For Quick Alerts
ALLOW NOTIFICATIONS  
For Daily Alerts
 

Team India: ಚಾಂಪಿಯನ್ಸ್ ಟ್ರೋಫಿಗೆ ಟೀಮ್ ಇಂಡಿಯಾ ಸಂಭಾವ್ಯ ಪ್ಲೇಯಿಂಗ್-11

ಐಸಿಸಿ 2025ರ ಚಾಂಪಿಯನ್ಸ್ ಟ್ರೋಫಿ ಟೂರ್ನಿಗಾಗಿ ರೋಹಿತ್ ಶರ್ಮಾ ನಾಯಕತ್ವದ 15 ಸದಸ್ಯರ ಟೀಮ್ ಇಂಡಿಯಾವನ್ನು ಘೋಷಿಸಲಾಗಿದೆ. ಇದೀಗ ಟೂರ್ನಿಯಲ್ಲಿ ಉತ್ತಮ ಪ್ರದರ್ಶನದತ್ತ ಎಲ್ಲರ ಕಣ್ಣು ನೆಟ್ಟಿದೆ. ಭಾರತ ಕಳೆದ ವರ್ಷ ಟಿ20 ವಿಶ್ವಕಪ್ ಗೆಲ್ಲುವ ಮೂಲಕ ಅಭಿಮಾನಿಗಳ ನಿರೀಕ್ಷೆಯನ್ನು ಹೆಚ್ಚಿಸಿದೆ. ಕಳೆದ ಕೆಲವು ತಿಂಗಳುಗಳಲ್ಲಿ ಭಾರತ ತಂಡವು ಟೆಸ್ಟ್‌ ಕ್ರಿಕೆಟ್‌ನಲ್ಲಿ ವಿಶೇಷವಾದುದ್ದನ್ನು ಮಾಡಲು ಸಾಧ್ಯವಾಗಲಿಲ್ಲ. ಸತತ ಎರಡು ಟೆಸ್ಟ್ ಸರಣಿಗಳನ್ನು ಕಳೆದುಕೊಂಡಿತ್ತು. ಇದರಿಂದ ಭಾರತ ಚಾಂಪಿಯನ್ಸ್ ಟ್ರೋಫಿ ಗೆಲ್ಲಲು ಸಾಧ್ಯವಿಲ್ಲ ಎಂದು ಹೇಳಲಾಗದು. ರೋಹಿತ್ ಶರ್ಮಾ ಏಕದಿನ ಕ್ರಿಕೆಟ್‌ನಲ್ಲಿಅತ್ಯುತ್ತಮ ನಾಯಕ ಎಂಬುದು ಎಲ್ಲರಿಗೂ ಗೊತ್ತಿರುವ ವಿಚಾರ.

ರೋಹಿತ್ ಶರ್ಮಾ ಭಾರತ ತಂಡವನ್ನು 2023ರ ಏಕದಿನ ವಿಶ್ವಕಪ್‌ನಲ್ಲಿ ಫೈನಲ್‌ಗೆ ಕೊಂಡೊಯ್ದಿದ್ದರು. ಆಸ್ಟ್ರೇಲಿಯಾ ವಿರುದ್ಧದ ಫೈನಲ್‌ನಲ್ಲಿ ಆ ಸೋಲನ್ನು ಇಂದಿಗೂ ಭಾರತೀಯ ಕ್ರಿಕೆಟ್ ಅಭಿಮಾನಿಗಳಿಗೆ ಮರೆಯಲು ಸಾಧ್ಯವಾಗಿಲ್ಲ. ಇದೀ ಏಕದಿನ ಕ್ರಿಕಟ್‌ನ ಎರಡನೇ ಅತಿದೊಡ್ಡ ಐಸಿಸಿ ಟೂರ್ನಿಯನ್ನು ಗೆಲ್ಲುವತ್ತ ಟೀಮ್ ಇಂಡಿಯಾ ಚಿತ್ತ ನೆಟ್ಟಿದೆ.

Possible playing XI of the Indian cricket team for the Champions Trophy 2025

ಇಲ್ಲಿಯವರೆಗೆ ಸೌರವ್ ಗಂಗೂಲಿ ಮತ್ತು ಮಹೇಂದ್ರ ಸಿಂಗ್ ಧೋನಿ ನಾಯಕತ್ವದಲ್ಲಿ ಭಾರತ ಚಾಂಪಿಯನ್ ಆಗಿದೆ. 2002 ರಲ್ಲಿ, ಟೀಮ್ ಇಂಡಿಯಾ ಶ್ರೀಲಂಕಾದೊಂದಿಗೆ ಜಂಟಿ ವಿಜೇತರಾದರು. ಆಗ ಗಂಗೂಲಿ ನಾಯಕರಾಗಿದ್ದರು. 2013 ರಲ್ಲಿ ಧೋನಿ ಇಂಗ್ಲೆಂಡ್ ತಂಡವನ್ನು ಸೋಲಿಸಿ ಭಾರತ ಚಾಂಪಿಯನ್ ಆಗುವುದರಲ್ಲಿ ಪ್ರಮುಖ ಪಾತ್ರವಹಿಸಿದ್ದರು. ಇದೀಗ ರೋಹಿತ್ ಈ ವಿಶೇಷ ಪಟ್ಟಿಗೆ ಸೇರಲು ಸಜ್ಜಾಗಿದ್ದು, ಇದಕ್ಕೆ ಆಡುವ ಹನ್ನೊಂದರ ಬಳಗ ಬಹಳ ಪ್ರಮುಖವಾಗಿದೆ.

ಭಾರತ ತಂಡಕ್ಕೆ ರೋಹಿತ್ ಶರ್ಮಾ ಅದರ ನಾಯಕತ್ವವನ್ನು ವಹಿಸಲಿದ್ದು, ಶುಭಮನ್ ಗಿಲ್ ಉಪನಾಯಕರಾಗಿದ್ದಾರೆ. ಯಶಸ್ವಿ ಜೈಸ್ವಾಲ್ ಮೊದಲ ಬಾರಿಗೆ ಏಕದಿನ ಭಾರತ ತಂಡಕ್ಕೆ ಆಯ್ಕೆಯಾಗಿದ್ದಾರೆ. ಅವರು ಚಾಂಪಿಯನ್ಸ್ ಟ್ರೋಫಿಗೆ ಮೀಸಲು ಆರಂಭಿಕ ಬ್ಯಾಟರ್‌ ಆಗುವ ಸಾಧ್ಯತೆಯಿದೆ. ಹೀಗಾಗಿ ಆಡುವ ಹನ್ನೊಂದರ ಬಳಗದಲ್ಲಿ ಅವಕಾಶ ಪಡೆಯಲು ಕಾಯಬೇಕಾಗಿದೆ.

ವಿರಾಟ್ ಕೊಹ್ಲಿ 3ನೇ ಕ್ರಮಾಂಕದಲ್ಲಿ ಬ್ಯಾಟಿಂಗ್ ಮಾಡಲಿದ್ದಾರೆ. 2023ರ ಏಕದಿನ ವಿಶ್ವಕಪ್ ತಂಡದಂತೆಯೇ ಮಧ್ಯಮ ಕ್ರಮಾಂಕದಲ್ಲಿ ಶ್ರೇಯಸ್ ಅಯ್ಯರ್ ಮತ್ತು ಕೆಎಲ್ ರಾಹುಲ್ ಸ್ಥಾನ ಪಡೆದಿದ್ದಾರೆ. ಆಲ್‌ರೌಂಡರ್‌ಗಳಾದ ಹಾರ್ದಿಕ್ ಪಾಂಡ್ಯ, ರವೀಂದ್ರ ಜಡೇಜಾ ಮತ್ತು ಅಕ್ಷರ್ ಪಟೇಲ್ ಕೂಡ ತಂಡದಲ್ಲಿದ್ದಾರೆ. 15 ಸದಸ್ಯರ ತಂಡದಲ್ಲಿ ರಾಹುಲ್ ಹೊರತುಪಡಿಸಿ, ರಿಷಬ್ ಪಂತ್ ಮಾತ್ರ ವಿಕೆಟ್ ಕೀಪರ್ ಆಗಿದ್ದಾರೆ. ವಾಷಿಂಗ್ಟನ್ ಸುಂದರ್ ತಂಡದ ನಾಲ್ಕನೇ ಆಲ್ ರೌಂಡರ್ ಆಗಿದ್ದಾರೆ.

ಟೀಮ್ ಇಂಡಿಯಾ ಮ್ಯಾನೇಜ್‌ಮೆಂಟ್ ಜಡೇಜಾ ಮತ್ತು ಅಕ್ಷರ್ ಅವರಲ್ಲಿ ಒಬ್ಬರನ್ನು ಆಡುವ ಹನ್ನೊಂದರ ಬಳಗಕ್ಕೆ ಆಯ್ಕೆ ಮಾಡಲಿದೆ. ಕುಲದೀಪ್ ಯಾದವ್ ಫಿಟ್ ಆಗಿ ಆಡಿದರೆ, ವಾಷಿಂಗ್ಟನ್ ಹೊರಗುಳಿಯಬೇಕಾಗುತ್ತದೆ. ಮತ್ತೊಂದೆಡೆ ಜಸ್ಪ್ರೀತ್ ಬುಮ್ರಾ ಸಂಪೂರ್ಣವಾಗಿ ಫಿಟ್ ಆಗದಿದ್ದರೆ ಸುಂದರ್ ಅವರನ್ನು ಹೆಚ್ಚುವರಿ ಸ್ಪಿನ್ನರ್ ಆಗಿ ಆಯ್ಕೆ ಮಾಡಬಹುದು. ಇಂತಹ ಪರಿಸ್ಥಿತಿಯಲ್ಲಿ ಮೊಹಮ್ಮದ್ ಶಮಿ ಮತ್ತು ಅರ್ಷದೀಪ್ ಸಿಂಗ್ ನಂತರ ಹಾರ್ದಿಕ್ ಪಾಂಡ್ಯ ಮೂರನೇ ವೇಗದ ಬೌಲರ್ ಆಗಲಿದ್ದಾರೆ. ಬುಮ್ರಾ ಆಡಿದರೆ ಅರ್ಷದೀಪ್ ಆಡುವ ಹನ್ನೊಂದರ ಬಳಗದಿಂದ ಹೊರಗುಳಿಯಬೇಕಾಗಬಹುದು.

ಒಂದುವರೆ ವರ್ಷದಿಂದ ಟೀಮ್ ಇಂಡಿಯಾದಿಂದ ಹೊರಗುಳಿದಿದ್ದ ಮೊಹಮ್ಮದ್ ಶಮಿ ಕೂಡ ಚಾಂಪಿಯನ್ಸ್ ಟ್ರೋಫಿ ತಂಡಕ್ಕೆ ಆಯ್ಕೆಯಾಗಿದ್ದಾರೆ. ಅವರು ಕೊನೆಯ ಬಾರಿಗೆ 2023ರ ಏಕದಿನ ವಿಶ್ವಕಪ್‌ನಲ್ಲಿ ಆಡಿದ್ದರು. ಈ ಟೂರ್ನಿಯಲ್ಲಿ ಅವರು 24 ವಿಕೆಟ್‌ಗಳೊಂದಿಗೆ ಪ್ರಮುಖ ವಿಕೆಟ್‌-ಟೇಕರ್‌ ಬೌಲರ್ ಆಗಿದ್ದರು. ಮೊಹಮ್ಮದ್ ಸಿರಾಜ್ 15 ಸದಸ್ಯರ ತಂಡದಲ್ಲಿ ಸ್ಥಾನ ಪಡೆದಿಲ್ಲ. ಆದರೆ ಎಡಗೈ ವೇಗದ ಬೌಲರ್ ಅರ್ಶ್‌ದೀಪ್ ಸಿಂಗ್ ವಿಜಯ್ ಹಜಾರೆ ಟ್ರೋಫಿಯಲ್ಲಿ ಅತಿ ಹೆಚ್ಚು ವಿಕೆಟ್ ಪಡೆದ ನಂತರ ತಂಡದಲ್ಲಿ ಸ್ಥಾನ ಪಡೆದಿದ್ದಾರೆ.

ಟೀಮ್ ಇಂಡಿಯಾ ಸಂಭಾವ್ಯ ಪ್ಲೇಯಿಂಗ್-11

ರೋಹಿತ್ ಶರ್ಮಾ (ನಾಯಕ), ಶುಭಮನ್ ಗಿಲ್, ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ಕೆಎಲ್ ರಾಹುಲ್, ರಿಷಭ್ ಪಂತ್ (ವಿಕೆಟ್ ಕೀಪರ್), ಹಾರ್ದಿಕ್ ಪಾಂಡ್ಯ, ರವೀಂದ್ರ ಜಡೇಜಾ, ಕುಲದೀಪ್ ಯಾದವ್, ಮೊಹಮ್ಮದ್ ಶಮಿ, ಜಸ್ಪ್ರೀತ್ ಬುಮ್ರಾ.

ಭಾರತ ತಂಡ

ರೋಹಿತ್ ಶರ್ಮಾ (ನಾಯಕ), ಶುಭಮನ್ ಗಿಲ್ (ಉಪನಾಯಕ), ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ಕೆಎಲ್ ರಾಹುಲ್, ಹಾರ್ದಿಕ್ ಪಾಂಡ್ಯ, ಅಕ್ಷರ್ ಪಟೇಲ್, ವಾಷಿಂಗ್ಟನ್ ಸುಂದರ್, ಕುಲದೀಪ್ ಯಾದವ್, ಜಸ್ಪ್ರೀತ್ ಬುಮ್ರಾ, ಮೊಹಮ್ಮದ್ ಶಮಿ, ಅರ್ಷದೀಪ್ ಸಿಂಗ್, ಯಶಸ್ವಿ ಜೈಸ್ವಾಲ್, ರಿಷಬ್ ಪಂತ್, ರವೀಂದ್ರ ಜಡೇಜಾ.

Story first published: Sunday, January 19, 2025, 14:07 [IST]
Other articles published on Jan 19, 2025
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+