Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block

ಬಾಂಗ್ಲಾದೇಶದಲ್ಲಿ ಹೆಚ್ಚಾಯ್ತು ಹಿಂಸಾಚಾರ; ಸ್ಟಾರ್ ಕ್ರಿಕೆಟಿಗರ ಮನೆಗೆ ಬೆಂಕಿ!

ಆಗಸ್ಟ್ 6 ಮಂಗಳವಾರ, ಬಾಂಗ್ಲಾದೇಶದಲ್ಲಿ ಮತ್ತೆ ಹಿಂಸಾಚಾರ ಮುಗಿಲೆದ್ದಿದೆ. ದಿನದಿಂದ ದಿನಕ್ಕೆ ಬಾಂಗ್ಲಾದೇಶದಲ್ಲಿ ಪರಿಸ್ಥಿತಿ ನಿರಂತರವಾಗಿ ಹದಗೆಡುತ್ತಿದೆ. ಶೇಖ್ ಹಸೀನಾ ಅವರು ತಮ್ಮ ಪ್ರಧಾನಿ ಹುದ್ದೆಗೆ ರಾಜೀನಾಮೆ ನೀಡಿದ್ದಾರೆ.

ಇದಾದ ನಂತರ ಚಳವಳಿಗಾರರು ಹಿಂಸಾಚಾರಕ್ಕೆ ಮುಂದಾಗಿದ್ದಾರೆ. ಹಿಂಸಾಚಾರದಲ್ಲಿ ಬಹುತೇಕ ಹಿಂದೂಗಳನ್ನು ಟಾರ್ಗೆಟ್ ಮಾಡಲಾಗುತ್ತಿದೆ. ಈ ನಡುವೆ ಸ್ಟಾರ್ ಕ್ರಿಕೆಟಿಗರ ಮನೆಗೂ ಬೆಂಕಿ ಹಚ್ಚಿರುವ ಪ್ರತಿಭಟನಾಕಾರರು ವಿಕೃತಿ ಮೆರೆದಿದ್ದಾರೆ.

Protesters set fire to star cricketers house in Bangladesh

ಈ ಘಟನೆಗಳ ಫೋಟೋ ಮತ್ತು ವಿಡಿಯೋಗಳು ಸಾಮಾಜಿಕ ಜಾಲತಾಣದಲ್ಲಿ ಸಖತ್‌ ವೈರಲ್ ಆಗುತ್ತಿವೆ. ಪ್ರತಿಭಟನಾಕಾರರು ನಿರಂತರವಾಗಿ ಹಿಂದೂಗಳನ್ನು ಗುರಿಯಾಗಿಸಿಕೊಂಡು ದಾಳಿ ನಡೆಸುತ್ತಿದ್ದಾರೆ. ಇನ್ನೊಂದೆಡೆ ಬಾಂಗ್ಲಾದೇಶದಲ್ಲಿರುವ ಭಾರತೀಯರು ಎಚ್ಚರಿಕೆಯಿಂದ ಇರಲು ಭಾರತದ ರಾಯಭಾರಿ ಕಚೇರಿಯಿಂದ ಸೂಚನೆ ಬಂದಿದೆ.

ಮಾಜಿ ನಾಯಕನ ಮನೆ ಬೆಂಕಿ

ಪಾಕಿಸ್ತಾನದ ನಂತರ ಬಾಂಗ್ಲಾದೇಶದಲ್ಲಿ ಹಿಂಸಾಚಾರ ಮತ್ತು ಅರಾಜಕತೆ ಮುಂದುವರಿದಿದ್ದು, ಪ್ರತಿಭಟನಾಕಾರರು ದೇಶದ ಮಾಜಿ ಕ್ರಿಕೆಟ್ ನಾಯಕ ಮಶ್ರಫೆ ಬಿನ್ ಮೊರ್ತಜಾ ಅವರ ಮನೆಗೆ ಬೆಂಕಿ ಹಚ್ಚಿದ್ದಾರೆ.

ಮಶ್ರಫೆ ಬಿನ್ ಮುರ್ತಾಜಾ ಅವರು ಖುಲ್ನಾ ವಿಭಾಗದ ನರೈಲ್ -2 ಕ್ಷೇತ್ರದ ಸಂಸದರಾಗಿದ್ದಾರೆ. ಈ ವರ್ಷದ ಆರಂಭದಲ್ಲಿ ನಡೆದ ಬಾಂಗ್ಲಾದೇಶದ ಸಾರ್ವತ್ರಿಕ ಚುನಾವಣೆಯಲ್ಲಿ ಅವಾಮಿ ಲೀಗ್ ಅಭ್ಯರ್ಥಿಯಾಗಿ ಸತತ ಎರಡನೇ ಬಾರಿಗೆ ಗೆದ್ದಿದ್ದಾರೆ.

ಸ್ಥಳೀಯ ಮಾಧ್ಯಮ ವರದಿಗಳ ಪ್ರಕಾರ, ಪ್ರತಿಭಟನಾಕಾರರು ಮಶ್ರಫೆ ಬಿನ್ ಮುರ್ತಾಜಾ ಅವರ ಮನೆಯನ್ನು ಧ್ವಂಸಗೊಳಿಸಿ ಬೆಂಕಿ ಹಚ್ಚಿದ್ದಾರೆ.

ಮತ್ತೊಂದೆಡೆ ಬಾಂಗ್ಲಾದೇಶ ಕ್ರಿಕೆಟ್ ತಂಡದ ವಿಕೆಟ್‌ಕೀಪರ್ ಮತ್ತು ಬ್ಯಾಟರ್ ಲಿಟನ್ ದಾಸ್ ಅವರ ಮನೆಗೂ ಪ್ರತಿಭಟನಾಕಾರರು ಬೆಂಕಿ ಹಚ್ಚಿರುವ ಆರೋಪ ಕೇಳಿ ಬಂದಿದೆ. ಈ ಸಂಬಂಧ ಕೆಲವು ಫೋಟೋಗಳು ಕೂಡ ಸಾಮಾಜಿಕ ಮಾಧ್ಯಮದಲ್ಲಿ ವೈರಲ್‌ ಆಗಿವೆ. ಲಿಟನ್ ದಾಸ್ ಬಾಂಗ್ಲಾದೇಶದ ಹಿಂದೂ ಆಗಿದ್ದಾರೆ.

ಸದ್ಯಕ್ಕೆ ಲಿಟನ್ ದಾಸ್ ಅವರ ಮನೆ ಸುಟ್ಟು ಹೋಗಿದೆಯೇ ಅಥವಾ ಇಲ್ಲವೇ ಎಂಬುದು ಸ್ಪಷ್ಟವಾಗಿಲ್ಲ. ಅಲ್ಲದೆ, ಈ ಬಗ್ಗೆ ಲಿಟನ್ ದಾಸ್ ಕೂಡ ಯಾವುದೇ ಪ್ರತಿಕ್ರಿಯೆ ನೀಡಿಲ್ಲ.

Story first published: Tuesday, August 6, 2024, 12:25 [IST]
Other articles published on Aug 6, 2024
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+