'ವಿಶ್ವ ಟೆಸ್ಟ್ ಚಾಂಪಿಯನ್‍ಶಿಪ್ ಫೈನಲ್ ಪಂದ್ಯ ಗೆಲ್ಲಲು ಆ ಇಬ್ಬರು ಆಟಗಾರರು ಇರಲೇಬೇಕು'

ಜೂನ್ 18-22ರವರೆಗೆ ಇಂಗ್ಲೆಂಡ್‌ನ ಸೌತಾಂಪ್ಟನ್ ಕ್ರೀಡಾಂಗಣದಲ್ಲಿ ಭಾರತ ಮತ್ತು ನ್ಯೂಜಿಲೆಂಡ್ ತಂಡಗಳ ನಡುವೆ ಪ್ರತಿಷ್ಠಿತ ವಿಶ್ವ ಟೆಸ್ಟ್ ಚಾಂಪಿಯನ್‍ಶಿಪ್ ಫೈನಲ್ ಪಂದ್ಯ ನಡೆಯಲಿದ್ದು ಟೀಮ್ ಇಂಡಿಯಾ ತಂಡ ಈಗಾಗಲೇ ಸೌತಂಪ್ಟನ್ ತಲುಪಿ ಕ್ವಾರಂಟೈನ್ ನಿಯಮವನ್ನು ಅನುಸರಿಸುತ್ತಿದೆ.
ವೆಸ್ಟ್ ಇಂಡೀಸ್, ಆಸ್ಟ್ರೇಲಿಯಾ ರೀತಿ ಕೊಹ್ಲಿ ಪಡೆ ಮಿಂಚುವುದು ಅನುಮಾನ ಎಂದ ಭಾರತದ ಮಾಜಿ ಕ್ರಿಕೆಟಿಗ!
ಜೂನ್ 18ರಿಂದ ಭಾರತ ಮತ್ತು ನ್ಯೂಜಿಲೆಂಡ್ ತಂಡಗಳ ನಡುವೆ ನಡೆಯಲಿರುವ ವಿಶ್ವ ಟೆಸ್ಟ್ ಚಾಂಪಿಯನ್‍ಶಿಪ್ ಫೈನಲ್ ಪಂದ್ಯದ ಕುರಿತು ದಿನದಿಂದ ದಿನಕ್ಕೆ ನಿರೀಕ್ಷೆ ಹೆಚ್ಚುತ್ತಿದ್ದು ಮಾಜಿ ಕ್ರಿಕೆಟಿಗರು ಹಾಗೂ ಕ್ರಿಕೆಟ್ ಪಂಡಿತರು ಈ ಪಂದ್ಯದ ಕುರಿತು ತಮ್ಮ ತಮ್ಮ ಅಭಿಪ್ರಾಯಗಳನ್ನು ವ್ಯಕ್ತಪಡಿಸುತ್ತಿದ್ದಾರೆ.
ವಿಶ್ವ ಟೆಸ್ಟ್ ಚಾಂಪಿಯನ್‍ಶಿಪ್; ಕೊಹ್ಲಿ ಬೇಡ ಎಂದಿದ್ದ ವಿಷಯವನ್ನೇ ಕೆದಕಿದ ಲಕ್ಷ್ಮಣ್
ಇದೀಗ ಭಾರತದ ಮಾಜಿ ಆಟಗಾರ ಆಕಾಶ್ ಚೋಪ್ರಾ ಟೀಮ್ ಇಂಡಿಯಾ ನ್ಯೂಜಿಲೆಂಡ್ ವಿರುದ್ಧ ಗೆಲುವು ಸಾಧಿಸಿ ವಿಶ್ವ ಟೆಸ್ಟ್ ಚಾಂಪಿಯನ್‍ಶಿಪ್ ಟ್ರೋಫಿಯನ್ನು ಮುಡಿಗೇರಿಸಿಕೊಳ್ಳಬೇಕೆಂದರೆ ಕಡ್ಡಾಯವಾಗಿ 5 ಬೌಲರ್‌ಗಳನ್ನು ಕಣಕ್ಕಿಳಿಸಬೇಕೆಂದು ಅಭಿಪ್ರಾಯಪಟ್ಟಿದ್ದಾರೆ. 'ನ್ಯೂಜಿಲೆಂಡ್ ತಂಡ ಸಾಮಾನ್ಯವಾದ ಏಷ್ಯಾ ತಂಡವಲ್ಲ, ಅವರು ಇಂಗ್ಲೆಂಡ್‌ನ ಪಿಚ್‌ಗಳಲ್ಲಿ ಉತ್ತಮ ಆಟವನ್ನು ಆಡುವಂಥ ಸಾಮರ್ಥ್ಯ ಹೊಂದಿದವರಾಗಿದ್ದು ಟೀಮ್ ಇಂಡಿಯಾ ರವೀಂದ್ರ ಜಡೇಜಾ ಹಾಗೂ ರವಿಚಂದ್ರನ್ ಅಶ್ವಿನ್ ಸೇರಿದಂತೆ ಒಟ್ಟು 5 ಬೌಲರ್‌ಗಳನ್ನು ಕಣಕ್ಕಿಳಿಸಬೇಕು. ಜಡೇಜಾ ಮತ್ತು ಅಶ್ವಿನ್ ಇಂಗ್ಲೆಂಡ್ ಪಿಚ್‌ಗಳಲ್ಲಿ ಉತ್ತಮ ಪ್ರದರ್ಶನ ನೀಡಲಿದ್ದು ತಂಡದ ಗೆಲುವಿಗೆ ಸಹಕಾರಿಯಾಗಲಿದ್ದಾರೆ' ಎಂದು ಆಕಾಶ್ ಚೋಪ್ರಾ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications