PM Modi Congratulates India: ತವರಿನಲ್ಲಿ ಟಿ20 ವಿಶ್ವಕಪ್ ಗೆದ್ದ ಭಾರತ ತಂಡಕ್ಕೆ ಮೋದಿ ಅಭಿನಂದನೆ
ಅಹಮದಾಬಾದ್ ಮೈದಾನದಲ್ಲಿ ಭರ್ಜರಿ ಪ್ರದರ್ಶನ ನೀಡಿ ಇತಿಹಾಸ ನಿರ್ಮಿಸಿದ ಭಾರತ ತಂಡದ ಸಾಧನೆಯನ್ನು ಪ್ರಧಾನಿ ನರೇಂದ್ರ ಮೋದಿ ಶ್ಲಾಘಿಸಿದ್ದಾರೆ. ಭಾನುವಾರ ನಡೆದ ಫೈನಲ್ ಪಂದ್ಯದಲ್ಲಿ ಭಾರತ 96 ರನ್‌ಗಳಿಂದ ಗೆದ್ದು ಇತಿಹಾಸ ನಿರ್ಮಿಸಿದೆ.
ಭಾನುವಾರ ನಡೆದ ಫೈನಲ್ ಪಂದ್ಯದಲ್ಲಿ ಟಾಸ್ ಸೋತರೂ ಮೊದಲು ಬ್ಯಾಟ್ ಮಾಡಿದ ಭಾರತ 20 ಓವರ್‌ಗಳಲ್ಲಿ 5 ವಿಕೆಟ್‌ಗೆ 255 ರನ್ ಸೇರಿಸಿತು. ಈ ವೇಳೆ ಅಭಿಷೇಕ್ ಶರ್ಮಾ 52, ಇಶಾನ್ ಕಿಶನ್ 54, ಸಂಜು ಸ್ಯಾಮ್ಸನ್ 89 ರನ್ ಬಾರಿಸಿ ತಂಡದ ಗೆಲುವಿನಲ್ಲಿ ಮಿಂಚಿದರು. ಭಾರತ ನೀಡಿದ್ದ ಸವಾಲಿನ ಗುರಿಯನ್ನು ಬೆನ್ನಟ್ಟಿದ ನ್ಯೂಜಿಲೆಂಡ್ ತಂಡ ಆರಂಭ ಕಳಪೆಯಾಗಿತ್ತು. ಭಾರತ ಪವರ್ ಪ್ಲೇನಲ್ಲಿ 3 ವಿಕೆಟ್ ಪಡೆಯಿತು. ನ್ಯೂಜಿಲೆಂಡ್ ತಂಡದ ಪರ ಟೀಮ್ ಸಿಫರ್ಟ್ 52, ಮಿಚೆಲ್ ಸ್ಯಾಂಟ್ನರ್ 43 ರನ್ ಸಿಡಿಸಿ ಸೋಲಿನಲ್ಲಿ ಮಿಂಚಿದರು.

ಅಹಮದಾಬಾದ್‌ನಲ್ಲಿ ಟೀಮ್ ಇಂಡಿಯಾ ಗೆಲುವು ಸಾಧಿಸುತ್ತಿದ್ದಂತೆ ನರೇಂದ್ರ ಮೋದಿ ಸಾಮಾಜಿಕ ತಾಣದಲ್ಲಿ ತಂಡಕ್ಕೆ ಶುಭಾಶಯ ಕೋರಿದರು. ಈ ಗೆಲುವು ತಂಡದ ಆಟಗಾರರ ಸಾಮರ್ಥ್ಯಕ್ಕೆ ಹಿಡಿದ ಕೈಗನ್ನಡಿ. ಈ ಗೆಲುವು ದೃಢನಿಶ್ಚಯ ಮತ್ತು ತಂಡದ ಕೆಲಸವನ್ನು ಪ್ರತಿಬಿಂಬಿಸುತ್ತದೆ. ತಂಡ ಟೂರ್ನಿಯುದ್ದಕ್ಕೂ ಅಮೋಘ ಪ್ರದರ್ಶನ ನೀಡಿ ಜಯ ಸಾಧಿಸಿದೆ ಎಂದು ಬರೆದುಕೊಂಡಿದ್ದಾರೆ.
ಪ್ರಧಾನಿ ನರೇಂದ್ರ ಮೋದಿ ಕ್ರೀಡಾ ಕ್ಷೇತ್ರದಲ್ಲಿ ಅಮೋಘ ಸಾಧನೆ ಮಾಡಿದಾಗ ಸಾಮಾಜಿಕ ತಾಣದಲ್ಲಿ ಅಭಿನಂದಿಸುತ್ತಾರೆ. ಅಲ್ಲದೆ ಕ್ರೀಡಾ ಪಟುಗಳು ಪದಕ ವಂಚಿತರಾದಾಗಲೂ ಅವರ ಬೆನ್ನಿಗೆ ನಿಂತು ಪ್ರೋತ್ಸಾಹವನ್ನು ನೀಡುತ್ತಾರೆ. 2023ರ ಏಕದಿನ ವಿಶ್ವಕಪ್‌ನಲ್ಲಿ ಭಾರತ ತಂಡ ಫೈನಲ್ ಪಂದ್ಯದಲ್ಲಿ ಸೋಲು ಕಂಡಾಗ ಮೋದಿ ಡ್ರೆಸ್ಸಿಂಗ್ ರೂಮ್‌ಗೆ ಆಟಗಾರರನ್ನು ಹುರಿದುಂಬಿಸಿದ್ದರು.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications