IPL 2022: RCB vs PBKS Preview : ಪಂದ್ಯದ ಪ್ರಿವ್ಯೂ, ಪ್ಲೇಯಿಂಗ್ ಇಲೆವೆನ್ ಮತ್ತು ನೇರಪ್ರಸಾರದ ಮಾಹಿತಿ

ಜಗತ್ತಿನ ಶ್ರೀಮಂತ ಫ್ರಾಂಚೈಸಿ ಕ್ರಿಕೆಟ್ ಲೀಗ್ ಎಂದೇ ಖ್ಯಾತಿಯನ್ನು ಪಡೆದಿರುವ ಇಂಡಿಯನ್ ಪ್ರೀಮಿಯರ್ ಲೀಗ್‌ನ ಹದಿನೈದನೇ ಆವೃತ್ತಿ ಮಾರ್ಚ್ 26ರ ಶನಿವಾರದಿಂದ ಆರಂಭವಾಗಿದ್ದು, ಈ ದಿನದಂದು ನಡೆದ ಚೊಚ್ಚಲ ಪಂದ್ಯದಲ್ಲಿ ಹಾಲಿ ಚಾಂಪಿಯನ್ಸ್ ಚೆನ್ನೈ ಸೂಪರ್ ಕಿಂಗ್ಸ್ ಹಾಗೂ ಕೋಲ್ಕತ್ತಾ ನೈಟ್ ರೈಡರ್ಸ್ ತಂಡಗಳು ಮುಖಾಮುಖಿಯಾಗಿ ಕೋಲ್ಕತ್ತಾ ನೈಟ್ ರೈಡರ್ಸ್ ಜಯ ಸಾಧಿಸುವ ಮೂಲಕ ಶುಭಾರಂಭವನ್ನು ಮಾಡಿದೆ ಹಾಗೂ ಹಾಲಿ ಚಾಂಪಿಯನ್ಸ್ ಚೆನ್ನೈ ಸೂಪರ್ ಕಿಂಗ್ಸ್ ಸೋಲುವ ಮೂಲಕ ಟೂರ್ನಿಯ ಆರಂಭದಲ್ಲೇ ಹಿನ್ನಡೆ ಅನುಭವಿಸಿದೆ. ಇನ್ನು ಟೂರ್ನಿಯ ಎರಡನೇ ದಿನವಾದ ಮಾರ್ಚ್ 27ರ ಭಾನುವಾರದಂದು ಎರಡು ಪಂದ್ಯಗಳು ನಡೆಯಲಿದ್ದು, ಮೊದಲ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ಮತ್ತು ಮುಂಬೈ ಇಂಡಿಯನ್ಸ್ ತಂಡಗಳು ಸೆಣಸಾಡಿದರೆ, ದ್ವಿತೀಯ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಹಾಗೂ ಪಂಜಾಬ್ ಕಿಂಗ್ಸ್ ತಂಡಗಳು ಮುಖಾಮುಖಿಯಾಗಲಿವೆ.
ಇನ್ನು ರಾಯಲ್ ಚಾಲೆಂಜರ್ಸ್ ಬೆಂಗಳೂರು ಹಾಗೂ ಪಂಜಾಬ್ ಕಿಂಗ್ಸ್ ತಂಡಗಳ ನಡುವೆ ನಡೆಯಲಿರುವ ಈ ಪಂದ್ಯ ಮಾರ್ಚ್ 27ರ ಭಾನುವಾರದ ಸಂಜೆ 7.30ಕ್ಕೆ ಆರಂಭವಾಗಲಿದ್ದು, ಮುಂಬೈನ ಡಿವೈ ಪಾಟೀಲ್ ಕ್ರಿಕೆಟ್ ಕ್ರೀಡಾಂಗಣದಲ್ಲಿ ಈ ಪಂದ್ಯ ನಡೆಯಲಿದೆ. ಇನ್ನು ಇತ್ತಂಡಗಳಿಗೂ ಸಹ ಈ ಪಂದ್ಯ ವಿಶೇಷವಾಗಿದ್ದು, ಎರಡೂ ತಂಡಗಳೂ ಸಹ ನೂತನ ನಾಯಕರ ನಾಯಕತ್ವದಡಿಯಲ್ಲಿ ಕಣಕ್ಕಿಳಿಯಲಿವೆ. ಹೌದು, ರಾಯಲ್ ಚಾಲೆಂಜರ್ಸ್ ಬೆಂಗಳೂರು ನೂತನ ನಾಯಕ ಫಾಫ್ ಡು ಪ್ಲೆಸಿಸ್ ನಾಯಕತ್ವದಲ್ಲಿ ಕಣಕ್ಕಿಳಿದರೆ, ಪಂಜಾಬ್ ಕಿಂಗ್ಸ್ ನೂತನ ನಾಯಕ ಮಯಾಂಕ್ ಅಗರ್ವಾಲ್ ನಾಯಕತ್ವದಡಿಯಲ್ಲಿ ಕಣಕ್ಕಿಳಿಯಲಿದೆ. ಹೀಗೆ ಇತ್ತಂಡಗಳ ನಡುವೆ ನಡೆಯಲಿರುವ ಈ ಪಂದ್ಯದ ಕುರಿತಾದ ಪಿಚ್ ವರದಿ, ಸಂಭಾವ್ಯ ಆಡುವ ಬಳಗ ಮತ್ತು ನೇರಪ್ರಸಾರದ ಕುರಿತಾದ ಮಾಹಿತಿ ಈ ಕೆಳಕಂಡಂತಿದೆ.
ಪಿಚ್ ವರದಿ:
ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಪಂಜಾಬ್ ಕಿಂಗ್ಸ್ ನಡುವಿನ ಈ ಪಂದ್ಯ ಮುಂಬೈನ ಡಾ. ಡಿವೈ ಪಾಟೀಲ್ ಸ್ಪೋರ್ಟ್ಸ್ ಅಕಾಡೆಮಿ ಕ್ರಿಕೆಟ್ ಕ್ರೀಡಾಂಗಣದಲ್ಲಿ ನಡೆಯಲಿದೆ. ಈ ಕ್ರೀಡಾಂಗಣದಲ್ಲಿ ಇದುವರೆಗೂ ಒಟ್ಟು 7 ಐಪಿಎಲ್ ಪಂದ್ಯಗಳು ನಡೆದಿದ್ದು, ಈ ಪಿಚ್ ಕೂಡ ಮುಂಬೈನ ಇತರೆ ಪಿಚ್‌ಗಳ ಹಾಗೆ ಬ್ಯಾಟಿಂಗ್ ಪಿಚ್ ಆಗಿದ್ದು, ಚೇಸ್ ಮಾಡುವ ತಂಡಗಳು ಹೆಚ್ಚಿನ ಗೆಲುವು ಸಾಧಿಸಿದ ಇತಿಹಾಸವಿದೆ.
ಸಂಭಾವ್ಯ ಆಡುವ ಬಳಗಗಳು:
ರಾಯಲ್ ಚಾಲೆಂಜರ್ಸ್ ಬೆಂಗಳೂರು: ಫಾಫ್ ಡು ಪ್ಲೆಸಿಸ್ (ನಾಯಕ), ವಿರಾಟ್ ಕೊಹ್ಲಿ, ಮಹಿಪೋಲ್ ಲೊಮ್ರೋರ್, ದಿನೇಶ್ ಕಾರ್ತಿಕ್ ( ವಿಕೆಟ್ ಕೀಪರ್ ), ಶೆರ್ಫೇನ್ ರುದರ್‌ಫೋರ್ಡ್, ಶಹಬಾಜ್ ಅಹ್ಮದ್, ವನಿಂದು ಹಸರಂಗ, ಡೇವಿಡ್ ವಿಲ್ಲಿ / ಫಿನ್ ಅಲೆನ್, ಹರ್ಷಲ್ ಪಟೇಲ್, ಕರ್ಣ್ ಶರ್ಮಾ / ಸಿದ್ದಾರ್ಥ್ ಕೌಲ್, ಮೊಹಮ್ಮದ್ ಸಿರಾಜ್
ಪಂಜಾಬ್ ಕಿಂಗ್ಸ್: ಮಯಾಂಕ್ ಅಗರ್ವಾಲ್ (ನಾಯಕ), ಶಿಖರ್ ಧವನ್, ಲಿಯಾಮ್ ಲಿವಿಂಗ್ಸ್ಟೋನ್, ಪ್ರಭಾಸಿಮ್ರಾನ್ ಸಿಂಗ್ (ವಿಕೆಟ್ ಕೀಪರ್), ಶಾರುಖ್ ಖಾನ್, ಓಡಿಯನ್ ಸ್ಮಿತ್, ರಿಷಿ ಧವನ್ / ಬೆನ್ನಿ ಹೋವೆಲ್, ಹರ್ಪ್ರೀತ್ ಬ್ರಾರ್, ಅರ್ಶ್ದೀಪ್ ಸಿಂಗ್, ರಾಹುಲ್ ಚಾಹರ್, ಸಂದೀಪ್ ಶರ್ಮಾ
ನೇರಪ್ರಸಾರ: ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಕೋಲ್ಕತ್ತಾ ನೈಟ್ ರೈಡರ್ಸ್ ತಂಡಗಳ ನಡುವಿನ ಈ ಪಂದ್ಯವನ್ನು ದೂರದರ್ಶನದಲ್ಲಿ ಸ್ಟಾರ್ ಸ್ಪೋರ್ಟ್ಸ್ ನೆಟ್‌ವರ್ಕ್ ಚಾನೆಲ್‌ಗಳಲ್ಲಿ ವೀಕ್ಷಿಸಬಹುದಾಗಿದೆ. ಹಾಗೂ ಈ ಪಂದ್ಯ ಡಿಸ್ನಿ ಪ್ಲಸ್ ಹಾಟ್‌ಸ್ಟಾರ್ ಅಪ್ಲಿಕೇಶನ್‌ನಲ್ಲೂ ಸಹ ನೇರ ಪ್ರಸಾರವಾಗಲಿದೆ.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications