For Quick Alerts
ALLOW NOTIFICATIONS  
For Daily Alerts
 

PKBS vs RCB IPL 2024: ಪಂಜಾಬ್‌-ಆರ್‌ಸಿಬಿ ಸೆಣಸಾಟ; ಟಾಸ್, ತಂಡದ‌ ವರದಿ

ಮೇ 9 ಗುರುವಾರ, 2024ರ ಇಂಡಿಯನ್‌ ಪ್ರೀಮಿಯರ್‌ ಲೀಗ್‌ (ಐಪಿಎಲ್‌)ನ 58ನೇ ಪಂದ್ಯದಲ್ಲಿ ಪಂಜಾಬ್ ಕಿಂಗ್ಸ್ (ಪಿಬಿಕೆಎಸ್‌) ಮತ್ತು ರಾಯಲ್ ಚಾಲೆಂಜರ್ಸ್ ಬೆಂಗಳೂರು (ಆರ್‌ಸಿಬಿ) ತಂಡಗಳು ಸೆಣಸಾಡುತ್ತಿವೆ. ಹಿಮಾಚಲ ಪ್ರದೇಶದ ಧರ್ಮಶಾಲಾ ಕ್ರಿಕೆಟ್ ಅಸೋಸಿಯೇಷನ್ ​​ಸ್ಟೇಡಿಯಂ ಪಂಜಾಬ್‌ ಮತ್ತು ಆರ್‌ಸಿಬಿ ಪಂದ್ಯ ಆರಂಭವಾಗಿದೆ.

ಮೊದಲು ಟಾಸ್‌ ಗೆದ್ದ ಪಂಜಾಬ್‌ ಕಿಂಗ್ಸ್‌ ತಂಡದ ನಾಯಕ ಸ್ಯಾಮ್‌ ಕಾರ್ರನ್‌ ಬೌಲಿಂಗ್‌ ಆಯ್ಕೆ ಮಾಡಿದ್ದಾರೆ. ಹೀಗಾಗಿ ಫಾಪ್‌ ಡು ಪ್ಲೆಸಿಸ್‌ ನೇತೃತ್ವದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಮೊದಲು ಬ್ಯಾಟಿಂಗ್‌ ಮಾಡಲಿದೆ. ಇಂದಿನ ಪಂದ್ಯವನ್ನು ಉಭಯ ತಂಡಗಳು ಗೆಲ್ಲಲೇಬೇಕಾದ ಒತ್ತಾಡದಲ್ಲಿವೆ.

PKBS vs RCB Punjab Kings vs Royal Challengers Bengaluru IPL 2024 Match Toss Report

ಆರ್‌ಸಿಬಿ ತಂಡವು ಪ್ರಸ್ತುತ ಐಪಿಎಲ್‌ನಲ್ಲಿ ಆಡಿರುವ 11 ಪಂದ್ಯಗಳಲ್ಲಿ 7 ಸೋಲು ಮತ್ತು 4 ಗೆಲುವು ಸಾಧಿಸಿ ಅಂಕಪಟ್ಟಿಯಲ್ಲಿ 7ನೇ ಸ್ಥಾನದಲ್ಲಿದೆ. ಇತ್ತ ಪಂಜಾಬ್‌ ಆಡಿರುವ 11 ಪಂದ್ಯಗಳಲ್ಲಿ 4ರಲ್ಲಿ ಗೆದ್ದು, 7ರಲ್ಲಿ ಸೋತಿದೆ. ಈ ಮೂಲಕ ಅಂಕಪಟ್ಟಿಯಲ್ಲಿ 8ನೇ ಸ್ಥಾನದಲ್ಲಿದೆ.

ಪಿಬಿಕೆಸ್‌ vs ಆರ್‌ಸಿಬಿ ಪಂದ್ಯದ ಟಿವಿ, ಲೈವ್ ಸ್ಟ್ರೀಮಿಂಗ್ ವಿವರ

ಪಂಜಾಬ್ ಕಿಂಗ್ಸ್ ಮತ್ತು ರಾಯಲ್ ಚಾಲೆಂಜರ್ಸ್ ಬೆಂಗಳೂರು ನಡುವಿನ ಐಪಿಎಲ್ 2024ರ ರೋಚಕ ಪಂದ್ಯವನ್ನು ಭಾರತದಲ್ಲಿ ಟಿವಿಯಲ್ಲಿ ಸ್ಟಾರ್ ಸ್ಪೋರ್ಟ್ಸ್ ಚಾನೆಲ್‌ನಲ್ಲಿ ನೇರಪ್ರಸಾರ ಮಾಡಲಿದ್ದರೆ, ಮೊಬೈಲ್‌ನಲ್ಲಿ ಜಿಯೋಸಿನಿಮಾ ಅಪ್ಲಿಕೇಶನ್‌ನಲ್ಲಿ ಲೈವ್ ಸ್ಟ್ರೀಮಿಂಗ್ ಆಗಲಿದೆ.

ಪಿಬಿಕೆಸ್‌ vs ಆರ್‌ಸಿಬಿ ಆಡುವ 11ರ ಬಳಗ

ಪಂಜಾಬ್ ಕಿಂಗ್ಸ್ ತಂಡ : ಜಾನಿ ಬೈರ್‌ಸ್ಟೋವ್ (ವಿ.ಕೀ), ಪ್ರಭ್‌ಸಿಮ್ರಾನ್ ಸಿಂಗ್, ರಿಲೀ ರೊಸೊವ್, ಶಶಾಂಕ್ ಸಿಂಗ್, ಸ್ಯಾಮ್ ಕುರಾನ್ (ನಾಯಕ), ಲಿಯಾಮ್ ಲಿವಿಂಗ್‌ಸ್ಟೋನ್, ಅಶುತೋಷ್ ಶರ್ಮಾ, ಹರ್ಷಲ್ ಪಟೇಲ್, ರಾಹುಲ್ ಚಾಹರ್, ಅರ್ಷ್‌ದೀಪ್ ಸಿಂಗ್, ವಿಧ್ವತ್ ಕಾವೇರಪ್ಪ.

ರಾಯಲ್ ಚಾಲೆಂಜರ್ಸ್ ಬೆಂಗಳೂರು : ವಿರಾಟ್ ಕೊಹ್ಲಿ, ಫಾಫ್ ಡು ಪ್ಲೆಸಿಸ್ (ನಾಯಕ), ವಿಲ್ ಜಾಕ್ಸ್, ರಜತ್ ಪಾಟಿದಾರ್, ಮಹಿಪಾಲ್ ಲೊಮ್ರೋರ್, ಕ್ಯಾಮೆರಾನ್ ಗ್ರೀನ್, ದಿನೇಶ್ ಕಾರ್ತಿಕ್ (ವಿ.ಕೀ), ಸ್ವಪ್ನಿಲ್ ಸಿಂಗ್, ಕರಣ್‌ ಶರ್ಮಾ, ಮೊಹಮ್ಮದ್ ಸಿರಾಜ್, ಲಾಕಿ ಫರ್ಗುಸನ್.

Story first published: Thursday, May 9, 2024, 19:11 [IST]
Other articles published on May 9, 2024
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+