RR vs MI Turning Point: ರಾಯಲ್ಸ್ ಪ್ಲೇ ಆಫ್ ಆಸೆ ಕಮರಲು ಏನು ಕಾರಣ?
ತವರಿನಲ್ಲಿ ಗುಜರಾತ್ ಟೈಟಾನ್ಸ್ ನೀಡಿದ್ದ ಸವಾಲಿನ ಮೊತ್ತವನ್ನು ಹಿಂಬಾಲಿಸುವಲ್ಲಿ ಸಫಲವಾಗಿದ್ದು, ರಾಜಸ್ಥಾನ ರಾಯಲ್ಸ್ ಗುರುವಾರ ನಡೆದ ಪಂದ್ಯದಲ್ಲಿ ಹಿನ್ನಡೆ ಅನುಭವಿಸಿದೆ. ಮುಂಬೈ ಇಂಡಿಯನ್ಸ್ ನೀಡಿದ್ದ ಸವಾಲಿನ ಮೊತ್ತವನ್ನು ಕಲೆ ಹಾಕುವಲ್ಲಿ ಹಿಂದೆ ಬಿದ್ದ ರಾಜಸ್ಥಾನ ಪ್ಲೇ ಆಫ್ ಆಸೆ ಕಮರಿದಂತೆ ಕಾಣುತ್ತಿದೆ. ಮಹತ್ವದ ಪಂದ್ಯದಲ್ಲಿ 2 ಅಂಕಗಳನ್ನು ಕಲೆ ಹಾಕುವಲ್ಲಿ ವಿಫಲವಾದ ರಿಯಾನ್ ಪರಾಗ್ ವಿಫಲವಾಯಿತು. ಈ ಸೋಲಿಗೆ ಕಾರಣ ಏನು ಎಂಬ ಪ್ರಶ್ನೆಗೆ ಉತ್ತರ ಇಲ್ಲಿದೆ.
ಟಾಸ್ ಸೋತರೂ ಮೊದಲು ಬ್ಯಾಟ್ ಮಾಡಿದ ಮುಂಬೈ ಇಂಡಿಯನ್ಸ್ ತಂಡದ ಆರಂಭ ಸೊಗಸಾಗಿತ್ತು. ಆರಂಭಿಕರಾದ ರಯಾನ್ ರಿಕಲ್ಟನ್ (61) ಹಾಗೂ ರೋಹಿತ್ ಶರ್ಮಾ (53) ಅರ್ಧಶತಕ ಬಾರಿಸಿದರು. ಅಲ್ಲದೆ ಮೊದಲ ವಿಕೆಟ್‌ಗೆ ಶತಕದ ಜೊತೆಯಾಟವನ್ನು ನೀಡಿ ತಂಡಕ್ಕೆ ಉತ್ತಮ ಆರಂಭವನ್ನು ನೀಡಿದರು. ಇನ್ನು ಸೂರ್ಯಕುಮಾರ್ ಯಾದವ್ ಹಾಗೂ ಹಾರ್ದಿಕ್ ಪಾಂಡ್ಯ ಇಬ್ಬರೂ ಅಜೇಯ 48 ರನ್‌ಗಳನ್ನು 23 ಎಸೆತಗಳಲ್ಲಿ ಬಾರಿಸಿ ಮಿಂಚಿದರು. ಮುಂಬೈ 20 ಓವರ್‌ಗಳಲ್ಲಿ 2 ವಿಕೆಟ್‌ಗೆ 217 ರನ್ ಕಲೆ ಹಾಕಿತು.

ಸವಾಲಿನ ಮೊತ್ತ ಹಿಂಬಾಲಿಸಿದ ರಾಜಸ್ಥಾನ ಪರ ವೈಭವ್ ಸೂರ್ಯವಂಶಿ ಹಾಗೂ ಯಶಸ್ವಿ ಜೈಸ್ವಾಲ್ ತಂಡಕ್ಕೆ ಸ್ಫೋಟಕ ಆರಂಭ ನೀಡುವಲ್ಲಿ ವಿಫಲರಾದರು. ಟೈಟಾನ್ಸ್ ವಿರುದ್ಧ ಸ್ಫೋಟಕ ಶತಕ ಬಾರಿಸಿ ಅಬ್ಬರಿಸಿದ್ದ ವೈಭವ್ ತಾವು ಎದುರಿಸಿದ ಎರಡನೇ ಎಸೆತದಲ್ಲಿ ಮಿಡ್ ಆನ್‌ನಲ್ಲಿ ಕ್ಯಾಚ್ ನೀಡಿದರು. ಉಳಿದ ಬ್ಯಾಟರ್‌ಗಳು ರನ್ ವೇಗಕ್ಕೆ ಚುರುಕು ಮುಟ್ಟಿಸುವ ಆಸೆಯಿಂದಲೇ ಮೈದಾನಕ್ಕೆ ಇಳಿದ್ರು. ಆದರೆ ಮುಂಬೈ ಇಂಡಿಯನ್ಸ್ ತಂಡದ ಕರಾರುವಕ್ ದಾಳಿಯನ್ನು ಎದುರಿಸುವಲ್ಲಿ ವಿಫಲವಾಯಿತು.
ಸೋಲಿಗೆ ಕಾರಣ ಏನು?
ಪವರ್ ಪ್ಲೇನಲ್ಲಿ ಪವರ್ ಫುಲ್ ಆರಂಭವನ್ನು ನೀಡಬೇಕಿದಲ್ಲಿ ರಾಜಸ್ಥಾನ ಬ್ಯಾಟರ್‌ಗಳು ರನ್ ಕಲೆ ಹಾಕುವಲ್ಲಿ ವಿಫಲರಾದರು. ಮೊದಲ ಆರು ಓವರ್‌ಗಳಲ್ಲಿ ರಾಜಸ್ಥಾನ ಪ್ರಮುಖ ಐದು ವಿಕೆಟ್ ಕಳೆದುಕೊಂಡು ಒತ್ತಡಕ್ಕೆ ಸಿಲುಕಿತು. ಮಹತ್ವದ ಪಂದ್ಯದಲ್ಲಿ ನಾಯಕ ರಿಯಾನ್ ಪರಾಗ್, ನಿತೀಶ್ ರಾಣಾ ಒತ್ತಡವನ್ನು ಮೆಟ್ಟಿನಿಂತು ಬ್ಯಾಟ್ ಮಾಡುವಲ್ಲಿ ವಿಫಲರಾದರು. ಪರಿಣಾಮ ಈ ಅವಧಿಯಲ್ಲಿ ಐದು ವಿಕೆಟ್ ಕಳೆದುಕೊಂಡು ಒತ್ತಡಕ್ಕೆ ಸಿಲುಕಿತು. ಉಳಿದ ಬ್ಯಾಟರ್‌ಗಳು ಬಂದು ಕ್ರೀಸ್‌ನಲ್ಲಿ ನಿಂತು ಬ್ಯಾಟ್ ಮಾಡುವಲ್ಲಿ ವಿಫಲರಾದರು. ಪರಿಣಾಮ ರಾಜಸ್ಥಾನ ರಾಯಲ್ಸ್ ವಿರುದ್ಧ ಮುಂಬೈ ಇಂಡಿಯನ್ಸ್ 100 ರನ್ ಜಯ ದಾಖಲಿಸಿ ಮೊದಲ ಸ್ಥಾನಕ್ಕೆ ಬಡ್ತಿ ಪಡೆದಿದೆ.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications