Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block

ಪಿಚ್ ಸಂಪೂರ್ಣವಾಗಿ ವಿಭಿನ್ನವಾಗಿ ಕಾಣುತ್ತಿದೆ: ಅಜಿಂಕ್ಯ ರಹಾನೆ

Pitch looks completely different, it will turn from Day 1: Ajinkya Rahane

ಚೆನ್ನೈ: ಚೆನ್ನೈಯ ಎಂಎ ಚಿದಂಬರಂ ಸ್ಟೇಡಿಯಂನ ಪಿಚ್ ವಿಭಿನ್ನವಾಗಿ ಕಾಣುತ್ತಿದೆ. ಇಂಗ್ಲೆಂಡ್ ವಿರುದ್ಧದ ದ್ವಿತೀಯ ಟೆಸ್ಟ್‌ನ ಮೊದಲ ದಿನದಿಂದಲೇ ಪಿಚ್ ಬದಲಾಗಲಾರಂಭಿಸುವಂತೆ ಕಾಣುತ್ತಿದೆ ಎಂದು ಟೀಮ್ ಇಂಡಿಯಾದ ಮಾಜಿ ನಾಯಕ ಅಜಿಂಕ್ಯ ರಹಾನೆ ಹೇಳಿದ್ದಾರೆ.

ಭಾರತಕ್ಕೆ ಪ್ರವಾಸ ಬಂದಿರುವ ಇಂಗ್ಲೆಂಡ್ ಕ್ರಿಕೆಟ್ ತಂಡ ಆತಿಥೇಯರ ವಿರುದ್ಧ ನಾಲ್ಕು ಪಂದ್ಯಗಳ ಟೆಸ್ಟ್ ಸರಣಿ ಆಡುತ್ತಿದೆ. ಇದರಲ್ಲಿ ಆರಂಭಿಕ ಪಂದ್ಯದಲ್ಲಿ ಈಗಾಗಲೇ ಇಂಗ್ಲೆಂಡ್ ಗೆದ್ದಿದೆ. ಈ ಟೆಸ್ಟ್ ಸರಣಿಯ ಫಲಿತಾಂಶ ಐಸಿಸಿ ಟೆಸ್ಟ್‌ ಚಾಂಪಿಯನ್‌ಶಿಪ್ ಫೈನಲ್ ಸ್ಪರ್ಧಿಯನ್ನು ನಿರ್ಧರಿಸಲಿದೆ.

ದ್ವಿತೀಯ ಟೆಸ್ಟ್‌ಗೂ ಮುನ್ನ ಸುದ್ದಿಗಾರರೊಂದಿಗೆ ಮಾತನಾಡಿದ ರಹಾನೆ, 'ಪಿಚ್ ಸಂಪೂರ್ಣವಾಗಿ ಭಿನ್ನವಾಗಿ ಕಾಣುತ್ತಿದೆ. ಅದು ಮೊದಲ ದಿನದಿಂದಲೇ ಬದಲಾಗಲಾರಂಭಿಸುತ್ತದೆ ಎಂದು ನನಗೆ ಭರವಸೆಯಿದೆ. ಆದರೆ ಮೊದಲ ಟೆಸ್ಟ್‌ನಲ್ಲೇ ಹೇಳಿದಂತೆ, ಪಿಚ್ ಮೊದಲ ಸೆಶನ್‌ನಲ್ಲಿ ಹೇಗೆ ವರ್ತಿಸುತ್ತದೆ ಅನ್ನೋದನ್ನು ಕಾದು ನೋಡಬೇಕಿದೆ,' ಎಂದಿದ್ದಾರೆ.

ಚೆನ್ನೈ ಸ್ಟೇಡಿಯಂನಲ್ಲೇ ನಡೆದಿದ್ದ ಮೊದಲನೇ ಟೆಸ್ಟ್‌ನಲ್ಲಿ ಇಂಗ್ಲೆಂಡ್ 227 ರನ್ ಗೆಲುವು ದಾಖಲಿಸಿತ್ತು. ಆರಂಭಿಕ ಪಂದ್ಯದಲ್ಲಿ ರಹಾನೆ ಮೊದಲ ಇನ್ನಿಂಗ್ಸ್‌ನಲ್ಲಿ 1, ದ್ವಿತೀಯ ಇನ್ನಿಂಗ್ಸ್‌ನಲ್ಲಿ 0 ರನ್‌ಗೆ ವಿಕೆಟ್ ಒಪ್ಪಿಸಿದ್ದರು. ದ್ವಿತೀಯ ಟೆಸ್ಟ್ ಪಂದ್ಯ ಚೆನ್ನೈನಲ್ಲಿ ಫೆಬ್ರವರಿ 13ರಂದು 9.30 amಗೆ ಆರಂಭಗೊಳ್ಳಲಿದೆ.

Story first published: Friday, February 12, 2021, 17:16 [IST]
Other articles published on Feb 12, 2021
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+