ಇಂಡಿಯನ್ ಪ್ರೀಮಿಯರ್ ಲೀಗ್ ( ಐಪಿಎಲ್) 2025ರ ಮೆಗಾ ಹರಾಜು ಪ್ರಕ್ರಿಯೆಗೆ ಕ್ಷಣಗಣನೆ ಆರಂಭವಾಗಿದೆ. ಆಟಗಾರರ ಹರಾಜು ಪ್ರಕ್ರಿಯೆಯು ನವೆಂಬರ್ 24 ಮತ್ತು 25 ರಂದು ನಡೆಯಲಿದೆ. ಈ ಬಾರಿ ಐಪಿಎಲ್ ಮೆಗಾ ಹರಾಜಿನಲ್ಲಿ ಹೊಸ ಆಟಗಾರರು ಕಾಣಿಸಿಕೊಳ್ಳಲಿದ್ದಾರೆ. ಅಲ್ಲದೆ, ಮೆಗಾ ಹರಾಜಿನಲ್ಲಿ ಸ್ಟಾರ್ ಆಟಗಾರರು ಕೂಡ ಅದೃಷ್ಟ ಪರೀಕ್ಷೆಗೆ ಇಳಿದಿದ್ದಾರೆ. ಹೀಗಾಗಿ ಯಾವ ಆಟಗಾರರು ಯಾವ ತಂಡಕ್ಕೆ ಸೇರುತ್ತಾರೆ ಎಂಬ ಕುತೂಹಲ ಅಭಿಮಾನಿಗಳಲ್ಲಿ ಮೂಡಿದೆ.
ಐಪಿಎಲ್ 2025ರ ಮೆಗಾ ಹರಾಜು ಪ್ರಕ್ರಿಯೆಯಲ್ಲಿ ಹೊಸ ಆಟಗಾರರಿಗೆ ಅದೃಷ್ಟ ಖುಲಾಯಿಸುವ ಸಾಧ್ಯತೆ ಇದೆ. ಅಂತಹ ಟಾಪ್ ಆಟಗಾರರನ್ನು ಬಿಡ್ ಮಾಡಲು ಫ್ರಾಂಚೈಸಿಗಳು ಸಜ್ಜಾಗಿವೆ.

ರಿಷಬ್ ಪಂತ್: ಈ ಬಾರಿಯ ಹರಾಜಿನಲ್ಲಿ ಅತಿ ಹೆಚ್ಚು ಮೊತ್ತಕ್ಕೆ ಬಿಡ್ ಆಗುವ ಆಟಗಾರ ಎಂದರೆ ರಿಷಬ್ ಪಂತ್. ಪಂಜಾಬ್ ಕಿಂಗ್ಸ್, ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಚೆನ್ನೈ ಸೂಪರ್ ಕಿಂಗ್ಸ್ ಸೇರಿದಂತೆ ಹಲವು ಫ್ರಾಂಚೈಸಿಗಳು ಪಂತ್ ಅವರನ್ನು ಬಿಡ್ ಮಾಡಲು ತಯಾರಾಗಿವೆ. ವಿಕೆಟ್ ಕೀಪರ್ ಮತ್ತು ಬ್ಯಾಟರ್ ಆಗಿರುವ ರಿಷಬ್ ಪಂತ್ ನಾಯಕನಾಗಿ ತಂಡವನ್ನು ಮುನ್ನಡೆಸುವ ಸಾಮರ್ಥ್ಯ ಹೊಂದಿದ್ದಾರೆ. ಆರ್‌ಸಿಬಿ ಸಿಎಸ್‌ಕೆ ಮತ್ತು ಪಂಜಾಬ್ ತಂಡಗಳು ನಾಯಕನ ಹುಡುಕಾಟದಲ್ಲಿ ಇವೆ. ಹೀಗಾಗಿ ಪಂತ್ ನಾಯಕತ್ವದ ಗುಣಗಳನ್ನು ಹೊಂದಿರುವುದರಿಂದ ಈ ಮೂರು ತಂಡಗಳಿಗೆ ಬಹುಮುಖ್ಯ ಆಟಗಾರನಾಗಿದ್ದಾರೆ. ಈ ಕಾರಣದಿಂದಾಗಿ ಪಂತ್ ಮೇಲೆ ಸಾಕಷ್ಟು ಹಣದ ಸುರಿಮಳೆ ಸುರಿಯುವ ಸಾಧ್ಯತೆ ಇದೆ. ಪಂತ್ ಅವರ ಮೂಲ ಬೆಲೆ 2 ಕೋಟಿ ರೂ.
ಶ್ರೇಯಸ್ ಅಯ್ಯರ್: ಹಾಲಿ ಚಾಂಪಿಯ ನಾಯಕ ಶ್ರೇಯ ಸೈಯದ್ ಕೂಡ ನೆಚ್ಚಿನ ಮೊತ್ತಕ್ಕೆ ಬಿಡಾಗುವ ಸಾಧ್ಯತೆ ಇದೆ. ಕಳೆದ ಆವೃತ್ತಿಯಲ್ಲಿ ಕೊಲ್ಕತ್ತಾ ನೈಟ್ ರೈಡರ್ಸ್ (ಕೆಕೆಆರ್) ನಾಯಕರಾಗಿದ್ದ ಅಯ್ಯರ್ ತಂಡವನ್ನು ಚಾಂಪಿಯನ್ ಮಾಡುವಲ್ಲಿ ಯಶಸ್ವಿಯಾಗಿದ್ದರು. ಅಯ್ಯರ್ ಅವರ ಮೂಲ ಬೆಲೆಯೂ 2 ಕೋಟಿ ರೂ. ಆಗಿದ್ದು, 20 ಕೋಟಿ ರೂ. ಗೂ ಹೆಚ್ಚು ಮೊತ್ತಕ್ಕೆ ಬಿಡ್ ಆಗಬಹುದು.
ಕೆಎಲ್ ರಾಹುಲ್: ಐಪಿಎಲ್ 2025ರ ಪ್ರಕ್ರಿಯೆಗೆ ಕೆ ಎಲ್ ರಾಹುಲ್ ಲಕ್ನೋ ಸೂಪರ್ ಜೆಂಟ್ಸ್ ತಂಡವನ್ನು ತೊರೆದು ಬಂದಿದ್ದಾರೆ. ವಿಕೆಟ್ ಕೀಪರ್ ಮತ್ತು ನಾಯಕತ್ವದ ಜವಾಬ್ದಾರಿಯನ್ನು ನಿಭಾಯಿಸುವ ಸಾಮರ್ಥ್ಯ ಹೊಂದಿರುವ ರಾಹುಲ್ ಮೇಲೆ ಆರ್‌ಸಿಬಿ ಕಣ್ಣಿಟ್ಟಿದೆ. ರಾಹುಲ್ ಮೂಲ ಬೆಲೆ 2 ಕೋಟಿ ರೂ.
ಮಿಚೆಲ್ ಸ್ಟಾರ್ಕ್: ಕಳೆದ ಐಪಿಎಲ್ ಹರಾಜಿನಲ್ಲಿ 24.50 ಕೋಟಿ ರೂ.ಗೆ ಬಿಡ್ ಆಗಿದ್ದ ಆಸ್ಟ್ರೇಲಿಯಾದ ಸ್ಟಾರ್ ವೇಗದ ಬೌಲರ್ ಮಿಚೆಲ್ ಸ್ಟಾಕ್ ದಾಖಲೆ ಬರೆದಿದ್ದರು. ಆದರೆ ಐಪಿಎಲ್ 25 ರ ಟೂರ್ನಿಗೆ ಕೆಕೆಆರ್ ಅವರನ್ನು ಉಳಿಸಿಕೊಂಡಿಲ್ಲ ಹೀಗಾಗಿ ಈ ಬಾರಿಯ ಐಪಿಎಲ್ ಮೆಗಾ ಹರಾಜಿನಲ್ಲಿ ಬಿಡ್ ಆಗಬಹುದು. ಅವರ ಮೂಲ ಬೆಲೆ ಕೂಡ 2 ಕೋಟಿ ರೂ.
ಯುಜ್ವೇಂದ್ರ ಚಹಾಲ್: ಭಾರತದ ಸ್ಟಾರ್ ಸ್ಪಿನ್ನರ್ ಯುಜ್ವೇಂದ್ರ ಚಹಾಲ್ ಈ ಬಾರಿ ಐಪಿಎಲ್ ಮೆಗಾ ಹರಾಜಿನಲ್ಲಿ ಇತಿಹಾಸ ಸೃಷ್ಟಿಸುವ ಅವಕಾಶವನ್ನು ಹೊಂದಿದ್ದಾರೆ. ಚಹಾಲ್ ತಮ್ಮ ಸ್ಪಿನ್ ಬೌಲಿಂಗ್ ಮೂಲಕ ಎದುರಾಳಿ ತಂಡಗಳನ್ನು ಕಟ್ಟಿ ಹಾಕಿದ್ದಾರೆ. ಕಳೆದ ಋತುವಿನಲ್ಲಿ ರಾಜಸ್ಥಾನ್ ರಾಯಲ್ಸ್ ಪರ ಆಡಿದ್ದ ಚಹಾಲ್ ಹರಾಜಿನಲ್ಲಿ ಕಾಣಿಸಿಕೊಂಡಿದ್ದಾರೆ. ಅವರ ಮೂಲ ಬೆಲೆ 2 ಕೋಟಿ ರೂ.
ಅರ್ಷದೀಪ್ ಸಿಂಗ್: ಪಂಜಾಬ್ ಕಿಂಗ್ಸ್ ಟೀಮ್ ಇಂಡಿಯಾದ ಸ್ಟಾರ್ ವೇಗದ ಬೌಲರ್ ಅರ್ಷದೀಪ್ ಸಿಂಗ್ ಅವರನ್ನು ಕೈ ಬಿಟ್ಟಿರುವುದು ಅಚ್ಚರಿ ಮೂಡಿಸಿದೆ. ಈ ಬಾರಿ ಟೀಮ್ ಇಂಡಿಯಾ ಟಿ20 ವಿಶ್ವಕಪ್ ಗೆಲ್ಲುವಲ್ಲಿ ಅರ್ಷದೀಪ್ ಸಿಂಗ್ ಪ್ರಮುಖ ಪಾತ್ರ ವಹಿಸಿದ್ದರು. ಆದರೆ ಅವರನ್ನ ಪಂಜಾಬ್ ಐಪಿಎಲ್ 25 ರ ಟೂರ್ನಿಗೆ ಉಳಿಸಿಕೊಂಡಿಲ್ಲ. ಬುಮ್ರಾ ನಂತರ ಎರಡನೇ ಪ್ರಮುಖ ಬೌಲರ್ ಎನಿಸಿಕೊಂಡಿರುವ ಅರ್ಷದೀಪ್ ಅವರ ಮೂಲ ಬೆಲೆ 2 ಕೋಟಿ ರೂ.
ಮೊಹಮ್ಮದ್ ಶಮಿ: ಟೀಮ್ ಇಂಡಿಯಾದ ಅನುಭವಿ ವೇಗದ ಬೌಲರ್ ಮೊಹಮ್ಮದ್ ಶಮಿ ಗಾಯದಿಂದ ಚೇತರಿಸಿಕೊಳ್ಳುತ್ತಿದ್ದಾರೆ. ಆದರೆ ಫಿಟ್ನೆಸ್ ಸಮಸ್ಯೆಯಿಂದಾಗಿ ಅವರನ್ನು ಐಪಿಎಲ್ 2025ರ ಟೂರ್ನಿಗೆ ಗುಜರಾತ್ ಟೈಟನ್ಸ್ ತಂಡವು ಉಳಿಸಿಕೊಂಡಿಲ್ಲ. 2023ರ ಏಕದಿನ ವಿಶ್ವಕಪ್ ನಂತರ ಶಮಿ ಮೈದಾನದಲ್ಲಿ ಕಾಣಿಸಿಕೊಂಡಿಲ್ಲ. ಪ್ರಸ್ತುತ ರಾಷ್ಟ್ರೀಯ ಕ್ರಿಕೆಟ್ ಅಕಾಡೆಮಿಯಲ್ಲಿ ತರಬೇತಿ ಪಡೆಯುತ್ತಿರುವ ಶಮಿ ಹರಾಜಿನಲ್ಲಿ ಅದೃಷ್ಟ ಪರೀಕ್ಷೆಗೆ ಇಳಿದಿದ್ದಾರೆ. ಶಮಿ ಮೂಲ ಬೆಲೆ 2 ಕೋಟಿ ರೂ.
ಇಶಾನ್ ಕಿಶನ್: ಈ ಬಾರಿ ಮೆಗಾ ಹರಾಜು ಪ್ರಕ್ರಿಯೆಯಲ್ಲಿರುವ ಮತ್ತೊಬ್ಬ ಅಚ್ಚರಿ ಆಟಗಾರ ಎಂದರೆ ಸ್ಟಾರ್ ವಿಕೆಟ್ ಕೀಪರ್ ಮತ್ತು ಬ್ಯಾಟರ್ ಕಿಶಾನ್ ಕಿಶಾನ್. ಐಪಿಎಲ್ 2022 ಹರಾಜಿನಲ್ಲಿ ಅತಿ ಹೆಚ್ಚು ಮೊತ್ತಕ್ಕೆ ಬಿಡ್ ಆದ ದಾಖಲೆಯನ್ನು ಕಿಶನ್ ಹೊಂದಿದ್ದಾರೆ. ಅವರನ್ನು ಮುಂಬೈ ಇಂಡಿಯನ್ಸ್ 15.25 ಕೋಟಿ ರೂ.ಗೆ ಖರೀದಿಸಿತ್ತು. ಆದರೆ ಈ ಬಾರಿ ಮುಂಬೈ ಇಶಾನ್ ಕಿಶನ್ ಅವರನ್ನು ಕೈಬಿಟ್ಟಿದೆ. ಅವರ ಮೂಲ ಬೆಲೆ 2 ಕೋಟಿ ರೂ.
ಜೋಸ್ ಬಟ್ಲರ್: ರಾಜಸ್ಥಾನ ರಾಯಲ್ಸ್ ಸ್ಟಾರ್ ವಿಕೆಟ್ ಕೀಪರ್ ಮತ್ತು ಸ್ಫೋಟಕ ಬ್ಯಾಟರ್ ಜೋಸ್ ಬಟ್ಲರ್ ಅವರನ್ನು ಮೆಗಾ ಹರಾಜಿಗೆ ಇಟ್ಟಿದೆ. ಬಟ್ಲರ್ ಐಪಿಎಲ್ ನ ಕಳೆದೆರಡು ಆವೃತ್ತಿಗಳಲ್ಲಿ ಅದ್ಭುತ ಪ್ರದರ್ಶನ ನೀಡಿದ್ದಾರೆ. ಇದರ ಹೊರತಾಗಿಯೂ ರಾಜಸ್ಥಾನ್ ಅವರನ್ನು ಉಳಿಸಿಕೊಳ್ಳುವಲ್ಲಿ ವಿಫಲವಾಗಿದೆ. ಬಟ್ಲರ್ ಮೂಲ ಬೆಲೆ 2 ಕೋಟಿ ರೂ.
ರಚಿನ್ ರವೀಂದ್ರ: ಭಾರತ ವಿರುದ್ಧದ ಟೆಸ್ಟ್ ಸರಣಿಯಲ್ಲಿ ನ್ಯೂಜಿಲೆಂಡ್ ಪರ ಮಿಂಚಿದ್ದ ರಚಿನ್ ರವೀಂದ್ರ ಈ ಬಾರಿ ಐಪಿಎಲ್ ಮೆಗಾ ಹರಾಜಿನಲ್ಲಿ ಕಾಣಿಸಿಕೊಳ್ಳಲಿದ್ದಾರೆ. ಅವರು ಕಳೆದ ಆವೃತ್ತಿಯಲ್ಲಿ ಚೆನ್ನೈ ಸೂಪರ್ ಕಿಂಗ್ಸ್ (ಸಿಎಸ್‌ಕೆ) ಪರ ಆಡಿದ್ದರು. ಈ ಬಾರಿ ಅವರನ್ನು ಸಿಎಸ್‌ಕೆ ಕೈಬಿಟ್ಟಿದೆ. ರಚಿನ್ ಐಪಿಎಲ್‌ನಲ್ಲಿ ಇದುವರೆಗೆ ಒಟ್ಟು 10 ಪಂದ್ಯಗಳನ್ನು ಆಡಿದ್ದು, 222 ರನ್ ಗಳಿಸಿದ್ದಾರೆ. ರಚಿನ್ ಮೂಲ ಬೆಲೆ 2 ಕೋಟಿ ರೂ.