಗಳಿಗೆ ಬೆಂಡೆತ್ತಿದ ರಾಹುಲ್-ಜೈಸ್ವಾಲ್; ಭಾರತಕ್ಕೆ 218 ರನ್‌ಗಳ ಮುನ್ನಡೆ
ಪರ್ತ್‌ನ ಅಪ್ಟಸ್ ಸ್ಟೇಡಿಯಂನಲ್ಲಿ ನಡೆಯುತ್ತಿರುವ ಆಸ್ಟ್ರೇಲಿಯಾ ವಿರುದ್ಧ ಮೊದಲ ಟೆಸ್ಟ್ ಪಂದ್ಯದ ಎರಡನೇ ದಿನವೂ ಭಾರತ ಪ್ರಾಬಲ್ಯ ಸಾಧಿಸಿದೆ. ಕೆಎಲ್ ರಾಹುಲ್ ಮತ್ತು ಯಶಸ್ವಿ ಜೈಸ್ವಾಲ್ ಅದ್ಭುತ ಜೊತೆಯಾಟದ ಮೂಲಕ ಭಾರತ 218 ರನ್‌ಗಳ ಮುನ್ನಡೆಯನ್ನು ಕಾಯ್ದು ಕೊಂಡಿದೆ. ಟೀಮ್ ಇಂಡಿಯಾ ವೇಗಿಗಳ ದಾಳಿಗೆ ಮೊದಲ ಇನ್ನಿಂಗ್ಸ್‌ನಲ್ಲಿ ಪತರುಗುಟ್ಟಿದ ಆಸ್ಟ್ರೇಲಿಯಾ ಕೇವಲ 104 ರನ್‌ಗಳಿಗೆ ಆಲೌಟ್ ಆಗಿತ್ತು. ಮೊದಲ ಇನ್ನಿಂಗ್ಸ್‌ನಲ್ಲಿ 46 ರನ್‌ಗಳ ಮುನ್ನಡೆ ಪಡೆದ ಭಾರತ ಎರಡನೇ ಇನ್ನಿಂಗ್ಸ್‌ನಲ್ಲಿ ಯಾವುದೇ ವಿಕೆಟ್ ಕಳೆದುಕೊಳ್ಳದೆ 172 ರನ್ ಕಲೆ ಹಾಕಿದೆ.
ಎರಡನೇ ಇನ್ನಿಂಗ್ಸ್‌ನಲ್ಲಿ ಭಾರತದ ಪರವಾಗಿ ಯಶಸ್ವಿ ಜೈಸ್ವಾಲ್ ಮತ್ತು ಕೆಎಲ್ ರಾಹುಲ್ ಅಮೋಘ ಇನ್ನಿಂಗ್ಸ್ ಕಟ್ಟಿದರು. ಇಬ್ಬರೂ ಆರಂಭಿಕ ಬ್ಯಾಟರ್‌ಗಳು ಮೊದಲ ವಿಕೆಟ್‌ಗೆ ಅಜೇಯ ಶತಕದ ಜೊತೆಯಾಟ ಆಡಿದರು. ಯಶಸ್ವಿ 90 ಮತ್ತು ರಾಹುಲ್ ಅಜೇಯ 62 ರನ್ ಗಳಿಸಿದ್ದಾರೆ. ಈ ಮೂಲಕ ಇಬ್ಬರೂ ಆರಂಭಿಕ ಬ್ಯಾಟರ್‌ಗಳು ಭಾರತಕ್ಕೆ 172 ರನ್ ಸೇರಿಸಿದರು.

ಭಾರತದ ಆರಂಭಿಕ ಜೋಡಿ ಕೆಎಲ್ ರಾಹುಲ್ ಮತ್ತು ಯಶಸ್ವಿ ಜೈಸ್ವಾಲ್ ಅವರು 20 ವರ್ಷಗಳ ನಂತರ ಆಸ್ಟ್ರೇಲಿಯಾ ನೆಲದಲ್ಲಿ ಶತಕದ ಜೊತೆಯಾಟವಾಡಿದ್ದಾರೆ. ಕೊನೆಯ ಬಾರಿ ವೀರೇಂದ್ರ ಸೆಹ್ವಾಗ್ ಮತ್ತು ಆಕಾಶ್ ಚೋಪ್ರಾ 2004 ರಲ್ಲಿ ಈ ಸಾಧನೆ ಮಾಡಿದರು. ಇವರಿಬ್ಬರೂ ಸಿಡ್ನಿ ಟೆಸ್ಟ್‌ನ ಮೊದಲ ಇನ್ನಿಂಗ್ಸ್‌ನಲ್ಲಿ 123 ರನ್‌ಗಳ ಜೊತೆಯಾಟವಾಡುವ ಮೂಲಕ ಆಸೀಸ್ ಬೌಲರ್‌ಗಳನ್ನು ಕಾಡಿದ್ದರು.
ಭಾರತಕ್ಕೆ ಎರಡನೇ ದಿನ
ಪರ್ತ್ ಟೆಸ್ಟ್‌ನ ಎರಡನೇ ದಿನದ ಮೂರೂ ಸೆಷನ್ಸ್ ಭಾರತದ ಹೆಸರಲ್ಲಿದ್ದವು. ಬೆಳಗಿನ ಅವಧಿಯಲ್ಲಿ ಭಾರತವು ಆಸ್ಟ್ರೇಲಿಯಾವನ್ನು 104 ರನ್‌ಗಳಿಗೆ ಆಲೌಟ್ ಮಾಡಿತು. ಇದರೊಂದಿಗೆ ಮೊದಲ ಇನ್ನಿಂಗ್ಸ್‌ನಲ್ಲಿ 46 ರನ್‌ಗಳ ಮುನ್ನಡೆ ಸಾಧಿಸಿತು. ನಂತರ ಎರಡನೇ ಸೆಷನ್ಸ್‌ನಲ್ಲಿ ಭಾರತ ಪ್ರಾಬಲ್ಯ ಸಾಧಿಸಿತು. ಕೆಎಲ್ ರಾಹುಲ್ ಮತ್ತು ಯಶಸ್ವಿ ಜೈಸ್ವಾಲ್ ಅಮೋಘ ಬ್ಯಾಟಿಂಗ್ ಪ್ರದರ್ಶಿಸಿ ಯಾವುದೇ ವಿಕೆಟ್ ನಷ್ಟವಿಲ್ಲದೆ ಭಾರತದ ಸ್ಕೋರ್ ಅನ್ನು 84 ರನ್‌ಗಳಿಗೆ ಕೊಂಡೊಯ್ದರು. ಇನ್ನೂ ಮೂರನೇ ಸೆಷನ್ಸ್‌ನಲ್ಲಿ ಭಾರತ ತನ್ನ ಮುನ್ನಡೆಯನ್ನು ಮತ್ತಷ್ಟು ಹೆಚ್ಚಿಸಿಕೊಂಡಿತು. ಕೊನೆಯ ಅವಧಿಯಲ್ಲಿ ಟೀಮ್ ಇಂಡಿಯಾ ಯಾವುದೇ ವಿಕೆಟ್ ನಷ್ಟವಿಲ್ಲದೆ 88 ರನ್ ಗಳಿಸಿತ್ತು. ವಿಕೆಟ್‌ಗಾಗಿ ಹಾತೊರೆದ ಆಸ್ಟ್ರೇಲಿಯಾದ ಬೌಲರ್‌ಗಳಿಗೆ ರಾಹುಲ್ ಮತ್ತು ಜೈಸ್ವಾಲ್ ನಿರಾಸೆ ಮೂಡಿಸಿದರು.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications