Prasidh Krishna: ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ಅಬ್ಬರಿಸಿದ್ದ ಕನ್ನಡಿಗ ಪ್ರಸಿದ್ಧ ಕೃಷ್ಣಗೆ ಪರ್ಪಲ್ ಕ್ಯಾಪ್
ಶನಿವಾರ ಅಹಮದಾಬಾದ್ ಮೈದಾನದಲ್ಲಿ ಪ್ರಸಿದ್ಧ ಕೃಷ್ಣ ಇತಿಹಾಸ ನಿರ್ಮಿಸಿದ್ದಾರೆ. ಇವರು ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ 18ನೇ ಆವೃತ್ತಿಯ 35ನೇ ಪಂದ್ಯದಲ್ಲಿ ಕನ್ನಡಿಗ ಪ್ರಸಿದ್ಧ ಕೃಷ್ಣ ಅಮೋಘ ಬೌಲಿಂಗ್ ಪ್ರದರ್ಶನ ನೀಡಿ ವಿಕೆಟ್ ಬೇಟೆ ನಡೆಸಿದರು. ಇವರ ಬಿಗುವಿನ ದಾಳಿಯ ನೆರವಿನಿಂದ ಡೆಲ್ಲಿ ಕ್ಯಾಪಿಟಲ್ಸ್ ಟಾಸ್ ಸೋತರೂ ಮೊದಲು ಬ್ಯಾಟಿಂಗ್ ಮಾಡಿ 20 ಓವರ್‌ಗಳಲ್ಲಿ 8 ವಿಕೆಟ್ ನಷ್ಟಕ್ಕೆ 203 ರನ್ ಕಲೆ ಹಾಕಿತು.
ಡೆಲ್ಲಿ ಕ್ಯಾಪಿಟಲ್ಸ್ ತಂಡದ ಆರಂಭ ಕಳಪೆಯಾಗಿತ್ತು. ಕರುಣ್ ನಾಯರ್, ಅಭಿಷೇಕ್ ಪೋರೆಲ್ ಜೋಡಿ ಮೊದಲ ವಿಕೆಟ್‌ಗೆ 1.4 ಓವರ್‌ಗಳಲ್ಲಿ 23 ರನ್ ಸಿಡಿಸಿತು. ಅಭಿಷೇಕ್ ಪೋರೆಲ್ 9 ಎಸೆತಗಳಲ್ಲಿ 3 ಬೌಂಡರಿ, 1 ಸಿಕ್ಸರ್ ಸಹಾಯದಿಂದ 18 ರನ್ ಬಾರಿಸಿ ಅರ್ಷದ್ ಖಾನ್‌ಗೆ ವಿಕೆಟ್ ಒಪ್ಪಿಸಿದರು. ಮೂರನೇ ಕ್ರಮಾಂಕದಲ್ಲಿ ಬ್ಯಾಟ್ ಮಾಡಿದ ಕೆಎಲ್ ರಾಹುಲ್, ಕರುಣ್ ನಾಯರ್‌ಗೆ ಉತ್ತಮ ಸಾಥ್ ನೀಡುವ ಸೂಚನೆ ನೀಡಿದರು.

ಕೆಎಲ್ ರಾಹುಲ್ 14 ಎಸೆತಗಳಲ್ಲಿ 4 ಬೌಂಡರಿ, 1 ಸಿಕ್ಸರ್ ಸಹಾಯದಿಂದ 28 ರನ್ ಬಾರಿಸಿ ಪ್ರಸಿದ್ಧ ಕೃಷ್ಣಾಗೆ ಎಲ್‌ಬಿ ಬಲೆಗೆ ಬಲಿಯಾದರು. ಆರಂಭಿಕರಾಗಿ ಕಣಕ್ಕೆ ಇಳಿದ ಕರುಣ್ ನಾಯರ್ ಅಮೋಘ ಬ್ಯಾಟಿಂಗ್ ಪ್ರದರ್ಶನ ನೀಡಿ 18 ಎಸೆತಗಳಲ್ಲಿ 2 ಬೌಂಡರಿ, 2 ಸಿಕ್ಸರ್ ಸಹಯಾದಿಂದ 31 ರನ್ ಬಾರಿಸಿ ಔಟ್ ಆದರು.
ಅರ್ಧಶತಕದ ಜೊತೆಯಾಟ
ನಾಲ್ಕನೇ ವಿಕೆಟ್‌ಗೆ ಟ್ರಿಸ್ಟನ್ ಸ್ಟಬ್ಸ್ ಹಾಗೂ ಅಕ್ಷರ್ ಪಟೇಲ್ ಉತ್ತಮ ಜೊತೆಯಾಟದ ಕಾಣಿಕೆ ನೀಡಿದರು. ಈ ಜೋಡಿ 36 ಎಸೆತಗಳಲ್ಲಿ 53 ರನ್ ಸೇರಿಸಿತು. ಮಧ್ಯಮ ಕ್ರಮಾಂಕದಲ್ಲಿ ಟ್ರಿಸ್ಟನ್ ಸ್ಟಬ್ಸ್ 21 ಎಸೆತಗಳಲ್ಲಿ 2 ಬೌಂಡರಿ, ಸಿಕ್ಸರ್ ನೆರವಿನಿಂದ 31 ರನ್ ಬಾರಿಸಿ ಔಟ್ ಆದರು. ಉತ್ತಮವಾಗಿ ಬ್ಯಾಟಿಂಗ್ ನಡೆಸುತ್ತಿದ್ದ ಅಕ್ಷರ್ ಪಟೇಲ್ 32 ಎಸೆತಗಳಲ್ಲಿ 1 ಬೌಂಡರಿ, 2 ಸಿಕ್ಸರ್ ಸಹಾಯದಿಂದ 39 ರನ್ ಸಿಡಿಸಿ ಪೆವಿಲಿಯನ್ ಸೇರಿದರು.
ಆಶುತೋಷ್ ಶರ್ಮಾ ಅವರನ್ನು ಹೊರತು ಪಡಿಸಿ, ಉಳಿದ ಬ್ಯಾಟರ್‌ಗಳು ರನ್ ಕಲೆ ಹಾಕುವಲ್ಲಿ ವಿಫಲರಾದರು. ಆಶುತೋಷ್ ಶರ್ಮಾ 19 ಎಸೆತಗಳಲ್ಲಿ 2 ಬೌಂಡರಿ, 3 ಸಿಕ್ಸರ್ ಸಹಾಯದಿಂದ 31 ರನ್ ಸಿಡಿಸಿದರು.

ಕನ್ನಡಿಗನಿಗೆ ಪರ್ಪಲ್ ಕ್ಯಾಪ್
ಟೂರ್ನಿಯಲ್ಲಿ ಉತ್ತಮ ಪ್ರದರ್ಶನ ನೀಡುತ್ತಿರುವ ಪ್ರಸಿದ್ಧ ಕೃಷ್ಣ ಅಬ್ಬರಿಸಿದರು. ಡೆಲ್ಲಿ ಕ್ಯಾಪಿಟಲ್ಸ್ ತಂಡದ ಸ್ಟಾರ್ ಬ್ಯಾಟರ್‌ಗಳಿಗೆ ಕಾಡಿರುವ ಪ್ರಸಿದ್ಧ ಕೃಷ್ಣ ಪರ್ಪಲ್ ಕ್ಯಾಪ್ ತಮ್ಮದಾಗಿಸಿಕೊಂಡಿದ್ದಾರೆ. ಇವರು ಮಹತ್ವದ ಪಂದ್ಯದಲ್ಲಿ ಕೆಎಲ್ ರಾಹುಲ್, ಕರುಣ್ ನಾಯರ್, ಅಕ್ಷರ್ ಪಟೇಲ್, ವಿಪ್ರನ್ ನಿಗಮ್ ಅವರಿಗೆ ಪೆವಿಲಿಯನ್ ಹಾದಿ ತೋರಿಸಿದ ಪ್ರಸಿದ್ಧ ದೊಡ್ಡ ಸಾಧನೆ ಮಾಡಿದರು. ಪ್ರಸಕ್ತ ಟೂರ್ನಿಯಲ್ಲಿ ಅತಿ ಹೆಚ್ಚು ವಿಕೆಟ್ ಪಡೆದ ಸಾಧನೆಯನ್ನು ಪ್ರಸಿದ್ಧ ತಮ್ಮದಾಗಿಸಿಕೊಂಡರು. ಇವರಿಗೆ ಈ ಸಾಧನೆ ಮಾಡಲು ಈ ಪಂದ್ಯದಲ್ಲಿ 3 ವಿಕೆಟ್ ಅವಶ್ಯಕತೆ ಇತ್ತು. ಡೆಲ್ಲಿ ವಿರುದ್ಧದ ಪಂದ್ಯದಲ್ಲಿ ನಾಲ್ಕು ವಿಕೆಟ್ ಪಡೆದ ಪ್ರಸಿದ್ಧ ಅತಿ ಹೆಚ್ಚು ವಿಕೆಟ್ ಪಡೆದ ಸಾಧನೆ ಮಾಡಿದರು. ಇವರು 7 ಪಂದ್ಯಗಳಲ್ಲಿ 14 ವಿಕೆಟ್ ಪಡೆದು ಬೀಗಿದ್ದಾರೆ.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications