ಪೃಥ್ವಿಶಾ ಫಿಟ್ನೆಸ್ ಪಾಸ್: ಭಾರತ 'ಎ' ತಂಡ ಸೇರಲು ಸಿದ್ಧವಾದ ಯುವ ಆಟಗಾರ

ಟೀಮ್ ಇಂಡಿಯಾದ ಯುವ ಆಟಗಾರ ಪೃಥ್ವಿ ಶಾ ರಣಜಿಯಲ್ಲಿ ಗಾಯಗೊಂಡು ತಂಡದಿಂದ ಹೊರಬಿದ್ದಿದ್ದರು. ಕರ್ನಾಟಕ ವಿರುದ್ಧದ ರಣಜಿ ಪಂದ್ಯದಲ್ಲಿ ಪೃಥ್ವಿ ಶಾ ಭುಜದ ನೋವಿಗೊಳಾಗಿ ತಂಡದಿಂದ ಹೊರಬಿದ್ದಿದ್ದರು. ಇದೀಗ ಪೃಥ್ವಿ ಶಾ ಚೇತರಿಸಿಕೊಂಡಿದ್ದು ಟೀಮ್ ಇಂಡಿಯಾ ಎ ಪರವಾಗಿ ಆಡಲು ಸಿದ್ಧರಾಗಿದ್ದಾರೆ.
ಪ್ರಸಕ್ತ ರಣಜಿ ಟೂರ್ನಿಯಲ್ಲಿ ಪೃಥ್ವಿ ಶಾ ಟೂರ್ನಿಯಲ್ಲಿ ಮುಂಬೈ ತಂಡದ ಪರವಾಗಿ ಆಡುತ್ತಿದ್ದ ಪೃಥ್ವಿ ಶಾ ಕರ್ನಾಟಕ ವಿರುದ್ಧದ ಪಂದ್ಯವನ್ನು ಆಡುತ್ತಿದ್ದ ವೇಳೆ ಗಾಯಗೊಂಡಿದ್ದರು. ಎರಡನೇ ಇನ್ನಿಂಗ್ಸ್‌ನಲ್ಲಿ ಕಣಕ್ಕಿಳಿಯದ ಪೃಥ್ವಿ ಶಾ ತಕ್ಷಣವೇ ರಾಷ್ಟ್ರೀಯ ಕ್ರಿಕೆಟ್ ಆಕಾಡೆಮಿಗೆ ಆಗಮಿಸಿ ತಪಾಸಣೆಗೆ ಒಳಗಾಗಿದ್ದರು.
ಈ ಸಂದರ್ಭದಲ್ಲಿ ಮುಂಬೈ ತಂಡದ ಅಧಿಕಾರಿಗಳು ಪೃಥ್ವಿ ಶಾ ಅವರ ಆರೋಗ್ಯದ ಬಗ್ಗೆ ಕಳವಳವನ್ನೂ ವ್ಯಕ್ತಪಡಿಸಿದ್ದರು. ಪೃಥ್ವಿ ಶಾ ಕೈಮೇಲೆತ್ತಲೂ ಸಾಧ್ಯವಾಗುತ್ತಿಲ್ಲ ಎಂದು ತಿಳಿಸಿದ್ದರು. ಹೀಗಾಗಿ ಪೃಥ್ವಿ ಶಾ ನ್ಯೂಜಿಲ್ಯಾಂಡ್ ಎ ಮತ್ತು ಭಾರತ ಎ ತಂಡದ ಸರಣಿಯಿಂದ ಹೊರಗುಳಿಯುತ್ತಾರೆ ಎಂದೇ ಭಾವಿಸಲಾಗಿತ್ತು.
ಆದರೆ ಪೃಥ್ವಿ ಶಾ ಶೀಘ್ರವಾಗಿ ಚೇತರಿಕೆ ಕಂಡಿದ್ದಾರೆ. ಇದೀಗ ಬಿಸಿಸಿಐ ಮೂಲಗಳ ಮಾಹಿತಿಯ ಪ್ರಕಾರ ಪೃಥ್ವಿ ಶಾ ಫಿಟ್‌ನೆಸ್ ಟೆಸ್ಟ್‌ನಲ್ಲಿ ಪಾಸ್ ಆಗಿದ್ದಾರೆಂದು ತಿಳಿದು ಬಂದಿದೆ. ರಾಷ್ಟ್ರೀಯ ಕ್ರಿಕೆಟ್ ಅಕಾಡೆಮಿಯಲ್ಲಿ ಯೊಯೊ ಟೆಸ್ಟ್‌ನಲ್ಲಿ ಪಾಲ್ಗೊಂಡಿದ್ದ ಶಾ ಯಶ್ವಿಯಾಗಿ ಪಾಸಾಗಿದ್ದಾರೆ. ಈ ಮೂಲಕ ನ್ಯೂಜಿಲ್ಯಾಂಡ್ 'ಎ' ವಿರುದ್ಧದ ಸರಣಿಗೆ ಆಯ್ಕೆಯಾಗಲು ಗ್ರೀನ್ ಸಿಗ್ನಲ್ ಪಡೆದುಕೊಂಡಿದ್ದಾರೆ.
ಈಗಾಗಲೇ ನ್ಯೂಜಿಲ್ಯಾಂಡ್ ಎ ವಿರುದ್ಧ ಎರಡು ಅಭ್ಯಾಸ ಪಂದ್ಯಗಳಿಂದ ಶಾ ತಪ್ಪಿಸಿಕೊಂಡಿದ್ದರು. ನ್ಯೂಜಿಲ್ಯಾಂಡ್ ಎ ವಿರುದ್ಧ ಜನವರಿ 26 ರಂದು ನಡೆಯುವ ಮೊದಲ ಏಕದಿನ ಪಂದ್ಯದಲ್ಲಿ ತಂಡಕ್ಕೆ ಸೇರ್ಪಡೆಯಾಗುವ ಸಾಧ್ಯತೆಯಿದೆ. ಇದರ ಜೊತೆಗೆ ಟೀಮ್ ಇಂಡಿಯಾ ಪರವಾಗಿ ನ್ಯೂಜಿಲ್ಯಾಂಡ್ ವಿರುದ್ಧದ ವಿಶ್ವ ಟೆಸ್ಟ್ ಚಾಂಪಿಯನ್ಶಿಪ್ ಟೂರ್ನಿಗೂ ಆಯ್ಕೆಗೆ ಗ್ರೀನ್ ಸಿಗ್ನಲ್ ಸಿಕ್ಕಂತಾಗಿದೆ.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications