ಡೆಲ್ಲಿ ಕ್ಯಾಪಿಟಲ್ಸ್ ಹಾಗೂ ಪಂಜಾಬ್ ಕಿಂಗ್ಸ್ ನಡುವಣ ಇಂಡಿಯನ್ ಪ್ರೀಮಿಯರ್ ಲೀಗ್‌ನ ಲೀಗ್ ಹಂತದ 35ನೇ ಪಂದ್ಯಕ್ಕೆ ಅರುಣ್ ಜೇಟ್ಲಿ ಕ್ರೀಡಾಂಗಣ ಸಾಕ್ಷಿಯಾಯಿತು. ಈ ಪಂದ್ಯದಲ್ಲಿ ಟಾಸ್ ಗೆದ್ದ ಡೆಲ್ಲಿ ಕ್ಯಾಪಿಟಲ್ಸ್ 20 ಓವರ್‌ಗಳಲ್ಲಿ 2 ವಿಕೆಟ್‌ಗೆ 264 ರನ್ ಸೇರಿಸಿತು. ಇದಕ್ಕುತ್ತರವಾಗಿ ಬ್ಯಾಟ್ ಮಾಡಿದ ಪಂಜಾಬ್ ಕಿಂಗ್ಸ್ ಪವರ್‌ಫುಲ್ ಬ್ಯಾಟಿಂಗ್ ನಡೆಸಿತು. ಈ ಪಂದ್ಯದಲ್ಲಿ ಪಂಜಾಬ್ ಕಿಂಗ್ಸ್ ತಂಡದ ಇನಿಂಗ್ಸ್ ಆರಂಭಿಸಿದ ಪ್ರಭ್‌ಸಿಮ್ರನ್ ಸಿಂಗ್ ಹಾಗೂ ಪ್ರಿಯಾಂಶ್ ಆರ್ಯ ಭರ್ಜರಿ ಬ್ಯಾಟಿಂಗ್ ನಡೆಸಿದರು.
ಪ್ರಭ್‌ಸಿಮ್ರನ್ ಸಿಂಗ್ ಹಾಗೂ ಪ್ರಿಯಾಂಶ್ ಆರ್ಯ ಜೋಡಿ ಪವರ್ ಪ್ಲೇನಲ್ಲಿ ಭರ್ಜರಿ ಬ್ಯಾಟಿಂಗ್ ನಡೆಸಿತು. ತಂಡಕ್ಕೆ ಅಗತ್ಯವಿದ್ದ ರನ್ ರೇಟ್‌ಗೆ ಅನುಸಾರವಾಗಿ ರನ್ ಕಲೆ ಹಾಕಿದ ಜೋಡಿ ಅಬ್ಬರಿಸಿತು. ಈ ಜೋಡಿಯ ಆಟಕ್ಕೆ ಬ್ರೇಕ್ ಹಾಕುವಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ಬೌಲರ್‌ಗಳು ವಿಫಲರಾದರು. ಈ ಜೋಡಿ ಮೊದಲ ಆರು ಓವರ್‌ಗಳಲ್ಲಿ 116 ರನ್ ಸೇರಿಸಿತು.

ಪ್ರಭ್‌ಸಿಮ್ರನ್ ಸಿಂಗ್ ಈ ಪಂದ್ಯದಲ್ಲಿ ಮೈ ಚಳಿ ಬಿಟ್ಟು ಬ್ಯಾಟ್ ಮಾಡಿದರು. ಇವರು 18 ಎಸೆತಗಳಲ್ಲಿ ಅರ್ಧಶತಕ ಬಾರಿಸಿ ಮಿಂಚಿದರು. ಪವರ್ ಪ್ಲೇನ ಕೊನೆಯ ಓವರ್ ಮಾಡಿದ ಮುಕೇಶ್ ಕುಮಾರ್ ಅವರ ಎಸೆತದಲ್ಲಿ ಬೌಂಡರಿ ಬಾರಿಸುವ ಮೂಲಕ ಪ್ರಭ್‌ಸಿಮ್ರನ್ ಸಿಂಗ್ ಈ ದಾಖಲೆ ಬರೆದರು. ಅಲ್ಲದೆ ಇದೇ ಓವರ್‌ನಲ್ಲಿ ಪ್ರಭ್‌ಸಿಮ್ರನ್ ಸಿಂಗ್ ಬ್ಯಾಕ್ ಟು ಬ್ಯಾಕ್ ಆರು ಬೌಂಡರಿ ಬಾರಿಸಿದರು. ಈ ಮೂಲಕ ಪ್ರಭ್‌ಸಿಮ್ರನ್ ಸಿಂಗ್ ವಿಶೇಷ ಕ್ಲಬ್‌ಗೆ ಎಂಟ್ರಿ ನೀಡಿದರು.
ಐಪಿಎಲ್‌ನ ಒಂದೇ ಓವರ್‌ನಲ್ಲಿ ಆರು ಬೌಂಡರಿ ಬಾರಿಸಿದ ಬ್ಯಾಟರ್‌ಗಳ ಪಟ್ಟಿಯಲ್ಲಿ ಪ್ರಭ್‌ಸಿಮ್ರನ್ ಸಿಂಗ್ ಸ್ಥಾನ ಪಡೆದರು. ಈ ಮೂಲಕ ಇವರು ಪೃಥ್ವಿ ಶಾ ಹಾಗೂ ಅಜಿಂಕ್ಯ ರಹಾನೆ ಅವರ ವಿಶೇಷ ಕ್ಲಬ್‌ಗೆ ಎಂಟ್ರಿ ನೀಡಿದರು. ಪೃಥ್ವಿ ಶಾ ಏಪ್ರಿಲ್ 29, 2021ರಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ಪರ ಆಡಿ ಈ ಸಾಧನೆ ಮಾಡಿದ್ದರು. ಅಲ್ಲದೆ ಅನುಭವಿ ಬ್ಯಾಟರ್ ಅಜಿಂಕ್ಯ ರಹಾನೆ (ರಾಜಸ್ಥಾನ್ ರಾಯಲ್ಸ್) ಸಹ 2012ರಲ್ಲಿ ಆರ್‌ಸಿಬಿ ವಿರುದ್ಧ ಆಡುವಾಗ ಈ ಸಾಧನೆ ಮಾಡಿದ್ದರು. ಈಗ ಈ ಲೀಸ್ಟ್‌ಗೆ ಪ್ರಭ್‌ಸಿಮ್ರನ್ ಸಿಂಗ್ ಎಂಟ್ರಿ ಪಡೆದಿದ್ದಾರೆ.
ಪ್ರಭ್‌ಸಿಮ್ರನ್ ಸಿಂಗ್ 292ರ ಸ್ಟ್ರೈಕ್ ರೇಟ್‌ನಲ್ಲಿ ಬ್ಯಾಟ್ ಮಾಡಿ ರನ್ ಕಲೆ ಹಾಕಿದರು. ಇವರು ಕೇವಲ 26 ಎಸೆತಗಳಲ್ಲಿ 9 ಬೌಂಡರಿ, 5 ಸಿಕ್ಸರ್ ಸಹಾಯದಿಂದ 76 ರನ್ ಬಾರಿಸಿ ಔಟ್ ಆದರು.