ಚೆನ್ನೈ-ಹೈದರಾಬಾದ್ ಪಂದ್ಯಕ್ಕೆ ಬೆಟ್ಟಿಂಗ್, ನಾಲ್ವರ ಬಂಧನ

ಕೋಲ್ಕೊತಾ, ಏಪ್ರಿಲ್ 24: ಚೆನ್ನೈ ಸೂಪರ್ ಕಿಂಗ್ಸ್ ಮತ್ತು ಸನ್ ರೈಸರ್ಸ್ ಹೈದರಾಬಾದ್ ನಡುವೆ ಚೆನ್ನೈನಲ್ಲಿ ಮಂಗಳವಾರ ನಡೆದ ಐಪಿಎಲ್ ಪಂದ್ಯದ ಮೇಲೆ ಬೆಟ್ಟಿಂಗ್ ನಡೆಸುತ್ತಿದ್ದ ನಾಲ್ವರನ್ನು ಇಲ್ಲಿನ ಸ್ಥಳೀಯ ಪೊಲೀಸರು ಬಂಧಿಸಿದ್ದಾರೆ.
ಕಾನೂನು ಬಾಹೀರ ಬೆಟ್ಟಿಂಗ್‌ನಲ್ಲಿ ನಿರತರಾಗಿದ್ದ ನಾಲ್ವರನ್ನು ಇಲ್ಲಿನ ವಿಐಪಿ ರಸ್ತೆಯಲ್ಲಿ ಬಂಧಿಸಿರುವ ಪೊಲೀಸರು ಬೆಟ್ಟಿಂಗ್‌ಗೆ ಬಳಕೆ ಮಾಡಲಾಗಿದ್ದ ಮೊಬೈಲ್ ಫೋನ್‌ಗಳನ್ನೂ ತಮ್ಮ ವಶಕ್ಕೆ ತೆಗೆದುಕೊಂಡಿದ್ದಾರೆ. 12ನೇ ಆವೃತ್ತಿಯ ಐಪಿಎಲ್ ಟೂರ್ನಿ ವೇಳೆ ಕೋಲ್ಕೊತಾದಲ್ಲಿಎರಡನೇ ಬಾರಿ ಬೆಟ್ಟಿಂಗ್ ಜಾಡು ಹಿಡಿದು ಆರೋಪಿಗಳನ್ನು ಬಂಧಿಸಲಾಗಿದೆ.
ವಿಐಪಿ ರಸ್ತೆಯಲ್ಲಿರುವ ಹೌಸಿಂಗ್ ಕಾಂಪ್ಲೆಕ್ಸ್‌ನಲ್ಲಿ ಸಿಎಸ್‌ಕೆ ಮತ್ತು ಎಸ್‌ಆರ್‌ಎಚ್ ನಡುವಣ ಪಂದ್ಯಕ್ಕೆ ಬೆಟ್ಟಿಂಗ್ ನಡೆಯುತ್ತಿರುವ ಖಚಿತ ಮಾಹಿತಿ ಆಧರಿಸಿ ದಾಳಿ ನಡೆಸಿದ ಪೊಲೀಸರು, ಆನ್-ಲೈನ್ ಮೂಲಕ ಬೆಟ್ಟಿಂಗ್ ನಡೆಸಲು ಬಳಕೆ ಮಾಡಲಾಗುತ್ತಿದ್ದ 30 ಮೊಬೈಲ್ ಫೋನ್‌ಗಳು ಮತ್ತು ಲ್ಯಾಪ್‌ಟಾಪ್‌ಗಳನ್ನು ವಶಯಕ್ಕೆ ಪಡೆದಿದ್ದಾರೆ.
ಇದಕ್ಕೂ ಮುನ್ನ ಏಪ್ರಿಲ್ 19ರಂದು ಮೈದಾನ್ ಏರಿಯಾದಲ್ಲಿ ನಡೆದ ದಾಳಿಯಲ್ಲಿ 7 ಮಂದಿ ಆರೋಪಿಗಳನ್ನು ಕೋಲ್ಕೊತಾ ಪೊಲೀಸರು ಬಂಧಿಸಿದ್ದರು. ಬಂಧಿತರು ಮಹಾರಾಷ್ಟ್ರ ಮತ್ತು ಮಧ್ಯಪ್ರದೇಶ ಮೂಲದವರಾಗಿದ್ದಾರೆ.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications