ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X
For Quick Alerts
ALLOW NOTIFICATIONS  
For Daily Alerts
 

ಕೀವಿಸ್ ವಿರುದ್ಧದ ಟೆಸ್ಟ್ ಸರಣಿಗೆ ಟೀಮ್ ಇಂಡಿಯಾ ಆಯ್ಕೆ: ರಾಹುಲ್‌ಗೆ ನಿರಾಸೆ

Prithvi Shaw returns to Indian Test squad for New Zealand series

ನ್ಯೂಜಿಲೆಂಡ್‌ ವಿರುದ್ಧದ ಎರಡು ಪಂದ್ಯಗಳ ಟೆಸ್ಟ್‌ ಸರಣಿಗೆ ಟೀಮ್ ಇಂಡಿಯಾ ತಂಡವನ್ನು ಪ್ರಕಟಗೊಳಿಸಲಾಗಿದೆ. ರೋಹಿತ್ ಶರ್ಮಾ ಟೆಸ್ಟ್ ಸರಣಿಯಿಂದಲೂ ಹೊಬಿದ್ದಿದ್ದಾರೆ. ಹೀಗಾಗಿ ಟೆಸ್ಟ್ ಸರಣಿಗೆ ರೋಹಿತ್ ಸ್ಥಾನಕ್ಕೆ ಬೇರೆ ಆಟಗಾರನನ್ನು ಹೆಸರಿಸಲಾಗಿದೆ.

ನ್ಯೂಜಿಲೆಂಡ್ ವಿರುದ್ಧ ಅದರ ನೆಲದಲ್ಲೇ ನಡೆಯುವ ಟೆಸ್ಟ್ ಸರಣಿ ಭಾರತದ ಪಾಲಿಗೆ ದೊಡ್ಡ ಅಗ್ನಿ ಪರೀಕ್ಷೆಯಾಗಿದೆ. ಚುಟುಕು ಕ್ರಿಕೆಟ್‌ನಲ್ಲಿ ಮಿಂಚಿರುವ ಭಾರತೀಯ ಆಟಗಾರರು ಟೆಸ್ಟ್‌ನಲ್ಲೂ ಇದೇ ಪ್ರದರ್ಶನವನ್ನು ಮುಂದುವರಿಸಬೇಕಿದೆ. ಅದಕ್ಕಾಗಿ ಬಲಿಷ್ಠ ತಂಡವನ್ನು ಹೆಸಲಿಸಲಾಗಿದೆ.

ಭಾರತ vs ಕೀವಿಸ್ ಏಕದಿನ: ರೋಹಿತ್ ಶರ್ಮಾ ಸ್ಥಾನಕ್ಕೆ ಕನ್ನಡಿಗ ಮಯಾಂಕ್‌ಗೆ ಅವಕಾಶಭಾರತ vs ಕೀವಿಸ್ ಏಕದಿನ: ರೋಹಿತ್ ಶರ್ಮಾ ಸ್ಥಾನಕ್ಕೆ ಕನ್ನಡಿಗ ಮಯಾಂಕ್‌ಗೆ ಅವಕಾಶ

ನ್ಯೂಜಿಲೆಂಡ್ ಎ ವಿರುದ್ಧದ ಭಾರತ ಎ ತಂಡದಲ್ಲಿ ಪಾಲ್ಗೊಂಡಿರುವ ಶುಭ್‌ಮನ್‌ಗಿಲ್ ಟೆಸ್ಟ್‌ನಲ್ಲಿ ದ್ವಿಶತಕವನ್ನು ಸಿಡಿಸಿ ಮಿಂಚಿದ್ದರು. ಇದೀಗ ರೋಹಿತ್ ಶರ್ಮಾ ಸ್ಥಾನಕ್ಕೆ ಶುಭ್‌ಮನ್‌ಗಿಲ್ ಅವಕಾಶವನ್ನು ಪಡೆದುಕೊಂಡಿದ್ದಾರೆ. ಫೆಬ್ರವರಿ 21 ರಿಂದ ಟೆಸ್ಟ್ ಸರಣಿ ಆರಂಭವಾಗಲಿದೆ.

ತಂಡಕ್ಕೆ ಮರಳಿದ ಪೃಥ್ವಿ ಶಾ

ತಂಡಕ್ಕೆ ಮರಳಿದ ಪೃಥ್ವಿ ಶಾ

ಪೃಥ್ವಿ ಶಾ ಟೆಸ್ಟ್ ತಂಡಕ್ಕೆ ಮರಳುವಲ್ಲಿ ಯಶಸ್ವಿಯಾಗಿದ್ದಾರೆ. ಡೋಪಿಂಗ್ ಟೆಸ್ಟ್‌ನಲ್ಲಿ ವಿಫಲರಾಗಿ ನಿಶೇಧಗೊಂಡ ಬಳಿಕ ಮೊದಲ ಬಾರಿಗೆ ಟೀಮ್ ಇಂಡಿಯಾದಲ್ಲಿ ಪೃಥ್ವಿ ಶಾ ಸ್ಥಾನ ಪಡೆದುಕೊಂಡಿದ್ದಾರೆ. ಭಾರತ ಎ ತಂಡಕ್ಕೆ ವಾಪಾಸಾದ ಪೃಥ್ವಿ ಶಾ ನ್ಯೂಜಿಲೆಂಡ್ ಎ ತಂಡದ ವಿರುದ್ಧದ ಅನಧೀಕೃತ ಸರಣಿಯಲ್ಲಿ ಅದ್ಭುತ ಪ್ರದರ್ಶನವನ್ನು ನೀಡಿದ್ದರು. ಈ ಪ್ರದರ್ಶನ ಟೀಮ್ ಇಂಡಿಯಾಗೆ ಅವಕಾಶವನ್ನು ಗಿಟ್ಟಿಸುವಂತೆ ಮಾಡಿದೆ.

ರಾಹುಲ್‌ಗೆ ಟೆಸ್ಟ್‌ನಲ್ಲಿ ನಿರಾಸೆ

ರಾಹುಲ್‌ಗೆ ಟೆಸ್ಟ್‌ನಲ್ಲಿ ನಿರಾಸೆ

ಟೆಸ್ಟ್‌ನಲ್ಲಿ ಮಿಂಚುಹರಿಸಿರುವ ಕನ್ನಡಿಗ ಮಯಾಂಕ್ ಅಗರ್ವಾಲ್ ಈ ಸರಣಿಗೂ ಟೆಸ್ಟ್ ತಂಡದಲ್ಲಿ ಅವಕಾಶವನ್ನು ಪಡೆದರೆ ಸೀಮಿತ ಓವರ್‌ಗಳಲ್ಲಿ ಅಬ್ಬಸುತ್ತಿರುವ ರಾಹುಲ್‌ಗೆ ನಿರಾಸೆಯಾಗಿದೆ. ರಾಹುಲ್ ಟೆಸ್ಟ್ ಸರಣಿಯಲ್ಲಿ ಸ್ಥಾನ ಪಡೆಯಲು ವಿಫಲರಾಗಿದ್ದಾರೆ.

ಟೆಸ್ಟ್‌ನಲ್ಲಿ ಸೈನಿ

ಟೆಸ್ಟ್‌ನಲ್ಲಿ ಸೈನಿ

ಯುವ ವೇಗಿ ನವ್‌ದೀಪ್ ಸೈನಿ ಟೆಸ್ಟ್‌ ತಂಡದಲ್ಲಿ ಕಾಣಿಸಿಕೊಂಡಿರುವ ಮತ್ತೋರ್ವ ಯುವ ಆಟಗಾರ. ಗಾಯಗೊಂಡಿರುವ ಇಶಾಂತ್ ಶರ್ಮಾ ಇನ್ನೂ ಫಿಟ್‌ನೆಸ್ ಪರೀಕ್ಷೆಗೊಳಪಡಲಿದ್ದು ಅವರನ್ನೂ ತಂಡದಲ್ಲಿ ಹೆಸರಿಸಲಾಗಿದೆ.

ಪ್ರಕಟವಾದ ಟೆಸ್ಟ್ ತಂಡ

ಪ್ರಕಟವಾದ ಟೆಸ್ಟ್ ತಂಡ

ಟೀಮ್ ಇಂಡಿಯಾ ಟೆಸ್ಟ್ ತಂಡ: ವಿರಾಟ್ ಕೊಹ್ಲಿ (ಕ್ಯಾಪ್ಟನ್), ಮಾಯಾಂಕ್ ಅಗರ್ವಾಲ್, ಪೃಥ್ವಿ ಶಾ, ಶುಭ್‌ಮನ್ ಗಿಲ್, ಚೇತೇಶ್ವರ ಪೂಜಾರ, ಅಜಿಂಕ್ಯ ರಹಾನೆ (ಉಪನಾಯಕ), ಹನುಮ ವಿಹಾರಿ, ವೃದ್ಧಿಮಾನ್ ಸಹಾ (ವಿಕೆಟ್ ಕೀಪರ್), ರಿಷಭ್ ಪಂತ್ (ವಿಕೆಟ್ ಕೀಪರ್), ಆರ್.ಅಶ್ವಿನ್, ರವೀಂದ್ರ ಜಡೇಜಾ, ಜಸ್ಪ್ರೀತ್ ಬುಮ್ರಾ, ಉಮೇಶ್ ಯಾದವ್, ಮೊಹಮ್ಮದ್ ಶಮಿ, ನವದೀಪ್ ಸೈನಿ, ಇಶಾಂತ್ ಶರ್ಮಾ

Story first published: Tuesday, February 4, 2020, 11:35 [IST]
Other articles published on Feb 4, 2020
POLLS
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Yes No
Settings X