ಭಾರತ vs ದಕ್ಷಿಣ ಆಫ್ರಿಕಾ ಟಿ20 ಪಂದ್ಯ ರದ್ದುಗೊಳಿಸಲು ಹೈಕೋರ್ಟ್‌ಗೆ ಪಿಐಎಲ್ ಸಲ್ಲಿಕೆ

ಭಾರತ ಮತ್ತು ದಕ್ಷಿಣ ಆಫ್ರಿಕಾದ ನಡುವಿನ ಟಿ20 ಸರಣಿ ಜೂನ್ 9ರಿಂದ ದೆಹಲಿಯ ಫಿರೋಜ್ ಶಾ ಕೋಟ್ಲಾ ಸ್ಟೇಡಿಯಂನಲ್ಲಿ ಆರಂಭವಾಗುತ್ತಿದೆ. ನಂತರ ಜೂನ್ 12ರಂದು ಒಡಿಶಾದ ಕಟಕ್‌ನ ಬಾರಮತಿ ಕ್ರೀಡಾಂಗಣದಲ್ಲಿ ನಡೆಯಲಿರುವ ಭಾರತ ಮತ್ತು ದಕ್ಷಿಣ ಆಫ್ರಿಕಾ ನಡುವಿನ 2ನೇ ಟಿ20 ಪಂದ್ಯವನ್ನು ರದ್ದುಗೊಳಿಸುವಂತೆ ಒಡಿಶಾ ಹೈಕೋರ್ಟ್‌ಗೆ ಸಾರ್ವಜನಿಕ ಹಿತಾಸಕ್ತಿ ಅರ್ಜಿ(ಪಿಐಎಲ್) ಸಲ್ಲಿಸಲಾಗಿದ್ದು, ತುರ್ತು ವಿಚಾರಣೆಗೆ ಕೋರಲಾಗಿದೆ.
ಮಾನವ ಹಕ್ಕುಗಳ ಹೋರಾಟಗಾರ ಸಂಜಯ್ ಕುಮಾರ್ ನಾಯಕ್ ಪಿಐಎಲ್ ಅರ್ಜಿ ಸಲ್ಲಿಸಿದ್ದು, ಒಡಿಶಾ ಕ್ರಿಕೆಟ್ ಅಸೋಸಿಯೇಷನ್, ಬಿಸಿಸಿಐ ಸೇರಿದಂತೆ 15 ಪಾರ್ಟಿದಾರರನ್ನು ಪ್ರತಿವಾದಿಗಳನ್ನಾಗಿಸಿದ್ದಾರೆ.
ಕಟಕ್‌ನ ಬಾರಮತಿ ಕ್ರೀಡಾಂಗಣದಲ್ಲಿ ಅಂತಾರಾಷ್ಟ್ರೀಯ ಪಂದ್ಯಗಳನ್ನು ಆಯೋಜಿಸಲು ಸಂಬಂಧಿಸಿದ ಪ್ರಾಧಿಕಾರಕ್ಕೆ ರಚನಾತ್ಮಕ ಸುರಕ್ಷತಾ ಪ್ರಮಾಣಪತ್ರವನ್ನು ನೀಡಿಲ್ಲ. ಅಗ್ನಿ ಸುರಕ್ಷತಾ ಅಳತೆ ಪ್ರಮಾಣ ಪತ್ರವನ್ನೂ ನೀಡಿಲ್ಲ, 45,000 ಪ್ರೇಕ್ಷಕರು ಸೇರುವ ಪ್ರದೇಶದಲ್ಲಿ ನಿಯಮಗಳ ಉಲ್ಲಂಘನೆ ದೊಡ್ಡ ವಿಷಯವಾಗಿದೆ ಎಂದು ಸಂಜಯ್ ಕುಮಾರ್ ನಾಯಕ್ ಅವರು ಪಿಐಎಲ್ ಅರ್ಜಿಯಲ್ಲಿ ಕಳವಳ ವ್ಯಕ್ತಪಡಿಸಿದ್ದಾರೆ.

ಮೈದಾನದಲ್ಲಿ ಕಾನೂನಿನ ಕಡ್ಡಾಯ ಅವಶ್ಯಕತೆಗಳನ್ನು ಅನುಸರಿಸದ ಒಡಿಶಾ ಕ್ರಿಕೆಟ್ ಅಸೋಸಿಯೇಷನ್, ಸರ್ಕಾರಿ ಪದಾಧಿಕಾರಿಗಳ ನೆರವಿನೊಂದಿಗೆ ಯಾವುದೇ ಕಾರ್ಯವನ್ನು ಮಾಡಲು ಅನುಮತಿಸಬಾರದು ಎಂದು ಅರ್ಜಿದಾರರು ಪ್ರತಿಪಾದಿಸಿದ್ದಾರೆ. ಕಾನೂನಿನ ಕಡ್ಡಾಯ ಪಾಲನೆ ಬಗ್ಗೆ ಅಧಿಕಾರಿಗಳು ಜಾಗೃತಿ ವಹಿಸಬೇಕು. ವಿಶೇಷವಾಗಿ ಒಡಿಶಾ ಅಗ್ನಿಶಾಮಕ ತಡೆಗಟ್ಟುವಿಕೆ ಮತ್ತು ಅಗ್ನಿ ಸುರಕ್ಷತಾ ನಿಯಮಗಳು 2017ರ ಅಡಿಯಲ್ಲಿ ಸುರಕ್ಷತಾ ಕ್ರಮಗಳನ್ನು ತೆಗೆದುಕೊಳ್ಳಬೇಕು ಎಂದು ಹೈಕೋರ್ಟ್‌ಗೆ ಮನವಿ ಮಾಡಿದ್ದಾರೆ.
ಟಿ20 ಪಂದ್ಯವನ್ನು ನಡೆಸಲು ಯಾವುದೇ ವಿರೋಧವಿಲ್ಲ, ಆದರೆ 70 ವರ್ಷಗಳ ಹಳೆಯ ಕ್ರೀಡಾಂಗಣದಲ್ಲಿ ಸುರಕ್ಷತಾ ಕ್ರಮಗಳನ್ನು ಉಲ್ಲಂಘಿಸಿ ಪಂದ್ಯವನ್ನು ಏರ್ಪಡಿಸುವುದು ಅಪಾಯಕಾರಿ. ಹಾಗಾಗಿ ಅಗತ್ಯ ಕ್ರಮ ತೆಗೆದುಕೊಳ್ಳುವರೆಗೂ ಪಂದ್ಯಗಳನ್ನು ರದ್ದು ಮಾಡಬೇಕು ಎಂದು ಕೋರಿ ಒಡಿಶಾ ಹೈಕೋರ್ಟ್‌ಗೆ ಪಿಐಎಲ್ ಅರ್ಜಿ ಸಲ್ಲಿಸಿದ್ದಾರೆ.
ದಕ್ಷಿಣ ಆಫ್ರಿಕಾ ವಿರುದ್ಧ ಭಾರತದ ಟಿ20 ಸರಣಿಯ ವೇಳಾಪಟ್ಟಿ
ಮೊದಲ ಟಿ20 ಪಂದ್ಯ ಜೂನ್ 09- ದೆಹಲಿ
2ನೇ ಟಿ20 ಪಂದ್ಯ ಜೂನ್ 12- ಕಟಕ್
3ನೇ ಟಿ20 ಪಂದ್ಯ ಜೂನ್ 14- ವಿಶಾಖಪಟ್ಟಣ
4ನೇ ಟಿ20 ಪಂದ್ಯ ಜೂನ್ 17- ರಾಜ್‌ಕೋಟ್
5ನೇ ಟಿ20 ಪಂದ್ಯ ಜೂನ್ 19- ಬೆಂಗಳೂರು
ಎರಡು ತಂಡಗಳ ಸಂಭಾವ್ಯ ಸದಸ್ಯರು
ಭಾರತ: ಕೆಎಲ್ ರಾಹುಲ್ (ನಾಯಕ), ಋತುರಾಜ್ ಗಾಯಕ್ವಾಡ್, ಇಶಾನ್ ಕಿಶನ್, ದೀಪಕ್ ಹೂಡಾ, ಶ್ರೇಯಸ್ ಅಯ್ಯರ್, ರಿಷಭ್ ಪಂತ್ (ಉಪ ನಾಯಕ/ ವಿಕೆಟ್ ಕೀಪರ್), ದಿನೇಶ್ ಕಾರ್ತಿಕ್ (ವಿಕೆಟ್ ಕೀಪರ್), ಹಾರ್ದಿಕ್ ಪಾಂಡ್ಯ, ವೆಂಕಟೇಶ್ ಅಯ್ಯರ್, ಯುಜುವೇಂದ್ರ ಚಾಹಲ್, ಕುಲ್‌ದೀಪ್ ಯಾದವ್, ಅಕ್ಷರ್ ಪಟೇಲ್, ರವಿ ಬಿಷ್ಣೋಯ್, ಭುವನೇಶ್ವರ್, ಹರ್ಷಲ್ ಪಟೇಲ್, ಅವೇಶ್ ಖಾನ್, ಅರ್ಷದೀಪ್ ಸಿಂಗ್, ಉಮ್ರಾನ್ ಮಲಿಕ್
ದಕ್ಷಿಣ ಆಫ್ರಿಕಾ: ಟೆಂಬಾ ಬವುಮಾ (ನಾಯಕ), ಕ್ವಿಂಟನ್ ಡಿ ಕಾಕ್, ರೀಜಾ ಹೆಂಡ್ರಿಕ್ಸ್, ಹೆನ್ರಿಚ್ ಕ್ಲಾಸೆನ್, ಕೇಶವ್ ಮಹಾರಾಜ್, ಐಡೆನ್ ಮಾರ್ಕ್ರಾಮ್, ಡೇವಿಡ್ ಮಿಲ್ಲರ್, ಲುಂಗಿ ಎನ್‌ಗಿಡಿ, ಅನ್ರಿಚ್ ನಾರ್ಟ್ಜೆ, ವೇಯ್ನ್ ಪಾರ್ನೆಲ್, ಡ್ವೈನ್ ಪ್ರಿಟೋರಿಯಸ್, ಕಗಿಸೊ ರಬಾಡ, ಟಬ್ರೈಜ್ ಶಂಸಿ, ಟ್ರಿಸ್ಟನ್ ಸ್ಟಬ್ಸ್, ವ್ಯಾನ್ ಡೆರ್ ಡಸ್ಸೆನ್, ಮಾರ್ಕೊ ಜಾನ್ಸೆನ್
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications