ಚೆನ್ನೈ ಕೋಟೆಯಲ್ಲಿ ಬಿರುಗಾಳಿ ಎಬ್ಬಿಸಿದ ಪಂಜಾಬ್ ಇಂಪ್ಯಾಕ್ಟ್ ಪ್ಲೇಯರ್
ಚೆನ್ನೈ: ಕಳೆದ ಬಾರಿಯ ರನ್ನರ್ ಅಪ್ ಪಂಜಾಬ್ ಕಿಂಗ್ಸ್ 19ನೇ ಆವೃತ್ತಿಯ ಐಪಿಎಲ್‌ನಲ್ಲಿ ಭರ್ಜರಿ ಆರಂಭವನ್ನು ಮಾಡಿದೆ. ಚೆನ್ನೈ ಸೂಪರ್ ಕಿಂಗ್ಸ್ ತಂಡವನ್ನು ತವರಿನಲ್ಲಿ ಬಗ್ಗು ಬಡೆದ ಪಂಜಾಬ್ ಅಬ್ಬರಿಸಿದೆ. ಈ ಮೂಲಕ ಪ್ರಸಕ್ತ ಐಪಿಎಲ್‌ನಲ್ಲಿ ಎರಡನೇ ಗೆಲುವಿನ ನಗೆ ಬೀರಿದೆ. ಈ ಮೂಲಕ ಅಂಕ ಪಟ್ಟಿಯಲ್ಲಿ ಮೊದಲ ಸ್ಥಾನಕ್ಕೆ ಬಡ್ತಿ ಪಡೆದಿದೆ.
ಪಂಜಾಬ್ ಕಿಂಗ್ಸ್ ತಂಡದ ಪರ ಹಲವು ಆಟಗಾರರು ಭರ್ಜರಿ ಪ್ರದರ್ಶನ ನೀಡಿದರು. ಪಂಜಾಬ್ ಕಿಂಗ್ಸ್ ತಂಡದ ಸ್ಪಿನ್ ಬೌಲರ್ ಯುಜುವೇಂದ್ರ ಚಾಹಲ್ ಅವರು ನಾಯಕ ರುತುರಾಜ್ ಗಾಯಕ್ವಾಡ್ ಅವರ ವಿಕೆಟ್ ಪಡೆದು ಚೆನ್ನೈ ತಂಡದ ರನ್ ದಾಹಕ್ಕೆ ಬ್ರೇಕ್ ಹಾಕಿದರು.

ಪಂಜಾಬ್ ಪರ ಕರ್ನಾಟಕದ ವೇಗದ ಬೌಲರ್ ವಿಜಯ್ ಕುಮಾರ್ ವೈಶಖ್ ಅವರು ಸಹ ಬಿಗುವಿನ ದಾಳಿ ನಡೆಸಿ ತಂಡಕ್ಕೆ ಆಧಾರವಾದರು. ಆದರೆ ಇವರು ಕೊಂಚ ದುಬಾರಿ ಆದರು. ಆದರೆ ವಿಕೆಟ್ ಪಡೆಯುವಲ್ಲಿ ಹಿಂದೆ ಬೀಳಲಿಲ್ಲ. ಭರ್ಜರಿ ಬ್ಯಾಟಿಂಗ್ ನಡೆಸುತ್ತಿದ್ದ ಆಯುಷ್ ಮಾತ್ರೆ ಅವರಿಗೆ ಪೆವಿಲಿಯನ್ ಹಾದಿ ತೋರಿಸಿದರು. ಅಲ್ಲದೆ ಬಿರುಸಿನ ಬ್ಯಾಟಿಂಗ್ ಮಾಡುತ್ತಿದ್ದ ಸರ್ಫರಾಜ್ ಖಾನ್ ಅವರಿಗೂ ಸಹ ಖೆಡ್ಡಾ ತೋಡಿತು. ಪರಿಣಾಮ ಸಿಎಸ್‌ಕೆ ತಂಡದ ರನ್ ವೇಗಕ್ಕೆ ಬ್ರೇಕ್ ಬಿದ್ದಿತು.
ಬಿರುಸಿನ ಬ್ಯಾಟಿಂಗ್
ಇನ್ನು ಪಂಜಾಬ್ ತಂಡದ ಪರ ಬ್ಯಾಟಿಂಗ್ ಮಾಡುವಾಗಲೂ ನಾಯಕ ಶ್ರೇಯಸ್ ಅಯ್ಯರ್ ಜವಾಬ್ದಾರಿಯುತ ಬ್ಯಾಟಿಂಗ್ ನಡೆಸಿದರು. ಇವರು 29 ಎಸೆತಗಳಲ್ಲಿ 4 ಬೌಂಡರಿ, 3 ಸಿಕ್ಸರ್ ಸಹಾಯದಿಂದ 50 ರನ್ ಸಿಡಿಸಿ ತಂಡಕ್ಕೆ ಆಧಾರವಾದರು. ಆದರೆ ಇವರೆಲ್ಲರಿಗಿಂತ ಈ ಒಬ್ಬ ಪ್ಲೇಯರ್ 210 ರನ್‌ಗಳನ್ನು ಗುರಿಯನ್ನು ಬೆನ್ನಟ್ಟಿದಾಗ ಹೇಗೆ ಬ್ಯಾಟ್ ಮಾಡಬೇಕು ಎಂಬುದನ್ನು ಈ ಯುವ ಬ್ಯಾಟರ್ ಅರಿತಿದ್ದರು. ಪರಿಣಾಮ ಮೊದಲ ಎಸೆತದಿಂದಲೇ ಆಕ್ರಮಣಕಾರಿ ಬ್ಯಾಟ್ ಮಾಡಿ ಅಬ್ಬರಿಸಿದರು. ಅವರೇ ಆರಂಭಿಕ ಆಟಗಾರ ಪ್ರಿಯಾಂಶ್ ಆರ್ಯ.
24 ವರ್ಷದ ಪ್ರಿಯಾಂಶ್ ಆರ್ಯ ಇಂಪ್ಯಾಕ್ಟ್ ಪ್ಲೇಯರ್ ಆಗಿ ಕಣಕ್ಕೆ ಇಳಿದರು. ಇವರು ತಮ್ಮ ಮೇಲೆ ತಂಡ ಇಟ್ಟ ನಂಬಿಕೆಗೆ ಪೂರಕವಾಗಿ ಬ್ಯಾಟ್ ಮಾಡಿದರು. ಇವರು ಜಸ್ಟ್ 11 ಎಸೆತಗಳಲ್ಲಿ 39 ರನ್ ಬಾರಿಸಿದರು. ಇವರು 3 ಬೌಂಡರಿ, 4 ಸಿಕ್ಸರ್ ಬಾರಿಸಿ ಮಿಂಚಿದರು. ದೊಡ್ಡ ಮೊತ್ತದ ಗುರಿಯನ್ನು ಬೆನ್ನಟ್ಟಿದಾಗ ಪಂಜಾಬ್ ತಂಡಕ್ಕೆ ಬಿರುಸಿನ ಆರಂಭ ನೀಡಿದ ಪ್ರಿಯಾಂಶ್ ಆರ್ಯ ಗೆಲುವಿನಲ್ಲಿ ಮಿಂಚಿದರು.
ಪಂದ್ಯದ ಫಲಿತಾಂಶ
ಟಾಸ್ ಸೋತರೂ ಚೆನ್ನೈ ಸೂಪರ್ ಕಿಂಗ್ಸ್ ಮೊದಲು ಬ್ಯಾಟಿಂಗ್ ಮಾಡಿ 20 ಓವರ್‌ಗಳಲ್ಲಿ 5 ವಿಕೆಟ್‌ಗೆ 209 ರನ್ ಸೇರಿಸಿತು. ಈ ವೇಳೆ ಆಯುಷ್ ಮಾತ್ರೆ 73, ಶಿವಂ ದುಬೆ 45, ಸರ್ಫರಾಜ್ ಖಾನ್ 32 ರನ್ ಸಿಡಿಸಿ ತಂಡಕ್ಕೆ ಆಧಾರವಾದರು. ಗುರಿಯನ್ನು ಬೆನ್ನಟ್ಟಿದ ಪಂಜಾಬ್ 18.4 ಓವರ್‌ಗಳಲ್ಲಿ 5 ವಿಕೆಟ್ ಕಳೆದುಕೊಂಡು 210 ರನ್ ಸೇರಿಸಿ ಎರಡನೇ ಜಯ ದಾಖಲಿಸಿತು.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications