ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X
For Quick Alerts
ALLOW NOTIFICATIONS  
For Daily Alerts
 

ಟೆಸ್ಟ್‌ನಿಂದ ವಿಶ್ರಾಂತಿಗೆಂದು ಹೊರಗುಳಿದ ರೋಹಿತ್ ಮತ್ತು ಕೊಹ್ಲಿ ವಿರುದ್ಧ ಕಿಡಿಕಾರಿದ ಮಾಜಿ ಕ್ರಿಕೆಟಿಗ

Players like Virat Kohli and Rohit Sharma being rested from Test disappoints me greatly says Ian Smith

ಇತ್ತೀಚೆಗಷ್ಟೇ ಯುಎಇಯಲ್ಲಿ ಮುಕ್ತಾಯಗೊಂಡ ಪ್ರತಿಷ್ಠಿತ ಟಿ ಟ್ವೆಂಟಿ ವಿಶ್ವಕಪ್ ಟೂರ್ನಿಯ ಫೈನಲ್ ಪಂದ್ಯದಲ್ಲಿ ಆಸ್ಟ್ರೇಲಿಯಾ ವಿರುದ್ಧ ಸೋಲುವುದರ ಮೂಲಕ ತನ್ನ ಚೊಚ್ಚಲ ವಿಶ್ವಕಪ್ ಟ್ರೋಫಿಯನ್ನು ಎತ್ತಿ ಹಿಡಿಯುವ ಕನಸನ್ನು ನನಸು ಮಾಡಿಕೊಳ್ಳಲಾಗದೆ ಟೂರ್ನಿಯಿಂದ ಹೊರಬಿದ್ದ ನ್ಯೂಜಿಲೆಂಡ್ ಸದ್ಯ ಭಾರತ ಪ್ರವಾಸವನ್ನು ಕೈಗೊಂಡಿದ್ದು ಟೀಮ್ ಇಂಡಿಯಾ ವಿರುದ್ಧದ 3 ಪಂದ್ಯಗಳ ಟ್ವೆಂಟಿ ಸರಣಿಯನ್ನು ಆಡಿ ಮುಗಿಸಿದೆ. ಭಾರತ ಮತ್ತು ನ್ಯೂಜಿಲೆಂಡ್ ತಂಡಗಳ ನಡುವೆ ನಡೆದ ಈ 3 ಪಂದ್ಯಗಳ ಟ್ವೆಂಟಿ ಸರಣಿಯಲ್ಲಿ ಟೀಮ್ ಇಂಡಿಯಾ 3-0 ಅಂತರದಲ್ಲಿ ಜಯಗಳಿಸುವುದರ ಮೂಲಕ ಎದುರಾಳಿ ನ್ಯೂಜಿಲೆಂಡ್ ತಂಡಕ್ಕೆ ವೈಟ್ ವಾಶ್ ಬಳಿದಿದೆ.

ಭಾರತ vs ಪಾಕ್ ಸರಣಿ ಆಯೋಜನೆಗೆ ಈ ದೇಶದಿಂದ ಸಿಕ್ತು ಗ್ರೀನ್ ಸಿಗ್ನಲ್, ಶೀಘ್ರದಲ್ಲೇ ಮಾತುಕತೆಭಾರತ vs ಪಾಕ್ ಸರಣಿ ಆಯೋಜನೆಗೆ ಈ ದೇಶದಿಂದ ಸಿಕ್ತು ಗ್ರೀನ್ ಸಿಗ್ನಲ್, ಶೀಘ್ರದಲ್ಲೇ ಮಾತುಕತೆ

ಹೌದು, ಭಾರತ ಪ್ರವಾಸವನ್ನು ಕೈಗೊಂಡಿರುವ ನ್ಯೂಜಿಲೆಂಡ್ ತಂಡ ಟೀಮ್ ಇಂಡಿಯಾ ವಿರುದ್ಧದ 3 ಪಂದ್ಯಗಳ ಟಿ ಟ್ವೆಂಟಿ ಸರಣಿಯಲ್ಲಿ ಎಲ್ಲಾ ಪಂದ್ಯಗಳನ್ನು ಸೋಲುವುದರ ಮೂಲಕ ವೈಟ್ ವಾಷ್ ಅವಮಾನಕ್ಕೆ ಈಡಾಗಿದೆ. ಭಾರತ ಮತ್ತು ನ್ಯೂಜಿಲೆಂಡ್ ತಂಡಗಳ ನಡುವೆ ನವೆಂಬರ್ 17ರಂದು ಜೈಪುರದಲ್ಲಿ ನಡೆದ ಮೊದಲ ಟಿ ಟ್ವೆಂಟಿ ಪಂದ್ಯದಲ್ಲಿ ಟೀಮ್ ಇಂಡಿಯಾ 5 ವಿಕೆಟ್‍ಗಳ ಗೆಲುವು ದಾಖಲಿಸುವುದರ ಮೂಲಕ ಟಿ ಟ್ವೆಂಟಿ ಸರಣಿಯಲ್ಲಿ ಶುಭಾರಂಭವನ್ನು ಮಾಡಿತು. ನಂತರ ನವೆಂಬರ್ 19ರಂದು ರಾಂಚಿ ಕ್ರಿಕೆಟ್ ಕ್ರೀಡಾಂಗಣದಲ್ಲಿ ನಡೆದ ಭಾರತ ಮತ್ತು ನ್ಯೂಜಿಲೆಂಡ್ ತಂಡಗಳ ನಡುವಿನ ದ್ವಿತೀಯ ಟಿ ಟ್ವೆಂಟಿ ಪಂದ್ಯದಲ್ಲಿ ನ್ಯೂಜಿಲೆಂಡ್ ವಿರುದ್ಧ ಟೀಮ್ ಇಂಡಿಯಾ 7 ವಿಕೆಟ್‍ಗಳ ಜಯವನ್ನು ಸಾಧಿಸುವ ಮೂಲಕ ಸತತ ಎರಡನೇ ಗೆಲುವು ಪಡೆದುಕೊಂಡಿತು.

ಹಾಗೂ ಅಂತಿಮವಾಗಿ ಭಾರತ ಮತ್ತು ನ್ಯೂಜಿಲೆಂಡ್ ತಂಡಗಳ ನಡುವೆ ಕೋಲ್ಕತಾದ ಈಡನ್ ಗಾರ್ಡನ್ಸ್ ಕ್ರಿಕೆಟ್ ಕ್ರೀಡಾಂಗಣದಲ್ಲಿ ನಡೆದ ತೃತೀಯ ಟಿ ಟ್ವೆಂಟಿ ಪಂದ್ಯದಲ್ಲಿ ಭಾರತ ನ್ಯೂಜಿಲೆಂಡ್ ವಿರುದ್ಧ 73 ರನ್‌ಗಳ ಭರ್ಜರಿ ಜಯವನ್ನು ಸಾಧಿಸಿತು. ಹೀಗೆ ನ್ಯೂಜಿಲೆಂಡ್ ವಿರುದ್ಧದ ಟಿ ಟ್ವೆಂಟಿ ಸರಣಿಯನ್ನು ಸಂಪೂರ್ಣವಾಗಿ ಕೈ ವಶ ಪಡಿಸಿಕೊಂಡು ಟಿ ಟ್ವೆಂಟಿ ವಿಶ್ವಕಪ್ ಸೋಲಿನ ಪ್ರತೀಕಾರವನ್ನು ತೀರಿಸಿಕೊಂಡಿರುವ ಟೀಮ್ ಇಂಡಿಯಾ ಇದೀಗ ಇದೇ ವರ್ಷ ಇಂಗ್ಲೆಂಡ್ ನೆಲದಲ್ಲಿ ನಡೆದ ವಿಶ್ವ ಟೆಸ್ಟ್ ಚಾಂಪಿಯನ್‍ಶಿಪ್ ಫೈನಲ್ ಪಂದ್ಯದಲ್ಲಿ ನ್ಯೂಜಿಲೆಂಡ್ ವಿರುದ್ಧ ಸೋತು ಟ್ರೋಫಿ ಗೆಲ್ಲುವ ಕನಸನ್ನು ಕೈ ಚೆಲ್ಲಿದ್ದ ಪ್ರತೀಕಾರವನ್ನು ತೀರಿಸಿಕೊಳ್ಳುವ ಹಂಬಲದಲ್ಲಿದೆ.

ಭಾರತ ಮತ್ತು ನ್ಯೂಜಿಲೆಂಡ್ ತಂಡಗಳ ನಡುವಿನ 2 ಪಂದ್ಯಗಳ ಟೆಸ್ಟ್ ಸರಣಿಯ ಚೊಚ್ಚಲ ಪಂದ್ಯ ನವೆಂಬರ್‌ 25ರಂದು ಆರಂಭವಾಗಲಿದ್ದು ಕಾನ್ಪುರ ಕ್ರಿಕೆಟ್ ಕ್ರೀಡಾಂಗಣದಲ್ಲಿ ನಡೆಯಲಿದೆ. ಈ ಪಂದ್ಯದಲ್ಲಿ ವಿರಾಟ್ ಕೊಹ್ಲಿ ವಿಶ್ರಾಂತಿ ಪಡೆಯಲಿರುವ ಕಾರಣದಿಂದಾಗಿ ತಂಡವನ್ನು ಅಜಿಂಕ್ಯ ರಹಾನೆ ಮುನ್ನಡೆಸಲಿದ್ದಾರೆ. ಹಾಗೂ 2 ಪಂದ್ಯಗಳ ಟೆಸ್ಟ್ ಸರಣಿಯಿಂದ ರೋಹಿತ್ ಶರ್ಮ ಮತ್ತು ರಿಷಭ್ ಪಂತ್ ಸಂಪೂರ್ಣವಾಗಿ ಹೊರಗುಳಿಯಲಿದ್ದಾರೆ.

ಧನಶ್ರೀ ನಿರ್ದೇಶನದಲ್ಲಿ ಎಬಿಡಿ, ಕೊಹ್ಲಿ ನಟನೆ; ಹೊರಬಿತ್ತು ಎಬಿಡಿ ಆರ್‌ಸಿಬಿಯಲ್ಲೇ ಉಳಿದುಕೊಳ್ಳುವ ಸುಳಿವು!ಧನಶ್ರೀ ನಿರ್ದೇಶನದಲ್ಲಿ ಎಬಿಡಿ, ಕೊಹ್ಲಿ ನಟನೆ; ಹೊರಬಿತ್ತು ಎಬಿಡಿ ಆರ್‌ಸಿಬಿಯಲ್ಲೇ ಉಳಿದುಕೊಳ್ಳುವ ಸುಳಿವು!

ಹೌದು, ಹಲವಾರು ತಿಂಗಳುಗಳಿಂದ ಸತತವಾಗಿ ಕ್ರಿಕೆಟ್ ಆಡುತ್ತಾ ಬಂದಿದ್ದ ಭಾರತದ ಹಲವಾರು ಕ್ರಿಕೆಟಿಗರಿಗೆ ನ್ಯೂಜಿಲೆಂಡ್‌ ವಿರುದ್ಧದ ಟೆಸ್ಟ್ ಸರಣಿಯಿಂದ ಹೊರಗುಳಿಯುವ ಮೂಲಕ ವಿಶ್ರಾಂತಿ ತೆಗೆದುಕೊಳ್ಳಲು ಬಿಸಿಸಿಐ ಅನುಮತಿ ನೀಡಿದೆ. ಹೀಗಾಗಿಯೇ ವಿರಾಟ್ ಕೊಹ್ಲಿ ಮತ್ತು ರೋಹಿತ್ ಶರ್ಮಾ ರೀತಿಯ ಪ್ರಮುಖ ಆಟಗಾರರೇ ಟೆಸ್ಟ್‌ಗಳಿಂದ ಹೊರಗುಳಿದು ವಿಶ್ರಾಂತಿ ಪಡೆಯುತ್ತಿದ್ದಾರೆ.

ಹಲಾಲ್' ಮಾಂಸ ಅಂದರೆ ಏನು ? | Oneindia Kannada

ಹೀಗೆ ಟೀಮ್ ಇಂಡಿಯಾ ಆಟಗಾರರು ಟೆಸ್ಟ್ ಸರಣಿಯಿಂದ ಹೊರಗುಳಿದು ವಿಶ್ರಾಂತಿ ತೆಗೆದುಕೊಳ್ಳುತ್ತಿರುವುದರ ಕುರಿತು ನ್ಯೂಜಿಲೆಂಡ್‌ ತಂಡದ ಮಾಜಿ ಕ್ರಿಕೆಟಿಗ ಇಯಾನ್ ಸ್ಮಿತ್‌ ಮಾತನಾಡಿದ್ದು ಬೇಸರ ವ್ಯಕ್ತಪಡಿಸಿದ್ದಾರೆ. "ಟೀಮ್ ಇಂಡಿಯಾ ಟೆಸ್ಟ್ ಪಂದ್ಯಗಳಿಂದ ವಿರಾಟ್ ಕೊಹ್ಲಿ ಮತ್ತು ರೋಹಿತ್ ಶರ್ಮಾ ರೀತಿಯ ದೊಡ್ಡ ಆಟಗಾರರನ್ನೇ ಕೈಬಿಟ್ಟು ವಿಶ್ರಾಂತಿ ನೀಡುತ್ತಿರುವುದು ಕುತೂಹಲ ಕೆರಳಿಸಿದೆ ಮತ್ತು ಬೇಸರವನ್ನೂ ಮೂಡಿಸಿದೆ" ಎಂದು ಇಯಾನ್ ಸ್ಮಿತ್ ಹೇಳಿಕೆ ನೀಡಿದ್ದಾರೆ.

Story first published: Wednesday, November 24, 2021, 10:01 [IST]
Other articles published on Nov 24, 2021
POLLS
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Yes No
Settings X