ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X
For Quick Alerts
ALLOW NOTIFICATIONS  
For Daily Alerts
 

ವಿಂಡೀಸ್ ವಿರುದ್ಧ ಪೃಥ್ವಿ ಶಾ- ರೋಹಿತ್ ಶರ್ಮ ಆರಂಭಿಕರಾಗಿ ಕಣಕ್ಕೆ?

Prithvi Shaw likely to make ODI debut against West Indies, open innings with Rohit Sharma: Reports

ನವದೆಹಲಿ, ಅಕ್ಟೋಬರ್ 17 : ವೆಸ್ಟ್ ಇಂಡೀಸ್ ವಿರುದ್ಧದ ಟೆಸ್ಟ್ ಸರಣಿಯಲ್ಲಿ ಅದ್ಭುತ ಪ್ರದರ್ಶನ ನೀಡಿ ಹಲವು ದಾಖಲೆಗಳನ್ನು ಮುರಿದ ಯುವ ಆಟಗಾರ ಪೃಥ್ವಿ ಶಾ ಅವರು ಟೀಂ ಇಂಡಿಯಾ ಪರ ಚೊಚ್ಚಲ ಏಕದಿನ ಪಂದ್ಯವಾಡುವ ಕಾಲ ಸನ್ನಿಹಿತವಾಗಿದೆ. ರೋಹಿತ್ ಶರ್ಮ ಜತೆಯಲ್ಲಿ ಪೃಥ್ವಿ ಶಾ ಅವರು ಇನ್ನಿಂಗ್ಸ್ ಆರಂಭಿಸಲಿದ್ದಾರೆ ಎಂಬ ಸುದ್ದಿ ಹಬ್ಬಿದೆ.

ವೆಸ್ಟ್ ಇಂಡೀಸ್ ವಿರುದ್ಧದ ಏಕದಿನ ಕ್ರಿಕೆಟ್ ಸರಣಿಯ ಮೊದಲೆರಡು ಪಂದ್ಯಕ್ಕೆ ಈಗಾಗಲೇ ತಂಡವನ್ನು ಆಯ್ಕೆ ಮಾಡಲಾಗಿದೆ. ಶಿಖರ್ ಧವನ್ ಹಾಗೂ ರೋಹಿತ್ ಶರ್ಮ ಅವರು ಆರಂಭಿಕ ಆಟಗಾರರಾಗಿ ಆಯ್ಕೆಯಾಗಿದ್ದಾರೆ. ಅಗತ್ಯ ಬಿದ್ದರೆ ಕೆಎಲ್ ರಾಹುಲ್ ಅವರನ್ನು ಆರಂಭಿಕರಾಗಿ ಬಳಸಬಹುದು.

ವೆಸ್ಟ್ ಇಂಡೀಸ್ ವಿರುದ್ಧ 'ಸರಣಿ ಶ್ರೇಷ್ಠ' ಪೃಥ್ವಿ ಮುರಿದ ದಾಖಲೆಗಳು ವೆಸ್ಟ್ ಇಂಡೀಸ್ ವಿರುದ್ಧ 'ಸರಣಿ ಶ್ರೇಷ್ಠ' ಪೃಥ್ವಿ ಮುರಿದ ದಾಖಲೆಗಳು

ಆದರೆ, ಇಂಡಿಯನ್ ಎಕ್ಸ್ ಪ್ರೆಸ್ ವರದಿಯಂತೆ ಮೂರನೇ ಏಕದಿನ ಅಂತಾರಾಷ್ಟ್ರೀಯ ಪಂದ್ಯಕ್ಕೆ ಪೃಥ್ವಿ ಶಾ ಆಯ್ಕೆಯಾಗುವುದು ಖಚಿತವಾಗಿದ್ದು, ಮುಂಬೈನ ಇಬ್ಬರು ಆಟಗಾರರು ಆರಂಭಿಕ ಆಟಗಾರರಾಗಿ ಕಣಕ್ಕಿಳಿಯಲಿದ್ದಾರೆ ಎನ್ನಲಾಗಿದೆ.

ವಿಶ್ವಕಪ್ ದೃಷ್ಟಿಯಿಂದ ಬೇರೆ ಬೇರೆ ಆರಂಭಿಕ ಜೋಡಿಯನ್ನು ಕಣಕ್ಕಿಳಿಸಿ ಪರೀಕ್ಷಿಸಲು ಬಿಸಿಸಿಐ ನಿರ್ಧರಿಸಿದ್ದು, ಈ ನಿಟ್ಟಿನಲ್ಲಿ ಕೆಎಲ್ ರಾಹುಲ್ ಅವರನ್ನು ಆರಂಭಿಕರಾಗಿ ಆಡುವಂತೆ ಸೂಚಿಸುವ ಸಾಧ್ಯತೆಗಳಿವೆ.

ಮೊದಲ ಟೆಸ್ಟ್ ನಲ್ಲಿ ಶತಕ ಸಿಡಿಸಿದ ಪೃಥ್ವಿ ಸಾಧನೆಯ ಪ್ರಮುಖಾಂಶಗಳು ಮೊದಲ ಟೆಸ್ಟ್ ನಲ್ಲಿ ಶತಕ ಸಿಡಿಸಿದ ಪೃಥ್ವಿ ಸಾಧನೆಯ ಪ್ರಮುಖಾಂಶಗಳು

ಜಸ್ ಪ್ರೀತ್ ಬೂಮ್ರಾ, ಭುವನೇಶ್ವರ್ ಕುಮಾರ್, ಹಾರ್ದಿಕ್ ಪಾಂಡ್ಯ, ಮೊಹಮ್ಮದ್ ಶಮಿ ಅವರು ಇದೇ ಕಾರಣಕ್ಕೆ ಎಲ್ಲಾ ಸರಣಿಗಳಲ್ಲಿ ಕಾಣಿಸಿಕೊಳ್ಳುತ್ತಿಲ್ಲ. ಉಳಿದ ಪ್ರತಿಭೆಗಳಿಗೆ ಅವಕಾಶ ನೀಡಲಾಗಿತ್ತು.

ಪೃಥ್ವಿ ಶಾ ಚೊಚ್ಚಲ ಪಂದ್ಯದಲ್ಲೇ ಶತಕ, ದಾಖಲೆಗಳು ಧ್ವಂಸ! ಪೃಥ್ವಿ ಶಾ ಚೊಚ್ಚಲ ಪಂದ್ಯದಲ್ಲೇ ಶತಕ, ದಾಖಲೆಗಳು ಧ್ವಂಸ!

ಹೀಗಾಗಿ, ಕುಟುಂಬದ ಜತೆ ಕಾಲ ಕಳೆಯಲು ಬಯಸುವ ಹಾಗೂ ಸದ್ಯ ಉತ್ತಮ ಲಯದಲ್ಲಿರುವ ಶಿಖರ್ ಧವನ್ ಅವರಿಗೆ ವಿಶ್ರಾಂತಿ ನೀಡಿ, ಪೃಥ್ವಿ ಶಾ ಸೇರಿದಂತೆ ಹಲವು ಹೊಸ ಮುಖಗಳಿಗೆ ಅವಕಾಶ ಸಿಗಬಹುದು ಎಂಬ ಸುದ್ದಿಯಿದೆ.

Story first published: Wednesday, October 17, 2018, 16:14 [IST]
Other articles published on Oct 17, 2018
POLLS
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Yes No
Settings X