IND vs AUS Test: ಮೂರನೇ ಟೆಸ್ಟ್‌ನಲ್ಲಿ ಹೇಗಿರಲಿದೆ ಟೀಮ್ ಇಂಡಿಯಾ ಪ್ಲೇಯಿಂಗ್ ಇಲೆವೆನ್? ಇಲ್ಲಿದೆ ಮಾಹಿತಿ
ಭಾರತ ಹಾಗೂ ಆಸ್ಟ್ರೇಲಿಯಾ ನಡುವಣ 3ನೇ ಟೆಸ್ಟ್ ಬ್ರಿಸ್ಬೇನ್‌ನಲ್ಲಿ ಶನಿವಾರದಿಂದ ಆರಂಭವಾಗಲಿದೆ. ಈ ಟೆಸ್ಟ್ ಪಂದ್ಯಕ್ಕೆ ಟೀಮ್ ಇಂಡಿಯಾ ಸಜ್ಜಾಗಿದೆ. ಈಗಾಗಲೇ ಎರಡೂ ಪಂದ್ಯಗಳು ಮುಗಿದಿವೆ. ಆಡಿದ ಎರಡೂ ಪಂದ್ಯಗಳಲ್ಲಿ ಭಾರತ ಹಾಗೂ ಆಸ್ಟ್ರೇಲಿಯಾ ತಂಡಗಳು ತಲಾ ಒಂದೊಂದು ಪಂದ್ಯವನ್ನು ಗೆದ್ದಿವೆ. ಹೀಗಾಗಿ ಮೂರನೇ ಟೆಸ್ಟ್ ಪಂದ್ಯ ರೋಚಕತೆ ಹುಟ್ಟಿಸಿದೆ. ಈ ಪಂದ್ಯದಲ್ಲಿ ಜಯ ಸಾಧಿಸಿ ಸರಣಿಯಲ್ಲಿ ಮುನ್ನಡೆ ಸಾಧಿಸಲು ಉಭಯ ತಂಡಗಳು ಪ್ಲ್ಯಾನ್ ಮಾಡಿಕೊಂಡಿವೆ.
ಈ ಪಂದ್ಯದಲ್ಲಿ ಜಯ ಸಾಧಿಸಿ ವಿಶ್ವ ಟೆಸ್ಟ್ ಚಾಂಪಿಯನ್ ಶಿಪ್ ಫೈನಲ್‌ಗೆ ಪ್ರವೇಶ ಪಡೆಯುವ ಕನಸನ್ನು ಹಸಿರಾಗುವ ಕನಸನ್ನು ಟೀಮ್ ಇಂಡಿಯಾ ಕಾಣುತ್ತಿದೆ. ಪಿಚ್‌ನ್ನು ಬಳಸಿಕೊಂಡು ಈ ಅಂಗಳದಲ್ಲಿ ಮತ್ತೊಮ್ಮೆ ಅಮೊಘ ಜಯ ಸಾಧಿಸಲು ಟೀಮ್ ಇಂಡಿಯಾ ಪ್ಲ್ಯಾನ್ ಮಾಡಿಕೊಂಡಿದೆ. ಈ ಅಂಗಳದಲ್ಲಿ ಹಿಂದಿನ ಪ್ರವಾಸದಲ್ಲಿ ನಡೆದ ಪಂದ್ಯದಲ್ಲಿ ರಿಷಭ್ ಪಂತ್ ಅವರು ಅಬ್ಬರಿಸಿದ್ದರು. ಹೀಗಾಗಿ ಟೀಮ್ ಇಂಡಿಯಾ ಈ ಬಾರಿಯೂ ಕ್ಲಾಸಿಕ್ ಆಟದ ಪ್ರದರ್ಶನ ನೀಡುವ ವಿಶ್ವಾಸವಿದ್ದು, ಭಾರತ ಈ ಪಂದ್ಯದಲ್ಲಿ ಜಯ ಸಾಧಿಸಲು ಬೇಕಾದ ರಣ ತಂತ್ರವನ್ನು ರೂಪಿಸಿಕೊಂಡಿದೆ.

ಹರ್ಷಿತ್‌ಗೆ ಕೋಕ್
ಆಡಿಲೇಡ್ ಟೆಸ್ಟ್‌ನಲ್ಲಿ ಟೀಮ್ ಇಂಡಿಯಾ ನೀರಸ ಪ್ರದರ್ಶನ ನೀಡಿದೆ. ಈ ವೇಳೆ ತಂಡದ ಯುವ ವೇಗಿ ಹರ್ಷಿತ್ ರಾಣಾ ತಮ್ಮ ಮೇಲೆ ತಂಡ ಇಟ್ಟ ನಂಬಿಕೆಗೆ ಪೂರಕವಾಗಿ ಬ್ಯಾಟ್ ಮಾಡುವಲ್ಲಿ ವಿಫಲರಾಗಿದ್ದಾರೆ. ಹೀಗಾಗಿ ಇವರ ಸ್ಥಾನಕ್ಕೆ ಕುತ್ತು ಬಂದಿದೆ. ಇವರ ಸ್ಥಾನದಲ್ಲಿ ಆರ್‌ಸಿಬಿ ತಂಡದ ಮಾಜಿ ವೇಗಿ ಆಕಾಶ್ ದೀಪ್ ಹಾಗೂ ಕರ್ನಾಟಕದ ಪ್ರಸಿದ್ಧ ಕೃಷ್ಣ ಅವರಿಗೆ ಸ್ಥಾನ ಸಿಗುವ ಸಾಧ್ಯತೆ ಇದೆ. ಈ ಇಬ್ಬರು ಆಟಗಾರರಲ್ಲಿ ಪ್ರಸಿದ್ಧ ಕೃಷ್ಣ ಅವರು ಭಾರತದ ಪರ ಕಣಕ್ಕೆ ಇಳಿಯುವ ಸಾಧ್ಯತೆ ಇದೆ. ಪ್ರಸಿದ್ಧ, ಆಕಾಶ್ ದೀಪ್‌ಗೆ ಹೋಲಿಸಿದರೆ ಕೊಂಚ ಉದ್ದವಿದ್ದು, ಪಿಚ್‌ನ ಲಾಭವನ್ನು ಪಡೆಯಬಹುದು ಎಂದು ಅಂದಾಜಿಸಲಾಗಿದೆ.
ವಾಷಿಂಗ್ಟನ್ ಸುಂದರ್‌ಗೆ ಅವಕಾಶ
ಕಳೆದ ಪ್ರವಾಸದಲ್ಲಿ ಗಬ್ಬಾ ಟೆಸ್ಟ್‌ನಲ್ಲಿ ಮನಮೋಹಕ ಬ್ಯಾಟಿಂಗ್ ಹಾಗೂ ಬೌಲಿಂಗ್ ನಲ್ಲಿ ಅಮೋಘ ಪ್ರದರ್ಶನ ನಿಡಿದ್ದ ವಾಷಿಂಗ್ಟನ್ ಸುಂದರ್‌ಗೆ ಅವಕಾಶ ಸಿಗುವ ಸಾಧ್ಯತೆ ಇದೆ. ಭಾರತ ಮೂರನೇ ಟೆಸ್ಟ್ ಪಂದ್ಯದಿಂದ ಆರ್. ಅಶ್ವಿನ್ ಅವರನ್ನು ಬೆಂಚ್ ಮೇಲೆ ಕುರಿಸುವ ಸಾಧ್ಯತೆ ಇದೆ. ಇವರ ಸ್ಥಾನದಲ್ಲಿ ವಾಷಿಂಗ್ಟನ್ ಸುಂದರ್ ಕಾಣಿಸಿಕೊಳ್ಳಲಿದ್ದಾರೆ.

ಯಾವ ಕ್ರಮಾಂಕದಲ್ಲಿ ಬ್ಯಾಟಿಂಗ್?
ಪರ್ತ್‌ನಲ್ಲಿ ಅಮೊಘ ಬ್ಯಾಟಿಂಗ್ ನಡೆಸಿದ್ದ ಕೆಎಲ್ ರಾಹುಲ್ ಅವರು ಮತ್ತೊಮ್ಮೆ ಆಡಿಲೇಡ್‌ನಲ್ಲಿ ಇನಿಂಗ್ಸ್ ಆರಂಭಿಸಿದ್ದರು. ಆದರೆ ಎರಡನೇ ಟೆಸ್ಟ್ ಪಂದ್ಯದಲ್ಲಿ ರಾಹುಲ್ ಸ್ಥಿರ ಪ್ರದರ್ಶನ ನೀಡುವಲ್ಲಿ ವಿಫಲರಾಗಿದ್ದರು. ರಾಹುಲ್ ಇನಿಂಗ್ಸ್ ಆರಂಭೀಸಿದ್ದರಿಂದ ರೋಹಿತ್ ಶರ್ಮಾ ಮಿಡ್ಲ್ ಆರ್ಡರ್‌ನಲ್ಲಿ ಬ್ಯಾಟ್ ಮಾಡಿದ್ದರು. ಆದರೆ ಟೀಮ್ ಇಂಡಿಯಾ ಮಾಜಿ ಆಟಗಾರರು ರೋಹಿತ್ ಬ್ರಿಸ್ಬೇನ್‌ನಲ್ಲಿ ಇನಿಂಗ್ಸ್ ಆರಂಭಿಸುವಂತೆ ಸಲಹೆ ನೀಡಿದ್ದಾರೆ. ಹೀಗಾಗಿ ರೋಹಿತ್ ಯಾವ ಕ್ರಮಾಂಕದಲ್ಲಿ ಬ್ಯಾಟ್ ಮಾಡುತ್ತಾರೆ ಎಂಬುದನ್ನು ಕಾದು ನೋಡಬೇಕಿದೆ.
ಭಾರತದ ಸಂಭಾವ್ಯ ತಂಡ: ಯಶಸ್ವಿ ಜೈಸ್ವಾಲ್, ರೋಹಿತ್ ಶರ್ಮಾ (ನಾಯಕ), ಶುಭಮನ್ ಗಿಲ್, ವಿರಾಟ್ ಕೊಹ್ಲಿ, ರಿಷಭ್ ಪಂತ್, ಕೆಎಲ್ ರಾಹುಲ್, ನಿತೀಶ್ ಕುಮಾರ್ ರೆಡ್ಡಿ, ವಾಷಿಂಗ್ಟನ್ ಸುಂದರ್/ ಆರ್ ಅಶ್ವಿನ್, ಆಕಾಶ್ ದೀಪ್, ಮೊಹಮ್ಮದ್ ಸಿರಾಜ್, ಜಸ್ಪ್ರಿತ್ ಬುಮ್ರಾ,
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications