ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X
For Quick Alerts
ALLOW NOTIFICATIONS  
For Daily Alerts
 

ಭಾರತ vs ನ್ಯೂಜಿಲೆಂಡ್: ಅಂತಿಮ ಟೆಸ್ಟ್‌ಗೆ ಪೃಥ್ವಿ ಶಾ ಫಿಟ್

Prithvi Shaw fit for Christchurch Test: Ravi Shastri

ನ್ಯೂಜಿಲೆಂಡ್ ವಿರುದ್ಧದ ಎರಡನೇ ಹಾಗೂ ಅಂತಿಮ ಟೆಸ್ಟ್ ಪಂದ್ಯ ನಾಳೆಯಿಂದ ಆರಂಭವಾಗಲಿದೆ. ನಿನ್ನೆಯಷ್ಟೇ ಟೀಮ್ ಇಂಡಿಯಾದ ಪೃಥ್ವಿ ಶಾ ಎರಡನೇ ಟೆಸ್ಟ್ ಪಂದ್ಯಕ್ಕೆ ಅಲಭ್ಯರಾಗಲಿದ್ದಾರೆ ಎಂಬ ಮಾತುಗಳು ಕೇಳು ಬಂದಿತ್ತು. ಪೃಥ್ವಿ ಶಾ ಗಾಯಗೊಂಡಿರುವುದೇ ಇದಕ್ಕೆ ಕಾರಣವಾಗಿತ್ತು. ಆದರೆ ಇಂದು ಈ ವಿಚಾರವಾಗಿ ಟೀಮ್ ಇಂಡಿಯಾ ಕೋಚ್ ರವಿ ಶಾಸ್ತ್ರಿ ಸ್ಪಷ್ಟನೆಯನ್ನು ನೀಡಿದ್ದಾರೆ.

ಟೀಮ್ ಇಂಡಿಯಾದ ಆರಂಭಿಕ ಆಟಗಾರ ಪೃಥ್ವಿ ಶಾ ಫಿಟ್ ಆಗಿದ್ದಾರೆ ಎಂದು ಕೋಚ್ ರವಿ ಶಾಸ್ತ್ರಿ ಶುಕ್ರವಾರ ಮಾಧ್ಯಮಗಳಿಗೆ ತಿಳಿಸಿದ್ದಾರೆ. ಕಾಲು ನೀವಿನಿಂದ ಬಳಲುತ್ತಿದ್ದ ಪೃಥ್ವಿ ಶಾ ಇಂದು ಚೇತರಿಸಿಕೊಂಡಿದ್ದಾರೆ. ನಾಳಿನ ಪಂದ್ಯದಲ್ಲಿ ಪೃಥ್ವಿ ಶಾ ಆಡಲಿದ್ದಾರೆ ಎಂಬ ಮಾತನ್ನು ಹೇಳಿದ್ದಾರೆ.

ಪೂಜಾರ, ಗವಾಸ್ಕರ್ ದಾಖಲೆ ಸರಿಗಟ್ಟಲಿದ್ದಾರೆ ಮಯಾಂಕ್ ಅಗರ್ವಾಲ್ಪೂಜಾರ, ಗವಾಸ್ಕರ್ ದಾಖಲೆ ಸರಿಗಟ್ಟಲಿದ್ದಾರೆ ಮಯಾಂಕ್ ಅಗರ್ವಾಲ್

ಪೃಥ್ವಿ ಶಾ ಎಡಗಾಲು ನೋವಿನಿಂದ ಊದಿಕೊಂಡಿತ್ತು. ಹೀಗಾಗಿ ಶಾ ಗುರುವಾರ ಅಭ್ಯಾಸಕ್ಕೆ ಇಳಿದಿರಲಿಲ್ಲ. ಆದರೆ ಇಂದು ಪೃಥ್ವಿ ಶಾ ಚೇತರಿಸಿಕೊಂಡಿದ್ದಾರೆ. ನಾಳಿನ ಪಂದ್ಯಕ್ಕೆ ಫಿಟ್ ಆಗಿದ್ದಾರೆ ಎಂದು ಟಿಮ್ ಇಂಡಿಯಾ ಕೋಚ್ ರವಿ ಶಾಸ್ತ್ರಿ ಸ್ಪಷ್ಟಪಡಿಸಿದ್ದಾರೆ.

ಈಗಾಗಲೇ ಟೀಮ್ ಇಂಡಿಯಾದ ಅನೇಕ ಆಟಗಾರರು ಗಾಯಗೊಂಡು ತಂಡದಿಂದ ಹೊರಗಿದ್ದಾರೆ. ಶಿಖರ್ ಧವನ್, ರೋಹಿತ್ ಶರ್ಮ, ಭುವನೇಶ್ವರ್ ಕುಮಾರ್‌ರಂತಾ ಆಟಗಾರರು ಚಿಕಿತ್ಸೆಯನ್ನು ಪಡೆದುಕೊಳ್ಳುತ್ತಿದ್ದಾರೆ.

ವೆಸ್ಟ್ ಇಂಡೀಸ್ ವಿರುದ್ಧದ ಟಿ20ಐ ಸರಣಿಗೆ 15 ಜನರ ಶ್ರೀಲಂಕಾ ತಂಡ ಪ್ರಕಟವೆಸ್ಟ್ ಇಂಡೀಸ್ ವಿರುದ್ಧದ ಟಿ20ಐ ಸರಣಿಗೆ 15 ಜನರ ಶ್ರೀಲಂಕಾ ತಂಡ ಪ್ರಕಟ

ರೋಹಿತ್ ಶರ್ಮಾ ಗಾಯಗೊಂಡು ಟೆಸ್ಟ್ ಸರಣಿಯಿಂದ ಹೊರಬಿದ್ದ ಕಾರಣ ಪೃಥ್ವಿ ಶಾ ಟೀಮ್ ಇಂಡಿಯಾಗೆ ಆಯ್ಕೆಯಾಗಿದ್ದರು. ಮೊದಲ ಪಂದ್ಯದಲ್ಲಿ ಪೃಥ್ವಿ ಶಾ ಉತ್ತಮ ಪ್ರದರ್ಶನವನ್ನು ನೀಡಿರಲಿಲ್ಲ. ಮೊದಲ ಇನ್ನಿಂಗ್ಸ್‌ನಲ್ಲಿ 16 ರನ್‌ಗಳಿಸಿದರೆ ಎರಡನೆ ಇನ್ನಿಂಗ್ಸ್‌ನಲ್ಲಿ 14 ರನ್ ಗಳಿಸಲಷ್ಟೇ ಶಕ್ತರಾಗಿದ್ದರು. ಎರಡನೇ ಪಂದ್ಯ ನಾಳೆ ಕ್ರೈಸ್ಟ್ ಚರ್ಚ್‌ ಮೈದಾನದಲ್ಲಿ ಆರಂಭವಾಗಲಿದೆ.

Story first published: Friday, February 28, 2020, 13:19 [IST]
Other articles published on Feb 28, 2020
POLLS
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Yes No
Settings X