ಶ್ರೀಲಂಕಾ ಪ್ರವಾಸ ಕೈಗೊಳ್ಳಬಹುದಾದ ಕೊಹ್ಲಿ,ರೋಹಿತ್ ಇಲ್ಲದ 21 ಸದಸ್ಯರ ತಂಡ

ಕೊರೊನಾವೈರಸ್ ಕಾರಣದಿಂದಾಗಿ ಪ್ರಸ್ತುತ ಐಪಿಎಲ್ ಟೂರ್ನಿ ಮುಂದೂಡಲ್ಪಟ್ಟ ಬಳಿಕ ಇದೀಗ ಕ್ರೀಡಾಭಿಮಾನಿಗಳ ಚಿತ್ತ ಜೂನ್ 18ರಿಂದ ಇಂಗ್ಲೆಂಡ್‌ನಲ್ಲಿ ಶುರುವಾಗಲಿರುವ ಭಾರತ ಮತ್ತು ನ್ಯೂಜಿಲೆಂಡ್ ನಡುವಿನ ವಿಶ್ವ ಟೆಸ್ಟ್ ಚಾಂಪಿಯನ್‍ಶಿಪ್ ಫೈನಲ್ ಪಂದ್ಯ ಹಾಗೂ ಇನ್ನೂ ಹಲವು ಟೂರ್ನಿಗಳ ಮೇಲಿದೆ. ವಿಶ್ವ ಟೆಸ್ಟ್ ಚಾಂಪಿಯನ್‍ಶಿಪ್ ಮುಗಿದ ನಂತರ ಭಾರತ ಮತ್ತು ಇಂಗ್ಲೆಂಡ್ ನಡುವಿನ ಟೆಸ್ಟ್ ಸರಣಿ ಇಂಗ್ಲೆಂಡ್‌ನಲ್ಲಿಯೇ ಆರಂಭವಾಗಲಿದೆ. ಹೀಗಾಗಿ ವಿಶ್ವ ಟೆಸ್ಟ್ ಚಾಂಪಿಯನ್‍ಶಿಪ್ ಫೈನಲ್ ಪಂದ್ಯ ಮತ್ತು ಇಂಗ್ಲೆಂಡ್ ವಿರುದ್ಧದ 5 ಪಂದ್ಯಗಳ ಟೆಸ್ಟ್ ಸರಣಿಗೆ ಬೃಹತ್ ತಂಡವನ್ನು ಬಿಸಿಸಿಐ ಈಗಾಗಲೇ ಪ್ರಕಟಿಸಿದೆ.
ಟೀಂ ಇಂಡಿಯಾ ಇಂಗ್ಲೆಂಡ್ ಪ್ರವಾಸವನ್ನು ಕೈಗೊಳ್ಳುವ ಇದೇ ಸಮಯದಲ್ಲಿ ಅಂದರೆ ಜುಲೈ ತಿಂಗಳಿನಲ್ಲಿ ಭಾರತ ಮತ್ತು ಶ್ರೀಲಂಕಾ ನಡುವಿನ 3 ಏಕದಿನ ಹಾಗೂ 3 ಟ್ವೆಂಟಿ ಪಂದ್ಯಗಳ ಸರಣಿಗಳನ್ನು ಶ್ರೀಲಂಕಾದಲ್ಲಿ ಆಯೋಜಿಸಲಾಗಿದೆ. ಹೀಗಾಗಿ ಇಂಗ್ಲೆಂಡ್ ಪ್ರವಾಸವನ್ನು ಕೈಗೊಳ್ಳುವ ತಂಡವನ್ನು ಬಿಟ್ಟು ಉಳಿದ ಆಟಗಾರರ ತಂಡವೊಂದನ್ನು ರಚಿಸಿ ಶ್ರೀಲಂಕಾ ಪ್ರವಾಸಕ್ಕೆ ಬಿಸಿಸಿಐ ಕಳುಹಿಸಲಿದೆ.
ಶ್ರೀಲಂಕಾ ವಿರುದ್ಧದ 3 ಏಕದಿನ ಮತ್ತು 3 ಟಿ ಟ್ವೆಂಟಿ ಪಂದ್ಯಗಳ ಸರಣಿಗಳಿಗೆ ತೆರಳಬಹುದಾದ 21 ಆಟಗಾರರ ಸಂಭಾವ್ಯ ತಂಡ ಹೀಗಿದೆ : ಶಿಖರ್ ಧವನ್, ಪೃಥ್ವಿ ಶಾ, ರುತುರಾಜ್ ಗಾಯಕ್ವಾಡ್, ಸೂರ್ಯಕುಮಾರ್ ಯಾದವ್, ದೇವದತ್ ಪಡಿಕ್ಕಲ್, ಮನೀಷ್ ಪಾಂಡೆ, ಇಶಾನ್ ಕಿಶನ್, ಸಂಜು ಸ್ಯಾಮ್ಸನ್, ಹಾರ್ದಿಕ್ ಪಾಂಡ್ಯ, ಕೃನಾಲ್ ಪಾಂಡ್ಯ, ರಾಹುಲ್ ತೆವಾಟಿಯಾ, ವಿಜಯ್ ಶಂಕರ್, ನವದೀಪ್ ಸೈನಿ, ದೀಪಕ್ ಚಹರ್, ಭುವನೇಶ್ವರ್ ಕುಮಾರ್, ಜಯದೇವ್ ಉನಾದ್ಕತ್, ಹರ್ಷಲ್ ಪಟೇಲ್, ವರುಣ್ ಚಕ್ರವರ್ತಿ, ಯುಜ್ವೇಂದ್ರ ಚಹಾಲ್, ರಾಹುಲ್ ಚಹರ್ ಹಾಗೂ ಕುಲದೀಪ್ ಯಾದವ್.
ಈ 21 ಭಾರತೀಯ ಆಟಗಾರರ ತಂಡ ಶ್ರೀಲಂಕಾ ಪ್ರವಾಸವನ್ನು ಕೈಗೊಳ್ಳುವ ಸಾಧ್ಯತೆಯಿದ್ದು ಕೊಲಂಬೊದ ಪ್ರೇಮದಾಸ ಕ್ರೀಡಾಂಗಣದಲ್ಲಿ ಭಾರತ ಮತ್ತು ಶ್ರೀಲಂಕಾ ನಡುವೆ 3ಏಕದಿನ ಪಂದ್ಯಗಳು ಜುಲೈ 13, 16 ಹಾಗೂ 19ರಂದು ಮತ್ತು 3 ಟಿ ಟ್ವೆಂಟಿ ಪಂದ್ಯಗಳು ಜುಲೈ 22, 24 ಹಾಗೂ 27ರಂದು ನಡೆಯಲಿವೆ.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications