ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X
For Quick Alerts
ALLOW NOTIFICATIONS  
For Daily Alerts
 

ವಿಶ್ವ ಟೆಸ್ಟ್ ಚಾಂಪಿಯನ್‍ಶಿಪ್ ಫೈನಲ್‌ಗೆ ಕನ್ನಡಿಗ ಪ್ರಸಿದ್ಧ್ ಕೃಷ್ಣ?

Prasidh Krishna likely to be the surprise choice for the WTC final

14ನೇ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್ ಕೊರೊನಾವೈರಸ್‌ನಿಂದ ಮುಂದೂಡಲ್ಪಟ್ಟಿರುವ ಕಾರಣ ಸದ್ಯಕ್ಕೆ ಎಲ್ಲರ ದೃಷ್ಟಿ ವಿಶ್ವ ಟೆಸ್ಟ್ ಚಾಂಪಿಯನ್‍ಶಿಪ್ ಫೈನಲ್ ಪಂದ್ಯದ ಮೇಲಿದೆ. ಇಂಗ್ಲೆಂಡ್‌ನ ಸೌತಾಂಪ್ಟನ್ ಕ್ರೀಡಾಂಗಣದಲ್ಲಿ ಜೂನ್ 18ರಿಂದ ಭಾರತ ಮತ್ತು ನ್ಯೂಜಿಲೆಂಡ್ ನಡುವೆ ವಿಶ್ವ ಟೆಸ್ಟ್ ಚಾಂಪಿಯನ್‍ಶಿಪ್ ಫೈನಲ್ ಪಂದ್ಯ ನಡೆಯಲಿದ್ದು ಇನ್ನೆರಡು ದಿನಗಳಲ್ಲಿ ಭಾರತ ತಂಡ ಪ್ರಕಟವಾಗಲಿದೆ.

ಕಳೆದ ವರ್ಷ ಇಂಗ್ಲೆಂಡ್ ವಿರುದ್ಧದ ಟೆಸ್ಟ್ ಸರಣಿಯಲ್ಲಿ ಭಾಗವಹಿಸಿದ್ದ ತಂಡವನ್ನೇ ವಿಶ್ವ ಟೆಸ್ಟ್ ಚಾಂಪಿಯನ್‍ಶಿಪ್ ಫೈನಲ್‌ಗೂ ಆಯ್ಕೆ ಮಾಡುವ ಸಂಭವ ಹೆಚ್ಚಿದ್ದು, ಇದರ ಜತೆಗೆ ಮತ್ತಷ್ಟು ಆಟಗಾರರನ್ನು ಸೇರ್ಪಡೆಗೊಳಿಸುವ ಸಾಧ್ಯತೆ ಜಾಸ್ತಿ ಇದೆ. ವಿಶ್ವ ಟೆಸ್ಟ್ ಚಾಂಪಿಯನ್‍ಶಿಪ್ ಫೈನಲ್ ಆದ ಕಾರಣ ದೊಡ್ಡ ತಂಡವನ್ನೇ ಪ್ರಕಟಿಸುವ ನಿರೀಕ್ಷೆಯಿದೆ. ಕನಿಷ್ಠ 4 ಓಪನಿಂಗ್ ಬ್ಯಾಟ್ಸ್‌ಮನ್‌ಗಳು, ಹಲವಾರು ಮಧ್ಯಮ ಕ್ರಮಾಂಕದ ಬ್ಯಾಟ್ಸ್‌ಮನ್‌ಗಳು, ಎರಡು ಅಥವಾ ಮೂರು ವಿಕೆಟ್ ಕೀಪರ್‌ಗಳು, ಎಂಟು ಅಥವಾ ಒಂಬತ್ತು ವೇಗಿಗಳು ಹಾಗೂ ಐದು ಸ್ಪಿನ್ನರ್‌ಗಳನ್ನೊಳಗೊಂಡ ಬೃಹತ್ ತಂಡವನ್ನು ಪ್ರಕಟಿಸುವ ಸಾಧ್ಯತೆಯಿದೆ.

ಇನ್ನು ಈ ಬೃಹತ್ ತಂಡದಲ್ಲಿ ಕಳೆದ ಬಾರಿಯ ಇಂಗ್ಲೆಂಡ್ ವಿರುದ್ಧದ ಏಕದಿನ ಸರಣಿಯಲ್ಲಿ ಉತ್ತಮ ಪ್ರದರ್ಶನ ನೀಡಿದ ಕನ್ನಡಿಗ ಪ್ರಸಿದ್ಧ್ ಕೃಷ್ಣ ಅವರನ್ನು ಆಯ್ಕೆ ಮಾಡುವ ಸಂಭವವಿದೆ. ಇಂಗ್ಲೆಂಡ್ ವಿರುದ್ಧ 3 ಏಕದಿನ ಪಂದ್ಯಗಳನ್ನಾಡಿದ್ದ ಪ್ರಸಿದ್ಧ್ ಕೃಷ್ಣ 6 ವಿಕೆಟ್ ಪಡೆದು ಮಿಂಚಿದ್ದರು. ಐಪಿಎಲ್ ಇತಿಹಾಸದಲ್ಲಿ ಇದುವರೆಗೂ 31 ಪಂದ್ಯಗಳನ್ನಾಡಿ 26 ವಿಕೆಟ್‍ಗಳನ್ನು ಪಡೆದು ಮಿಂಚಿರುವ ಪ್ರಸಿದ್ಧ್ ಕೃಷ್ಣ ಪ್ರಸ್ತುತ ಟೂರ್ನಿಯಲ್ಲಿಯೂ 8 ವಿಕೆಟ್ ಪಡೆದು ಉತ್ತಮ ಪ್ರದರ್ಶನವನ್ನು ನೀಡಿದ್ದಾರೆ. ಹೀಗಾಗಿ ಇಂಗ್ಲೆಂಡ್ ವಿರುದ್ಧದ ಏಕದಿನ ಸರಣಿ ಮತ್ತು ಪ್ರಸ್ತುತ ಐಪಿಎಲ್ ಟೂರ್ನಿಯಲ್ಲಿ ಉತ್ತಮ ಪ್ರದರ್ಶನ ನೀಡಿರುವ ಪ್ರಸಿದ್ಧ್ ಕೃಷ್ಣ ಅವರನ್ನು ನ್ಯೂಜಿಲೆಂಡ್ ವಿರುದ್ಧದ ವಿಶ್ವ ಟೆಸ್ಟ್ ಕ್ರಿಕೆಟ್ ಚಾಂಪಿಯನ್‍ಶಿಪ್ ಫೈನಲ್‌ಗೆ ಆಯ್ಕೆ ಮಾಡುವುದು ಪಕ್ಕಾ ಎಂಬ ಸುದ್ದಿ ಹರಿದಾಡುತ್ತಿದೆ.

Story first published: Friday, May 7, 2021, 9:42 [IST]
Other articles published on May 7, 2021
POLLS
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Yes No
Settings X