ಪ್ರೋ ಕಬಡ್ಡಿ ಲೀಗ್ 8: ಫೆಬ್ರವರಿ 2ರ ಎಲ್ಲಾ ಪಂದ್ಯಗಳ ಮಾಹಿತಿ ಮತ್ತು ಸಂಭಾವ್ಯ ತಂಡಗಳ ವಿವರ

ಬಹುನಿರೀಕ್ಷಿತ ಪ್ರೊ ಕಬಡ್ಡಿ ಲೀಗ್ ಮತ್ತೆ ಬಂದಿದ್ದು, ಕಳೆದ ಡಿಸೆಂಬರ್ 22ರಂದು ಬೆಂಗಳೂರು ಬುಲ್ಸ್ ಮತ್ತು ಯು ಮುಂಬಾ ತಂಡಗಳ ನಡುವೆ ನಡೆದ ಹಣಾಹಣಿಯ ಮೂಲಕ ಆರಂಭವನ್ನು ಪಡೆದುಕೊಂಡಿದೆ. ಫೆಬ್ರವರಿ 1ರ ಮಂಗಳವಾರದವರೆಗೂ ಒಟ್ಟು 87 ಪಂದ್ಯಗಳು ನಡೆದಿದ್ದು, ಈ ಸಮಯಕ್ಕೆ ಅಂಕಪಟ್ಟಿಯಲ್ಲಿ ಹೆಚ್ಚು ಅಂಕವನ್ನು ಪಡೆದುಕೊಳ್ಳುವುದರ ಮೂಲಕ ದಬಾಂಗ್ ಡೆಲ್ಲಿ ಅಗ್ರಸ್ಥಾನದಲ್ಲಿದ್ದರೆ, ಬೆಂಗಳೂರು ಬುಲ್ಸ್ ದ್ವಿತೀಯ ಸ್ಥಾನ ಮತ್ತು ಪಾಟ್ನಾ ಪೈರೇಟ್ಸ್ ತೃತೀಯ ಸ್ಥಾನದಲ್ಲಿವೆ.
ಹೀಗೆ ಈ ಬಾರಿಯ ಪ್ರೊ ಕಬಡ್ಡಿ ಲೀಗ್ ಆವೃತ್ತಿಯ ಪೈಕಿ ಇಲ್ಲಿಯವರೆಗೂ 87 ಪಂದ್ಯಗಳು ಈಗಾಗಲೇ ಮುಗಿದಿದ್ದು, ಇಂದು ( ಫೆಬ್ರವರಿ 2) ಒಟ್ಟು 2 ಪಂದ್ಯಗಳು ನಡೆಯಲಿವೆ. ಈ 2 ಪಂದ್ಯಗಳ ಪೈಕಿ ಪ್ರಥಮ ಪಂದ್ಯದಲ್ಲಿ ಯುಪಿ ಯೋಧಾ ಮತ್ತು ಪಾಟ್ನಾ ಪೈರೇಟ್ಸ್ ತಂಡಗಳು ಸೆಣಸಾಟ ನಡೆಸಿದರೆ,
ದ್ವಿತೀಯ ಪಂದ್ಯದಲ್ಲಿ ಪುಣೇರಿ ಪಲ್ಟನ್ ಮತ್ತು ಯು ಮುಂಬಾ ತಂಡಗಳು ಸೆಣಸಾಟ ನಡೆಸಲಿವೆ. ಹೀಗೆ ಇಂದು ನಡೆಯಲಿರುವ ಈ 2 ಪಂದ್ಯಗಳ ಕುರಿತಾದ ಮಾಹಿತಿ, ಪಂದ್ಯಗಳಲ್ಲಿ ಕಣಕ್ಕಿಳಿಯಲಿರುವ ಸಂಭಾವ್ಯ ಆಟಗಾರರ ಪಟ್ಟಿ ಮತ್ತು ಮುಖಾಮುಖಿ ಹಣಾಹಣಿಗಳಲ್ಲಿ ಯಾವ ತಂಡ ಹೆಚ್ಚು ಪಂದ್ಯಗಳನ್ನು ಗೆದ್ದಿದೆ ಎಂಬುದರ ಮಾಹಿತಿ ಮುಂದೆ ಇದೆ ಓದಿ..
ಪಂದ್ಯ 1: ಯುಪಿ ಯೋಧಾ vs ಪಾಟ್ನಾ ಪೈರೇಟ್ಸ್
ಈ ಬಾರಿಯ ಪ್ರೊ ಕಬಡ್ಡಿ ಲೀಗ್ ಆವೃತ್ತಿಯಲ್ಲಿ ಇಲ್ಲಿಯವರೆಗೂ ಒಟ್ಟು 13 ಪಂದ್ಯಗಳನ್ನಾಡಿರುವ ಪಾಟ್ನಾ ಪೈರೇಟ್ಸ್ 8 ಪಂದ್ಯಗಳಲ್ಲಿ ಗೆದ್ದು, 4 ಪಂದ್ಯಗಳಲ್ಲಿ ಸೋತು, ಉಳಿದೊಂದು ಪಂದ್ಯವನ್ನು ಡ್ರಾ ಮಾಡಿಕೊಳ್ಳುವುದರ ಮೂಲಕ 45 ಅಂಕಗಳನ್ನು ಪಡೆದುಕೊಂಡು ಅಂಕಪಟ್ಟಿಯಲ್ಲಿ ತೃತೀಯ ಸ್ಥಾನ ಪಡೆದುಕೊಂಡಿದೆ. ಅತ್ತ ಈ ಬಾರಿಯ ಪ್ರೊ ಕಬಡ್ಡಿ ಲೀಗ್ ಆವೃತ್ತಿಯಲ್ಲಿ ಇಲ್ಲಿಯವರೆಗೂ ಒಟ್ಟು 15 ಪಂದ್ಯಗಳನ್ನಾಡಿರುವ ಯುಪಿ ಯೋಧಾ ತಂಡ 5 ಪಂದ್ಯಗಳಲ್ಲಿ ಗೆದ್ದು, 7 ಪಂದ್ಯಗಳಲ್ಲಿ ಸೋತಿದ್ದು, ಉಳಿದ 3 ಪಂದ್ಯಗಳನ್ನು ಡ್ರಾ ಮಾಡಿಕೊಳ್ಳುವುದರ ಮೂಲಕ 41 ಅಂಕಗಳನ್ನು ಪಡೆದುಕೊಂಡು ಅಂಕಪಟ್ಟಿಯಲ್ಲಿ ಆರನೇ ಸ್ಥಾನದಲ್ಲಿದೆ. ಇನ್ನು ಇತ್ತಂಡಗಳ ನಡುವೆ ಇಂದು ನಡೆಯಲಿರುವ ಪಂದ್ಯ ಈ ಬಾರಿಯ ಪ್ರೊ ಕಬಡ್ಡಿ ಲೀಗ್ ಆವೃತ್ತಿಯ 88ನೇ ಪಂದ್ಯವಾಗಿದ್ದು ಸಂಜೆ 7. 30ಕ್ಕೆ ಆರಂಭಗೊಳ್ಳಲಿದೆ. ಇನ್ನು ಇತ್ತಂಡಗಳ ನಡುವೆ ಪ್ರೊ ಕಬಡ್ಡಿ ಲೀಗ್ ಇತಿಹಾಸದಲ್ಲಿ ಇಲ್ಲಿಯವರೆಗೂ ಒಟ್ಟು 8 ಮುಖಾಮುಖಿ ಪಂದ್ಯಗಳು ನಡೆದಿದ್ದು ಯುಪಿ ಯೋಧಾ 4 ಪಂದ್ಯಗಳಲ್ಲಿ ಜಯ ಸಾಧಿಸಿದ್ದರೆ ಪಾಟ್ನಾ ಪೈರೇಟ್ಸ್ 3 ಪಂದ್ಯಗಳಲ್ಲಿ ಗೆದ್ದಿದೆ ಹಾಗೂ ಉಳಿದೊಂದು ಪಂದ್ಯ ಡ್ರಾನಲ್ಲಿ ಅಂತ್ಯಗೊಂಡಿದೆ.
ಪಾಟ್ನಾ ಪೈರೇಟ್ಸ್ ಸಂಭಾವ್ಯ ಆಡುವ ಬಳಗ: ಸಚಿನ್ ತನ್ವರ್, ಮೋನು ಗೋಯತ್ ,ಪ್ರಶಾಂತ್ ಕುಮಾರ್ ರೈ (ನಾಯಕ), ಸಜಿನ್ ಚಂದ್ರಶೇಖರ್, ನೀರಜ್, ಸುನಿಲ್, ಮೊಹಮ್ಮದ್ರೇಜಾ ಚಿಯಾನೆ
ಯುಪಿ ಯೋಧಾ ಸಂಭಾವ್ಯ ಆಡುವ ಬಳಗ: ಪರ್ದೀಪ್ ನರ್ವಾಲ್, ಸುರೇಂದರ್ ಗಿಲ್, ಶ್ರೀಕಾಂತ್ ಜಾಧವ್, ಅಶು ಸಿಂಗ್, ಶುಭಂ, ಸುಮಿತ್, ನಿತೇಶ್ ಕುಮಾರ್ (ನಾಯಕ)
ಪಂದ್ಯ 2: ಪುಣೇರಿ ಪಲ್ಟನ್ vs ಯು ಮುಂಬಾ
ಈ ಬಾರಿಯ ಪ್ರೊ ಕಬಡ್ಡಿ ಲೀಗ್ ಆವೃತ್ತಿಯಲ್ಲಿ ಇಲ್ಲಿಯವರೆಗೂ ಒಟ್ಟು 14 ಪಂದ್ಯಗಳನ್ನಾಡಿರುವ ಯು ಮುಂಬಾ 5 ಪಂದ್ಯಗಳಲ್ಲಿ ಗೆದ್ದು, 4 ಪಂದ್ಯಗಳಲ್ಲಿ ಸೋತು, ಉಳಿದ 4 ಪಂದ್ಯಗಳನ್ನು ಡ್ರಾ ಮಾಡಿಕೊಳ್ಳುವುದರ ಮೂಲಕ 42 ಅಂಕಗಳನ್ನು ಪಡೆದುಕೊಂಡು ಅಂಕಪಟ್ಟಿಯಲ್ಲಿ ಐದನೇ ಸ್ಥಾನ ಪಡೆದುಕೊಂಡಿದೆ. ಅತ್ತ ಈ ಬಾರಿಯ ಪ್ರೊ ಕಬಡ್ಡಿ ಲೀಗ್ ಆವೃತ್ತಿಯಲ್ಲಿ ಇಲ್ಲಿಯವರೆಗೂ ಒಟ್ಟು 14 ಪಂದ್ಯಗಳನ್ನಾಡಿರುವ ಪುಣೇರಿ ಪಲ್ಟನ್ ತಂಡ 7 ಪಂದ್ಯಗಳಲ್ಲಿ ಗೆದ್ದು, 7 ಪಂದ್ಯಗಳಲ್ಲಿ ಸೋಲುವುದರ ಮೂಲಕ 37 ಅಂಕಗಳನ್ನು ಪಡೆದುಕೊಂಡು ಅಂಕಪಟ್ಟಿಯಲ್ಲಿ 11ನೇ ಸ್ಥಾನದಲ್ಲಿದೆ. ಇನ್ನು ಇತ್ತಂಡಗಳ ನಡುವೆ ಇಂದು ನಡೆಯಲಿರುವ ಪಂದ್ಯ ಈ ಬಾರಿಯ ಪ್ರೊ ಕಬಡ್ಡಿ ಲೀಗ್ ಆವೃತ್ತಿಯ 89ನೇ ಪಂದ್ಯವಾಗಿದ್ದು ಸಂಜೆ 8. 30ಕ್ಕೆ ಆರಂಭಗೊಳ್ಳಲಿದೆ. ಇನ್ನು ಇತ್ತಂಡಗಳ ನಡುವೆ ಪ್ರೊ ಕಬಡ್ಡಿ ಲೀಗ್ ಇತಿಹಾಸದಲ್ಲಿ ಇಲ್ಲಿಯವರೆಗೂ ಒಟ್ಟು 17 ಪಂದ್ಯಗಳು ನಡೆದಿದ್ದು ಯು ಮುಂಬಾ 9 ಪಂದ್ಯಗಳಲ್ಲಿ ಜಯ ಸಾಧಿಸಿದ್ದರೆ ಪುಣೇರಿ ಪಲ್ಟನ್ 6 ಪಂದ್ಯಗಳಲ್ಲಿ ಗೆದ್ದಿದೆ ಹಾಗೂ ಉಳಿದೆರಡು ಪಂದ್ಯಗಳು ಡ್ರಾನಲ್ಲಿ ಅಂತ್ಯಗೊಂಡಿವೆ.
ಪುಣೇರಿ ಪಲ್ಟನ್ ಸಂಭಾವ್ಯ ಆಡುವ ಬಳಗ: ಅಸ್ಲಂ ಇನಾಮದಾರ್, ಮೋಹಿತ್ ಗೋಯತ್, ನಿತಿನ್ ತೋಮರ್ (ನಾಯಕ), ಅಭಿನೇಶ್ ನಡರಾಜನ್, ಸಂಕೇತ್ ಸಾವಂತ್, ಕಮ್ರಂವೀರ್, ಸೋಂಬಿರ್
ಯು ಮುಂಬಾ ಸಂಭಾವ್ಯ ಆಡುವ ಬಳಗ: ಅಭಿಷೇಕ್ ಸಿಂಗ್, ವಿ ಅಜಿತ್, ರಾಹುಲ್ ಸೇಠಪಾಲ್, ಹರೇಂದ್ರ, ಅಜಿಂಕ್ಯ ಕಪ್ರೆ, ರಿಂಕು, ಫಜೆಲ್ ಅತ್ರಾಚಲಿ (ನಾಯಕ)
ನೇರಪ್ರಸಾರದ ಮಾಹಿತಿ: ಎಲ್ಲಾ ಪಂದ್ಯಗಳ ನೇರಪ್ರಸಾರದ ಮಾಹಿತಿ: ಈ ಬಾರಿಯ ವಿವೋ ಪ್ರೊ ಕಬಡ್ಡಿ ಲೀಗ್‌ನ ಎಲ್ಲ ಪಂದ್ಯಗಳು ಸಹ ಸ್ಟಾರ್ ಸ್ಪೋರ್ಟ್ಸ್ ನೆಟ್‌ವರ್ಕ್ ಚಾನೆಲ್‌ಗಳಲ್ಲಿ ಪ್ರಸಾರವಾಗಲಿದ್ದು, ಡಿಸ್ನೆ + ಹಾಟ್‌ಸ್ಟಾರ್ ಅಪ್ಲಿಕೇಶನ್‌ನಲ್ಲಿಯೂ ಕೂಡ ಪಂದ್ಯಗಳನ್ನು ವೀಕ್ಷಿಸಬಹುದಾಗಿದೆ.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications