ಟೀಮ್ ಇಂಡಿಯಾ ನಾಯಕ ಕೊಹ್ಲಿಯನ್ನು ಬಂಧಿಸುವಂತೆ ಕೋರ್ಟ್‌ಗೆ ಅರ್ಜಿ: ವರದಿ

ಟೀಮ್ ಇಂಡಿಯಾ ನಾಯಕ ವಿರಾಟ್ ಕೊಹ್ಲಿಯನ್ನು ಬಂಧಿಸಬೇಕೆಂದು ಮದ್ರಾಸ್ ಹೈ ಕೋರ್ಟ್‌ಗೆ ಅರ್ಜಿಯೊಂದು ಸಲ್ಲಿಕೆಯಾಗಿದೆ. ಆನ್‌ಲೈನ್‌ನಲ್ಲಿ ಜೂಜಾಟವನ್ನು ಉತ್ತೇಜಿಸುತ್ತಿದ್ದಾರೆ ಎಂಬ ಕಾರಣಕ್ಕೆ ಟೀಮ್ ಇಂಡಿಯಾ ನಾಯಕ ಹಾಗೂ ನಟಿ ತಮನ್ನಾ ಭಾಟಿಯಾ ಅವರನ್ನು ಬಂಧಿಸಬೇಕೆಂದು ಅರ್ಜಿಯಲ್ಲಿ ಮನವಿಯನ್ನು ಸಲ್ಲಿಸಲಾಗಿದೆ.

ಚೆನ್ನೈ ಮೂಲದ ವಕೀಲರೊಬ್ಬರು ಈ ಅರ್ಜಿಯನ್ನು ಸಲ್ಲಿಸಿದ್ದಾರೆ ಎಂದು ವರದಿಯಾಗಿದೆ. ಯುವಕರು ಜೂಜಾಟಕ್ಕೆ ವ್ಯಸನಿಯಾಗುತ್ತಿದ್ದಾರೆ ಎಂದು ಹೇಳುತ್ತಾ ಆನ್‌ಲೈನ್ ಜೂಜಿನ ಅರ್ಜಿಗಳನ್ನು ನಿಷೇಧಿಸುವಂತೆ ಮದ್ರಾಸ್ ಹೈಕೋರ್ಟ್‌ಗೆ ಅವರು ಒತ್ತಾಯಿಸಿದ್ದಾರೆ.

ಈ 5 ಆಟಗಾರರ ಪಾಲಿಗೆ 2020ರ ಐಪಿಎಲ್ ಕೊನೇಯ ಸೀಸನ್ ಎನಿಸಲಿದೆ!

ವರದಿಗಳ ಪ್ರಕಾರ ಆನ್‌ಲೈನ್ ಗ್ಯಾಂಬ್ಲಿಂಗ್ ಕಂಪನಿಗಳು ವಿರಾಟ್ ಕೊಹ್ಲಿ ಮತ್ತು ತಮನ್ನಾ ಅವರಂತಹ ತಾರೆಗಳನ್ನು ಯುವ ಜನತೆಯನ್ನು ಬ್ರೈನ್ ವಾಶ್ ಮಾಡಲು ಬಳಸುತ್ತಿವೆ. ಆದ್ದರಿಂದ ಇಬ್ಬರನ್ನೂ ಬಂಧಿಸಬೇಕು ಎಂದು ಅರ್ಜಿಯಲ್ಲಿ ತಿಳಿಸಲಾಗಿದೆ ಎಂದು ತಿಳಿದುಬಂದಿದೆ.

ಈ ಅರ್ಜಿಯಲ್ಲಿ ಆನ್‌ಲೈನ್ ಜೂಜಾಟಕ್ಕೆ ಬಲಿಯಾದ ಯುವಕನ ಪ್ರಕರಣವನ್ನು ಉಲ್ಲೇಖಿಸಲಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ. ಆನ್‌ಲೈನ್ ಜೂಜಾಟಕ್ಕೆ ತೆಗೆದುಕೊಂಡ ಹಣವನ್ನು ಹಿಂದಿರುಗಿಸಲು ಸಾಧ್ಯವಾಗದ ಕಾರಣ ಆತ್ಮಹತ್ಯೆ ಮಾಡಿಕೊಂಡ ಯುವಕನ ಪ್ರಕರಣವನ್ನೂ ಅರ್ಜಿಯಲ್ಲಿ ಉಲ್ಲೇಖಿಸಲಾಗಿದೆ.

ಅದೇ ಕಣ್ಣು!: ಕ್ರಿಕೆಟಿಗ ಶುಭ್‌ಮನ್ ಗಿಲ್, ಸಚಿನ್ ಪುತ್ರಿ ಸಾರಾ 'ಕಣ್ಣಿಟ್ಟ' ಗುಟ್ಟೇನು?

ಈ ಪ್ರಕರಣದ ವಿಚಾರಣೆಯನ್ನು ಮದ್ರಾಸ್ ಹೈಕೋರ್ಟ್ ಆಗಸ್ಟ್ 4ಕ್ಕೆ ನಿಗದಿಪಡಿಸಿದ್ದು ಹೆಚ್ಚಿನ ಮಾಹಿತಿ ಇನ್ನಷ್ಟೇ ತಿಳಿದುಬರಬೇಕಾಗಿದೆ. ಆನ್‌ಲೈನ್ ಜೂಜಾಟದ ಆ್ಯಪ್‌ವೊಂದರ ಜಾಹೀರಾತಿನಲ್ಲಿ ವಿರಾಟ್ ಕೊಹ್ಲಿ ಮತ್ತು ತಮನ್ನ ಭಾಟಿಯಾ ಕಾಣಿಸಿಕೊಂಡಿದ್ದು ಈ ಪ್ರಕರಣ ದಾಖಲಾಗಲು ಕಾರಣವಾಗಿದೆ.

For Quick Alerts
ALLOW NOTIFICATIONS
For Daily Alerts

ಕ್ರಿಕೆಟನ್ನು ಪ್ರೀತಿಸುತ್ತೀರಾ? ಋಜುವಾತುಪಡಿಸಿ! ಮೈಖೇಲ್ ಫ್ಯಾಂಟಸಿ ಕ್ರಿಕೆಟ್ ಆಟವಾಡಿ

Story first published: Friday, July 31, 2020, 17:57 [IST]
Other articles published on Jul 31, 2020
POLLS
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X