ಭಾರತ vs ಇಂಗ್ಲೆಂಡ್: ಟೀಮ್ ಇಂಡಿಯಾದಿಂದ ಈ ಮೂವರು ಆಟಗಾರರು ಔಟ್, ಬದಲಿ ಆಟಗಾರರ ಸೇರ್ಪಡೆ

ಇತ್ತೀಚೆಗಷ್ಟೇ ಭಾರತ ಬಿ ತಂಡ ಮತ್ತು ಶ್ರೀಲಂಕಾ ನಡುವಿನ ಏಕದಿನ ಸರಣಿ ಮುಗಿದಿದ್ದು ಭಾರತ ತಂಡ ಲಂಕಾ ವಿರುದ್ಧ 2-1 ಅಂತರದಲ್ಲಿ ಏಕದಿನ ಸರಣಿಯನ್ನು ಕೈವಶ ಮಾಡಿಕೊಂಡಿದೆ. ಅತ್ತ ಇಂಗ್ಲೆಂಡ್‌ನಲ್ಲಿ ಬೀಡುಬಿಟ್ಟಿರುವ ವಿರಾಟ್ ಕೊಹ್ಲಿ ನೇತೃತ್ವದ ಭಾರತ ತಂಡ ಆಗಸ್ಟ್ 4ರಿಂದ ಆರಂಭವಾಗಲಿರುವ ಇಂಗ್ಲೆಂಡ್ ವಿರುದ್ಧದ 5 ಪಂದ್ಯಗಳ ಟೆಸ್ಟ್ ಸರಣಿಯನ್ನು ಆಡಲು ತಯಾರಿ ನಡೆಸುತ್ತಿದೆ.
ಈ ಸರಣಿಯ ಕುರಿತಂತೆ ಇದೀಗ ಹೊಸದೊಂದು ಸುದ್ದಿ ಬಿಸಿಸಿಐ ಪಾಳಯದಿಂದ ಬಂದಿದ್ದು ಭಾರತದ ಮೂವರು ಆಟಗಾರರು ಕೈಗೊಳ್ಳಲಿದ್ದಾರೆ ಎನ್ನಲಾಗುತ್ತಿದೆ. ಹೌದು ಇಂಗ್ಲೆಂಡ್ ಪ್ರವಾಸ ಕೈಗೊಂಡಿದ್ದ ಶುಬ್ ಮನ್ ಗಿಲ್, ಆವೇಶ್ ಖಾನ್ ಮತ್ತು ವಾಷಿಂಗ್ಟನ್ ಸುಂದರ್ ವಿವಿಧ ಗಾಯಗಳ ಸಮಸ್ಯೆಯಿಂದ ಬಳಲುತ್ತಿರುವ ಕಾರಣ ಇಂಗ್ಲೆಂಡ್ ವಿರುದ್ಧದ ಟೆಸ್ಟ್ ಸರಣಿಯಲ್ಲಿ ಭಾಗವಹಿಸುವುದು ಅಸಾಧ್ಯವಾಗಿದೆ.
ಹೀಗಾಗಿ ಗಾಯಗೊಂಡಿರುವ ಈ ಮೂವರು ಆಟಗಾರರ ಬದಲಾಗಿ ಈ ಕೆಳಕಂಡ ಮೂವರು ಆಟಗಾರರನ್ನು ಆಯ್ಕೆ ಮಾಡಲಾಗಿದ್ದು ಶೀಘ್ರವೇ ಈ ಮೂವರು ಆಟಗಾರರು ಇಂಗ್ಲೆಂಡ್ ಪ್ರವಾಸವನ್ನು ಕೈಗೊಳ್ಳಲಿದ್ದು ಟೀಮ್ ಇಂಡಿಯಾವನ್ನು ಸೇರಿಕೊಳ್ಳಲಿದ್ದಾರೆ ಎಂದು ಬಿಸಿಸಿಐನ ಅಧಿಕಾರಿಯೊಬ್ಬರು ಸ್ಪಷ್ಟನೆ ನೀಡಿದ್ದಾರೆ.

ಸೂರ್ಯಕುಮಾರ್ ಯಾದವ್
ಸದ್ಯ ಇತ್ತೀಚಿನ ದಿನಗಳಲ್ಲಿ ಅತೀ ಒಳ್ಳೆಯ ಫಾರ್ಮ್‌ನಲ್ಲಿರುವ ಟೀಮ್ ಇಂಡಿಯಾದ ಆಟಗಾರನೆಂದರೆ ಅದು ಸೂರ್ಯಕುಮಾರ್ ಯಾದವ್. ಇತ್ತೀಚೆಗಷ್ಟೇ ನಡೆದ ಶ್ರೀಲಂಕಾ ವಿರುದ್ಧದ ಏಕದಿನ ಸರಣಿಯಲ್ಲಿಯೂ ಸಹ ಸೂರ್ಯಕುಮಾರ್ ಯಾದವ್ ಅತ್ಯುತ್ತಮ ಪ್ರದರ್ಶನವನ್ನು ನೀಡಿ ಸರಣಿಶ್ರೇಷ್ಠ ಪ್ರಶಸ್ತಿಗೆ ಭಾಜನರಾಗಿದ್ದಾರೆ. ಹೀಗೆ ಒಳ್ಳೆಯ ಆಟವನ್ನು ಆಡುತ್ತಿರುವ ಸೂರ್ಯಕುಮಾರ್ ಯಾದವ್ ಬದಲಿ ಆಟಗಾರನಾಗಿ ಇಂಗ್ಲೆಂಡ್ ಪ್ರವಾಸ ಕೈಗೊಳ್ಳುವ ಅವಕಾಶವನ್ನು ಪಡೆದುಕೊಂಡಿದ್ದಾರೆ.

ಪೃಥ್ವಿ ಶಾ
ಇತ್ತೀಚೆಗೆ ನಡೆದ ಶ್ರೀಲಂಕಾ ವಿರುದ್ಧದ 3 ಏಕದಿನ ಪಂದ್ಯಗಳ ಪೈಕಿ ಮೊದಲ ಹಾಗೂ ಕೊನೆಯ ಏಕದಿನ ಪಂದ್ಯಗಳಲ್ಲಿ ಪೃಥ್ವಿ ಶಾ ಮಿಂಚಿದರು. ಮೊದಲನೇ ಏಕದಿನ ಪಂದ್ಯದಲ್ಲಿ ಪೃಥ್ವಿ ಶಾ ತೋರಿದ ಅತ್ಯುತ್ತಮ ಪ್ರದರ್ಶನಕ್ಕೆ ಪಂದ್ಯಶ್ರೇಷ್ಠ ಪ್ರಶಸ್ತಿ ಕೂಡಾ ಲಭಿಸಿತ್ತು. ಮುಂಬರುವ ಶ್ರೀಲಂಕಾ ವಿರುದ್ಧದ ಟಿ ಟ್ವೆಂಟಿ ಸರಣಿಗೆ ಸಿದ್ಧತೆ ನಡೆಸುತ್ತಿರುವ ಪೃಥ್ವಿ ಶಾ ಇದೀಗ ಇಂಗ್ಲೆಂಡ್ ಪ್ರವಾಸವನ್ನು ಕೈಗೊಳ್ಳಲು ಆಯ್ಕೆಯಾಗಿದ್ದಾರೆ.

ಜಯಂತ್ ಯಾದವ್
ಸೂರ್ಯಕುಮಾರ್ ಯಾದವ್ ಮತ್ತು ಪೃಥ್ವಿ ಶಾ ಜೊತೆ ಮತ್ತೋರ್ವ ಭಾರತೀಯ ಆಟಗಾರ ಜಯಂತ್ ಯಾದವ್ ಕೂಡ ಬದಲಿ ಆಟಗಾರನಾಗಿ ಇಂಗ್ಲೆಂಡ್ ಪ್ರವಾಸ ಕೈಗೊಳ್ಳಲಿದ್ದಾರೆ ಎನ್ನಲಾಗುತ್ತಿದೆ. 2016ರಲ್ಲಿ ಇಂಗ್ಲೆಂಡ್ ವಿರುದ್ಧದ ಟೆಸ್ಟ್ ಮೂಲಕ ಅಂತಾರಾಷ್ಟ್ರೀಯ ಟೆಸ್ಟ್ ಕ್ರಿಕೆಟ್‍ಗೆ ಪದಾರ್ಪಣೆ ಮಾಡಿರುವ ಜಯಂತ್ ಯಾದವ್ ಟೆಸ್ಟ್ ಕ್ರಿಕೆಟ್‍ನಲ್ಲಿ ಒಂದು ಶತಕವನ್ನು ಸಿಡಿಸಿ ಮಿಂಚಿದ್ದಾರೆ.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications