ಈ ಆಟಗಾರರು ಐಪಿಎಲ್ ಹತ್ತಿರ ಬಂದಾಗ ತಮ್ಮ ದೇಶದ ಪರವೇ ಚೆನ್ನಾಗಿ ಆಡುವುದಿಲ್ಲ ಎಂದ ಮಾಜಿ ಕ್ರಿಕೆಟಿಗ!

ವಿಶ್ವ ಕ್ರಿಕೆಟ್‍ನಲ್ಲಿ ಜನಪ್ರಿಯ ಹಾಗೂ ಶ್ರೀಮಂತ ಫ್ರಾಂಚೈಸಿ ಕ್ರಿಕೆಟ್ ಲೀಗ್ ಎಂದೇ ಖ್ಯಾತಿಯನ್ನು ಪಡೆದಿರುವ ಇಂಡಿಯನ್ ಪ್ರೀಮಿಯರ್ ಲೀಗ್‌ನ ಹದಿನೈದನೇ ಆವೃತ್ತಿ ಇದೇ ಮಾರ್ಚ್ ಅಂತಿಮ ವಾರದಲ್ಲಿ ಆರಂಭವಾಗಿ ಮೇ ತಿಂಗಳಿನಲ್ಲಿ ಮುಕ್ತಾಯಗೊಳ್ಳಲಿದೆ. ಕಳೆದ ವರ್ಷ ನಡೆದ ಅಚಾತುರ್ಯ ಈ ವರ್ಷ ನಡೆಯಬಾರದು ಎಂಬ ನಿಟ್ಟಿನಲ್ಲಿ ಮುಂಜಾಗ್ರತೆಯನ್ನು ವಹಿಸಿರುವ ಬಿಸಿಸಿಐ ಈ ಬಾರಿಯ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯ ಎಲ್ಲಾ ಪಂದ್ಯಗಳನ್ನು ಒಂದೇ ನಗರದಲ್ಲಿ ಆಯೋಜಿಸಲು ಚಿಂತನೆ ನಡೆಸಿದೆ.
ಹೌದು, ಕಳೆದ ವರ್ಷದ ರೀತಿಯೇ ಈ ವರ್ಷವೂ ಸಹ ದೇಶದಲ್ಲಿ ಕೊರೋನಾವೈರಸ್ ಭೀತಿ ಇರುವುದರಿಂದ ಈ ಬಾರಿಯ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯ ಎಲ್ಲಾ ಪಂದ್ಯಗಳನ್ನು ಮುಂಬೈ ನಗರದಲ್ಲಿ ಆಯೋಜಿಸಲು ಬಿಸಿಸಿಐ ಯೋಜನೆ ಹಾಕಿಕೊಳ್ಳುತ್ತಿದೆ. ಮುಂಬೈ ನಗರದಲ್ಲಿ ವಾಂಖೆಡೆ ಕ್ರೀಡಾಂಗಣದ ಜತೆ ಅಂತರರಾಷ್ಟ್ರೀಯ ಪಂದ್ಯಗಳನ್ನು ಆಯೋಜಿಸಿದ ಇತಿಹಾಸವನ್ನು ಹೊಂದಿರುವ ಬ್ರಬೋರ್ನ್ ಸ್ಟೇಡಿಯಂ ಮತ್ತು ಡಿವೈ ಪಾಟೀಲ್ ಸ್ಟೇಡಿಯಂಗಳು ಇರುವುದರಿಂದ ಇಲ್ಲಿ ಸಂಪೂರ್ಣ ಟೂರ್ನಿಯನ್ನು ಆಯೋಜಿಸಿದರೆ ಆಟಗಾರರಿಗೆ ನಗರದಿಂದ ನಗರಕ್ಕೆ ಪ್ರಯಾಣಿಸಬೇಕಾದ ಅನಿವಾರ್ಯತೆ ಇರುವುದಿಲ್ಲ ಹಾಗೂ ಬಯೋ ಬಬಲ್ ವ್ಯವಸ್ಥೆಯನ್ನು ಅಚ್ಚುಕಟ್ಟಾಗಿ ನಿರ್ವಹಿಸಬಹುದಾಗಿದೆ.
ಹೀಗೆ ಆಟಗಾರರಿಗೆ ಕೊರೋನಾವೈರಸ್ ಕಳೆದ ಐಪಿಎಲ್ ಆವೃತ್ತಿಯ ಹಾಗೆ ಹರಡಬಾರದು ಎಂಬ ನಿಟ್ಟಿನಲ್ಲಿ ಬಿಸಿಸಿಐ ಮುಂಜಾಗ್ರತಾ ಕ್ರಮಗಳನ್ನು ತೆಗೆದುಕೊಳ್ಳುತ್ತಿದೆ. ಒಂದು ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿ ಹಲವಾರು ಯುವಪ್ರತಿಭೆಗಳನ್ನು ಬೆಳಕಿಗೆ ತರಲು ಉತ್ತಮ ವೇದಿಕೆಯಾಗಿದೆ ಹಾಗೂ ಅಂತರರಾಷ್ಟ್ರೀಯ ಕ್ರಿಕೆಟ್‍ನಲ್ಲಿ ನೆಲಕಚ್ಚಿರುವ ಆಟಗಾರರು ತಮ್ಮನ್ನು ತಾವು ನಿರೂಪಿಸಿಕೊಳ್ಳಲು ಈ ಇಂಡಿಯನ್ ಪ್ರೀಮಿಯರ್ ಲೀಗ್ ದೊಡ್ಡ ಮಟ್ಟದಲ್ಲಿ ಸಹಾಯ ಮಾಡಲಿದೆ. ಹೀಗಾಗಿ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯಲ್ಲಿ ಭಾಗವಹಿಸಲು ವಿಶ್ವದಾದ್ಯಂತ ಇರುವ ಕ್ರಿಕೆಟಿಗರು ತುದಿಗಾಲಿನಲ್ಲಿ ನಿಂತಿರುತ್ತಾರೆ. ಇಷ್ಟು ದೊಡ್ಡ ಮಟ್ಟದ ಮಹತ್ವವನ್ನು ಪಡೆದುಕೊಂಡಿರುವ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯಲ್ಲಿ ಭಾಗವಹಿಸಲು ಕೆಲವರು ತಮ್ಮ ದೇಶದ ಪರ ಉತ್ತಮವಾಗಿ ಆಡುವುದಿಲ್ಲ ಎಂಬ ಹೇಳಿಕೆಯನ್ನು ಇದೀಗ ಭಾರತದ ಮಾಜಿ ಕ್ರಿಕೆಟಿಗ ಸುನೀಲ್ ಗವಾಸ್ಕರ್ ನೀಡಿದ್ದಾರೆ. ಸುನಿಲ್ ಗಾವಸ್ಕರ್ ಈ ರೀತಿಯ ಹೇಳಿಕೆಯನ್ನು ನೀಡಿದ್ದಾದ್ರೂ ಯಾಕೆ ಎಂಬುದರ ಕುರಿತಾದ ವಿವರ ಈ ಕೆಳಕಂಡಂತಿದೆ.

ಐಪಿಎಲ್ ಟೂರ್ನಿ ಸನಿಹದಲ್ಲಿ ಈ ಆಟಗಾರರು ಶ್ರಮವಹಿಸಿ ಆಡುವುದಿಲ್ಲ
ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯ ಕುರಿತು ಮಾತನಾಡಿರುವ ಸುನಿಲ್ ಗವಾಸ್ಕರ್ ಐಪಿಎಲ್ ಮೆಗಾ ಹರಾಜು ಮುಕ್ತಾಯಗೊಂಡ ನಂತರ ಹರಾಜಿನಲ್ಲಿ ಯಶಸ್ವಿಯಾಗಿ ಆಯ್ಕೆಯಾದ ಆಟಗಾರರು ಟೂರ್ನಿ ಆರಂಭಕ್ಕೂ ಮುನ್ನ ನಡೆಯುವ ಅಂತರರಾಷ್ಟ್ರೀಯ ಪಂದ್ಯಗಳಲ್ಲಿ ಹೆಚ್ಚು ಶ್ರಮವಹಿಸಿ ಪ್ರದರ್ಶನವನ್ನು ನೀಡುವುದಿಲ್ಲ ಎಂದಿದ್ದಾರೆ.

ಹೆಚ್ಚು ಶ್ರಮ ವಹಿಸಿ ಅಡಿ ಗಾಯಕ್ಕೊಳಗಾದರೆ ಟೂರ್ನಿಯಿಂದ ಹೊರ ಬೀಳಬಹುದಾದ ಭಯ!
ಇನ್ನೂ ಮುಂದುವರಿದು ಮಾತನಾಡಿರುವ ಸುನಿಲ್ ಗವಾಸ್ಕರ್ ಮೆಗಾ ಹರಾಜಿನಲ್ಲಿ ಬಿಕರಿಯಾಗಿರುವ ಆಟಗಾರರು ಅಂತರರಾಷ್ಟ್ರೀಯ ಪಂದ್ಯಗಳಲ್ಲಿ ಗಾಯದ ಸಮಸ್ಯೆಗೊಳಗಾದರೆ ಐಪಿಎಲ್ ಟೂರ್ನಿಯಿಂದ ಹೊರ ಬೀಳಬಹುದಾದ ಸಾಧ್ಯತೆಗಳು ಹೆಚ್ಚಿರುತ್ತವೆ, ಈ ಭಯದಿಂದಲೇ ಆಟಗಾರರು ಅಂತರರಾಷ್ಟ್ರೀಯ ಪಂದ್ಯಗಳಲ್ಲಿ ಶ್ರಮವಹಿಸಿ ಪಾಲ್ಗೊಳ್ಳಲು ಹಿಂದೇಟು ಹಾಕುತ್ತಾರೆ ಎಂದು ತಮ್ಮ ಅಭಿಪ್ರಾಯವನ್ನು ವ್ಯಕ್ತಪಡಿಸಿದ್ದಾರೆ. ಅಷ್ಟೇ ಅಲ್ಲದೆ ಇತ್ತೀಚೆಗಷ್ಟೇ ನಡೆದ ಭಾರತ ಮತ್ತು ವೆಸ್ಟ್ ಇಂಡೀಸ್ ತಂಡಗಳ ನಡುವಿನ ತೃತೀಯ ಏಕದಿನ ಪಂದ್ಯಕ್ಕಿಂತ ಇಂಡಿಯನ್ ಪ್ರೀಮಿಯರ್ ಲೀಗ್ ಮೆಗಾ ಹರಾಜಿನ ಕಡೆ ಕ್ರಿಕೆಟ್ ಅಭಿಮಾನಿಗಳು ಹೆಚ್ಚಿನ ಆಸಕ್ತಿಯನ್ನು ತೋರಿಸಿದರು ಎಂದೂ ಸಹ ಸುನೀಲ್ ಗವಾಸ್ಕರ್ ತಿಳಿಸಿದ್ದಾರೆ.

ಅಂತರರಾಷ್ಟ್ರೀಯ ಪಂದ್ಯಗಳಲ್ಲಿ ಅವಕಾಶ ಸಿಗದವರಿಗೆ ಐಪಿಎಲ್ ಉತ್ತಮ ವೇದಿಕೆ
ಇದೇ ವೇಳೆ ಅಂತರರಾಷ್ಟ್ರೀಯ ಪಂದ್ಯಗಳಲ್ಲಿ ಭಾಗವಹಿಸುವ ಅವಕಾಶ ಸಿಗದೇ ಇರುವಂತಹ ಕ್ರಿಕೆಟಿಗರಿಗೆ ಇಂಡಿಯನ್ ಪ್ರೀಮಿಯರ್ ಲೀಗ್ ಉತ್ತಮ ವೇದಿಕೆಯನ್ನು ಕಲ್ಪಿಸಲಿದ್ದು, ತಮ್ಮನ್ನು ತಾವು ಸಾಬೀತು ಪಡಿಸಿಕೊಳ್ಳಲು ಒಳ್ಳೆಯ ಅವಕಾಶ ಎಂದು ಸುನೀಲ್ ಗವಾಸ್ಕರ್ ಹೇಳಿದ್ದಾರೆ. ಟೂರ್ನಿಯಲ್ಲಿ ಹೆಚ್ಚು ತಂಡಗಳಿದ್ದು, ಹಲವಾರು ಪಂದ್ಯಗಳು ನಡೆಯುವುದರಿಂದ ಬಿಕರಿಯಾದ ಬಹುತೇಕ ಎಲ್ಲಾ ಆಟಗಾರರಿಗೂ ಅವಕಾಶ ಸಿಗಲಿದ್ದು ಆಟಗಾರರು ಸಿಕ್ಕ ಅವಕಾಶಗಳನ್ನು ಸದುಪಯೋಗಪಡಿಸಿಕೊಂಡು ತಮ್ಮನ್ನು ಅಂತರರಾಷ್ಟ್ರೀಯ ತಂಡಕ್ಕೆ ಆಯ್ಕೆ ಮಾಡದ ಆಟಗಾರರಿಗೆ ಪ್ರತ್ಯುತ್ತರವನ್ನು ನೀಡಬಹುದು ಎಂದು ಸುನಿಲ್ ಗವಾಸ್ಕರ್ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications