'ಮುಂದೂಡಲ್ಪಟ್ಟ ಐಪಿಎಲ್ ಸೆಪ್ಟೆಂಬರ್‌ನಲ್ಲಿ ಯುಕೆಯಲ್ಲಿ ನಡೆಯಬೇಕು'

ಲಂಡನ್: ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) 2021ರ ಉಳಿದ ಪಂದ್ಯಗಳು ಯುನೈಟೆಡ್ ಕಿಂಗ್ಡಮ್‌ನಲ್ಲಿ ಸೆಪ್ಟೆಂಬರ್‌ನಲ್ಲಿ ನಡೆಯಬೇಕು ಎಂದು ಇಂಗ್ಲೆಂಡ್ ಮಾಜಿ ನಾಯಕ ಕೆವಿನ್ ಪೀಟರ್ಸನ್ ಹೇಳಿದ್ದಾರೆ. ಯುನೈಟೆಡ್ ಅರಬ್ ಎಮಿರೇಟ್ಸ್(ಯುಎಇ)ನಲ್ಲಿ ನಡೆಯುವ ಬದಲು ಭಾರತದ ಅದ್ದೂರಿ ಕ್ರಿಕೆಟ್ ಟೂರ್ನಿ ಇಂಗ್ಲೆಂಡ್‌ನಲ್ಲೇ ನಡೆಯಲಿ ಎಂದು ಪೀಟರ್ಸನ್ ಹೇಳಿದ್ದಾರೆ.
2021ರ ಐಪಿಎಲ್ ಆರಂಭವಾಗಿ ಅರ್ಧದಷ್ಟು ಪಂದ್ಯಗಳು ನಡೆದ ಬಳಿಕ ಐಪಿಎಲ್ ಬಯೋಬಬಲ್ ಒಳಗೆ ಕೋವಿಡ್-19 ಪ್ರಕರಣಗಳು ಕಾಣಿಸಿಕೊಂಡಿದ್ದರಿಂದ ಮೇ 4ರ ಮಂಗಳವಾರ 14ನೇ ಆವೃತ್ತಿಯ ಐಪಿಎಲ್ ಅನ್ನು ಮುಂದೂಡುವ ನಿರ್ಧಾರಕ್ಕೆ ಬೋರ್ಡ್ ಆಫ್ ಕಂಟ್ರೋಲ್ ಫಾರ್ ಕ್ರಿಕೆಟ್ ಇನ್ ಇಂಡಿಯಾ (ಬಿಸಿಸಿಐ) ಬಂದಿತ್ತು.
ಮುಂದೂಡಲ್ಪಟ್ಟಿರುವ ಐಪಿಎಲ್ ಯುಎಇಗೆ ಬದಲಾಗಿ ಯುಕೆಯಲ್ಲಿ ನಡೆದರೆ ಚಂದ. ಭಾರತ ಮತ್ತು ಇಂಗ್ಲೆಂಡ್ ಮಧ್ಯೆ ಸೆಪ್ಟೆಂಬರ್‌ನಲ್ಲಿ 5 ಪಂದ್ಯಗಳ ಟೆಸ್ಟ್ ಸರಣಿ ನಡೆಯಲಿದೆ. ಈ ಸರಣಿ ಸೆಪ್ಟೆಂಬರ್ 14ಕ್ಕೆ ಮುಗಿಯಲಿದೆ. ಈ ವೇಳೆ ಐಪಿಎಲ್ ನಡೆದರೆ ಚೆನ್ನಾಗಿರುತ್ತದೆ ಎಂದು ಪೀಟರ್ಸನ್ ಹೇಳಿದ್ದಾರೆ.
'ಸೆಪ್ಟೆಂಬರ್‌ನಲ್ಲಿ ಐಪಿಎಲ್ ಇನ್ನುಳಿದ ಪಂದ್ಯಗಳನ್ನು ಪೂರ್ಣಗೊಳಿಸಲು ಯುಎಇ ಒಳ್ಳೆಯ ತಾಣ ಎಂಬಂತೆ ಮಾತನಾಡಿಕೊಳ್ಳುತ್ತಿರುವುದನ್ನು ನಾನು ನೋಡುತ್ತಿದ್ದೇನೆ. ಆದರೆ ನಿಜವಾಗಿ ಅದು ಯುಕೆಗೆ ಶಿಫ್ಟ್ ಆಗಬೇಕು ಅಂತ ನಾನು ಯೋಚಿಸುತ್ತಿದ್ದೇನೆ,' ಎಂದು ಕೆವಿನ್ ತಿಳಿಸಿದ್ದಾರೆ.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications