ಇಂಗ್ಲೆಂಡ್ ವಿರುದ್ಧದ ಏಕದಿನಕ್ಕೆ ಭಾರತ ತಂಡ ಪ್ರಕಟ, ಕನ್ನಡಿಗ ಪ್ರಸಿದ್ಧ್ ಪ್ರತಿಕ್ರಿಯೆ

ಬೆಂಗಳೂರು: ಭಾರತಕ್ಕೆ ಪ್ರವಾಸ ಬಂದಿರುವ ಇಂಗ್ಲೆಂಡ್ ಕ್ರಿಕೆಟ್ ತಂಡ ಆತಿಥೇಯ ಭಾರತದ ವಿರುದ್ಧ ಸದ್ಯ ಐದು ಪಂದ್ಯಗಳ ಟಿ20ಐ ಸರಣಿ ಆಡುತ್ತಿದೆ. ಟಿ20 ಸರಣಿ ಮುಕ್ತಾಯದ ಬಳಿಕ 3 ಪಂದ್ಯಗಳ ಏಕದಿನ ಸರಣಿಯಲ್ಲಿ ಇತ್ತಂಡಗಳು ಪಾಲ್ಗೊಳ್ಳಲಿವೆ. ಏಕದಿನ ಸರಣಿಗೆ ಸಂಬಂಧಿಸಿದಂತೆ ಶುಕ್ರವಾರ (ಮಾರ್ಚ್ 19) ಬೋರ್ಡ್ ಆಫ್ ಕಂಟ್ರೋಲ್ ಫಾರ್ ಕ್ರಿಕೆಟ್ ಇನ್ ಇಂಡಿಯಾ (ಬಿಸಿಸಿಐ) 18 ಮಂದಿಯ ತಂಡ ಪ್ರಕಟಿಸಿದೆ. ತಂಡದಲ್ಲಿ ಕನ್ನಡಿಗರೊಬ್ಬರು ಚೊಚ್ಚಲ ಬಾರಿಗೆ ಕಾಣಿಸಿಕೊಂಡಿದ್ದಾರೆ.
4 ಪಂದ್ಯಗಳ ಟೆಸ್ಟ್ ಸರಣಿಯಲ್ಲಿ 3-1ರ ಜಯ ದಾಖಲಿಸಿ ಐಸಿಸಿ ಟೆಸ್ಟ್ ಚಾಂಪಿಯನ್‌ಶಿಪ್ ಫೈನಲ್‌ಗೆ ಅರ್ಹತೆ ಗಿಟ್ಟಿಸಿಕೊಂಡಿರುವ ಭಾರತ, 5 ಪಂದ್ಯಗಳ ಟಿ20 ಸರಣಿಯಲ್ಲಿ 2-2ರ ಸಮಬಲ ಸಾಧಿಸಿದೆ. 3 ಪಂದ್ಯಗಳ ಏಕದಿನ ಸರಣಿ ಮಾರ್ಚ್ 23ರಿಂದ ಆರಂಭಗೊಳ್ಳಲಿದೆ. ಈ ಸರಣಿಗಾಗಿ ಭಾರತ ತಂಡದಲ್ಲಿ ಕನ್ನಡಿಗ ಪ್ರಸಿದ್ಧ್ ಕೃಷ್ಣ ಹೆಸರಿಸಲ್ಪಟ್ಟಿದ್ದಾರೆ.

ಏಕದಿನ ಸರಣಿಯ ಪ್ರಮುಖ ಮಾಹಿತಿ
ಭಾರತ-ಇಂಗ್ಲೆಂಡ್ ಮೂರು ಪಂದ್ಯಗಳ ಏಕದಿನ ಸರಣಿಯ ಮೂರೂ ಪಂದ್ಯಗಳು ಪೂಣೆಯಲ್ಲಿರುವ ಮಹಾರಾಷ್ಟ್ರ ಕ್ರಿಕೆಟ್ ಅಸೋಸಿಯೇಶನ್ ಸ್ಟೇಡಿಯಂನಲ್ಲಿ ಮಾರ್ಚ್ 23ರಿಂದ ನಡೆಯಲಿದೆ. ಆರಂಭಿಕ ಪಂದ್ಯ ಮಾರ್ಚ್ 23ರಂದು, ದ್ವಿತೀಯ ಪಂದ್ಯ ಮಾರ್ಚ್ 26, ತೃತೀಯ ಪಂದ್ಯ ಮಾರ್ಚ್ 28ರಂದು ನಡೆಯಲಿವೆ. ಮೂರೂ ಪಂದ್ಯಗಳು ಭಾರತೀಯ ಕಾಲಮಾನ 1:30 PMಗೆ ಆರಂಭಗೊಳ್ಳಲಿದೆ.

ಪ್ರಮುಖ ಸೇರ್ಪಡೆ/ಕೃಷ್ಣ ಪರಿಚಯ
ಇಂಗ್ಲೆಂಡ್ ವಿರುದ್ಧ ಏಕದಿನ ಸರಣೀಗಾಗಿ ಪ್ರಟಿಸಲಾದ ಭಾರತ ತಂಡದಲ್ಲಿ ಮುಂಬೈ ಬ್ಯಾಟ್ಸ್‌ಮನ್‌ಗಳಾದ ಸೂರ್ಯಕುಮಾರ್ ಯಾದವ್, ಕೃನಾಲ್ ಪಾಂಡ್ಯ ಮತ್ತು ಕನ್ನಡಿಗ ಪ್ರಸಿದ್ಧ್ ಕೃಷ್ಣ ಇವು ಮೂರು ಹೊಸ ಹೆಸರುಗಳು. ಉಳಿದಂತೆ ವಿರಾಟ್ ಕೊಹ್ಲಿ, ರೋಹಿತ್ ಶರ್ಮಾ, ಶಿಖರ್ ಧವನ್ ಇಂಥ ಪ್ರಮುಖ ಆಟಗಾರರಿದ್ದಾರೆ. ಬಲಗೈ ಮಧ್ಯಮ ವೇಗಿಯಾಗಿರುವ 25ರ ಹರೆಯದ ಪ್ರಸಿದ್ಧ್ ಕೃಷ್ಣ 24 ಐಪಿಎಲ್ ಪಂದ್ಯಗಳಲ್ಲಿ 18 ವಿಕೆಟ್ ದಾಖಲೆ ಹೊಂದಿದ್ದಾರೆ. ಐಪಿಎಲ್‌ನಲ್ಲಿ ಕೃಷ್ಣ ಸದ್ಯ ಕೋಲ್ಕತ್ತಾ ನೈಟ್ ರೈಡರ್ಸ್ ಪರ ಆಡುತ್ತಿದ್ದಾರೆ.
ಪ್ರಸಿದ್ಧ್ ಕೃಷ್ಣ ಪ್ರತಿಕ್ರಿಯೆ
'ದೇಶಕ್ಕಾಗಿ ಆಡಲು ಕರೆ ಬಂದಾಗ ನಿಮಗೆ ಅತೀವ ಖುಷಿಯಾಗುತ್ತದೆ. ಇದು ಕನಸೊಂದು ನನಸಾದಂತೆ. ತಂಡಕ್ಕಾಗಿ ಆಡಿ ತಂಡದ ಗೆಲುವಿಗೆ ಕೊಡುಗೆ ನೀಡಲು ಉತ್ಸುಕನಾಗಿದ್ದೇನೆ. ಬಿಸಿಸಿಐಗೆ ಧನ್ಯವಾದಗಳು. ಆಡಲಾರಂಭಿಸುವುದಕ್ಕೆ ಕಾತರನಾಗಿದ್ದೇನೆ' ಎಂದು ಟ್ವಿಟ್‌ನಲ್ಲಿ ಪ್ರಸಿದ್ಧ್ ಕೃಷ್ಣ ಬರೆದುಕೊಂಡಿದ್ದಾರೆ.

ಏಕದಿನ ಸರಣಿಗೆ ಭಾರತ ತಂಡ
ವಿರಾಟ್ ಕೊಹ್ಲಿ (ನಾಯಕ), ರೋಹಿತ್ ಶರ್ಮಾ (ಉಪ ನಾಯಕ), ಶಿಖರ್ ಧವನ್, ಶುಬ್ಮನ್ ಗಿಲ್, ಶ್ರೇಯಸ್, ಸೂರ್ಯಕುಮಾರ್ ಯಾದವ್, ಹಾರ್ದಿಕ್ ಪಾಂಡ್ಯ, ರಿಷಭ್ ಪಂತ್ (ವಿಕೆಟ್ ಕೀಪರ್), ಕೆಎಲ್ ರಾಹುಲ್ (ವಿಕೆಟ್ ಕೀಪರ್), ಯುಜುವೇಂದ್ರ ಚಾಹಲ್, ಕುಲದೀಪ್ ಯಾದವ್, ಕೃನಾಲ್ ಪಾಂಡ್ಯ, ಸುಂದರ್, ಟಿ ನಟರಾಜನ್, ಭುವನೇಶ್ವರ್ ಕುಮಾರ್, ಮೊಹಮ್ಮದ್ ಸಿರಾಜ್, ಪ್ರಸಿದ್ ಕೃಷ್ಣ, ಶಾರ್ದೂಲ್ ಠಾಕೂರ್.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications