IND vs BAN: ಬಾಂಗ್ಲಾದೇಶ ಟೆಸ್ಟ್ ಸರಣಿಗೆ ಸಂಭಾವ್ಯ ಭಾರತ ತಂಡ
ಭಾರತ ತಂಡ ಸೆಪ್ಟೆಂಬರ್ 19 ರಿಂದ ಬಾಂಗ್ಲಾದೇಶ ವಿರುದ್ಧ ಎರಡು ಪಂದ್ಯಗಳ ಟೆಸ್ಟ್ ಸರಣಿಯನ್ನು ಆಡಲಿದೆ. 2024ರ ಮಾರ್ಚ್ ತಿಂಗಳಲ್ಲಿ ಇಂಗ್ಲೆಂಡ್ ವಿರುದ್ಧ ಟೀಮ್ ಇಂಡಿಯಾ ಕೊನೆಯ ಟೆಸ್ಟ್ ಸರಣಿ ಆಡಿತ್ತು. ಇದೀಗ ಆರು ತಿಂಗಳ ನಂತರ ಟೀಮ್ ಇಂಡಿಯಾ ರೆಡ್ ಬಾಲ್ ಕ್ರಿಕೆಟ್‌ಗೆ ಮರಳಲಿದೆ.
ಬಾಂಗ್ಲಾ ವಿರುದ್ಧ ಟೆಸ್ಟ್ ಸರಣಿಗೆ ಭಾರತ ತಂಡವನ್ನು ಮುಂದಿನ ವಾರ ಪ್ರಕಟಿಸುವ ಸಾಧ್ಯತೆ ಹೆಚ್ಚಿದೆ. ಸ್ಟಾರ್ ಅನುಭವಿ ಮತ್ತು ಯುವ ಆಟಗಾರರು ತಂಡಕ್ಕೆ ಮರಳು ಬರುವ ನಿರೀಕ್ಷೆಯಿದೆ. ಜೊತೆಗೆ ಈ ಬಾರಿ ತವರಿನಲ್ಲಿರುವ ಟೆಸ್ಟ್ ಸರಣಿಗೆ ಬಿಸಿಸಿಐ ಆಯ್ಕೆದಾರರು ಒಂದೆರಡು ಹೊಸ ಪ್ರತಿಭೆಗಳಿಗೆ ಅವಕಾಶ ನೀಡುವ ಸಾಧ್ಯತೆಯಿದೆ.

ಟೀಮ್ ಇಂಡಿಯಾದ ಮುಖ್ಯ ಕೋಚ್ ಆದ ನಂತರ ಗೌತಮ್ ಗಂಭೀರ್ ಅವರಿಗೆ ಇದು ಮೊದಲ ಟೆಸ್ಟ್ ಸರಣಿಯಾಗಿದೆ. ಕಳೆದ ತಿಂಗಳು ಶ್ರೀಲಂಕಾ ಪ್ರವಾಸಕ್ಕೂ ಮುನ್ನ ಗಂಭೀರ್ ಅವರನ್ನು ಟೀಮ್ ಇಂಡಿಯಾದ ಮುಖ್ಯ ಕೋಚ್ ಆಗಿ ನೇಮಿಸಲಾಗಿತ್ತು.
ಟೀಮ್ ಇಂಡಿಯಾ ಯಾವಾಗ ಪ್ರಕಟ?
ಬಾಂಗ್ಲಾದೇಶ ವಿರುದ್ಧದ ಟೆಸ್ಟ್ ಸರಣಿಗೆ ಭಾರತ ತಂಡದಲ್ಲಿ ಯಾವೆಲ್ಲಾ ಆಟಗಾರರು ಸ್ಥಾನ ಪಡೆಯಲಿದ್ದಾರೆ ಎಂಬುದು ಕ್ರಿಕೆಟ್ ಅಭಿಮಾನಿಗಳಲ್ಲಿ ಕುತೂಹಲ ಮೂಡಿಸಿದೆ. ಮಾಧ್ಯಮ ವರದಿಗಳ ಪ್ರಕಾರ, ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ (ಬಿಸಿಸಿಐ) ಮುಂದಿನ ವಾರ ಭಾರತ ತಂಡವನ್ನು ಪ್ರಕಟಿಸಲಿದೆ. ಜನವರಿ ತಿಂಗಳ ನಂತರ ಟೆಸ್ಟ್ ಕ್ರಿಕೆಟ್‌ಗೆ ಮರಳಲಿರುವ ಸ್ಟಾರ್ ಬ್ಯಾಟರ್ ವಿರಾಟ್ ಕೊಹ್ಲಿಗೆ ಈ ಸರಣಿ ಮಹತ್ವದ್ದಾಗಿದೆ. ವರ್ಷದ ಆರಂಭದಲ್ಲಿ ಇಂಗ್ಲೆಂಡ್ ವಿರುದ್ಧದ ಟೆಸ್ಟ್ ಸರಣಿಯನ್ನೂ ಅವರು ಆಡಿರಲಿಲ್ಲ. ತಮ್ಮ ಎರಡನೇ ಮಗುವಿನ ಜನನ ಸಮಯದಲ್ಲಿ ಅವರು ಸರಣಿಯಿಂದ ಹಿಂದೆ ಸರಿಯಲು ನಿರ್ಧರಿಸಿದ್ದರು.
ಸ್ಪೋಟಕ ಟೆಸ್ಟ್ ಬ್ಯಾಟರ್ ವಾಪಸ್
ಕಾರು ಅಪಘಾತದ ನಂತರ ಟೆಸ್ಟ್ ಕ್ರಿಕೆಟ್‌ನಿಂದ ರಿಷಬ್ ಪಂತ್ ದೂರ ಉಳಿದಿದ್ದಾರೆ. ಈಗ ಬಾಂಗ್ಲಾದೇಶ ವಿರುದ್ಧದ ಟೆಸ್ಟ್ ಸರಣಿಗೆ ಟೀಮ್ ಇಂಡಿಯಾಗೆ ಮರಳುವುದು ಬಹುತೇಕ ಖಚಿತವಾಗಿದೆ. ರಿಷಬ್ ಪಂತ್ ಕೊನೆಯ ಬಾರಿಗೆ 2022ರಲ್ಲಿ ಬಾಂಗ್ಲಾದೇಶ ವಿರುದ್ಧ ಕೊನೆಯ ಟೆಸ್ಟ್ ಸರಣಿ ಆಡಿದ್ದರು. ಇತ್ತೀಚೆಗೆ ಭಾರತ ಟಿ 20 ವಿಶ್ವಕಪ್ ಗೆಲ್ಲುವಲ್ಲಿ ಪ್ರಮುಖ ಪಾತ್ರ ವಹಿಸಿದ್ದರು.
ಬಾಂಗ್ಲಾದೇಶ ಟೆಸ್ಟ್ ಸರಣಿಗೆ ಸಂಭಾವ್ಯ ಭಾರತ ತಂಡ
ರೋಹಿತ್ ಶರ್ಮಾ (ನಾಯಕ), ಯಶಸ್ವಿ ಜೈಸ್ವಾಲ್, ವಿರಾಟ್ ಕೊಹ್ಲಿ, ಶುಭಮನ್ ಗಿಲ್, ರಿಷಬ್ ಪಂತ್, ಕೆಎಲ್ ರಾಹುಲ್, ಧುವ್ ಜುರೆಲ್, ಅಕ್ಸರ್ ಪಟೇಲ್, ರವಿಚಂದ್ರನ್ ಆಶ್ವಿನ್, ರವೀಂದ್ರ ಜಡೇಜಾ, ಕುಲದೀಪ್ ಯಾದವ್, ಮೊಹಮ್ಮದ್ ಸಿರಾಜ್, ಜಸ್ಪ್ರೀತ್ ಬುಮ್ರಾ, ಆಕಾಶ್ ದೀಪ್, ಅರ್ಷದೀಪ್ ಸಿಂಗ್
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications