ಈ ವರ್ಷ ನಿವೃತ್ತಿ ಹೊಂದಿದ ಭಾರತೀಯ ಆಟಗಾರರ ಪಟ್ಟಿ ಇಲ್ಲಿದೆ
ಭಾರತ ಕ್ರಿಕೆಟ್ ಕ್ಷೇತ್ರದಲ್ಲಿ ತನ್ನದೇ ಆದ ಛಾಪನ್ನು ದಿನವೂ ಮೂಡಿಸುತ್ತಲೇ ಇದೆ. ದೇಶದ ಕ್ರಿಕೆಟ್ ಆಟಗಾರರು ವಿಶ್ವ ಮಟ್ಟದಲ್ಲಿ ಸದ್ದು ಮಾಡಿ ಸೈ ಎನಿಸಿಕೊಂಡಿದ್ದಾರೆ. ಇನ್ನು ಹಲವು ದಾಖಲೆಗಳನ್ನು ಬರೆದಿದ್ದಾರೆ. ಈ ವರ್ಷವೂ ಹಲವು ಸ್ಟಾರ್ ಆಟಗಾರರು ಕ್ರಿಕೆಟ್‌ಗೆ ವಿದಾಯ ಹೇಳಿದ್ದಾರೆ. 2024ರಲ್ಲಿ ಟೀಮ್ ಇಂಡಿಯಾ ಪರ ವಿದಾಯ ಹೇಳಿದ ಪ್ರಮುಖ ಆಟಗಾರರ ಪಟ್ಟಿ ಇಲ್ಲಿದೆ.
ವಿಶ್ವ ಕ್ರಿಕೆಟ್‌ನಲ್ಲಿ ತಮ್ಮದೇ ಆದ ಗುರುತು ಹೊಂದಿರುವ ಟೀಮ್ ಇಂಡಿಯಾ ಕ್ರಿಕೆಟ್ ಆಟಗಾರರು ನಿವೃತ್ತಿ ಘೋಷಿಸಿದ್ದಾರೆ. ಈ ವರ್ಷ ವಿಶ್ವ ಕ್ರಿಕೆಟ್‌ನಲ್ಲಿ ಒಟ್ಟು 26 ಜನ ಆಟಗಾರರು ವಿದಾಯ ಹೇಳಿದ್ದಾರೆ. ಇದರಲ್ಲಿ ಟೀಮ್ ಇಂಡಿಯಾ ಆಟಗಾರರ ಹೆಸರುಗಳು ಇವೆ. ಈ ಆಟಗಾರರು ಅಂತಾರಾಷ್ಟ್ರೀಯ ಪಂದ್ಯಗಳಲ್ಲಿ ಅಬ್ಬರಿಸಿ ಅಭಿಮಾನಿಗಳ ಮನದಲ್ಲಿ ಶಾಶ್ವತ ಸ್ಥಾನ ಪಡೆದವರು. ಹಾಗಿದ್ದರೆ 2024ರಲ್ಲಿ ಟೀಮ್ ಇಂಡಿಯಾ ಪರ ವಿದಾಯ ಹೇಳಿದ ಪ್ರಮುಖ ಆಟಗಾರರ ಪಟ್ಟಿ ನೋಡೋಣ.

ವಿಶ್ವ ಕ್ರಿಕೆಟ್ ಆಟಗಾರರ ಪಟ್ಟಿಯನ್ನು ಒಮ್ಮೆ ನೋಡಿದರೆ ಈ ಪಟ್ಟಿಯಲ್ಲಿ ಮೊದಲು ಕಾಣಿಸಿಕೊಳ್ಳುವುದು ಹೆನ್ರಿ ಕ್ಲಾಸೆನ್. ಇವರು ದಕ್ಷಿಣ ಆಫ್ರಿಕಾದ ಸ್ಟಾರ್ ಆಟಗಾರ. ಇವರು ಟೆಸ್ಟ್ ಕ್ರಿಕೆಟ್‌ಗೆ ಇದೇ ವರ್ಷದ ಜನೆವರಿಯಲ್ಲಿ ವಿದಾಯ ಹೇಳಿದ್ದಾರೆ. ಇನ್ನು ಆಫ್ರಿಕಾ ತಂಡದ ಅನುಭವಿ ಡೀನ್ ಎಲ್ಗರ್ ಸಹ ಇದೇ ವರ್ಷ ಅಂಗಳದಿಂದ ದೂರ ಸರಿದಿದ್ದಾರೆ. ಈ ಪಟ್ಟಿಯಲ್ಲಿ ನ್ಯೂಜಿಲೆಂಡ್ ತಂಡ ನೀಲ್ ವ್ಯಾಗ್ನರ್, ಕಾಲಿನ್ ಮುನ್ರೋ, ಟ್ರೆಂಟ್ ಬೋಲ್ಟ್ ಸೇರುತ್ತಾರೆ. ಇನ್ನು ಆಸ್ಟ್ರೇಲಿಯಾ ಪರ ಸ್ಫೋಟಕ ಆಟಗಾರ ಡೇವಿಡ್ ವಾರ್ನರ್ ಇದೇ ವರ್ಷದಲ್ಲಿ ವಿದಾಯ ಹೇಳಿದ್ದಾರೆ.
ಭಾರತ ತಂಡವನ್ನು ಅಂತಾರಾಷ್ಟ್ರೀಯ ಕ್ರಿಕೆಟ್‌ನಲ್ಲಿ ಪ್ರತಿನಿಧಿಸಿ ಹಲವು ಆಟಗಾರರು ಸಹ ಈ ವರ್ಷ ವಿದಾಯ ಹೇಳಿದ್ದಾರೆ. ಈ ಪಟ್ಟಿಯಲ್ಲಿ ಸೌರಭ್ ತಿವಾರಿ, ವೇಗಿ ವರುಣ್ ಆರುನ್, ಆಲ್‌ರೌಂಡರ್ ಕೇದಾರ್ ಜಾದವ್, ಬರೀಂದರ್ ಸ್ರಾನ್, ಸಿದ್ಧಾರ್ಥ್ ಕೌಲ್ ಸೇರಿದ್ದಾರೆ. ಇನ್ನು 40 ಟೆಸ್ಟ್ ಪಂದ್ಯಗಳಲ್ಲಿ ಭಾರತವನ್ನು ಪ್ರತಿನಿಧಿಸಿ 1353 ರನ್ ಸಿಡಿಸಿರುವ ವೃದ್ಧಿಮನ್ ಸಹಾ ಇದೇ ವರ್ಷ ನಿವೃತ್ತಿ ಘೋಷಿಸಿದ್ದಾರೆ.
ಟಿ20 ಕ್ರಿಕೆಟ್‌ಗೆ ವಿದಾಯ ಹೇಳಿದ ಸ್ಟಾರ್ಸ್
ಟೀಮ್ ಇಂಡಿಯಾದ ಸ್ಟಾರ್ ಆಟಗಾರ ರವೀಂದ್ರ ಜಡೇಜಾ, ರೋಹಿತ್ ಶರ್ಮಾ, ವಿರಾಟ್ ಕೊಹ್ಲಿ ಟಿ20 ವಿಶ್ವಕಪ್ ಫೈನಲ್ ಬಳಿಕ ಚುಟುಕು ಕ್ರಿಕೆಟ್‌ಗೆ ವಿದಾಯ ಹೇಳಿದ್ದಾರೆ. ಬಾರ್ಬಡೋಸ್‌ನಲ್ಲಿ ನಡೆದ ಫೈನಲ್ ಪಂದ್ಯದಲ್ಲಿ ದಕ್ಷಿಣ ಆಫ್ರಿಕಾ ತಂಡವನ್ನು ಟೀಮ್ ಇಂಡಿಯಾ ಮಣಿಸುತ್ತಿದ್ದಂತೆ ಈ ಮೂವರು ಸ್ಟಾರ್ ಆಟಗಾರರು ಟಿ20 ಕ್ರಿಕೆಟ್‌ಗೆ ವಿದಾಯ ಹೇಳಿದರು.
ಎಲ್ಲಾ ಫಾರ್ಮೆಟ್‌ಗೆ ವಿದಾಯ ಹೇಳಿದ ಆಟಗಾರರು
ಟೀಮ್ ಇಂಡಿಯಾದ ಪರ ಮೂರು ಫಾರ್ಮೆಟ್ ಕ್ರಿಕೆಟ್‌ನಲ್ಲಿ ಮಿಂಚಿದ ಹಲವು ಆಟಗಾರರು ಈ ವರ್ಷ ವಿದಾಯ ಹೇಳಿದ್ದಾರೆ. ಇದರಲ್ಲಿ ಪ್ರಮುಖವಾಗಿ ಕಾಣಿಸಿಕೊಳ್ಳುವ ಹೆಸರುಗಳು ಎಂದರೆ, ಗಬ್ಬರ್ ಖ್ಯಾತಿಯ ಶಿಖರ್ ಧವನ್, ಸ್ಪಿನ್ ಮಾಂತ್ರಿಕ ರವಿಚಂದ್ರನ್ ಅಶ್ವಿನ್ ಹಾಗೂ ಆರ್‌ಸಿಬಿ ತಂಡದಲ್ಲಿ ಫಿನಿಷರ್ ರೋಲ್ ಅಚ್ಚುಕಟ್ಟಾಗಿ ನಿಭಾಯಿಸಿದ ದಿನೇಶ್ ಕಾರ್ತಿಕ್ ಹೆಸರುಗಳು ಸೇರಿವೆ.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications