ಐಪಿಎಲ್ : ಪೊಲಾರ್ಡ್ ಮತ್ತು ರೈನಾ ಹೆಸರಿನಲ್ಲಿದೆ ಈ ವಿಶಿಷ್ಟ ದಾಖಲೆ

ಏಪ್ರಿಲ್ 9ರಂದು ಆರಂಭವಾಗಿದ್ದ 14ನೇ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್ ಮಧ್ಯದಲ್ಲಿಯೇ ಮೊಟಕುಗೊಂಡಿದೆ. ಟೂರ್ನಿಯಲ್ಲಿ ಇದುವರೆಗೂ 29 ಪಂದ್ಯಗಳು ಯಶಸ್ವಿಯಾಗಿ ನಡೆದಿದ್ದು ಕೆಲ ಆಟಗಾರರಲ್ಲಿ ಕೊರೊನಾವೈರಸ್ ಸೋಂಕು ಕಾಣಿಸಿಕೊಂಡ ಕಾರಣ ಬಿಸಿಸಿಐ ಐಪಿಎಲ್ ಟೂರ್ನಿಯನ್ನು ಮುಂದೂಡಿದ್ದು, ಸೆಪ್ಟೆಂಬರ್ ತಿಂಗಳಿನಲ್ಲಿ ಉಳಿದ 31 ಪಂದ್ಯಗಳು ಇಂಗ್ಲೆಂಡ್ ಅಥವಾ ಯುಎಇಯಲ್ಲಿ ನಡೆಯಲಿವೆ ಎಂಬ ಸುದ್ದಿ ಹರಿದಾಡುತ್ತಿದೆ.
ಅರ್ಧಕ್ಕೆ ಮೊಟಕುಗೊಂಡಿರುವ ಪ್ರಸ್ತುತ ಐಪಿಎಲ್ ಟೂರ್ನಿಯಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ತಂಡದ ಆಟಗಾರ ಸುರೇಶ್ ರೈನಾ ಮತ್ತು ಮುಂಬೈ ಇಂಡಿಯನ್ಸ್ ತಂಡದ ಆಟಗಾರ ಕೀರನ್ ಪೊಲಾರ್ಡ್ ಉತ್ತಮ ಪ್ರದರ್ಶನವನ್ನು ನೀಡಿದರು. ಈ ಇಬ್ಬರೂ ಸಹ ಟಿ ಟ್ವೆಂಟಿ ಸ್ಪೆಷಲಿಸ್ಟ್ ಆಟಗಾರರಾಗಿದ್ದು ಐಪಿಎಲ್ ಇತಿಹಾಸದಲ್ಲಿ ತಮ್ಮದೇ ಆದ ವಿಶಿಷ್ಟ ದಾಖಲೆಗಳು ಮತ್ತು ಮೈಲಿಗಲ್ಲುಗಳನ್ನು ಹೊಂದಿದ್ದಾರೆ.
ಸುರೇಶ್ ರೈನಾ ಮತ್ತು ಕೀರನ್ ಪೊಲಾರ್ಡ್ ಇಬ್ಬರೂ ಸಹ ಐಪಿಎಲ್‌ನ ವಿಶಿಷ್ಟ ದಾಖಲೆಯೊಂದನ್ನು ಸಮನಾಗಿ ಹಂಚಿಕೊಂಡಿದ್ದಾರೆ. ಹೌದು ಐಪಿಎಲ್‌ನ ಪ್ಲೇ ಆಫ್ ಮತ್ತು ಫೈನಲ್ ಪಂದ್ಯಗಳಲ್ಲಿ ಅತಿಹೆಚ್ಚು ಪಂದ್ಯ ಶ್ರೇಷ್ಠ ಪ್ರಶಸ್ತಿಗಳನ್ನು ಪಡೆದುಕೊಂಡ ಆಟಗಾರರು ಎಂಬ ಕೀರ್ತಿಗೆ ಸುರೇಶ್ ರೈನಾ ಮತ್ತು ಕೀರನ್ ಪೊಲಾರ್ಡ್ ಪಾತ್ರರಾಗಿದ್ದಾರೆ. ಐಪಿಎಲ್‌ನ ಫೈನಲ್ ಹಾಗೂ ಪ್ಲೇ ಆಫ್ ಪಂದ್ಯಗಳಲ್ಲಿ ಇದುವರೆಗೂ ಸುರೇಶ್ ರೈನಾ ಮತ್ತು ಕೀರನ್ ಪೊಲಾರ್ಡ್ ತಲಾ 3 ಪಂದ್ಯ ಶ್ರೇಷ್ಠ ಪ್ರಶಸ್ತಿಗಳನ್ನು ಪಡೆದುಕೊಳ್ಳುವುದರ ಮೂಲಕ ಈ ದಾಖಲೆಯನ್ನು ತಮ್ಮ ಹೆಸರುಗಳಲ್ಲಿ ಹೊಂದಿದ್ದಾರೆ.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications