ಸದ್ಯ ಭಾರತೀಯ ವನಿತೆಯರು ಐರ್ಲೆಂಡ್ ವಿರುದ್ಧ ಅಮೋಘ ಪ್ರದರ್ಶನ ನೀಡುತ್ತಿದ್ದಾರೆ.ಇವರು ಐರ್ಲೆಂಡ್ ವಿರುದ್ಧ ಮೂರು ಪಂದ್ಯಗಳ ಸರಣಿಯನ್ನು ಇನ್ನು ಒಂದು ಪಂದ್ಯ ಬಾಕಿ ಇರುವಂತೆಯೇ ಗೆದ್ದು ಕೊಂಡಿದ್ದಾರೆ. ಟೂರ್ನಿಯ ಮೂರನೇ ಪಂದ್ಯ ಬುಧವಾರ ರಾಜ್‌ಕೋಟ್‌ನಲ್ಲಿ ನಡೆಯಲಿದೆ. ಈ ವೇಳೆ ಟೀಮ್ ಇಂಡಿಯಾದ ಯುವ ಆಟಗಾರ್ತಿಯ ಮುಖದಲ್ಲಿ ಮಂದಹಾಸ ಮೂಡಿಸಿದೆ. ಭಾರತದ 24 ವರ್ಷದ ಭಾರತೀಯ ಬ್ಯಾಟ್ಸ್‌ಮನ್ ಐಸಿಸಿ ಶ್ರೇಯಾಂಕದಲ್ಲಿ ಎಲ್ಲರ ಚಿತ್ತ ಕದ್ದಿದ್ದಾರೆ.
ಐರ್ಲೆಂಡ್ ವಿರುದ್ಧ ಏಕದಿನ ಸರಣಿಯಲ್ಲಿ ಟೀಮ್ ಇಂಡಿಯಾಯದ ಪರ ಯುವ ಆಟಗಾರ್ತಿ ಪ್ರತಿಕಾ ರಾವಲ್ ಅಮೋಘ ಪ್ರದರ್ಶನ ನೀಡಿದ್ದಾರೆ. ಇವರು ಮೊದಲ ಪಂದ್ಯದಲ್ಲಿ 96 ಎಸೆತಗಳಲ್ಲಿ 10 ಬೌಂಡರಿ, 1 ಸಿಕ್ಸರ್ ಸಹಾಯದಿಂದ 89 ರನ್ ಸಿಡಿಸಿದರು. ಇನ್ನು ಎರಡನೇ ಏಕದಿನ ಪಂದ್ಯದಲ್ಲೂ ಪ್ರತಿಕಾ ತಮ್ಮ ಅಮೋಘ ಫಾರ್ಮ್ ಮುಂದುವರೆಸಿದರು. ಸ್ಮೃತಿ ಮಂಧನಾ ಜೊತೆ ಇನಿಂಗ್ಸ್ ಆರಂಭಿಸಿದ ಪ್ರತಿಕಾ ಈ ಇನಿಂಗ್ಸ್‌ನಲ್ಲೂ ಅಬ್ಬರಿಸಿದರು. ಇವರ ಅಮೋಘ ಇನಿಂಗ್ಸ್‌ನಲ್ಲಿ 8 ಬೌಂಡರಿ, 1 ಸಿಕ್ಸರ್ ಸಹಾಯದಿಂದ 67 ರನ್ ಸಿಡಿಸಿದರು.

ಪ್ರತಿಕಾ ರಾವಲ್, ಕಳೆದ ವರ್ಷ ಡಿಸೆಂಬರ್‌ನಲ್ಲಿ ಅಂತಾರಾಷ್ಟ್ರೀಯ ಕ್ರಿಕೆಟ್‌ಗೆ ಪದಾರ್ಪನೆ ಮಾಡಿದರು. ಇವರು ಮೊದಲ ಪಂದ್ಯದಲ್ಲಿ ವಿಂಡೀಸ್ ವಿರುದ್ಧ 40 ರನ್ ಸಿಡಿಸಿ ಭರವಸೆ ಮೂಡಿಸಿದ್ದರು. ಆದರೆ ಎರಡನೇ ಪಂದ್ಯದಲ್ಲಿ ಅರ್ಧಶತಕ ಬಾರಿಸಿ ತಮ್ಮ ಕ್ಷಮತೆಯನ್ನು ಸಾಬೀತು ಪಡಿಸಿದರು. ಇದಾದ ಬಳಿಕ ಐರ್ಲೆಂಡ್ ವಿರುದ್ಧ ನಡೆದ ಪಂದ್ಯದಲ್ಲಿ ಪ್ರತಿಕಾ ಅಮೋಘ ಪ್ರದರ್ಶನ ನೀಡಿದರು.
ಪ್ರತಿಕಾ ರಾವಲ್ ಅವರ ಅಮೋಘ ಪ್ರದರ್ಶನದ ಫಲವಾಗಿ ಇವರ ಶ್ರೇಯಾಂಕದಲ್ಲಿ 52 ಸ್ಥಾನ ಜಿಗಿತ ಕಂಡಿದ್ದಾರೆ. ಸದ್ಯ ಇವರು 65 ನೇ ಸ್ಥಾನವನ್ನು ತಲುಪಿದ್ದಾರೆ. ಇವರು ಟಾಪ್ 50 ಸ್ಥಾನದಿಂದ ವಂಚಿತರಾಗಿರಬಹುದು ಆದರೆ ಅವರಿಗೆ ಬಹಳಷ್ಟು ಅವಕಾಶಗಳಿವೆ. ಇವರು ಅಂತಾರಾಷ್ಟ್ರೀಯ ಟೂರ್ನಿಯಲ್ಲಿ ಆಡುತ್ತಿರುವ ಧಾಟಿಯನ್ನು ನೋಡಿದರೆ ಇವರು ಟಾಪ್ 10ರಲ್ಲಿ ಸ್ಥಾನ ಪಡೆಯುವುದು ದೂರ ಇಲ್ಲ ಎಂಬುದು ತಿಳಿದು ಬರುತ್ತದೆ. ಪ್ರತೀಕಾ ರಾವಲ್ 5 ಏಕದಿನ ಪಂದ್ಯಗಳಲ್ಲಿ 290 ರನ್ ಗಳಿಸಿದ್ದಾರೆ.

ಐರ್ಲೆಂಡ್ ವಿರುದ್ಧ ಸ್ಥಿರ ಪ್ರದರ್ಶನ ಮುಂದುವರೆಸಿರುವ ಸ್ಟಾರ್ ಆರಂಭಿಕ ಆಟಗಾರ್ತಿ ಸ್ಮೃತಿ ಮಂದನಾ ತಮ್ಮ ಶ್ರೇಯಾಂಕದಲ್ಲಿ ಸ್ಥಿರತೆ ಕಾಯ್ದುಕೊಂಡಿದ್ದಾರೆ. ಇವರು 723 ಅಂಕಗಳೊಂದಿಗೆ ಶ್ರೇಯಾಂಕದಲ್ಲಿ ಮೂರನೇ ಸ್ಥಾನದಲ್ಲಿದ್ದಾರೆ. ಇನ್ನು ಟಾಪ್ 10ರಲ್ಲಿ ಸ್ಥಾನ ಪಡೆದ ಏಕೈಕ ಭಾರತೀಯ ಆಟಗಾರ್ತಿ ಎಂಬ ಹೆಗ್ಗಳಿಕೆ ತಮ್ಮದಾಗಿಸಿಕೊಂಡಿದ್ದಾರೆ. ದಕ್ಷಿಣ ಆಫ್ರಿಕಾದ ಲಾರಾ ವೋಲ್ವಾರ್ಡ್ ಮೊದಲ ಸ್ಥಾನ, ಶ್ರೀಲಂಕಾದ ಚಾಮರಿ ಅಟಪಟ್ಟು ಎರಡನೇ ಸ್ಥಾನದಲ್ಲಿದ್ದಾರೆ.
ಭಾರತದ ಪರ ಬೌಲಿಂಗ್ ಶ್ರೇಯಾಂಕದಲ್ಲಿ ದೀಪ್ತಿ ಶರ್ಮಾ 672 ಅಂಕಗಳನ್ನು ಕಲೆ ಹಾಕಿ ಐದನೇ ಸ್ಥಾನದಲ್ಲಿದ್ದಾರೆ. ಇನ್ನು ಭಾರತದ ಬೌಲರ್ ರಿಂಕು ಸಿಂಗ್ ಎರಡು ಸ್ಥಾನ ಕುಸಿತ ಕಂಡಿದ್ದು 526 ಅಂಕಗಳೊಂದಿಗೆ 19ನೇ ಸ್ಥಾನ ತಲುಪಿದ್ದಾರೆ.