ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X
For Quick Alerts
ALLOW NOTIFICATIONS  
For Daily Alerts
 

ಟಿ20 ವಿಶ್ವಕಪ್‌ನ ಭಾರತ ತಂಡದಲ್ಲಿ ಈ IPL ತಂಡಗಳ ಆಟಗಾರರಿಲ್ಲ; ಮುಂಬೈ, ಆರ್‌ಸಿಬಿ ಮೇಲುಗೈ!

Players From CSK And KKR IPL Teams Have No Place In Indias T20 World Cup Squad; MI, RCB Players Leads

ಬಿಸಿಸಿಐನ ಭಾರತ ಹಿರಿಯರ ಕ್ರಿಕೆಟ್ ಆಯ್ಕೆ ಸಮಿತಿಯು ಕಳೆದ ವಾರದ ಆರಂಭದಲ್ಲಿ ಸಭೆ ನಡೆಸಿದ ನಂತರ, ಮುಂಬರುವ ಅಕ್ಟೋಬರ್-ನವೆಂಬರ್‌ನಲ್ಲಿ ಆಸ್ಟ್ರೇಲಿಯಾದಲ್ಲಿ ನಡೆಯಲಿರುವ ಟಿ20 ವಿಶ್ವಕಪ್‌ಗೆ 15 ಸದಸ್ಯರು ಮತ್ತು 4 ಸ್ಟ್ಯಾಂಡ್‌ಬೈ ಆಟಗಾರರನ್ನೊಳಗೊಂಡ ಭಾರತ ತಂಡವನ್ನು ಆಯ್ಕೆ ಮಾಡಲಾಗಿದೆ.

ರೋಹಿತ್ ಶರ್ಮಾ ಮೊದಲ ಬಾರಿಗೆ ಐಸಿಸಿ ಟೂರ್ನಮೆಂಟ್‌ನಲ್ಲಿ ಭಾರತವನ್ನು ಮುನ್ನಡೆಸಲಿದ್ದರೆ, ಆರಂಭಿಕ ಬ್ಯಾಟರ್ ಕೆಎಲ್ ರಾಹುಲ್ ಅವರನ್ನು ಉಪನಾಯಕರನ್ನಾಗಿ ನೇಮಿಸಲಾಗಿದೆ. ಏಷ್ಯಾ ಕಪ್‌ನಲ್ಲಿ ಭಾರತದ ಕಳಪೆ ಪ್ರದರ್ಶನ ನೀಡಿದ್ದರೂ ತಂಡದಲ್ಲಿ ಯಾವುದೇ ಮಹತ್ವದ ಬದಲಾವಣೆಗಳನ್ನು ಮಾಡಲಾಗಿಲ್ಲ ಮತ್ತು ಜಸ್ಪ್ರೀತ್ ಬುಮ್ರಾ ಮತ್ತು ಹರ್ಷಲ್ ಪಟೇಲ್ ಆಯಾ ಗಾಯಗಳಿಂದ ತಮ್ಮ ಪುನರಾಗಮನ ಮಾಡಿದರು.

IND vs AUS: 'ಭಾರತದ ಕೆಲವು ಆಟಗಾರರು ಅಧಿಕ ತೂಕ ಹೊಂದಿದ್ದಾರೆ'; ಪಾಕ್ ಮಾಜಿ ನಾಯಕ ಟೀಕೆIND vs AUS: 'ಭಾರತದ ಕೆಲವು ಆಟಗಾರರು ಅಧಿಕ ತೂಕ ಹೊಂದಿದ್ದಾರೆ'; ಪಾಕ್ ಮಾಜಿ ನಾಯಕ ಟೀಕೆ

ಇನ್ನು 2022ರ ಟಿ20 ವಿಶ್ವಕಪ್ ಭಾರತ ತಂಡದಲ್ಲಿ ಸ್ಥಾನ ಪಡೆದಿರುವ 15 ಆಟಗಾರರು ಐಪಿಎಲ್‌ನಲ್ಲಿ ವಿವಿಧ ಫ್ರಾಂಚೈಸ್‌ಗಳನ್ನು ಪ್ರತಿನಿಧಿಸುತ್ತಾರೆ. ಆದರೆ ಎರಡು ಐಪಿಎಲ್ (IPL) ತಂಡಗಳ ಯಾವುದೇ ಆಟಗಾರರು ಟಿ20 ವಿಶ್ವಕಪ್‌ನ ಭಾರತ ತಂಡದಲ್ಲಿ ಸ್ಥಾನ ಪಡೆಯಲು ವಿಫಲರಾಗಿದ್ದಾರೆ.

ಆರ್‌ಸಿಬಿ, ಎಂಐ ತಂಡಗಳ ತಲಾ ಮೂವರು ಆಟಗಾರರು

ಆರ್‌ಸಿಬಿ, ಎಂಐ ತಂಡಗಳ ತಲಾ ಮೂವರು ಆಟಗಾರರು

ಟಿ20 ವಿಶ್ವಕಪ್‌ನ ಭಾರತ ತಂಡದಲ್ಲಿ ಹೆಚ್ಚಿನ ಸ್ಥಾನ ಪಡೆದ ತಂಡಗಳೆಂದರೆ ಮುಂಬೈ ಇಂಡಿಯನ್ಸ್ (MI) ಮತ್ತು ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB). ಈ ಎರಡು ತಂಡಗಳ ತಲಾ ಮೂವರು ಆಟಗಾರರು ಟಿ20 ವಿಶ್ವಕಪ್‌ನ ಭಾರತ ತಂಡದಲ್ಲಿ ಸ್ಥಾನ ಪಡೆಯಲು ಯಶಸ್ವಿಯಾಗಿದ್ದಾರೆ.

ಉಳಿದಂತೆ ಲಕ್ನೋ ಸೂಪರ್ ಜೈಂಟ್ಸ್ (LSG), ರಾಜಸ್ಥಾನ ರಾಯಲ್ಸ್(RR) ಮತ್ತು ಡೆಲ್ಲಿ ಕ್ಯಾಪಿಟಲ್ಸ್(DC) ತಂಡದ ತಲಾ ಇಬ್ಬರು ಆಟಗಾರರು ಸ್ಥಾನ ಪಡೆದಿದ್ದಾರೆ. ಇನ್ನು ಪಂಜಾಬ್ ಕಿಂಗ್ಸ್(PBKS) ತಂಡದ ಒಬ್ಬರು, ಗುಜರಾತ್ ಟೈಟನ್ಸ್(GT) ಮತ್ತು ಸನ್‌ರೈಸರ್ಸ್ ಹೈದರಾಬಾದ್(SRH) ತಂಡದ ತಲಾ ಒಬ್ಬೊಬ್ಬ ಆಟಗಾರರು ಟಿ20 ವಿಶ್ವಕಪ್‌ನ ಭಾರತ ತಂಡದಲ್ಲಿ ಸ್ಥಾನ ಪಡೆದಿದ್ದಾರೆ.

ಆದರೆ, ಚೆನ್ನೈ ಸೂಪರ್ ಕಿಂಗ್ಸ್(CSK) ಮತ್ತು ಕೋಲ್ಕತ್ತಾ ನೈಟ್ ರೈಡರ್ಸ್(KKR) ತಂಡಗಳ ಆಟಗಾರರು ಈ ಬಾರಿಯ ಟಿ20 ವಿಶ್ವಕಪ್‌ನ ಭಾರತ ತಂಡದಲ್ಲಿ ಸ್ಥಾನ ಪಡೆಯಲು ವಿಫಲರಾಗಿದ್ದಾರೆ.

ಯಾವ ಐಪಿಎಲ್ ತಂಡಗಳಿಂದ ಟಿ20 ವಿಶ್ವಕಪ್‌ನ ಭಾರತ ತಂಡದಲ್ಲಿ ಸ್ಥಾನ ಪಡೆದಿದ್ದಾರೆ

ಯಾವ ಐಪಿಎಲ್ ತಂಡಗಳಿಂದ ಟಿ20 ವಿಶ್ವಕಪ್‌ನ ಭಾರತ ತಂಡದಲ್ಲಿ ಸ್ಥಾನ ಪಡೆದಿದ್ದಾರೆ

* ಮುಂಬೈ ಇಂಡಿಯನ್ಸ್- ರೋಹಿತ್ ಶರ್ಮಾ, ಸೂರ್ಯಕುಮಾರ್ ಯಾದವ್ ಮತ್ತು ಜಸ್ಪ್ರೀತ್ ಬುಮ್ರಾ

* ರಾಯಲ್ ಚಾಲೆಂಜರ್ಸ್ ಬೆಂಗಳೂರು- ವಿರಾಟ್ ಕೊಹ್ಲಿ, ದಿನೇಶ್ ಕಾರ್ತಿಕ್ ಮತ್ತು ಹರ್ಷಲ್ ಪಟೇಲ್

* ಲಕ್ನೋ ಸೂಪರ್ ಜೈಂಟ್ಸ್- ಕೆಎಲ್ ರಾಹುಲ್ ಮತ್ತು ದೀಪಕ್ ಹೂಡಾ

* ರಾಜಸ್ಥಾನ ರಾಯಲ್ಸ್- ಯುಜ್ವೇಂದ್ರ ಚಹಾಲ್ ಮತ್ತು ರವಿಚಂದ್ರನ್ ಅಶ್ವಿನ್

* ಡೆಲ್ಲಿ ಕ್ಯಾಪಿಟಲ್ಸ್- ರಿಷಭ್ ಪಂತ್ ಮತ್ತು ಅಕ್ಷರ್ ಪಟೇಲ್

* ಪಂಜಾಬ್ ಕಿಂಗ್ಸ್- ಅರ್ಶ್‌ದೀಪ್ ಸಿಂಗ್

* ಗುಜರಾತ್ ಟೈಟನ್ಸ್- ಹಾರ್ದಿಕ್ ಪಾಂಡ್ಯ

* ಸನ್‌ರೈಸರ್ಸ್ ಹೈದರಾಬಾದ್ - ಭುವನೇಶ್ವರ್ ಕುಮಾರ್

ಟಿ20 ವಿಶ್ವಕಪ್‌ಗೂ ಮುನ್ನ ಆಸೀಸ್, ಆಫ್ರಿಕಾ ವಿರುದ್ಧ ಸರಣಿ

ಟಿ20 ವಿಶ್ವಕಪ್‌ಗೂ ಮುನ್ನ ಆಸೀಸ್, ಆಫ್ರಿಕಾ ವಿರುದ್ಧ ಸರಣಿ

ಅಕ್ಟೋಬರ್-ನವೆಂಬರ್‌ನಲ್ಲಿ ಆಸ್ಟ್ರೇಲಿಯಾದಲ್ಲಿ ನಡೆಯಲಿರುವ ಟಿ20 ವಿಶ್ವಕಪ್‌ಗೂ ಮುನ್ನ ಭಾರತ ತಂಡ ಆಸ್ಟ್ರೇಲಿಯ ಮತ್ತು ದಕ್ಷಿಣ ಆಫ್ರಿಕಾ ತಂಡಗಳ ವಿರುದ್ಧ ತವರಿನಲ್ಲಿ ದ್ವಿಪಕ್ಷೀಯ ಸರಣಿ ಆಡಲಿದೆ. ಇದು ವಿಶ್ವಕಪ್‌ಗೆ ಪೂರ್ವಾಭ್ಯಾಸವಾಗಲಿದೆ. ಮೊಹಮ್ಮದ್ ಶಮಿಗೆ ಕೋವಿಡ್-19 ಸೋಂಕು ದೃಢಪಟ್ಟಿರುವುದರಿಂದ ಅವರ ಬದಲಿಗೆ ಆಸ್ಟ್ರೇಲಿಯಾ ವಿರುದ್ಧದ ಸರಣಿಗೆ ಕೋಲ್ಕತ್ತಾ ನೈಟ್ ರೈಡರ್ಸ್ ತಂಡದ ಉಮೇಶ್ ಯಾದವ್ ಆಯ್ಕೆಯಾಗಿದ್ದಾರೆ.

ಟಿ20 ವಿಶ್ವಕಪ್‌ಗಾಗಿ ಭಾರತದ ಪೂರ್ಣ ತಂಡ

ಟಿ20 ವಿಶ್ವಕಪ್‌ಗಾಗಿ ಭಾರತದ ಪೂರ್ಣ ತಂಡ

ರೋಹಿತ್ ಶರ್ಮಾ (ನಾಯಕ), ಕೆಎಲ್ ರಾಹುಲ್ (ಉಪನಾಯಕ), ವಿರಾಟ್ ಕೊಹ್ಲಿ, ಸೂರ್ಯಕುಮಾರ್ ಯಾದವ್, ದೀಪಕ್ ಹೂಡಾ, ರಿಷಭ್ ಪಂತ್ (ವಿಕೆಟ್ ಕೀಪರ್), ದಿನೇಶ್ ಕಾರ್ತಿಕ್ (ವಿಕೆಟ್ ಕೀಪರ್), ಹಾರ್ದಿಕ್ ಪಾಂಡ್ಯ, ರವಿಚಂದ್ರನ್ ಅಶ್ವಿನ್, ಯುಜ್ವೇಂದ್ರ ಚಾಹಲ್, ಅಕ್ಷರ್ ಪಟೇಲ್, ಜಸ್ಪ್ರೀತ್ ಬುಮ್ರಾ, ಭುವನೇಶ್ವರ್ ಕುಮಾರ್, ಹರ್ಷಲ್ ಪಟೇಲ್, ಅರ್ಶ್‌ದೀಪ್ ಸಿಂಗ್.

ಸ್ಟ್ಯಾಂಡ್‌ಬೈ ಆಟಗಾರರು: ಮೊಹಮ್ಮದ್ ಶಮಿ, ಶ್ರೇಯಸ್ ಅಯ್ಯರ್, ರವಿ ಬಿಷ್ಣೋಯ್, ದೀಪಕ್ ಚಹಾರ್

Story first published: Thursday, September 22, 2022, 14:07 [IST]
Other articles published on Sep 22, 2022
POLLS
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Yes No
Settings X